Breaking News

Daily Archives: ನವೆಂಬರ್ 13, 2020

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡವರಿಗೆ ಈಗ ಸಿಹಿ ಸುದ್ದಿ.

ಬೆಂಗಳೂರು :  ರಾಜ್ಯದಲ್ಲಿ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡವರಿಗೆ ಈಗ ಸಿಹಿ ಸುದ್ದಿ. ಮತ್ತೆ ತಮ್ಮ ಹಣವನ್ನು ಪಡೆಯಬಹುದಾಗಿದೆ. ಹಣ ಕಳೆದುಕೊಂಡಿರುವರು ನವೆಂಬರ್ 24ರ ಒಳಗಾಗಿ ಆನ್ ಲೈನ್ ಮೂಲಕ ಹಣ ವಾಪಸ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ವಿಶೇಷಾಧಿಕಾರಿ ಹರ್ಷ ಗುಪ್ತಾ ಮಾಹಿತಿ  ನೀಡಿದ್ದಾರೆ. ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ಕೂಡ ಆರಂಭಿಸಲಾಗಿದೆ. …

Read More »

ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಮೋದಿ ಸರ್ಕಾರ ರೈತ ವಿರೋಧಿಯಾಗಿದೆ.:ಕೋಡಿಹಳ್ಳಿ ಚಂದ್ರಶೇಖರ್

ನ.26, 27ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಬೆಂಗಳೂರು: ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತ ವಿರೋಧಿಯಾಗಿದೆ. ಕೇಂದ್ರದಲ್ಲಿರುವುದು ಜನಪರ ಸರ್ಕಾರವೋ ಅಥವಾ ಕಾರ್ಪೊರೇಟ್ ಸರ್ಕಾರವೋ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಮತ್ತೆ ಬೃಹತ್ ಹೋರಾಟ ನಡೆಸಲು ರೈತರು ಸಜ್ಜಾಗಿದ್ದಾರೆ. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಕಾರ್ಪೊರೇಟ್ …

Read More »

ಕೇಂದ್ರದಿಂದ ರಾಜ್ಯಕ್ಕೆ 577 ಕೋಟಿ ರೂ. ಮುಂಗಡ ನೆರೆ ಪರಿಹಾರ ಬಿಡುಗಡೆ

ನವದೆಹಲಿ: ಪ್ರವಾಹದಿಂದ ತತ್ತರಿಸಿರುವ ಕರ್ನಾಟಕದ ಸಂತ್ರಸ್ತರ ನೆರವಿಗಾಗಿ ಕೇಂದ್ರ ಸರ್ಕಾರವು ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಡಿ 577.84 ಕೋಟಿ ಮುಂಗಡ ಪರಿಹಾರ ಮಂಜೂರು ಮಾಡಿದೆ. ಕೇಂದ್ರದ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ, ಕರ್ನಾಟಕ ಹೊರತುಪಡಿಸಿ ಇತರ ಐದು ರಾಜ್ಯಗಳಿಗೂ ನೈಸರ್ಗಿಕ ವಿಕೋಪ ಪರಿಹಾರ ಒದಗಿಸಲು ನಿರ್ಧರಿಸಲಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯದಾದ್ಯಂತ ಭಾರೀ …

Read More »

ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ ವಾರ ಪತ್ರಿಕೆಯ ಮೂಲಕ ದಿಟ್ಟ ಪತ್ರಕರ್ತರಾಗಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದ ಅವರ …

Read More »

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …

Read More »

ಇಂದು ರಾತ್ರಿಯಿಂದಲೇ ರಾಜ್ಯದ ನಾನಾ ಊರುಗಳಿಗೆ 1,000 ಹೆಚ್ಚುವರಿ ಕೆಎಸ್‍ಆರ್ಟಿಸಿ ಬಸ್ಗಳ ವ್ಯವಸ್ಥೆ

ಬೆಂಗಳೂರು-ಕೋವಿಡ್ -19 ಆತಂಕದ ನಡುವೆಯೇ ಬೆಳಕಿನ ಹಬ್ಬ ದೀಪಾವಳಿ ಆಚರಣೆ ಮಾಡಲು ಸಾರ್ವಜನಿಕರು ಊರಿಗೆ ತೆರಳುವವರ ಅನುಕೂಲಕ್ಕೆ ಇಂದು ರಾತ್ರಿಯಿಂದಲೇ ರಾಜ್ಯದ ನಾನಾ ಊರುಗಳಿಗೆ 1,000 ಹೆಚ್ಚುವರಿ ಕೆಎಸ್‍ಆರ್ಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಇಂದು ರಾತ್ರಿ ಮತ್ತು ನಾಳೆ ರಾತ್ರಿ ಬೆಂಗಳೂರಿನಿಂದ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳು ಹಾಗೂ ಹೊರ ರಾಜ್ಯದ ವಿವಿಧ ಊರುಗಳಿಗೆ ಹೆಚ್ಚುವರಿಯಾಗಿ 1,000 ಕೆಎಸ್‍ಆರ್ಟಿಸಿ ಬಸ್ಗಳು ಸಂಚರಿಸಲಿವೆ. ಹಾಗೇ, ನ. 16ರಂದು ದೀಪಾವಳಿ ಹಬ್ಬ ಮುಗಿಸಿಕೊಂಡು …

Read More »

ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆಗೆ ಮೊದಲ ಆದ್ಯತೆ ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಸಿಗ್ನಲ್ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ

ಬೆಂಗಳೂರು,ನ.13- ಉಪಚುನಾವಣೆ ಪೂರ್ಣಗೊಂಡ ಕೂಡಲೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಭರವಸೆ ನೀಡಿದ್ದರು. ಆದರೆ, ಇದೀಗ ನವೆಂಬರ್ 20ಕ್ಕೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಬಂದ ಬಂಡಾಯಶಾಸಕರು ಆಡಳಿತಾರೂಢ ಬಿಜೆಪಿ ಪಕ್ಷದ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ವಿಸ್ತರಣೆ ಕುರಿತು ಕೇಂದ್ರೀಯ ನಾಯಕತ್ವ ಮುಖ್ಯಮಂತ್ರಿಗಳ ಕೈಗಳನ್ನು ಕಟ್ಟಿಹಾಕಿದಂತಾಗಿದೆ. ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಸಂಪುಟ …

Read More »

ನಿಮ್ಮನ್ನು ಮಿಸ್ ಮಾಡಿಕೊಳ್ತೇವೆ- BIGBOSS TEAM

ಬೆಂಗಳೂರು: ಹಿರಿಯ ಪತ್ರಕರ್ತ, ಖ್ಯಾತ ಲೇಖಕ ರವಿ ಬೆಳಗೆರೆ ಅವರ ನಿಧನಕ್ಕೆ ನಟ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ರವಿ ಬೆಳಗೆರೆ ಅವರೊಂದಿಗಿನ ನೆನಪುಗಳನ್ನು ಮೆಲುಕು ಹಾಕಿರುವ ನಟ ಸುದೀಪ್, ಬಿಸ್‍ಬಾಸ್ ಕಾರ್ಯಕ್ರಮದ ಸಂದರ್ಭದ ಎರಡು ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ವೇದಿಕೆಯಲ್ಲಿದ್ದ ಈ ಫೋಟೋದಲ್ಲಿ ನಾನು ಅವರನ್ನು ಕೊನೆಯದಾಗಿ ನೋಡಿದ್ದೆ. ಉಳಿದ ಸ್ಪರ್ಧಿಗಳು ಖಂಡಿತ ಈ ಕ್ಷಣವನ್ನು ತಮ್ಮ ಜೀವನದಲ್ಲಿ ನೆನಪಿಟ್ಟುಕೊಳ್ಳುತ್ತಾರೆ. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. …

Read More »

ಇದು ಸಾವಲ್ಲ, ಅವ್ರ ಮರುಹುಟ್ಟು:ಯೋಗರಾಜ್ ಭಟ್

ಬೆಂಗಳೂರು: ನಿನ್ನೆ ಮೊನ್ನೆವರೆಗೂ ಫೋನ್‍ನಲ್ಲಿ ರವಿ ಬೆಳಗೆರೆಯೊಂದಿಗೆ ನನ್ನ ಸಿನಿಮಾಗಳ ಬಗ್ಗೆ ಮಾತನಾಡುತ್ತಿದ್ದೆ. ಅವರಿಗೆ ಅನಾರೋಗ್ಯ ಕಾಡುತ್ತಲೇ ಇತ್ತು. ಸಾವು ಬಂದು ಕರೆದಾಗ ಅತ್ಲಾಗೆ ನೋಡೋಣ ನಡಿ ಅಂತ ಹೊರಟುಬಿಟ್ಟಿದ್ದಾರೆನೋ ಅನ್ನಿಸುತ್ತಿದೆ ಎಂದು ನಿದೇರ್ಶಕ ಯೋಗರಾಜ್ ಭಟ್ ಸಂತಾಸ ಸೂಚಿಸಿದ್ದಾರೆ. ರವಿಬೆಳಗೆರೆಯ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯೋಗರಾಜ್ ಭಟ್, ಕನ್ನಡ ಅಭಿಮಾನಿಯಾಗಿ ಇದು ರವಿ ಬೆಳಗೆರೆ ಅವರ ಸಾವಲ್ಲ, ಅವರ ಹುಟ್ಟು. ಅವರ ನೆನಪು, …

Read More »

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. ಲಾಬೂರಾಮ್ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಸ್ ಡಿಎಂ ವೈದ್ಯ ಡಾ.ಕಿರಣ್ ಹೆಗಡೆ ತಿಳಿಸಿದ್ದಾರೆ. ಲಾಬೂರಾಮ್ ಅವರಿಗೆ ಗಂಟಲಿನಲ್ಲಿ ಬಾವು ಕಾಣಿಸಿಕೊಂಡಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನ ಗೊತ್ತಿರುವ ವೈದ್ಯರಿಂದ ಕೊಡಿಸುವುದಾಗಿ …

Read More »