Breaking News

Monthly Archives: ನವೆಂಬರ್ 2020

ನಾನು ವಲಸೆ ಬಂದ ಮನುಷ್ಯ ಅಲ್ಲ. ಮೂವತ್ತು ವರ್ಷದಿಂದ ಪಕ್ಷದಲ್ಲಿದ್ದೇನೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್

ಧಾರವಾಡ: ನಾನು ವಲಸೆ ಬಂದ ಮನುಷ್ಯ ಅಲ್ಲ. ಮೂವತ್ತು ವರ್ಷದಿಂದ ಪಕ್ಷದಲ್ಲಿದ್ದೇನೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.ಸಂಪುಟ ಪುನರ್ ರಚನೆಯಲ್ಲಿ ಸಚಿವ ಸ್ಥಾನ ಕೈ ತಪ್ಪುವ ವಿಚಾರ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಮನೆಯಿಂದ ಸೀದಾ ಬಿಜೆಪಿಗೆ ಬಂದವನು. ನನ್ನಲ್ಲಿ ಕೊರತೆ ಏನಿಲ್ಲ, ನಾನು ಕೆಲಸ ಮಾಡುತ್ತಿರುವೆ. ಹೈಕಮಾಂಡ್ ಮೇಲೆ ನನಗೆ ಸಂಪೂರ್ಣ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಧ್ಯಮಗಳ ಮೂಲಕ ಮಾತ್ರ …

Read More »

ಗೆದ್ದಿರುವ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು: ಎಂ.ಪಿ. ರೇಣುಕಾಚಾರ್ಯ

ಬೆಂಗಳೂರು: ನನಗೆ ಸಚಿವ ಸ್ಥಾನ ಕೊಡಬೇಕು ಅಂತ ಹೇಳುತ್ತಿಲ್ಲ. ಗೆದ್ದಿರುವ ಶಾಸಕರಿಗೆ ಕೊಡಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರುವ ವಾಸ್ತವಾಂಶವನ್ನು ತಿಳಿಸುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ದೇವೆ. ಯಾರನ್ನು ಸೇರಿಸಬೇಕು, ಕೈಬಿಡಬೇಕು ಅನ್ನೋದು ಸಿಎಂ, ರಾಜ್ಯಾಧ್ಯಕ್ಷರು ಹಾಗೂ ವರಿಷ್ಠರಿಗೆ ಬಿಟ್ಟ ನಿರ್ಧಾರ. ಸರ್ಕಾರ ಬಂದು ಒಂದೂವರೆ ವರ್ಷ ಆಗಿದೆ. ಕೆಲವರನ್ನು …

Read More »

ಕಾಂಗ್ರೆಸ್ ನಿಂದಾ ಲೋಕಸಭಾ ಅಭ್ಯರ್ಥಿ ಯಾರು ?ಇದೆ 21ರಂದು ಮಹತ್ವದ ಸಭೆ:ಸತೀಶ್ ಜಾರಕಿಹೊಳಿ,

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯ ಕುರಿತು ನ.21ರಂದು ನಗರದ ಕಾಂಗ್ರೆಸ್ ಭವನದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡುವುದಕ್ಕಾಗಿ ಕೆಪಿಸಿಸಿ ಅಧÀ್ಯಕ್ಷ ಡಿ.ಕೆ ಶಿವಕುಮಾರ್ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರ ಅಧ್ಯಕ್ಷ ಹಾಗೂ ಶಾಸಕ, ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ …

Read More »

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ ಯೋಗೀಶ್ ಗೌಡ ಹತ್ಯೆ ಪ್ರಕರಣ; ಜೈಲುವಾಸದಲ್ಲಿರುವ ಮಾಜಿ ಸಚಿವ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮಿನು ಅರ್ಜಿಯನ್ನು ಹಿಂಪಡೆದಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿಸಲ್ಪಟ್ಟಿರುವ ವಿನಯ್ ಕುಲ್ಕರ್ಣಿ ಬೆಳಗಾವಿ ಹಿಡಲಗಾ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದೆ ಬಿಡುಗಡೆ ಕೋರಿ ಧಾರವಾಡ 3ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ …

Read More »

ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ

  ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಗೋಕಾಕ: ಮೇಕೆದಾಟು ಸಮಾನಾಂತರ ಆಣೆಕಟ್ಟು ಯೋಜನೆಗೆ ಬೇಕಿರುವ ಕೇಂದ್ರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ಬುಧವಾರ ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ …

Read More »

ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ನಟಿ ಕಂಗನಾ ಕಿಡಿ

  ಡಿ.ರೂಪಾ-ಟ್ರೂ ಇಂಡಾಲಜಿ ಸಂಭಾಷಣೆ ನಡುವೆ ಹೊತ್ತಿದ ಪಟಾಕಿ ಕಿಡಿ ದೀಪಾವಳಿ ಮುಗಿದರೂ ಪಟಾಕಿ ವಿವಾದಗಳು ಮಾತ್ರ ಮುಗಿದಿಲ್ಲ. ದೀಪಾವಳಿಯಲ್ಲಿ ಪಟಾಕಿ ಸಿಡಿಸಬಾರದು. ಹಿಂದೂ ಮಹಾಕಾವ್ಯಗಳಲ್ಲಿ ಪಟಾಕಿ ಬಗ್ಗೆ ಉಲ್ಲೇಖವಿಲ್ಲ ಎಂದು ಟ್ವೀಟ್ ಮಾಡಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಇದೀಗ ಬಾಲಿವುಡ್ ನಟಿ ಕಂಗನಾ ರಣಾವತ್ ವಾಗ್ದಾಳಿ ನಡೆಸಿದ್ದಾರೆ. ಡಿ.ರೂಪಾ ಹಾಗೂ ಟ್ರೂ ಇಂಡಾಲಜಿ ನಡುವಿನ ವಾಗ್ವಾದದ ಬೆನ್ನಲ್ಲೇ ಟ್ರೂ ಇಂಡಾಲಜಿ ಟ್ವಿಟರ್ ಅಕೌಂಟ್ ನ್ನೇ ನಿಷ್ಕ್ರಿಯಗೊಳಿಸಲಾಗಿತ್ತು. …

Read More »

ವಿಜಯಪುರದಲ್ಲಿ ಮತ್ತೆ ಶೂಟೌಟ್

ವಿಜಯಪುರ: ಗುಮ್ಮಟನಗರಿ ವಿಜಯಪುರದಲ್ಲಿ ಮತ್ತೆ ಶೂಟೌಟ್ ಆಗಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ನಡೆದ ಮಾತಿನ ಚಕಮಕಿಯಲ್ಲಿ ಓರ್ವನ ಮೇಲೆ ಮತ್ತೋರ್ವ ಗುಂಡು ಹಾರಿಸಿರುವ ಘಟನೆ ವಿಜಯಪುರ ನಗರದ ಜಿ.ಪಂಚಾಯತ್ ಹತ್ತಿರ ನಡೆದಿದೆ.ಬಾರಾಕೊಟ್ರಿ ತಾಂಡಾ ನಿವಾಸಿ ಪದ್ದು ರಾಠೋಡ್ ಮೇಲೆ ಗುಂಡಿನ ದಾಳಿ ಆಗಿದ್ದು, ತುಳಸಿರಾಮ್ ಎಂಬಾತ ಶೂಟೌಟ್ ಗೈದು ಪರಾರಿಯಾಗಿದ್ದಾನೆ. ಹಣಕಾಸಿನ ವ್ಯವಹಾರ ಹಿನ್ನೆಲೆ ಶೂಟೌಟ್ ನಡೆದಿದೆ ಎನ್ನಲಾಗಿದ್ದು, ಗಾಯಗೊಂಡಿರುವ ಪದ್ದುನನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ …

Read More »

ಮೊದಲ ಬಾರಿಗೆ ಸುಮಾರು 800 ಶಿಶುಗಳ ತಿಂಗಳೊಂದರಲ್ಲೇ ಜನಿಸುವ ಮೂಲಕ ದಾಖಲೆ ನಿರ್ಮಿಸಿದೆ ಮಂಗಳೂರು: ಸರ್ಕಾರಿ ಆಸ್ಪತ್ರೆ

ಮಂಗಳೂರು: ಸರ್ಕಾರಿ ಆಸ್ಪತ್ರೆ ಅಂದ್ರೆ ಜನ ಮಾರುದ್ದ ಓಡ್ತಾರೆ. ಸರಿಯಾದ ಚಿಕಿತ್ಸೆ ಸಿಗೋದಿಲ್ಲ ಅನ್ನೋರೇ ಹೆಚ್ಚು. ಆದ್ರೆ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಹೆರಿಗೆ ಆಸ್ಪತ್ರೆ ಖಾಸಗಿ ಆಸ್ಪತ್ರೆಗಿಂತ ಏನು ಕಡಿಮೆ ಇಲ್ಲ ಎನ್ನುವಷ್ಟು ಪ್ರಸಿದ್ಧಿಯನ್ನು ಪಡೆದಿದೆ. ಕೊರೊನಾದ ಬಳಿಕ ಜನ ಈ ಆಸ್ಪತ್ರೆಯತ್ತ ಮುಗಿ ಬೀಳಲಾರಂಭಿಸಿದ್ದಾರೆ. ಈ ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸುಮಾರು 800 ಶಿಶುಗಳ ತಿಂಗಳೊಂದರಲ್ಲೇ ಜನಿಸುವ ಮೂಲಕ ದಾಖಲೆ ನಿರ್ಮಿಸಿದೆ. ಪ್ರತಿ ತಿಂಗಳು ಈ ಲೇಡಿಗೋಶನ್ …

Read More »

ಬಸ್ ನಂಬಿ ರೋಡಿಗಿಳಿಯೋ ಮುನ್ನ ಎಚ್ಚರವಾಗಿರಿ.

ಬೆಂಗಳೂರು: ಬಸ್ ನಂಬಿ ರೋಡಿಗಿಳಿಯೋ ಮುನ್ನ ಎಚ್ಚರವಾಗಿರಿ. ಯಾಕಂದ್ರೆ ಸಾರಿಗೆ ನೌಕರರು ಇಂದು ಮತ್ತೆ ಬೀದಿಗಿಳಿಯುತ್ತಿದ್ದಾರೆ. ಸರ್ಕಾರಿ ನೌಕರರನ್ನಾಗಿ ಘೋಷಿಸುವಂತೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಬೃಹತ್ ಪತ್ರ ಚಳುವಳಿ ನಡೆಯಲಿದೆ. ನಾಲ್ಕು ನಿಗಮಗಳ 1 ಸಾವಿರಕ್ಕೂ ಹೆಚ್ಚು ಸಾರಿಗೆ ನೌಕರರಿಂದ ಇಂದು ಮಧ್ಯಾಹ್ನ 1 ಗಂಟೆಗೆ ಫ್ರೀಡಂಪಾರ್ಕ್ ನಲ್ಲಿ ಸೇರಲಿದ್ದಾರೆ. ಕಳೆದ 8 ತಿಂಗಳ ಹಿಂದೆಯೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸುವಂತೆ ಕೂಗು ಎದ್ದಿತ್ತು. ಈ ಕೂಗಿಗೆ …

Read More »

ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ ನಡೆಸಿದ್ದು 12 ಮಂದಿ ನಾಗರಿಕರು ಗಾಯ

: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದಾರೆ. ಸೈನಿಕರ ವಾಹನವನ್ನು ಗುರಿಯಾಗಿಸಿ ಗ್ರೆನೇಡ್ ದಾಳಿ ನಡೆಸಿದ್ದು 12 ಮಂದಿ ನಾಗರಿಕರು ಗಾಯಗೊಂಡಿದ್ದಾರೆ. ಪುಲ್ವಾಮಾದ ಕಾಕಾಪೋರದಲ್ಲಿ ಸಿಆರ್‌ಪಿಎಫ್‌ ಮತ್ತು ಪೊಲೀಸರ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಆದರೆ ಗ್ರೆನೇಡ್‌ ಗುರಿ ತಪ್ಪಿ ರಸ್ತೆಯ ಮೇಲೆ ಬಿದ್ದ ಪರಿಣಾಮ 10 ಮಂದಿ ನಾಗರಿಗರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಆರೋಗ್ಯ …

Read More »