ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮಕ್ಕೆ ಯಡಿಯೂರಪ್ಪ ನವರೂ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ ವಿಷಯ ರಾಜ್ಯಾದ್ಯಂತ ಬಹಳ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಕರ್ನಾಟಕ ಬಂದ ಘೋಷಣೆ ಮಾಡಿದ್ದರು, ಆದರೆ ಇದಕ್ಕೆ ಎಲ್ಲ ಕಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗುತ್ತದೆ. ಡಿಸೆಂಬರ ಐದ ರಂದು ಹಮ್ಮಿಕೊಂಡಿರುವ ಕನ್ನಡ ಸಂಘಟನೆ ಗಳ ಬಂದ ಗೆ ಕರವೇ ಗಜಸೇನೆ ವತಿಯಿಂದ ಬೆಂಬಲ ಇಲ್ಲ …
Read More »Monthly Archives: ನವೆಂಬರ್ 2020
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬ
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಇಂದು 72ನೇ ವರ್ಷದ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಗಣ್ಯರು ಪೂಜ್ಯ ಖಾವಂದರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಅಂತೆಯೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೂಡ ಧರ್ಮಾಧಿಕಾರಿಗೆ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದಂದು ಅವರಿಗೆ ಭಕ್ತಿಪೂರ್ವಕ ಶುಭಕಾಮನೆಗಳು. ಶ್ರೀ ಮಂಜುನಾಥ ಸ್ವಾಮಿಯು ತಮಗೆ ಉತ್ತಮ ಆರೋಗ್ಯವನ್ನು, ಶಿಕ್ಷಣ, …
Read More »ಸುರೇಶ್ ಕುಮಾರ್ ಹೇಳಿಕೆಗೆ ಖಾಸಗಿ ಶಾಲೆಗಳ ಆನ್‍ಲೈನ್ ಕ್ಲಾಸ್ ಬಂದ್ – ಕ್ಯಾಮ್ಸ್ ಎಚ್ಚರಿಕೆ?
ಬೆಂಗಳೂರು: ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವುದಿಲ್ಲ ಎಂದು ಶಾಲೆಗಳು ಹೇಳುವಂತಿಲ್ಲ ಎಂಬ ಸುರೇಶ್ ಕುಮಾರ್ ಹೇಳಿಕೆಗೆ ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಸಿಡಿದೆದ್ದಿದೆ.ಶಿಕ್ಷಣ ಸಚಿವರು ತಮ್ಮ ಹೇಳಿಕೆಗೆ ನವೆಂಬರ್ 30ರೊಳಗೆ ಸ್ಪಷ್ಟನೆ ಕೊಡಬೇಕು. ಇಲ್ಲದಿದ್ದರೆ ಆನ್‍ಲೈನ್ ಕ್ಲಾಸ್ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡುವ ಮೂಲಕ ಸರ್ಕಾರಕ್ಕೆ ಸಡ್ಡು ಹೊಡೆದಿದೆ. ಶಿಕ್ಷಣ ಮಂತ್ರಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಸಚಿವರು ಮನುಷ್ಯತ್ವ ಇಲ್ಲದೆ ಹೇಳಿಕೆ ಕೊಡ್ತಿದ್ದಾರೆ. ಶುಲ್ಕ ಕಟ್ಟಡೇ …
Read More »ನಿವಾರ್ ಸೈಕ್ಲೋನ್ ಮುಂದಿನ ಮೂರು ದಿನ ಮಳೆ ಸಂಭವ…………?
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಇನ್ನೆರಡು ದಿನಗಳಲ್ಲಿಯೇ ಅಪ್ಪಳಿಸಲಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಸೈಕ್ಲೋನ್ ಪರಿಣಾಮ ನವೆಂಬರ್ 25 ರಿಂದ 27ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.ಬಂಗಾಲ ಉಪಸಾಗರ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನ.25 ರಂದು ತಮಿಳುನಾಡು ಹಾಗೂ ಪಾಂಡಿಚೇರಿ ಕರಾವಳಿಯಲ್ಲಿ ದಾಟಿ ಕಾರೈಕಲ್, ಮಾಮಲಪುರಂ ಹತ್ತಿರ ಸೈಕ್ಲೋನ್ ಕ್ರಾಸ್ ಆಗುತ್ತೆ. ಇದರ ಪ್ರಭಾವದಿಂದಾಗಿ ಕರಾವಳಿಯ ಕೆಲ …
Read More »ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ
ಲಕ್ನೋ: ಲವ್ ಜಿಹಾದ್ ಕುರಿತು ಹೆಚ್ಚು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತಂದಿದ್ದು, ಒಂದು ವೇಳೆ ಆರೋಪ ಸಾಬೀತಾದಲ್ಲಿ 5 ವರ್ಷದ ವರೆಗೆ ಜೈಲು ಶಿಕ್ಷೆ ವಿಧಿಸುವಂತೆ ಕಾನೂನು ರೂಪಿಸಲಾಗಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಕೇಂದ್ರ ಕಾನೂನು ಸಚಿವಾಲಯದ ಬಳಿ ಈ ಕುರಿತು ಯುಪಿ ಸರ್ಕಾರ ಚರ್ಚಿಸಿತ್ತು. ಇದೀಗ ಸುಗ್ರೀವಾಜ್ಞೆ …
Read More »ಶಬರಿಮಲೆ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿಯನ್ನು ಆರಂಭಿಸಿದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತಾದಿಗಳಿಗೆ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದರೂ ದರ್ಶನಕ್ಕೆ ಅವಕಾಶ ನೀಡುತ್ತಿಲ್ಲ ಎಂಬ ಕುರಿತು ಸುದ್ದಿಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಯಾತ್ರಾರ್ಥಿಗಳಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ. ಕೇರಳದ ಶಬರಿಮಲೆಗೆ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ಹೆಲ್ಪ್ ಲೈನ್ ಆರಂಭಿಸಿ ಸರ್ಕಾರ ಆದೇಶ ಹೊರಡಿಸಿದೆ. 2020-21ನೇ ಸಾಲಿನ ಮಂಡಲ-ಮಕರವಿಳಕ್ಕು ಕಾರ್ಯಕ್ರಮಕ್ಕೆ ತೆರಳುವ ಭಕ್ತರ ಸಮಸ್ಯೆ ಆಲಿಸಲು ಹಾಗೂ ಆರೋಗ್ಯ ಸಲಹೆಗಳಿಗಾಗಿ ಈ ಸಹಾಯವಾಣಿಯನ್ನು ಆರಂಭಿಸಿದೆ. ಕೊರೊನಾ ಹಿನ್ನಲೆ ಶಬರಿಮಲೆ …
Read More »ಕೊಬ್ಬರಿ ಹೋರಿ ಹಿಡಿಯಲು ಹೋಗಿ ಗೋರಿ ಸೇರಿದ ಯುವಕ….
ಹಾವೇರಿ: ಕೊಬ್ಬರಿ ಹೋರಿ ಓಡಿಸೋ ಹಬ್ಬದಲ್ಲಿ ಹಿಡಿಯಲು ಹೋಗಿದ್ದ ಯುವಕನಿಗೆ ಹೋರಿ ಗುದ್ದಿ ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು 24 ವರ್ಷದ ಚಂದ್ರು ಈರಕ್ಕನವರ ಎಂದು ಗುರುತಿಸಲಾಗಿದೆ. ಮೃತ ಚಂದ್ರು, ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದ ನಿವಾಸಿಯವನಾಗಿದ್ದು, ಕೊಬ್ಬರಿ ಹೋರಿ ಹಬ್ಬಕ್ಕಾಗಿಯೇ ಕೆರಿಮತ್ತಿಹಳ್ಳಿಗೆ ಬಂದಿದ್ದ. ಪೊಲೀಸ್ ಇಲಾಖೆಯ ಅನುಮತಿ ನಿರಾಕರಣೆ ನಡುವೆಯೂ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಇಂದು ಕೊಬ್ಬರಿ ಹೋರಿ ಓಡಿಸೋ …
Read More »ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು
ಮಂಗಳೂರು: ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೂಡುಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಶಾಂಭವಿ ನದಿಯಲ್ಲಿ ನಡೆದಿದೆ.ಮೃತರನ್ನು ಮೂಡುಶೆಡ್ಡೆಯ ನಿಖಿಲ್ (18), ಹರ್ಷಿತಾ (20), ವೇಣೂರಿನ ಸುಭಾಶ್ (19), ಬಜ್ಪೆಯ ರವಿ(30) ಎಂದು ಗುರುತಿಸಲಾಗಿದೆ. ಇದರಲ್ಲಿ ಮೊದಲಿಗೆ ಓರ್ವ ಮುಳುಗಿದ್ದು, ಅವನನ್ನು ಕಾಪಾಡಲು ಯುವತಿ ಸೇರಿ ಮೂವರು ನೀರಿಗೆ ಇಳಿದಿದ್ದಾರೆ. ನಾಲ್ವರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
Read More »ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.
ಚಿಕ್ಕಮಗಳೂರು: ಹಣ, ಚಿನ್ನ ಕದಿಯುವವರನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರವಾಸಿ ವಾಹನದಲ್ಲಿ ಕೆಲವರು ಬೆಳಗಿನ ಜಾವ ಅಂಗಡಿ ಮುಂದೆ ಟ್ರೇನಲ್ಲಿದ್ದ ಹಾಲಿನ ಪ್ಯಾಕೇಟ್‍ಗಳಲ್ಲಿ ಮೂರು ಲೀಟರ್ ಹಾಲನ್ನ ಕದ್ದೋಯ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಿಂದ ಮಂಗಳೂರು, ಧರ್ಮಸ್ಥಳಕ್ಕೆ ಹೋಗಬೇಕೆಂದರೆ ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರದ ಮೂಲಕವೇ ಹೋಗಬೇಕು. ಆದರೆ ಅಂಗಡಿ ಮುಂದಿನ ಹಾಲಿನ ಟ್ರೇನಲ್ಲಿದ್ದ ಹಾಲನ್ನು …
Read More »ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಮಂಡನೆ: ಸಚಿವ ಪ್ರಭು ಚೌಹಾಣ್
ಬೆಂಗಳೂರು, – ಪಶು ಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ ಸಚಿವ ಪ್ರಭು ಚೌಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು , ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಪೂರ್ವ ತಯಾರಿ …
Read More »
Laxmi News 24×7