ಬೆಳಗಾವಿ: ಬೆಳಗಾವಿ ನಗರವನ್ನೇ ಬೆಚ್ಚಿ ಬೀಳಿಸಿದ ಜೋಡಿ ಕೊಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಎರಡು ಕೊಲೆಯ ಹಿಂದಿದೆ ಡಬಲ್ ಪ್ರೇಮ್ ಕಹಾನಿ. ಹಣಕೊಟ್ಟು ಹೆಣ ಕೆಡವಲು ಯೋಜನೆ ರೂಪಿಸಿದ್ದ ಪಾಪಿ ಹೆಣ್ಣು ಹಾಗೂ ಸಹೋದರ ಮತ್ತು ಆತನ ಸ್ನೇಹಿತರು ಈಗ ಬಂಧಿತರಾಗಿದ್ದಾರೆ. ಈ ಪ್ರಕರಣವನ್ನು ಐದೇ ದಿನದಲ್ಲಿ ಬೆಳಗಾವಿ ಪೊಲೀಸರು ಭೇದಿಸಿದ್ದು, ಮಚ್ಚೆ ಗ್ರಾಮದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸೆಪ್ಟೆಂಬರ್.26 ರಂದು …
Read More »Monthly Archives: ಅಕ್ಟೋಬರ್ 2020
ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ‘ಕಾಂಗ್ರೆಸ್ ಭವನ’ವನ್ನು ಉದ್ಘಾಟನೆ
ಬೆಳಗಾವಿ: ಇಲ್ಲಿನ ಸಂಗೊಳ್ಳಿರಾಯಣ್ಣ ವೃತ್ತದ ಸಮೀಪ ನಿರ್ಮಿಸಿರುವ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ‘ಕಾಂಗ್ರೆಸ್ ಭವನ’ವನ್ನು ಶುಕ್ರವಾರ ಉದ್ಘಾಟಿಸಲಾಯಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ್ ಖಂಡ್ರೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್, ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಮುಖಂಡರಾದ ಐ.ಜಿ. ಸನದಿ, ವೀರಣ್ಣ ಮತ್ತಿಕಟ್ಟಿ, ಫಿರೋಜ್ …
Read More »‘ಮಹಾತ್ಮ ಗಾಂಧೀಜಿ ಅವರ ಚಿಂತನೆ, ವಿಚಾರವೇ ಕಾಂಗ್ರೆಸ್ ತತ್ವ
ಬೆಳಗಾವಿ : ‘ಮಹಾತ್ಮ ಗಾಂಧೀಜಿ ಅವರ ಚಿಂತನೆ, ವಿಚಾರವೇ ಕಾಂಗ್ರೆಸ್ ತತ್ವ. ಅವರ ಮಾರ್ಗದರ್ಶನವನ್ನು ನಾವು ಬಳಸಿಕೊಂಡು ಇಂದು ಈ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿಯನ್ನು ಕಾಪಾಡಬೇಕಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಲ್ಲಿನ ಸೇವಾದಳ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ ಅವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿ.ಕೆ ಶಿವಕುಮಾರ್ ಅವರು ಗಾಂಧಿಜಿ ಅವರ ಕೊಡುಗೆಯನ್ನು ಸ್ಮರಿಸುತ್ತಾ ದೇಶದ ರಕ್ಷಣೆಗಾಗಿ ಪಕ್ಷದ ಕಾರ್ಯಕರ್ತರು …
Read More »ಯೋಗಿಯೋ ಅಥವಾ ರೋಗಿಯೋ ಎನ್ನುವುದು ನಮಗೆ ತಿಳಿಯುತ್ತಿಲ್ಲ : ಸಿದ್ದರಾಮಯ್ಯ
ಬೆಳಗಾವಿ: ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಉತ್ತರ ಪ್ರದೇಶದ ಹತ್ರಾಸ್‍ಗೆ ತೆರಳುತ್ತಿದ್ದ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಪೊಲೀಸರು ಯುಪಿ ಸಿಎಂ ಸೂಚನೆಯಂತೆ ತಡೆಯುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಶುಕ್ರವಾರ ಬೆಳಗಾವಿ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ …
Read More »ಈ ಸರ್ಕಾರಗಳು ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಗೊತ್ತಿಲ್ಲ ಎಂದು ಆರಣ್ಯ ಸಚಿವ ಆನಂದ್ ಸಿಂಗ್ ಅಚ್ಚರಿ
ಬಳ್ಳಾರಿ: ಈ ಸರ್ಕಾರಗಳು ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಗೊತ್ತಿಲ್ಲ ಎಂದು ಆರಣ್ಯ ಸಚಿವ ಆನಂದ್ ಸಿಂಗ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ. ಬಳ್ಳಾರಿಯ ಹೊಸಪೇಟೆ ತಾಲೂಕಿನ ಕಮಾಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂನಲ್ಲಿ 66ನೇ ವನ್ಯ ಜೀವಿ ಸಂರಕ್ಷಣಾ ಸಪ್ತಾಹದ ಅಂಗವಾಗಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಪ್ತಾಹದಲ್ಲಿ ಪಾಲ್ಗೊಂಡಿರುವ ಎಲ್ಲಾ ಅಧಿಕಾರಿಗಳಿಗೆ ಹಾಗೇ ಅರಣ್ಯ ರಕ್ಷಣೆ ಮಾಡುವಂತಹ ಎಲ್ಲಾ ಯುವಕರಾಗಿರಲಿ, ನಾವೆಲ್ಲರೂ ಇವತ್ತಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೀವಿ. ಇವತ್ತು …
Read More »ಮತ್ತೆ ಶುರುವಾಯ್ತು ಸಂಪುಟ ಸರ್ಕಸ್: ಸಿ.ಟಿ.ರವಿ ಫಸ್ಟ್ ವಿಕೆಟ್…?
ತುಮಕೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಸಿಕ್ಕ ಬಳಿಕ ಸಿ.ಟಿ. ರವಿ ಅವರು ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎನ್ನುವಂತ ನಿಯಮವಿದೆ. ಈ ಬಗ್ಗೆ ಸಚಿವ ಸಿಟಿ ರವಿಯವರಿಗೂ ಗಮನವಿದೆ. ಹೀಗಾಗಿ ಅವರೇ ಸ್ವಯಂ ಪ್ರೇರಿತರಾಗಿ ಸಚಿವ …
Read More »ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರ
ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 11 ಕೆಪಿಟಿಸಿಎಲ್, 2 ಬಿಎಚ್ಇಎಲ್ ಹಾಗೂ ಇತರೆ ಇಬ್ಬರು ಇಂಜಿಯರ್‌ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್‌ಪುರ ಗೇಟ್ ಬಳಿ ನಸುಕಿನ ಜಾವ 3.30ಕ್ಕೆ ಅವಘಡ ಸಂಭವಿಸಿರೋದಾಗಿ ಅಧಿಕಾರಿಯೊಬ್ಬರು ತಿಳಿಸಿದರು. ಆಸ್ಪತ್ರೆಗೆ ಅಲೆದಾಟ ಗಾಯಾಳುಗಳನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. …
Read More »ದಿವಂಗತ ಡಿ.ಕೆ ರವಿ ಪತ್ನಿಗೆ ಕುಸುಮಾಗೆ ಟಿಕೆಟ್ :ರವಿ ಕುಟುಂಬದವರಿಂದ ಭಾರಿ ವಿರೋಧ
ತುಮಕೂರು: ಆರ್.ಆರ್.ನಗರ ಉಪ ಚುನಾವಣೆಗೆ ಪ್ರಾಮಾಣಿಕ ಅಧಿಕಾರಿಯಾಗಿದ್ದ ದಿವಂಗತ ಡಿ.ಕೆ ರವಿ ಪತ್ನಿಗೆ ಕುಸುಮಾಗೆ ಟಿಕೆಟ್ ನೀಡುತ್ತಾರೆಂಬ ವದಂತಿ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುತ್ತಿರುವ ವಿಷಯ ತಿಳಿದ ರವಿ ಕುಟುಂಬದವರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ ಎಂದು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ದೊಡ್ಡಕೊಪ್ಪಲಿನಲ್ಲಿ ಡಿ.ಕೆ ರವಿ ತಾಯಿ ಗೌರಮ್ಮ ಆಕ್ರೋಶ ಹೊರ …
Read More »‘ಅಂಗಡಿ ಕುಂಟುಂಬದವರಿಗೆ ಅನ್ಯಾಯ : ಡಿ ಕೆ ಸಿ ಗೆ ರಮೇಶ ಜಾರಕಿಹೊಳಿ ತಿರುಗೇಟು
ಬೆಳಗಾವಿ: ‘ಅಂಗಡಿ ಕುಂಟುಂಬದವರಿಗೆ ನ್ಯಾಯ ಒದಗಿಸದ ಬಿಜೆಪಿ ಸರ್ಕಾರ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿರುಗೇಟು ನೀಡಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸುರೇಶ ಅಂಗಡಿ ನಿಧನದ ವಿಷಯದಲ್ಲಿ ಅವರೇ ರಾಜಕೀಯ ಮಾಡುತ್ತಿದ್ದಾರೆ. ಕೋವಿಡ್-19 ಮಾರ್ಗಸೂಚಿ ಪ್ರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಂತೆ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲಾಗಲಿಲ್ಲ. ಎಷ್ಟೇ ದೊಡ್ಡವರಿದ್ದರೂ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎನ್ನುವುದು …
Read More »ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ
ಗದಗ: ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಮೃತ ದುರ್ದೈವಿ. ಈತನ ಪತ್ನಿ ಲಲಿತಾ ಮತ್ತು ಈಕೆಯ ಪ್ರಿಯಕರ ಸೋಮಪ್ಪ ಚೆನ್ನಪ್ಪ ಲಮಾಣಿ ಕೊಲೆ ಆರೋಪಿಗಳು. ರಾತ್ರಿ ಮನೆಯಲ್ಲಿ ಮಲಗಿದ್ದ ಲಕ್ಷ್ಮಣ ಪಾಂಡಪ್ಪ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಲಲಿತಾ ಮತ್ತು ಸೋಮಪ್ಪ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ …
Read More »