Breaking News

Daily Archives: ನವೆಂಬರ್ 13, 2020

ಸಿದ್ದರಾಮಯ್ಯನವರು ಮೆಂಟಲ್ ಆಗಿಬಿಟ್ಟಿದ್ದಾರೆ: ಸದಾನಂದಗೌಡ

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಪೂರ್ತಿ ಮೆಂಟಲ್ ಆಗಿಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ. ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಅಲ್ಲದೆ ಮುಖ್ಯಮಂತ್ರಿ ಹುದ್ದೆಗೆ ವೆಕೆನ್ಸಿ ಇಲ್ಲ ಮತ್ತು ಮುಖ್ಯಮಂತ್ರಿ ಬದಲಾವಣೆ ಎನ್ನೋದು ಪಕ್ಷದ ಆಂತರಿಕ ಚರ್ಚೆ ಅಲ್ಲ. ಮುಂದೆಯೂ ಯಡಿಯೂರಪ್ಪ ಅವರೇ ಸಿಎಂ ಅಗಿ ಮುಂದುವರೆಯುತ್ತಾರೆ ಎಂದರು. ಸಿದ್ದರಾಮಯ್ಯನವರನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ. ಅವರಿಗೆ …

Read More »

ಅವರ ಸಾವಿನ ಸುದ್ದಿ ನಮಗೆ ಶಾಕ್ ಆಗಿದೆ ಎಂದು ರವಿಬೆಳಗೆರೆ ಪುತ್ರ ಕರ್ಣ ಕಣ್ಣೀರು

ಬೆಂಗಳೂರು: ನಾನು ನಿಮ್ಮ ಜೊತೆ ಇದ್ದೀನಿ ಕಣೋ. ನೀನು ಚೆನ್ನಾಗಿ ಬೆಳೆಯಬೇಕು ಎಂದು ಹೇಳಿದ್ದರು. ಆದರೆ ಅವರ ಸಾವಿನ ಸುದ್ದಿ ನಮಗೆ ಶಾಕ್ ಆಗಿದೆ ಎಂದು ರವಿಬೆಳಗೆರೆ ಪುತ್ರ ಕರ್ಣ ಕಣ್ಣೀರು ಹಾಕಿದ್ದಾರೆ.   ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರವಿಬೆಳಗೆರೆ ರಾತ್ರಿ ಪದ್ಮನಾಭ ಕಚೇರಿಯಲ್ಲಿ ಸಾವನ್ನಪ್ಪಿದ್ದಾರೆ. ರಾತ್ರಿ ಸುಮಾರು 12.15ರ ವೇಳೆಗೆ ಎದೆ ನೋವು ಕಾಣಿಸಿಕೊಂಡಿತ್ತು. ನಾನು ಹೋಗುವಷ್ಟರಲ್ಲಿ ಆಸ್ಪತ್ರೆಗೆ ಸಾಗಿಸಲೆಂದು ತಯಾರಾಗಿದ್ದರು. ಆದರೆ ಅದಾಗಲೇ ಅವರ ಸಾವು …

Read More »

ಕನ್ನಡದ ಪ್ರಸಿದ್ಧ ಪತ್ರಕರ್ತ, ಪತ್ರಿಕೋದ್ಯಮಿ ರವಿ ಬೆಳಗೆರೆಯವರ ಬದುಕೇ ವರ್ಣರಂಜಿತ

ಬೆಂಗಳೂರು: ಕನ್ನಡದ ಪ್ರಸಿದ್ಧ ಪತ್ರಕರ್ತ, ಪತ್ರಿಕೋದ್ಯಮಿ ರವಿ ಬೆಳಗೆರೆಯವರ ಬದುಕೇ ವರ್ಣರಂಜಿತವಾಗಿದೆ. ರವಿ ಬೆಳಗೆರೆ ಪತ್ರಕರ್ತ, ನಿರೂಪಕ, ನಟ, ಲೇಖಕ, ಕಾದಂಬರಿಕಾರ, ಚಿತ್ರಕಥೆ ಬರಹಗಾರ, ‘ಕ್ರೈಂ ಡೈರಿ’ ಕಾರ್ಯಕ್ರಮ ನಿರೂಪಕ, ಹಾಯ್ ಬೆಂಗಳೂರು ಹಾಗೂ ಓ ಮನಸೇ ಪತ್ರಿಕೆಯ ಸಂಪಾದಕರಾಗಿದ್ದಾರೆ. ಅಲ್ಲದೆ ‘ಪ್ರಾರ್ಥನಾ ಶಾಲೆ’ಯ ಸಂಸ್ಥಾಪಕ ಕೂಡ ಆಗಿದ್ದಾರೆ. ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿರುವ ರವಿ ಬೆಳಗೆರೆ, ತನ್ನ ಬರಹದಿಂದಲೇ ಅಸಂಖ್ಯಾತ ಓದುಗ ಬಳಗವನ್ನು ಸೃಷ್ಟಿಸಿಕೊಂಡಿದ್ದ ಮಾಂತ್ರಿಕರಾಗಿದ್ದಾರೆ. ಬಳ್ಳಾರಿ ಟು …

Read More »

ಮುಂದುವರಿದ ರಾಷ್ಟ್ರಗಳು ಈಗಲೂ ಬ್ಯಾಲೆಟ್ ಪೇಪರ್ ಬಳಕೆ ಮಾಡುತ್ತಿವೆ.ಇವಿಎಂ ಬಗ್ಗೆ ಅನುಮಾನವಿದೆ: ಸತೀಶ್‌ ಜಾರಕಿಹೊಳಿ

ಚಿಕ್ಕೋಡಿ: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಇವಿಎಂ ಯಂತ್ರದ ಬಗ್ಗೆ ಅನುಮಾನವಿದೆ. ಇವಿಎಂ ಬಗ್ಗೆ ಹಿಂದೆಯೂ ಅನುಮಾನವಿತ್ತು ಮುಂದೆಯು ಇರುತ್ತದೆ. ಬ್ಯಾಲೆಟ್ ಪೇಪರ್‌ ಬಳಕೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಮುಂದುವರಿದ ರಾಷ್ಟ್ರಗಳು ಈಗಲೂ ಬ್ಯಾಲೆಟ್ ಪೇಪರ್ ಬಳಕೆ ಮಾಡುತ್ತಿವೆ. ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ಎಷ್ಟು ಬೇಕು ಅಷ್ಟು ಸ್ಥಾನಗಳಿಗೆ ತಂದು ನಿಲ್ಲಿಸಿದ್ರು  ಎಂದು ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್ ಇಬ್ಭಾಗವಾಗುತ್ತದೆ …

Read More »

ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ.

ಬೆಂಗಳೂರು( ನ. 13) ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ. ಕನ್ನಡ  ಓದುಗರು,ವೀಕ್ಷಕರು ಈ ಸುದ್ದಿ ಅರಗಿಸಿಕೊಳ್ಳಲೇಬೇಕಾಗಿದೆ. ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ.  ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

Read More »