ದಾವಣಗೆರೆ: ಬ್ಯಾಂಡ್ ಬಾರಿಸಿ ತಮಟೆ ಬಾರಿಸಿ ಬಾಯಿ ಬಡಿದುಕೊಂಡರೆ ಯಾರಿಗೂ ಸಚಿವ ಸ್ಥಾನ ಸಿಗಲ್ಲ ಎಂದು ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ವಿಚಾರವಾಗಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಎಲ್ಲ ಶಾಸಕ ಸಭೆ ಮಾಡಿ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡುವಂತೆ ಸಿಎಂಗೆ ಒತ್ತಾಯ ಮಾಡಿದ್ದೇವೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು ದಾವಣಗೆರೆ ಮಧ್ಯ …
Read More »Monthly Archives: ನವೆಂಬರ್ 2020
ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ.ಸಿಎಂ:ಲಕ್ಷ್ಮಣ್ ಸವದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ತಕ್ಷಣ ಎರಡು ತಿಂಗಳ ವೇತನ ಕೊಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸವದಿ, ಸಾರಿಗೆ ಇಲಾಖೆ ಸಿಬ್ಬಂದಿಯ ಮೂರು ತಿಂಗಳ ವೇತನ ಸಮಸ್ಯೆ ಇದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ವೇತನ ಕೊಡಲು ಸಂಕಷ್ಟ …
Read More »ಏರಿಯಾದಲ್ಲಿ ನಮ್ಮ ಹವಾನೇ ಜಾಸ್ತಿ ಇರಬೇಕು ರಸ್ತೆ ಪಕ್ಕದಲ್ಲೇ ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್
ಬೆಂಗಳೂರು: ಏರಿಯಾದಲ್ಲಿ ಹವಾ ಮೆಂಟೈನ್ ಮಾಡಬೇಕೆಂದು ಯುವಕನೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಸ್ನೇಹಿತರೇ ಆದ ಅಶೋಕ್ ಮತ್ತು ಅವನ ಸಹಚರರು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಕಾರ್ತಿಕ್ ಹಾಗೂ ಹಂತಕ ಅಶೋಕ್ ಒಂದೇ ಗ್ಯಾಂಗ್‍ನ ಸದಸ್ಯರಾಗಿದ್ದು, ಏರಿಯಾದಲ್ಲಿ ನಾನೇ ಜಾಸ್ತಿ ಹವಾ ಮಾಡಬೇಕೆಂದು ಆಶೋಕ್ ಸ್ನೇಹಿತ ಕಾರ್ತಿಕ್ ಅನ್ನೇ ಕೊಲೆ ಮಾಡಿದ್ದಾನೆ.ಕಾರ್ತಿಕ್ ಮತ್ತು ಅಶೋಕ್ …
Read More »200ಕೋಟಿ gst ವಂಚನೆ ಮಾಡಿದ್ದ 4ಜನ ಅರೆಸ್ಟ್…..!
ಬೆಂಗಳೂರು: ಗುಪ್ತಚರ(ಡಿಜಿಜಿಐ) ವಿಭಾಗ ಹಾಗೂ ಜಿಎಸ್‍ಟಿ ಬೆಂಗಳೂರು ಝೋನಾಲ್ ಯುನಿಟ್(ಬಿಝೆಡ್‍ಯು) ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 200 ಕೋಟಿ ರೂಪಾಯಿ ಜಿಎಸ್‍ಟಿ ತೆರಿಗೆ ವಂಚನೆ ಮಾಡಿದ ಆರೋಪದಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಚೀನಾ ಮೂಲದ ಕಂಪನಿಗಳು ಸೇರಿದಂತೆ ಬಹುರಾಷ್ಟ್ರೀಯ ಕಂಪನಿಗಳಿಗೆ ಸೇವೆ ನೀಡಿದ ನೆಪದಲ್ಲಿ ಸುಮಾರು 1,000 ಕೋಟಿ ರೂಪಾಯಿ ಮೌಲ್ಯದ ನಕಲಿ ಇನ್‍ವೈಸ್‍ಗಳನ್ನು ಸೃಷ್ಟಿಸಲಾಗಿದೆ ಎಂದು ಆಪಾದಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಜಿಎಸ್‍ಟಿ ಗುಪ್ತಚರ …
Read More »ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ
ಬೆಂಗಳೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ ಸಿಎಂಗೆ ಮನವಿ ಮಾಡಿದ್ದಾರೆ. ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ಸಂಬಂಧಿಸಿದಂತೆ ಸರಕಾರದ ಈ ನಿರ್ಧಾರದ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿದ್ದು, ಇದರ ನಡುವೆ ಡಿಸಿಎಂ ಲಕ್ಷ್ಮಣ ಸವದಿ ಸೋಮವಾರ ಸಿಎಂ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ. …
Read More »ಸಾವಿರಾರು ಕೋಟಿ ಒಡೆಯ ಇದ್ದರೂ ತನ್ನ ಸ್ವಂತ ಜಿಲ್ಲೆಗೆ ಮನೆಗೆ ಹೋಗಲು ಕೋರ್ಟ್ ಅನುಮತಿ ಪಡೆಯಬೇಕು…
ನವದೆಹಲಿ: ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಹಿನ್ನಡೆಯಾಗಿದ್ದು, ಬಳ್ಳಾರಿ ಪ್ರವೇಶದ ಅರ್ಜಿಗೆ ಸಿಬಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಡಿಸೆಂಬರ್‍ನಲ್ಲಿ ಪ್ರಕರಣದ ವಿಸ್ತೃತ ವಿಚಾರಣೆ ನಡೆಸಲು ಮುಂದಾಗಿದೆ. ಬಳ್ಳಾರಿ ಸೇರಿ 3 ಜಿಲ್ಲೆಗಳ ಪ್ರವೇಶಕ್ಕೆ ಜನಾರ್ಧನ ರೆಡ್ಡಿ ಅನುಮತಿ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಿತು. …
Read More »ನಗರ್ ಸಭೆ ಸದಸ್ಯರಿಂದ ಶ್ರೀ ಲಖನ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನ..
ಗೋಕಾಕ: ನಗರಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಅವರ್ ಅಭಿಮಾನಿ ಗಳು ಇಂದು ಶ್ರೀ ಲಖನ ಜಾರಕಿಹೊಳಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಇಂದು ದೀಪಾವಳಿ ಹಾಗೂ ನಗರ್ ಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಹಾಗೂ ಉಪಾ ಧ್ಯಕ್ಷ ರು ಸನ್ಮಾನಿಸಿದರು ಇಂದು ಗೋಕಾಕ ನಗರದಲ್ಲಿ ಲಖನ ಜಾರಕಿಹೊಳಿ ಅವರ್ ಕಚೇರಿಯಲ್ಲಿ ಉದ್ಯಮಿ ಹಾಗೂ ಯುವ ಮುಖಂಡ ರಾದ ಲಖನ ಜಾರಕಿಹೊಳಿ ಅವರಿಗೆ ಹಾಗೂ …
Read More »ಖಾನಾಪುರದ ಇಬ್ಬರು ಯುವಕರು ನೀರುಪಾಲ, ಬ್ಬರು ಯುವಕರ ಶವಗಳು ಪತ್ತೆ
ಬೆಳಗಾವಿ: ಪಿಕ್‍ನಿಕ್ ಮಾಡಲು ಹೋಗಿದ್ದ ಖಾನಾಪುರದ ಇಬ್ಬರು ಯುವಕರು ನೀರುಪಾಲಾದ ಘಟನೆ ಖಾನಾಪುರದ ಅಸೋಗಾ ಬಳಿ ಇರುವ ಹಾಲತ್ರಿ ಹಳ್ಳದ ಮಲಪ್ರಭಾ ನದಿಯ ಉಗಮ ಸ್ಥಾನದಲ್ಲಿ ನಡೆದಿದೆ. ಮೃತ ಯುವಕರನ್ನು ಉಮರ್ ಖಲೀಫ್(16), ಅರಘಾತ ಅರಘಾಟಿ(16) ಎಂದು ಗುರುತಿಸಲಾಗಿದ್ದು, ಇವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಖಾನಾಪುರ ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡಿದ್ದರು, ಕಾರ್ಯಾಚರಣೆಯಲ್ಲಿ ನಿನ್ನೆ ಪೊಲೀಸರಿಗೆ ಇಬ್ಬರು ಯುವಕರ ಬಟ್ಟೆ, ಮತ್ತು ಮೊಬೈಲ್ ಫೋನ್‍ಗಳು ಹಾಲತ್ರಿ …
Read More »ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 2 ಕೋಟಿ ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ಕನ್ನಡಕ್ಕಿಂತ ಮರಾಠಿನೇ ಮುಖ್ಯನಾ?
ಬೆಂಗಳೂರು: ಉಪ ಚುನಾವಣೆ ಗೆಲ್ಲಲು ಬಿಜೆಪಿ ಮರಾಠಿ ಮಂತ್ರ ಜಪಿಸುತ್ತಿದ್ದು, ರಾಜ್ಯದಲ್ಲಿ ಸರ್ಕಾರ ಘೋಷಿಸಿರುವ ಮರಾಠ ಅಭಿವೃದ್ಧಿ ನಿಗಮ ಕರುನಾಡಿನಲ್ಲಿ ಕಿಚ್ಚು ಹೊತ್ತಿಸಿದೆ. ಬಿಎಸ್‍ವೈ ಸರ್ಕಾರ ಶಿರಾ ಬೈ ಎಲೆಕ್ಷನ್ ಗೆಲ್ಲಲು ಕಾಡುಗೊಲ್ಲ ಸಮುದಾಯದ ಅಭಿವೃದ್ಧಿ ನಿಗಮ ರಚಿಸಿ, 50 ಕೋಟಿ ಮೀಸಲಿರಿಸಿತ್ತು. ಎರಡು ದಿನಗಳ ಹಿಂದೆ ಮಠ ಮಾನ್ಯಗಳಿಗೆ 88 ಕೋಟಿ ರೂಪಾಯಿಯ ಹೊಳೆ ಹರಿಸಿತ್ತು. ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಗೆಲ್ಲುವ …
Read More »ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನ
ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನಾಗಿದ್ದು ಬಾಗಿಲು ಹಾಕಲು ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 12:30ರ ನಂತರ ದೇವಾಲಯದ ಬಾಗಿಲು ಹಾಕಲಾಗುತ್ತೆ. ಬಾಗಿಲು ಹಾಕುವಾಗ ಹಚ್ಚಿಸಿಟ್ಟ ದೀಪ ಒಂದು ವರ್ಷದ ನಂತರ ಬಾಗಿಲು ತೆರೆದಾಗಲೂ ಬೆಳಗುತ್ತಿರುತ್ತದೆ. ದೇವರಿಗೆ ಮುಡಿಸಿದ ಹೂವು ವರ್ಷ ಕಳೆದರೂ ಬಾಡುವುದಿಲ್ಲ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ …
Read More »