ಬೆಂಗಳೂರು,ನ.28- ಆತ್ಮಹತ್ಯೆಗೆ ಯತ್ನಿಸಿ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಕಾನೂನಿನ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈಗಾಗಲೇ ಅವರ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ(ಎಫ್ ಐಆರ್) ದಾಖಲಾಗಿದೆ. ಭಾರತೀಯ ದಂಡ ಸಂಹಿತೆ 309ರ ಪ್ರಕಾರ ಆತ್ಮಹತ್ಯೆ ಯತ್ನ ಅಪರಾಧ. ಇದರ ಅಡಿಯಲ್ಲಿ ಗರಿಷ್ಠ ಒಂದು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದಾಗಿದೆ. ಐಪಿಸಿ ಸೆಕ್ಷನ್ 309ರ ಪ್ರಕಾರ …
Read More »Daily Archives: ನವೆಂಬರ್ 28, 2020
ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳಲು ಇಂತಹ ತಂತ್ರ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್‍ವೈ ವಿರುದ್ಧ ಆರೋಪ
ಬೆಂಗಳೂರು: ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಿ ಎಂದು ಕೇಳುವುದರಲ್ಲಿ ತಪ್ಪಿಲ್ಲ. ಸಂವಿಧಾನದ 334ನೇ ವಿಧಿಯಲ್ಲೇ ಇದನ್ನು ತಿಳಿಸಲಾಗಿದೆ. ಆದರೆ, ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳಲು ಇಂತಹ ತಂತ್ರ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್‍ವೈ ವಿರುದ್ಧ ಆರೋಪ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ ವರದಿ ನೀಡಬೇಕು. ಪಟ್ಟಿಗೆ ಸೇರಿಸುವ, ರದ್ದು …
Read More »ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೆ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪ್ರಾದೇಶಿಕ ಹಿಂದುಳಿದ ಪ್ರದೇಶಾಭಿವೃದ್ದಿ ಇಲಾಖೆಯಿಂದ (ನಂಜುಂಡಪ್ಪ ಆಯೋಗ) 95 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ …
Read More »ಅಂಗನವಾಡಿ ಕಾರ್ಯಕರ್ತೆಯರು ಜೀವದ ಹಂಗು ತೊರೆದು ನಿರ್ವಹಿಸಿದ ಕಾರ್ಯಕ್ಕೆ ಸರ್ಕಾರದಿಂದ SMART PHONE
ರಾಯಬಾಗ: ‘ಕೊರೊನಾ ಸಂಕಷ್ಟದಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಜೀವದ ಹಂಗು ತೊರೆದು ನಿರ್ವಹಿಸಿದ ಕಾರ್ಯಕ್ಕೆ ಸರ್ಕಾರವು ಮೆಚ್ಚುಗೆ ವ್ಯಕ್ತಪಡಿಸಿ ಹೆಚ್ಚಿನ ಜವಾಬ್ದಾರಿ ನೀಡಿದೆ. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕೇಂದ್ರದ ಕಾರ್ಯ ಚಟುವಟಿಕೆಗಳ ಮಾಹಿತಿಯನ್ನು ಪ್ರತಿ ದಿನ ಕಳುಹಿಸಲು ಸರ್ಕಾರದಿಂದ ಸ್ಮಾರ್ಟ್ ಫೆÇೀನ್‍ಗಳನ್ನು ವಿತರಿಸಲಾಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ಮಾರ್ಟ್ ಫೆÇೀನ್‍ಗಳನ್ನು ಕಾರ್ಯಕರ್ತೆಯರಿಗೆ ವಿತರಿಸಿ ಅವರು ಮಾತನಾಡಿದರು. ಶ್ರೀದೇವಿ …
Read More »ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ: ಈಶ್ವರಪ್ಪ
ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವ ವಿಚಾರವಾಗಿ ಸಚಿವ ಈಶ್ವರಪ್ಪ ಅವರನ್ನು ಪ್ರಶ್ನೆ ಮಾಡಲಾಗಿದ್ದು, ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಎಂದು ಉತ್ತರಿಸಿದ್ದಾರೆ. ಇಂದು ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ಮಾಧ್ಯಮಗಳಲ್ಲಿ ರಾತ್ರಿ ಈ ಬಗ್ಗೆ ನೋಡಿದೆ. ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ. ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ವಾಪಸ್ ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ.
Read More »ಸಚಿವರ ಭೋಜನಕೂಟ ತಿರಸ್ಕರಿಸಿದ ವಿದ್ಯಾ- ಮರುದಿನ ಅಧಿಕಾರಿಗಳಿಂದ ಶೂಟಿಂಗ್ ಸ್ಥಗಿತ
ಮುಂಬೈ/ಭೋಪಾಲ್: ಅರಣ್ಯ ಸಚಿವರ ಔತನಕೂಟ ತಿರಸ್ಕರಿಸಿದ್ದಕ್ಕೆ ವಿದ್ಯಾ ಬಾಲನ್ ಸಿನಿಮಾದ ಚಿತ್ರೀಕರಣ ತಡೆಯಲಾಗಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸುತ್ತಿವೆ. ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್ ಶಾ ತಮ್ಮ ರಾಜ್ಯದಲ್ಲಿ ಶೂಟಿಂಗ್ ನಡೆಸುತ್ತಿರುವ ನಟಿ ವಿದ್ಯಾ ಬಾಲನ್ ಅವರನ್ನು ಊಟಕ್ಕೆ ಆಹ್ವಾನಿಸಿದ್ದರು. ಆದ್ರೆ ವಿದ್ಯಾ ಬಾಲನ್ ತಮ್ಮ ಶೆಡ್ಯೂಲ್ ಮೊದಲ ನಿಗದಿಯಾಗಿದ್ದರಿಂದ ಭೋಜನಕೂಟಕ್ಕೆ ತೆರಳಿರಲಿಲ್ಲ. ಇದರಿಂದ ಸಚಿವರು ಮರುದಿನ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣಕ್ಕೆ ತಡೆ ನೀಡಿದ್ದರು ಎನ್ನಲಾಗಿದೆ. …
Read More »ಡಿಕೆಶಿ ಬಳಿ ವೀಡಿಯೋಗಳಿದ್ದರೆ ಕೊಡಲಿ ತನಿಖೆ ಮಾಡುತ್ತೇವೆ: ಬೊಮ್ಮಾಯಿ
ರಾಯಚೂರು: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಯಚೂರಿನಲ್ಲಿ ಹೇಳಿದ್ದಾರೆ. ರಾಯಚೂರು ಪ್ರವಾಸದಲ್ಲಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಂತೋಷ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಒಂದೆರಡು ದಿನದಲ್ಲಿ ಸರಿಹೋಗಬಹುದು. ಈಗಾಗಲೇ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ತನಿಖೆ ಮಾಡಲಾಗುವುದು ಎಂದರು. ಎಂಎಲ್‍ಸಿ ಹಾಗೂ ಮಿನಿಸ್ಟರ್ ವೀಡಿಯೋ ವಿಚಾರದಲ್ಲಿ ಒತ್ತಡ ಹಿನ್ನೆಲೆ ಆತ್ಮಹತ್ಯೆಗೆ …
Read More »ದೆಹಲಿ ನಾಯಕರಿಗೆ 2-3 ದಿನದ ಹಿಂದೆ ಅವರ ಪರ್ಸನಲ್ ವೀಡಿಯೊ ತೋರಿಸಿದ್ದಾರೆ. ಹೀಗಾಗಿ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು: ಡಿಕೆ ಶಿವಕುಮಾರ್.
ಕಾರವಾರ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ಏನೋ ಬೇಜಾರಾಗಿ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.ಕಾರವಾರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಂತೋಷ್‍ರವರು ಯಾವುದೋ ವೀಡಿಯೋ ಮಾಡಿ ಎಂಎಲ್‍ಸಿಗೆ ಮತ್ತು ಮಿನಿಸ್ಟರ್ ಕೈಗೆ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಇತ್ತು. ಅದನ್ನು ಮಿನಿಸ್ಟರ್ ಮತ್ತು ಎಂಎಲ್‍ಸಿಗೆ ಸೇರಿ ದೆಹಲಿ ನಾಯಕರಿಗೆ ತಲುಪಿಸಿದ್ದಾರೆ ಎನ್ನುವುದು ಮಾಹಿತಿ ಇದೆ ಎಂದರು. ದೆಹಲಿ ನಾಯಕರಿಗೆ 2-3 ದಿನದ ಹಿಂದೆ ಅವರ …
Read More »ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ
ಹೈದರಾಬಾದ್: ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈತ ಎಲ್‍ಬಿ ನಗರ ನಿವಾಸಿ. ಆನ್‍ಲೈನ್ ಗೇಮ್ ಚಟದಿಂದಾಗಿ ಜಗದೀಶ್ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡನು. ಅಲ್ಲದೆ ಸಾಲ ತೀರಿಸಲು ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ದಾರಿ ಕಾಣದೆ ತನ್ನ ಪ್ರಾಣವನ್ನೇ ಕಳೆದುಕೊಳ್ಳಲು ನಿರ್ಧರಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲವು ದಿನಗಳ ಹಿಂದೆ ಜಗದೀಶ್ ತಂದೆ …
Read More »B.S.Y. ಭೇಟಿ ಮಾಡಿದ ರಮೇಶ್ ಜಾರಕಿಹೊಳಿ, ತಮ್ಮದೇ ಮಿತ್ರಮಂಡಳಿ ವಿರುದ್ಧ ಸಾಹುಕಾರ್ ಗರಂ..!
ಬೆಂಗಳೂರು : ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ಇಂದು ನವ ದುರ್ಗಾ ಪೂಜೆ ಮತ್ತು ಹೋಮದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ. ವಾರಕ್ಕೆರಡು ಬಾರಿಯಂತೆ ನವದೆಹಲಿಯ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿರುವ ರಮೇಶ್ ಜಾರಕಿಹೊಳಿ, ರಾಜ್ಯ ರಾಜಕೀಯದ ಸಂದಿಗ್ಧ ಪರಿಸ್ಥಿತಿಯಲ್ಲಿ ದೇವರ ಮೊರೆ ಹೋಗಿರುವುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಅದಕ್ಕೂ ಮೊದಲು ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯದ ಅಣೆಕಟ್ಟೆಗಳ …
Read More »