Breaking News

Daily Archives: ನವೆಂಬರ್ 18, 2020

ಕನ್ನಡಿಗರನ್ನು ಕೆಣಕುವ ಚಾಳಿಮಹಾರಾಷ್ಟ್ರದ ರಾಜಕಾರಣಿಗಳು ಮುಂದುವರಿಸಿದ್ದಾರೆ.

ಬೆಳಗಾವಿ: ಪದೇ, ಪದೇ ಬೆಳಗಾವಿ ಗಡಿ ವಿವಾದದ ಕ್ಯಾತೆ ತೆಗೆದು ಜನರ ಮಧ್ಯೆ ಭಾಷಾ ವೈಷ್ಯಮದ ಬೀಜ ಬಿತ್ತಿ ಕನ್ನಡಿಗರನ್ನು ಕೆಣಕುವ ಚಾಳಿಯನ್ನು ಮಹಾರಾಷ್ಟ್ರದ ರಾಜಕಾರಣಿಗಳು ಮುಂದುವರಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ ಬೀದರ್, ಬಾಲ್ಕೀ, ಮಹಾರಾಷ್ಟ್ರಕ್ಕೆ ಸೇರಿಸುವುದು ಬಾಳಾಸಾಹೇಬ್ ಠಾಖ್ರೆ ಅವರ ಕನಸಾಗಿತ್ತು, ಮಹಾರಾಷ್ಟ್ರ ಸರ್ಕಾರ ಬಾಳಾಸಾಹೇಬ್ ಅವರ ಕನಸನ್ನು ನನಸು ಮಾಡುತ್ತದೆ ಎಂದು ಡಿಸಿಎಂ, ಎನ್‍ಸಿಪಿ ಅಜೀತ್ ಪವಾರ್ ಹೇಳಿಕೆ ನೀಡುವ ಮೂಲಕ ನಿನ್ನೆ ಮತ್ತೆ ಗಡಿ ಕ್ಯಾತೆ ತೆಗೆದಿದ್ದಾರೆ. …

Read More »

ರಾಜ್ಯದಲ್ಲಿ ಕೊರೊನಾ ಪ್ರಕರಣಳ ಸಂಖ್ಯೆ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಳ ಸಂಖ್ಯೆ ಇಳಿಮುಖವಾಗಿದ್ದು, ಇಂದು 23 ಜಿಲ್ಲೆಗಳಲ್ಲಿ ಶೂನ್ಯ ಮರಣ ದಾಖಲಾಗಿದೆ. ಇಂದು 1,336 ಹೊಸ ಪ್ರಕರಣಗಳು ವರದಿಯಾಗಿದ್ದು, 2,100 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ ರಾಜ್ಯದಲ್ಲಿ 8,27,241 ಜನ ಗುಣಮುಖರಾಗಿದ್ದು, ಚೇತರಿಕೆ ದರ ಶೇ.95.72ರಷ್ಟಿದೆ. ಇನ್ನು ಕೋವಿಡ್ ಮರಣ ಪ್ರಮಾಣ ಶೇ.1.39 ಮತ್ತು ಖಚಿತ ಪ್ರಕರಣಗಳ ಪ್ರಮಾಣ ಶೇ.1.77ರಷ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,64,140ಕ್ಕೆ ಏರಿಕೆಯಾಗಿದ್ದು, 25,323 ಸಕ್ರಿಯ ಪ್ರಕರಣಗಳಿವೆ. ಇಂದು ಕೊರೊನಾಗೆ …

Read More »

ದೇ ನವೆಂಬರ್ 20 ರಂದು ಆ್ಯಕ್ 1978 ಸಿನಿಮಾ ಥಿಯೇಟರ್ ಗೆ ಲಗ್ಗೆ ಇಡುತ್ತಿದೆ.

ಬೆಂಗಳೂರು: ಕೊರೊನಾ ದೇಶಕ್ಕೆ ಬಂದಾಗಿನಿಂದಲೂ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದೆ. ಲಾಕ್‍ಡೌನ್ ಆದಾಗಿನಿಂದ ಜನ ಮನೆಯಲ್ಲೇ ಲಾಕ್ ಆಗಿದ್ದರು. ಮನರಂಜನೆಯ ಬಾಗಿಲನ್ನು ಸಂಪೂರ್ಣವಾಗಿ ಕ್ಲೋಸ್ ಮಾಡಲಾಗಿತ್ತು. ಅನ್‍ಲಾಕ್ ಪ್ರಕ್ರಿಯೆಲ್ಲಿ ಕಡೆಗೂ ಥಿಯೇಟರ್ ಗಳ ಬಾಗಿಲನ್ನು ತೆರೆಯಲಾಗಿದೆ. ಆದರೂ ಪ್ರೇಕ್ಷಕರು ಥಿಯೇಟರ್ ಬಾಗಿಲಿಗೆ ಬರುತ್ತಿಲ್ಲ. ಥಿಯೇಟರ್ ಒಪನ್ ಆದರೂ ಜನ ಬರೋದು ಡೌಟೇ ಎಂಬುದನ್ನು ಅರಿತಿದ್ದ ನಿರ್ಮಾಪಕರು, ನಿರ್ದೇಶಕರು ಹೊಸ ಸಿನಿಮಾಗಳನ್ನ ಥಿಯೇಟರ್ ಗೆ ಬಿಟ್ಟು ಆಳ ನೋಡುವ ರಿಸ್ಕ್ …

Read More »

ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದು ಎಂಜಾಯ್ ಮಾಡುತ್ತಿದ್ದಾರೆ. ನಟಿ ಪ್ರಣೀತಾ

ಬೆಂಗಳೂರು: ನಟಿ ಪ್ರಣೀತಾ ಸುಭಾಷ್ ಸಖತ್ ಬ್ಯುಸಿಯಾಗಿದ್ದು, ಬಹುಭಾಷಾ ನಟಿಯಾಗಿ ಬೆಳೆದಿದ್ದಾರೆ. ಸ್ಯಾಂಡಲ್‍ವುಡ್‍ನಿಂದ ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಸಹ ಮಿಂಚುತ್ತಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ಬಿಡುವು ಮಾಡಿಕೊಂಡು ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದು ಎಂಜಾಯ್ ಮಾಡುತ್ತಿದ್ದಾರೆ.ಲಾಕ್‍ಡೌನ್ ಬಳಿಕ ಪ್ರಣಿತಾ ಶೂಟಿಂಗ್‍ನಲ್ಲಿ ಭಾಗವಹಿಸಿದ್ದರು. ಬಾಲಿವುಡ್ ಸಿನಿಮಾ ಹಂಗಾಮಾ-2 ಚಿತ್ರೀಕರಣದ ಬಳಿ ಬ್ರೇಕ್ ಪಡೆದಿರುವ ಅವರು ಮಾಲ್ಡಿವ್ಸ್ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ತಮ್ಮ ಮಾಲ್ಡಿವ್ಸ್ ಡೇಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದು, ಡೈವಿಂಗ್ …

Read More »

ನಿಗಮ ಸ್ಥಾಪನೆಗೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಸರ್ಕಾರ ಮಾಡಿದರೆ ಒಳ್ಳೆಯದು:ಶ್ರೀ ಸಿದ್ದಲಿಂಗ ಸ್ವಾಮೀಜಿ

ತುಮಕೂರು: ಎಲ್ಲ ಜಾತಿಯಲ್ಲೂ ಹಿಂದುಳಿದವರಿದ್ದಾರೆ. ಎಲ್ಲ ಸಮಾಜದಲ್ಲಿಯೂ ಕಡುಬವರು ಇದ್ದಾರೆ. ನಿಗಮ ಸ್ಥಾಪನೆಗೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಸರ್ಕಾರ ಮಾಡಿದರೆ ಒಳ್ಳೆಯದು ಎಂದು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ರಚನೆ ಮಾಡ್ತಿರೋ ವಿಚಾರ ಕೇಳಿ ನನಗೆ ಆಶ್ಚರ್ಯ ಎನಿಸುತ್ತದೆ. ಜಾತಿಗೊಂದು ನಿಗಮ, ಪ್ರಾಧಿಕಾರ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ ಸರ್ಕಾರ ಇರೋದು ಸಮಗ್ರ …

Read More »

ಹಾಡಹಗಲೇ ಮನೆ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

ಬೆಂಗಳೂರು: ಇಬ್ಬರು ಖದೀಮರು ಹಾಡಹಗಲೇ ಮನೆಯ ಗೇಟ್ ಒಡೆದು, ಕಳ್ಳತನ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ್ದನ್ನು ಮನಗಂಡ ಖದೀಮರು, ರಾಡ್ ಹಿಡಿದು ಮನೆಗೆ ನುಗ್ಗಿ ದರೋಡೆ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ 30 ಗ್ರಾಂ. ಚಿನ್ನ ಮತ್ತು 5 ಲಕ್ಷ ರೂ.ಹಣವನ್ನು ಎಗರಿಸಿದ್ದಾರೆ.ಮಧ್ಯಾಹ್ನ ಘಟನೆ ನಡೆದಿದ್ದು, ಆರಂಭದಲ್ಲಿ ಮನೆಯಲ್ಲಿ ಯಾರಾದರೂ ಇದ್ದಾರಾ ಎಂಬುದನ್ನು ಕಳ್ಳರು ಪರಿಶೀಲಿಸಿದ್ದಾರೆ. ಬಳಿಕ …

Read More »

ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್:ರೇಣುಕಾಚಾರ್ಯಲ

ದಾವಣಗೆರೆ: ರಾಜಕೀಯ, ಚುನಾವಣೆ ದೃಷ್ಟಿಯಿಂದ ಮರಾಠ ಅಭಿವೃದ್ದಿ ನಿಗಮ ಸ್ಥಾಪಿಸಿಲ್ಲ. ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ನಿಗಮ ಸ್ಥಾಪಿಸಲಾಗಿದೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮರಾಠ ಭಾಷೆಗೆ ಆದ್ಯತೆ ಕೊಟ್ಟಿಲ್ಲ. ಸಮಾಜದವರ ಏಳಿಗೆಗೆ, ಅಭಿವೃದ್ದಿಗೆ ನಿಗಮ ಮಾಡಿದೆ. ನನ್ನ ಕ್ಷೇತ್ರದಲ್ಲಿ ಸಹ ಸಾಕಷ್ಟು ಜನ ಮರಾಠರು ಇದ್ದಾರೆ. ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್ಲ …

Read More »

ಸಗಣಿ ರಾಶಿ ಹಾಕಿ ಅದರಲ್ಲಿ ಗ್ರಾಮಸ್ಥರು ಹೊರಳಾಡಿ, ಹೊಡೆದಾಡುವುದೇ ಹಬ್ಬ

ಚಾಮರಾಜನಗರ: ಜಿಲ್ಲೆಯ ಗಡಿಯಂಚಿನಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯಿತು. ಸಗಣಿ ರಾಶಿ ಹಾಕಿ ಅದರಲ್ಲಿ ಗ್ರಾಮಸ್ಥರು ಹೊರಳಾಡಿ, ಹೊಡೆದಾಡುವುದೇ ಹಬ್ಬದ ವಿಶೇಷ. ಕೋವಿಡ್ ಗೆ ಡೋಂಟ್ ಕೇರ್ ಎಂದು ಗ್ರಾಮಸ್ಥರು ಗುಂಪು ಸೇರಿ ಕಣಿದು ಕುಪ್ಪಳಿಸಿದರು. ಬಲಿಪಾಢ್ಯಮಿಯ ಮಾರನೇ ದಿನ ಈ ಗೊರೆ ಹಬ್ಬವನ್ನು ಆಚರಿಸಲಾಗತ್ತದೆ. ಅಚ್ಚ ಕನ್ನಡಿಗರೆ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷ ಗೊರೆ ಹಬ್ಬ ಆಚರಿಸಲಾಗುತ್ತದೆ. ಅದರಂತೆ ಈ ವರ್ಷವೂ ಸಹ …

Read More »

ನನ್ನಂಥವನನ್ನು ಹುಡುಕಿ ಸೀಟ್ ಕೊಟ್ಟಿದ್ದು ಬಿಜಿಪಿ ಪಕ್ಷದ ದೊಡ್ಡ ಗುಣ: ರಾಜ್ಯಸಭಾ ಅಭ್ಯರ್ಥಿ

ಬೆಂಗಳೂರು: ನನ್ನಂಥವನನ್ನು ಹುಡುಕಿ ಸೀಟ್ ಕೊಟ್ಟಿದ್ದು ಬಿಜಿಪಿ ಪಕ್ಷದ ದೊಡ್ಡ ಗುಣ ಎಂದು ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಡಾ.ಕೆ.ನಾರಾಯಣ್ ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ರಾಜ್ಯದ ಕಮಲ ನಾಯಕರಿಗೆ ಮತ್ತೆ ಶಾಕ್ ನೀಡಿದ್ದು, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಪಕ್ಷಕ್ಕೆ ಸಂಬಂಧಿಸಿದ ಕರಪತ್ರಗಳನ್ನು ಮುದ್ರಿಸುತ್ತಿದ್ದ ಕೆ ನಾರಾಯಣ್ ಅವರನ್ನು ಆಯ್ಕೆ ಮಾಡಿದೆ. ಈ ವಿಚಾರವಾಗಿ ಮಾತನಾಡಿರುವ ಅವರು, ದೆಹಲಿಯವರು ಯಾವುದೋ ಮೂಲೇಲಿರೋರನ್ನೂ ಗುರುತಿಸಿದ್ದು ಖುಷಿ ವಿಚಾರ …

Read More »

ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ‘ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ …

Read More »