Breaking News

Daily Archives: ನವೆಂಬರ್ 27, 2020

ಗೋಕಾಕ್ : ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಗೋಕಾಕ : ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಇಂತಹ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ತೀರ್ಮಾನ ಖಂಡನೀಯ ಎಂದು ಸಿಎಂ …

Read More »

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 43,082 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ನ.27- ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 43,082 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೂ 87,18,517 ಸೋಂಕಿತರು ಗುಣಮುಖರಾಗಿದ್ದು, ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ.93.64ಕ್ಕೆ ಹೆಚ್ಚಳವಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 492 ಮಂದಿ ಸೋಂಕಿಗೆ ಬಲಿಯಾಗುವ ಮೂಲಕ ಸಾವಿನ ಪ್ರಮಾಣ 1,35,715ಕ್ಕೆ ಏರಿಕೆಯಾಗಿದೆ. ಇದುವರೆಗೂ ದೇಶದ್ಯಾಂತ ಸುಮಾರು 14 ಕೋಟಿ ಮಂದಿಯನ್ನು ರೋಗ ತಪಸಾಣೆಗ ಒಳಪಡಿಸಲಾಗಿದ್ದು, ನಿನ್ನೆ ಒಂದೆ ದಿನ …

Read More »

ಕಿಚ್ಚ ಖಡಕ್ ಆಗಿ ವರ್ಕೌಟ್ ಅಭಿಮಾನಿಗಳು ಕಿಚ್ಚನ ಬೇರ್ ಬಾಡಿ ನೋಡಿ ಫಿದಾ

ಬೆಂಗಳೂರು: ಕಿಚ್ಚ ಸುದೀಪ್ ಅವರು ಖಡಕ್ ಆಗಿ ವರ್ಕೌಟ್ ಮಾಡಿರುವ ಫೋಟೋ ಜೊತೆಗೆ ತಮ್ಮ ಫಿಟ್ನೆಸ್ ಮಂತ್ರವನ್ನು ರಿವೀಲ್ ಮಾಡಿದ್ದು, ಅಭಿಮಾನಿಗಳು ಕಿಚ್ಚನ ಬೇರ್ ಬಾಡಿ ನೋಡಿ ಫಿದಾ ಆಗಿದ್ದಾರೆ. ಹೀರೋಗಳು ಎಂದಮೇಲೆ ತಮ್ಮ ಫಿಟ್ನೆಸ್ ಕಡೆ ಗಮನಕೊಡಲೇಬೇಕು. ಇದಕ್ಕಾಗಿ ದಿನಾ ಬೆಳಗ್ಗೆ ಎದ್ದು ರಗಡ್ ಆಗಿ ವ್ಯಾಯಾಮ ಮಾಡಿ ತಮ್ಮ ದೇಹವನ್ನು ದಂಡಿಸಲೇಬೇಕು. ಈಗ ಕಿಚ್ಚ ಸುದೀಪ್ ಅವರು ಕೂಡ ಖಡಕ್ ಆಗಿ ವ್ಯಾಯಾಮ ಮಾಡಿದ್ದು, ಆ ಫೋಟೋವನ್ನು …

Read More »

ವಿದ್ಯುತ್ ಲೈನ್ ಸಂಪರ್ಕವನ್ನು ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿಯ ಮೇಲೆ ಮಾರಕಾಸ್ತ್ರ ಹಾಗೂ ಚಪ್ಪಲಿಯಿಂದ ಹಲ್ಲೆ

ಚಿತ್ರದುರ್ಗ: ನೀರಾವರಿ ಪಂಪ್‍ಸೆಟ್‍ಗೆ ಅಕ್ರಮವಾಗಿ ಹಾಕಿಕೊಂಡಿದ್ದ ನಿರಂತರ ಜ್ಯೋತಿ ವಿದ್ಯುತ್ ಲೈನ್ ಸಂಪರ್ಕವನ್ನು ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿಯ ಮೇಲೆ ಮಾರಕಾಸ್ತ್ರ ಹಾಗೂ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬೆಸ್ಕಾಂ ಕಚೇರಿ ಬಳಿ ನಡೆದಿದೆ ಹಲವು ದಿನಗಳಿಂದ ಶಿವರಾಜ್ ಎನ್ನುವವರು ನಿಯಮಬಾಹಿರವಾಗಿ ವಿದ್ಯುತ್ ಸಂಪರ್ಕ ಹಾಕಿಕೊಂಡಿದ್ದರು. ಈ ಬಗ್ಗೆ ಲೈನ್‍ಮ್ಯಾನ್ ಕೇಶವ ಅವರು ಒಂದು ಬಾರಿ ಶಿವರಾಜ್‍ಗೆ ಎಚ್ಚರಿಕೆ ನೀಡಿದ್ದರು. ಆದರೆ ನಿನ್ನೆ …

Read More »

ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೊಲ್ ಡೀಸೆಲ್ ಬೆಲೆಗೆ ಏನಂತೀರಿ ಇದು ಸರೀನಾ ವೀಕ್ಷಕರು ಕಾಮೆಂಟ್ ಮಾಡಿ ತಿಳಿಸಿ

ನವದೆಹಲಿ: ವಾಹನ ಸವಾರರಿಗೆ ಇಂದೂ ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಇಂದು ದೇಶಾದ್ಯಂತ ಪೆಟ್ರೋಲ್ ಬೆಲೆಯಲ್ಲಿ 19 ಪೈಸೆ, ಡೀಸೆಲ್ ಬೆಲೆಯಲ್ಲಿ 26 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 81.89 ರೂ. ಇದ್ದರೆ ಡೀಸೆಲ್ ಬೆಲೆ ಲೀಟರ್ ಗೆ 71.86 ರೂ. ಗೆ ಏರಿಕೆಯಾಗಿದೆ. ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆಯಲ್ಲಿ 19 ಪೈಸೆ …

Read More »

ದ್ವಿಚಕ್ರವಾಹನ ಕಳವು ಮಾಡುತ್ತಿದ್ದ ಆರೋಪಿ ಬಂಸಿಧಿ 2 ಲಕ್ಷ ರೂ. ಬೆಲೆ ಬಾಳುವ 5 ವಿವಿಧ ಕಂಪನಿಯ ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ

ಬೆಂಗಳೂರು,- ದ್ವಿಚಕ್ರವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಉತ್ತರ ವಿಭಾಗದ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಸಿಧಿ 2 ಲಕ್ಷ ರೂ. ಬೆಲೆ ಬಾಳುವ 5 ವಿವಿಧ ಕಂಪನಿಯ ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ವಿಜಯಕುಮಾರ್ ಅಯ್ಯರ್(35) ಬಂತ ಆರೋಪಿ. ಈತನ ಬಂಧನದಿಂದ ಸುಬ್ರಹ್ಮಣ್ಯನಗರ, ಕೋಣನಕುಂಟೆ ಸೇರಿದಂತೆ ಐದು ದ್ವಿಚಕ್ರವಾಹನ ಪ್ರಕರಣಗಳಲ್ಲಿ 2 ಪ್ರಕರಣಗಳು ಪತ್ತೆಯಾಗಿದ್ದು, ಉಳಿದ ಮೂರು ವಾಹನಗಳ ವಾರಸುದಾರರ ಪತ್ತೆಕಾರ್ಯ ಮುಂದುವರೆದಿದೆ. ನ.19ರಂದು ಸಂಜೆ 6 ಗಂಟೆಯಲ್ಲಿ ಗಾಯತ್ರಿನಗರದ ಅನಿಲ್‍ಕುಮಾರ್(23) ಎಂಬುವರು ತಮ್ಮ …

Read More »

ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ದೊಡ್ಡ ಮಟ್ಟದ ಮಳೆ ನೀರಿಕ್ಷೆ ಇಲ್ಲ ಎಂದು ಹವಾಮಾನ ಇಲಾಖೆಯ ನಿರ್ದೇಶಕ ರಮೇಶ್ ಬಾಬು ಹೇಳಿದ್ದಾರೆ. ಈಗಾಗಲೇ ಚಂಡಮಾರುತ ದುರ್ಬಲಗೊಂಡಿದೆ. ಇವತ್ತು ಅತೀ ಹೆಚ್ಚು ಎಂದರೆ ಮೂರು ಸೆಂಟಿಮೀಟರ್ ಮಳೆಯಾಗಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸ್ವಲ್ಪ ಮಳೆ ನಿರೀಕ್ಷಿಸಬಹುದು. ಹಾಗಂತ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದಿದ್ದಾರೆ. ಚಿಂತಾಮಣಿ, ಕೋಲಾರ, ಶಿಡ್ಲಘಟ್ಟದಲ್ಲಿ ಸ್ವಲ್ಪ …

Read More »

ಕ್ರಿಸ್‍ಮಸ್ ಹಿನ್ನೆಲೆ ಕೇಕ್ ತಯಾರಿಕೆ ಜೋರಾಗೇ ನಡೆದಿದ್ದು, ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನಟ ದರ್ಶನ್ ಕೇಕ್ ಮಿಕ್ಸಿಂಗ್

ಮೈಸೂರು: ಕ್ರಿಸ್‍ಮಸ್ ಹಿನ್ನೆಲೆ ಕೇಕ್ ತಯಾರಿಕೆ ಜೋರಾಗೇ ನಡೆದಿದ್ದು, ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನಟ ದರ್ಶನ್ ಕೇಕ್ ಮಿಕ್ಸಿಂಗ್ ಮಾಡಿ ಗಮನ ಸೆಳೆದಿದ್ದಾರೆ.ದಾಸ ಶೆಫ್ ಆಗಿ ಕೇಕ್ ಮಿಕ್ಸ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ದರ್ಶನ್‍ಗೆ ನಿರ್ಮಾಪಕ ಸಂದೇಶ್ ಸಾಥ್ ನೀಡಿದ್ದು, ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ನಿರ್ಮಾಪಕ ಸಂದೇಶ್ ನಾಗರಾಜು ಭಾಗಿಯಾಗಿ ಕ್ರಿಸ್‍ಮಸ್ ಅಂಗವಾಗಿ ತಯಾರಾಗುತ್ತಿರುವ ಕೇಕ್ ತಯಾರಿಕೆಗೆ ಕೈ ಜೋಡಿಸಿದ್ದಾರೆ. ಚಾಲೆಂಜಿಂಗ್ …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು ಎತ್ತಿದ್ದಂತೆ ಕಾಣುತ್ತಿದೆ. ನಿನ್ನೆಯಷ್ಟೆ 17 ಮಂದಿಯಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿಲ್ಲ. 105 ಶಾಸಕರಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಗುಂಪು ರಾಜಕೀಯ ಶುರುವಾಗಿದೆ. ಶಾಸಕರಾದ ಮುನಿರತ್ನ, ಉಮೇಶ್ ಕತ್ತಿ, ಮೇಲ್ಮನೆ ಸದಸ್ಯರಾದ ಆರ್. ಶಂಕರ್, ಸಿ.ಪಿ. ಯೋಗೇಶ್ವರ್, ಎಂಟಿಬಿ ನಾಗರಾಜ್ ಸಚಿವರಾಗುವುದು ಪಕ್ಕಾ ಆಗುತ್ತಿದ್ದಂತೆ, ದೆಹಲಿಯಲ್ಲಿ …

Read More »

ನಿವಾರ್ ಅಬ್ಬರ- ಕೋಲಾರದಲ್ಲಿ ಭಾರೀ ಮಳೆ,

ಕೋಲಾರ: ಚೆನ್ನೈ ನಿವಾರ್ ಚಂಡ ಮಾರುತದ ಅಬ್ಬರ ಮುಂದುವರೆದಿದ್ದು, ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಮನೆಯ ಗೋಡೆ ಕುಸಿದಿದ್ದು, ವ್ಯಕ್ತಿಯ ಕಾಲು ಮುರಿದಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಮನೆ ಗೋಡೆ ಕುಸಿತವಾಗಿವೆ. ಪೆದ್ದೂರು ಗ್ರಾಮದ ಸೂರ್ಯ ನಾರಾಯಣ ಅವರ ಕಾಲು ಮುರಿದಿದೆ. ಮಲಗಿದ್ದಾಗ ಗೋಡೆ ಕುಸಿದ್ದರಿಂದ ಕಾಲು ಮುರಿದಿದೆ. ಮುಷ್ಟೂರಲ್ಲಿ ನಾಗಮಣಿ, ವಿಜಿಯಮ್ಮ ಅವರ 2 ಮನೆಯ ಗೋಡೆ ಕುಸಿತವಾಗಿದೆ. ಅಬ್ಬೆಹಳ್ಳಿಯ ಭಾಗ್ಯಮ್ಮ ಅವರ …

Read More »