Breaking News

Monthly Archives: ನವೆಂಬರ್ 2020

ಶಾಸಕ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆ

ಗೋಕಾಕ್: ಕನ್ನಡಪರ ಸಂಘಟನೆಗಳನ್ನು ‘ರೋಲ್‍ಕಾಲ್ ಹೋರಾಟಗಾರರು ಎಂದು ಕರೆದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಯನ್ನು ಖಂಡಿಸಿ ಆಕ್ರೋಶಗೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ರಸ್ತೆ ತಡೆದು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ಶಾಸಕ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಶಾಸಕ ಯತ್ನಾಳ್ ಒಬ್ಬ ಬ್ಲಾಕ್‍ಮೇಲ್ ಶಾಸಕನಿದ್ದಂತೆ, ಕನ್ನಡಪರ ಸಂಘಟನೆಗಳಿಗೆ ಅಪಮಾನ ಮಾಡುವ ಮೂಲಕ ಕರ್ನಾಟಕದ ಜನರಿಗೆ ಅಪಮಾನ ಮಾಡಿದ್ದಾರೆ. …

Read More »

ಹ್ಯಾಕ್ ಮಾಡಲು ಏಕಾಗ್ರತೆ ಮುಖ್ಏಕಾಗ್ರತೆಗಾಗಿ ನಾನು ಭಗವದ್ಗೀತೆ ಓದುತ್ತೇನೆ.:ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್

ಬೆಂಗಳೂರು: ವೆಬ್ ಸೈಟ್, ಗೇಮ್ ಹ್ಯಾಕ್ ಮಾಡಲು ಏಕಾಗ್ರತೆ ಮುಖ್ಯ. ಹಾಗಾಗಿ ಏಕಾಗ್ರತೆಗಾಗಿ ನಾನು ಭಗವದ್ಗೀತೆ ಓದುತ್ತೇನೆ. ಬಳಿಕ ಕೆಲ ಸಮಯ ಧ್ಯಾನ ಮಾಡುತ್ತೇನೆ ಎಂದು ಬಂಧಿತ ಅಂತರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ವಿಚಾರಣೆ ವೇಳೆ ಹೇಳಿದ್ದಾನೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಅಂತರಾಷ್ಟ್ರೀಯ ಹ್ಯಾಕರ್ ಶ್ರೀಕಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಸಿಸಿಬಿ ಅಧಿಕಾರಿಗಳು ಹ್ಯಾಕರ್ ನ ಏಕಾಗ್ರತೆ ರಹಸ್ಯ ಕೇಳಿ ಶಾಕ್ ಆಗಿದ್ದಾರೆ. ಬಂಧನದ ವೇಳೆಯೂ ಭಗವದ್ಗೀತೆ ಕೈಲಿ …

Read More »

ಜಾನ್ಸನ್ & ಜಾನ್ಸನ್ ಕಂಪನಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಬಂದಿದೆ ಎಂದು ಆರೋಪಿಸಿಜಾನ್ಸನ್ & ಜಾನ್ಸನ್ ಕಂಪನಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಬಂದಿದೆ ಎಂದು ಆರೋಪಿಸಿಜಾನ್ಸನ್ & ಜಾನ್ಸನ್ ಕಂಪನಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಬಂದಿದೆ ಎಂದು ಆರೋಪ…

ನ್ಯೂಯಾರ್ಕ್: ಮಕ್ಕಳಿಗೆ ಪ್ರಿಯವಾದ ಜನಪ್ರಿಯ ಜಾನ್ಸನ್ & ಜಾನ್ಸನ್ ಕಂಪನಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಬಂದಿದೆ ಎಂದು ಆರೋಪಿಸಿ ದಂಪತಿ ಕೋರ್ಟ್ ಮೆಟ್ಟಿಲೇರಿ ಪರಿಹಾರ ಪಡೆದುಕೊಂಡಿರುವ ಘಟನೆ ನಡೆದಿದೆ. ಡೊನ್ನಾ ಓಲ್ಸ್ (67), ರಾಬರ್ಟ್ (65) ಎಂಬುವವರು ಪ್ರತಿಷ್ಠಿತ ಜಾನ್ಸನ್ & ಜಾನ್ಸನ್ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಈ ಕಂಪನಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಬಂದಿದೆ ಎಂದು ಆರೋಪಿಸಿ, 325 ಮಿಲಿಯನ್ ಡಾಲರ್ ಪರಿಹಾರ ನೀಡುವಂತೆ ಕೋರಿದ್ದರು. 14 …

Read More »

ಡಾ.ಕೆ.ಸುಧಾಕರ್ ಬೀಮ್ಸ್  ಬೆಳಗಾವಿ ವೈದ್ಯರಿಗೆ ತರಾಟೆತೆಗೆದುಕೊಂಡರು.

ಬೆಳಗಾವಿ : ಸರ್ಕಾರಿ ಆಸ್ಪತ್ರೆಗಳು ಶುಚಿತ್ವ ಇರುವುದಿಲ್ಲ ಎಂಬ ದೊಡ್ಡ ಆರೋಪ ಇದೆ. ವಿಷಯ ಪರಿಣಿತಿ ಜತೆಗೆ ಆಡಳಿತಾತ್ಮಕ ಕೌಶಲವನ್ನು ವೈದ್ಯರು ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ‌ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ.ಕೆ.ಸುಧಾಕರ್  ವೈದ್ಯರಿಗೆ ತರಾಟೆ ತೆಗೆದುಕೊಂಡರು. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಅವರು ಬೀಮ್ಸ್  ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ರೋಗಿಗಳ ಸಂಬಂಧಿಕರು ಅಲ್ಲಿನ ಸಮಸ್ಯೆಗಳನ್ನು ಸಚಿವರ …

Read More »

ಎರಡು ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಿಹಿ ಸುದ್ದಿ ಬರಬಹುದು.: ರಮೇಶ್ ಜಾರಕಿಹೊಳಿ

ಬೆಂಗಳೂರು: ಎರಡು ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಿಹಿ ಸುದ್ದಿ ಬರಬಹುದು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಮುಖ್ಯಮಂತ್ರಿಯ ಪರಮಾಧಿಕಾರ, ಆದಷ್ಟು ಬೇಗ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದೇವೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳುವ ಬಗ್ಗೆ ಮಾಹಿತಿ ಇರಲಿಲ್ಲ. ತಾವು ಇಲಾಖಾ ವಿಷಯ ಕುರಿತು ಕೇಂದ್ರ ಸಚಿವರ ಜೊತೆ ಚರ್ಚಿಸಲು …

Read More »

ರಸ್ತೆ ಅಪಘಾತದಲ್ಲಿ ನನ್ನ ವಾಹನ ಜಖಂಗೊಂಡಿರುವುದಕ್ಕೆ ಬೇಸರವಿಲ್ಲ. ಈ ಅಪಘಾತದಲ್ಲಿ ಇಬ್ಬರ ಪ್ರಾಣ ಹೋಗಿರುವುದು ತುಂಬಾ ನೋವಾಗುತ್ತಿದೆ:ಉಮಾಶ್ರೀ

ಹುಬ್ಬಳ್ಳಿ: ರಸ್ತೆ ಅಪಘಾತದಲ್ಲಿ ನನ್ನ ವಾಹನ ಜಖಂಗೊಂಡಿರುವುದಕ್ಕೆ ಬೇಸರವಿಲ್ಲ. ಈ ಅಪಘಾತದಲ್ಲಿ ಇಬ್ಬರ ಪ್ರಾಣ ಹೋಗಿರುವುದು ತುಂಬಾ ನೋವಾಗುತ್ತಿದೆ ಎಂದು ಮಾಜಿ ಸಚಿವೆ ಹಾಗೂ ನಟಿ ಉಮಾಶ್ರೀ ತಮ್ಮ ಕಾರು ಅಪಘಾತದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಬಳಿ ನಡೆದ ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿದ್ದರು. ರಸ್ತೆ ಅಪಘಾತದಲ್ಲಿ ಶೋಭಾ ಕಟ್ಟಿ ಹಾಗೂ ಚಾಲಕ ಸಂದೀಪ್ ವಿಭೂತಿಮಠ ಸಾವಿಗೀಡಾಗಿದ್ದಾರೆ. …

Read More »

ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಈಗಾಗಲೇ ದೆಹಲಿಯಲ್ಲಿ ಚರ್ಚೆ ಮಾಡಿ ಬಂದಿದ್ದಾರೆ. ಯಾಕೆ ವಿಳಂಬವಾಗುತ್ತಿದೆ ಎಂದು ಸಿಎಂ ಪ್ರಶ್ನಿಸುವಷ್ಟು ನಾನು ದೊಡ್ಡವನಲ್ಲ. ತಾಳ್ಮೆಯಿಂದ ಕಾಯುತ್ತೇನೆ, ಮನುಷ್ಯನಿಗೆ ತಾಳ್ಮೆ, ಸಂಯಮ ಬಹಳ ಮುಖ್ಯ. ಸಿಎಂ, ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು. …

Read More »

ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು.

ಬೆಳಗಾವಿ : ಗೋಕಾಕ ತಾಲ್ಲೂಕಿನ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಎಸ್.ಟಿ.ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು.

Read More »

ಗೋಕಾಕ ಜಿಲ್ಲಾ ರಚನೆಯ ಆದೇಶವನ್ನು ಕೂಡಲೇ ಘೋಷಿಸಬೇಕ: ಅಶೋಕ ಪೂಜಾರಿ

ಗೋಕಾಕ: ಇಂದಿನ ರಾಜ್ಯ ಸರ್ಕಾರ ಗೋಕಾಕ ಜಿಲ್ಲಾ ರಚನೆಯ ಆದೇಶವನ್ನು ಕೂಡಲೇ ಘೋಷಿಸಬೇಕೆಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು, ಸರ್ಕಾರವೇ ನೇಮಿಸಿದ ಆಯೋಗಗಳ ವರದಿಯನ್ನಾದರಿಸಿ ಸುಮಾರು ವರ್ಷಗಳ ಗೋಕಾಕ ಜಿಲ್ಲಾ ರಚನೆಯ ಹೋರಾಟಗಳ ಮನವಿಗೆ ಸ್ಪಂಧಿಸಿ ರಚನೆಯಾದ ಗೋಕಾಕ ಜಿಲ್ಲೆಯನ್ನು ರಾಜಕೀಯ ಕಾರಣಗಳಿಂದ ಅಸ್ಥಿತ್ವಕ್ಕೆ ತರಲು ಅಂದಿನ ಸರ್ಕಾರ ಹಿಂದೇಟು ಹಾಕಿದ್ದು, ಆದರೆ ಬದಲಾದ ಸನ್ನಿವೇಶದಲ್ಲಿ ಇಂದಿನ ಸರ್ಕಾರ ಕೂಡಲೇ …

Read More »

ಸಂಜಯ ಪಾಟೀಲ ಹೇಳಿಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಚನ್ನರಾಜ ಹಟ್ಟಿಹೊಳ್ಳಿ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯಲ್ಲ ಎಂಬ ಮಾಜಿ ಶಾಸಕ ಸಂಜಯ ಪಾಟೀಲ ಹೇಳಿಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಸಮಿತಿ ಸಭೆ ನಡೆಸಲಾಗಿದೆ. ಅಭ್ಯರ್ಥಿ ಆಯ್ಕೆ ಇನ್ನು ಅಂತಿಮ ಆಗಿಲ್ಲ. ಸಮಿತಿ ಅಧ್ಯಕ್ಷರು ಹೇಳಿದ ರೀತಿಯಲ್ಲಿ  ಒಂದು ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುತ್ತದೆ. …

Read More »