ಚಿಕ್ಕಮಗಳೂರು: ಹಣ, ಚಿನ್ನ ಕದಿಯುವವರನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರವಾಸಿ ವಾಹನದಲ್ಲಿ ಕೆಲವರು ಬೆಳಗಿನ ಜಾವ ಅಂಗಡಿ ಮುಂದೆ ಟ್ರೇನಲ್ಲಿದ್ದ ಹಾಲಿನ ಪ್ಯಾಕೇಟ್‍ಗಳಲ್ಲಿ ಮೂರು ಲೀಟರ್ ಹಾಲನ್ನ ಕದ್ದೋಯ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಿಂದ ಮಂಗಳೂರು, ಧರ್ಮಸ್ಥಳಕ್ಕೆ ಹೋಗಬೇಕೆಂದರೆ ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರದ ಮೂಲಕವೇ ಹೋಗಬೇಕು. ಆದರೆ ಅಂಗಡಿ ಮುಂದಿನ ಹಾಲಿನ ಟ್ರೇನಲ್ಲಿದ್ದ ಹಾಲನ್ನು …
Read More »Daily Archives: ನವೆಂಬರ್ 25, 2020
ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಮಂಡನೆ: ಸಚಿವ ಪ್ರಭು ಚೌಹಾಣ್
ಬೆಂಗಳೂರು, – ಪಶು ಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ ಸಚಿವ ಪ್ರಭು ಚೌಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು , ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಪೂರ್ವ ತಯಾರಿ …
Read More »ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನು ಜೈಲಿನ ಆಸ್ಪತ್ರೆಗೆ ಸ್ಥಳಾಂತರಿಸಿ ಆಕ್ಸಿಜನ್ ಬೆಡ್ ನೀಡಲಾಗಿದೆ. ಬಿಪಿ, ಶುಗರ್, ಹೃದಯಸಂಬಂಧಿ ಖಾಯಿಲೆಗಳಿಂದ ರೋಷನ್ ಬೇಗ್ ಬಳಲುತ್ತಿದ್ದರು. 3 ದಿನಗಳ ಹಿಂದೆ ಅವರನ್ನು ಸಿಬಿಐ ಬಂಧಿಸಿ ವಿಚಾರಣೆಗೊಳಪಡಿಸಿತ್ತು. ನಂತರ ನ್ಯಾಯಾಲಯ 14 ದಿನಗಳ ನ್ಯಾಯಂಗ ವಶಕ್ಕೆ ಒಪ್ಪಿಸಿದೆ. ಈ ಮಧ್ಯೆ ರೋಷನ್ ಬೇಗ್ ಅವರನ್ನು ಇನ್ನಷ್ಟು ವಿಚಾರಣೆಗೊಳಪಡಿಸಬೇಕಿರುವುದರಿಂದ …
Read More »ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ
ನವದೆಹಲಿ: ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್‍ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಇಂದು ವಿಧಿವಶರಾಗಿದ್ದಾರೆ. ಅಹ್ಮದ್ ಪಟೇಲ್ ಅವರಿಗೆ ಕೆಲ ವಾರಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿತ್ತು. ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಫರಿದಾಬಾದ್‍ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಹೀಗಾಗಿ ಮೆಡಂತಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ತಮಗೆ ಕೊರೊನಾ ಸೋಂಕು ತಗುಲಿದ ಕುರಿತು ಅಕ್ಟೋಬರ್ …
Read More »