ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಇತ್ತೀಚೆಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದರು. ಆದರೆ ಅನುದಾನದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ. ಇದೀಗ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
Read More »Monthly Archives: ನವೆಂಬರ್ 2020
ಬಿಜೆಪಿ ತೊರೆದು ಕಾಡಾ ಮಾಜಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆಯಾದರು.
ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ತುಂಗಭದ್ರಾ ಕಾಡಾ ಮಾಜಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಅವರು ಬಿಜೆಪಿ ತೊರೆದು ಸಾವಿರಾರು ಬೆಂಬಲಿಗರ ಜೊತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಹಾಗೂ ಹಲವು ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸೇರ್ಪಡೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಆರ್.ಬಸನಗೌಡ ತುರ್ವಿಹಾಳ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ …
Read More »ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವು:ಸತೀಶ್ ಜಾರಕಿಹೊಳಿ
ರಾಯಚೂರು: ಮಸ್ಕಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶ ಹಾಗೂ ಆರ್.ಬಸನಗೌಡ ಅವರ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಲು ಬಂದಿರುವ ಮುಖಂಡರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಮೂಲಕ ವೇದಿಕೆಗೆ ಕರೆತರಲಾಯಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಜಿಲ್ಲೆಯ ಮುಖಂಡರು ಭಾಗವಹಿಸಿದ್ದಾರೆ. ಮಸ್ಕಿ: ಪಕ್ಷದ ಗೆಲುವಿಗಾಗಿ ನೀವು ತೋರಿರುವ ಬೆಂಬಲ, ಪ್ರೀತಿ, ಉತ್ಸಾಹ, …
Read More »ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ
ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿಯವರನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿನಯ್ ಕುಲ್ಕರ್ಣಿಯವರನ್ನು ಇನ್ನಷ್ಟು ವಿಚಾರಣೆ ನಡೆಸಲಿರುವ ಅಗತ್ಯವಿರುವುದರಿಂದ ಮತ್ತಷ್ಟು ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಸಿಬಿಐ …
Read More »ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್‍ಗೆ ಬರುತ್ತಾರೆ:ಡಿ.ಕೆ.ಶಿವಕುಮಾರ್
ಕೊಪ್ಪಳ, ನ.23: ಬಿಜೆಪಿಯಿಂದಲೇ ಕಾಂಗ್ರೆಸ್‍ಗೆ ಸೇರ್ಪಡೆ ಆಗುವವರು ಬಹಳಷ್ಟು ಮಂದಿ ಇದ್ದಾರೆ. ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್‍ಗೆ ಬರುತ್ತಾರೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪರಿಗೆ ತಮ್ಮ ಸರಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ …
Read More »ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.
ರಾಯಚೂರು: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಸೇರಿದಂತೆ ಹಲವು ಮುಖಂಡರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖಂಡರ ಆಗಮನವನ್ನು ಬೆಂಬಲಿಗರು ನಿರೀಕ್ಷಿಸುತ್ತಿದ್ದು, ಆರ್.ಬಸನಗೌಡ ತುರುವಿಹಾಳ ಅವರು ಬೆಂಬಲಿಗರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ …
Read More »ಕಿರುತೆರೆ ನಟಿ ಸಾವು ಕಾರಣ ಏನು ಗೊತ್ತಾ…?
ಮುಂಬೈ: ಕಿರುತೆರೆ ನಟಿಯೊಬ್ಬರು ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಸಹನಟ ರೋಹನ್ ಮೆಹ್ರಾ ತಿಳಿಸಿದ್ದಾರೆ.ನಟಿಯನ್ನು ಲೀನಾ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಕ್ಲಾಸ್ ಆಫ್ 2020 ಹಾಗೂ ಸೆಥ್ ಜೀ ಧಾರಾವಾಹಿಗಳಲ್ಲಿ ನಟಿಸಿದ್ದರು. ನಟಿ ಶನಿವಾರ ದೆಹಲಿಯಲ್ಲಿ ಮೃತಪಟ್ಟಿರುವುದಾಗಿ ಲೀನಾ ಸಹನಟ ಮೆಹ್ರಾ ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಸಂಬಂಧ ಇನ್‍ಸ್ಟಾದಲ್ಲಿ ಲೀನಾ ಜೊತೆಗಿನ ಫೋಟೋ ಹಾಕಿ ಬರೆದುಕೊಂಡಿರುವ ರೋಹನ್, ಕಳೆದ ವರ್ಷ ಇದೇ ಸಮಯದಲ್ಲಿ ಕ್ಲಾಸ್ ಆಫ್ 2020 ಶೂಟಿಂಗ್ ನಲ್ಲಿದ್ದೆವು. …
Read More »ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ 7 ಮಂದಿಗೆ ಗಂಭೀರ ಗಾಯ
ಬಳ್ಳಾರಿ: ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆತ ಕೂಡ್ಲಿಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50ರ ಗೌಡ್ರು ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದೆ. ಮಲ್ಲಪ್ಪ (40), ವೀರೇಶ್ (17), ಶರಣಪ್ಪ (15), ಸಾಬಮ್ಮ(19), ಮಹದೇವಮ್ಮ (52), ಮರಿಯಮ್ಮ (35) ಹಾಗೂ ಕಾರ್ ಚಾಲಕ ಸಿದ್ದು (22) ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಾಳುಗಳ ಪೈಕಿ ಮೂವರನ್ನ …
Read More »ಹಂಪ್ಸ್ ನಲ್ಲಾದ ಜಂಪ್ ನಿಂದ ಬೈಕಿನಿಂದ ಬಿದ್ದುಮೃತಪಟ್ಟಿದ್ದಾರೆ.
ಬಾಗಲಕೋಟೆ: ಹಂಪ್ಸ್ ನಲ್ಲಾದ ಜಂಪ್ ನಿಂದ ಬೈಕಿನಿಂದ ಬಿದ್ದು ಯೋಧನ ಪತ್ನಿ ಸಾವಿಗೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದಲ್ಲಿ ನಡೆದಿದೆ. ಪುಷ್ಪಲತಾ (35) ಬೈಕ್ ನಿಂದ ಬಿದ್ದು ಮೃತಪಟ್ಟ ಮಹಿಳೆ. ಇವರು ಬಾದಾಮಿ ತಾಲೂಕಿನ ತಿಮ್ಮಸಾಗರ ಗ್ರಾಮದ ನಿವಾಸಿ. ಈಕೆಯ ಪತಿ ವಿಭೂತಿ ಶೇಖರಯ್ಯ ಭಾರತೀಯ ಸೇನೆಯಲ್ಲಿ ಕರ್ತವ್ಯ ಸಲ್ಲಿಸಲು ಇಂದು ಬೆಳಗ್ಗೆ ಜಮ್ಮು-ಕಾಶ್ಮೀರಕ್ಕೆ ಹೊರಡಬೇಕಿತ್ತು. ಪುಷ್ಪಲತಾ ಹಿರೇ ಮಳಗಾವಿ ಗ್ರಾಮದಲ್ಲಿರುವ ಅವರ ತವರು ಮನೆಗೆ …
Read More »ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳ ವಶಕ್ಕೆ
ಬೆಂಗಳೂರು: ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಅನಧಿಕೃತವಾಗಿ ಸಂಚರಿಸುತಿದ್ದ ಬಸ್ಸುಗಳನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಎರಡು ಬಸ್ಸುಗಳು ಒಂದೇ ನಂಬರ್, ಒಂದೇ ಕಲ್ಲರ್, ಒಂದೇ ಬಸ್ ವಿನ್ಯಾಸ ಹೊಂದಿದ್ದು, ಸರ್ಕಾರಕ್ಕೆ ಲಕ್ಷ ಲಕ್ಷ ವಂಚನೆ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಬಸ್‍ಗಳನ್ನು ವಶಕ್ಕೆ ಪಡೆದು …
Read More »