ಯಮಕನಮರಡಿ: ಯಮಕನಮರಡಿ ವಿಧಾನ ಸಭಾ ಮತ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಬಿಜೆಪಿಯ ಹಲವಾರು ಮುಖಂಡರು ಇಂದು ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರಸ್ ಸೇರ್ಪಡೆಗೊಂಡರು. ದಡ್ಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮೋದಗಾ ಗ್ರಾಮದಲ್ಲಿ ಶನಿವಾರದಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಅವರ ಸಾಮಾಜಿಕ ಕಳಕಳಿ ಮತ್ತು ಕ್ಷೇತ್ರದ ವಿವಿಧ ರಂಗಗಳಲ್ಲಿ ಕಳೆದ ಒಂದು ದಶಕಗಳಿಂದ ಮಾಡಿದ ಸಾಧನೆಗಳನ್ನು ಮೆಚ್ಚಿ …
Read More »Monthly Archives: ನವೆಂಬರ್ 2020
ಕರ್ತವ್ಯ ಲೋಪ ಆರೋಪದಡಿ ಸಬ್ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆ ಅಮಾನತು{ಗಾಂಜಾ ಕೇಸ್‍ನಲ್ಲಿ ಫಿಟ್ ಮಾಡೋದಾಗಿ ಸ್ಥಳೀಯರಿಗೆ ಬೆದರಿಕೆ}
ಚಿಕ್ಕಮಗಳೂರು: ಕರ್ತವ್ಯ ಲೋಪ ಆರೋಪದಡಿ ಜಿಲ್ಲೆಯಲ್ಲಿ ಓರ್ವ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆಗಳನ್ನು ಅಮಾನತು ಮಾಡಲಾಗಿದೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ನಗರದ ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬ ಮೂವರು ಪೇದೆಗಳನ್ನ ಅಮಾನತು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲೂ ಕರ್ತವ್ಯ ಲೋಪ ಆರೋದಡಿಯೇ ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ …
Read More »ಟಿಕೆಟ್ ಹಿಂದೆ ಬರೆದಿದ್ದ 5 ರೂ. ಚಿಲ್ಲರೆಗಾಗಿ ಕೆಎಸ್‍ಆರ್ ಟಿಸಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಮಾರಾರಿ
ಕೋಲಾರ: ಟಿಕೆಟ್ ಹಿಂದೆ ಬರೆದಿದ್ದ 5 ರೂ. ಚಿಲ್ಲರೆಗಾಗಿ ಕೆಎಸ್‍ಆರ್ ಟಿಸಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಮಾರಾರಿ ನಡೆದಿದೆ. ಜಿಲ್ಲೆಯ ಮುಳುಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಚಿಲ್ಲರೆ ಹಣಕ್ಕಾಗಿ ಕೆಎಸ್‍ಆರ್‍ಟಿಸಿ ಕಂಡಕ್ಟರ್ ಮತ್ತು ಪ್ರಯಾಣಿಕ ಹೊಡೆದಾಡಿಕೊಂಡಿದ್ದಾರೆ. ಕೆಎಸ್‍ಆರ್‍ಟಿಸಿ ಬಸ್ ಕಂಡಕ್ಟರ್ ಟಿಕೆಟ್ ಹಿಂದೆ ಐದು ರೂಪಾಯಿ ಚಿಲ್ಲರೆ ಬರೆದುಕೊಟ್ಟಿದ್ದರು. ನಿಲ್ದಾಣ ಬರುತ್ತಿದ್ದಂತೆ ಪ್ರಯಾಣಿಕ ಚಿಲ್ಲರೆ ಕೊಡುವಂತೆ ಕೇಳಿದ್ದಾರೆ. ಈ ವೇಳೆ ನಿರ್ವಾಹಕ …
Read More »ಮಚ್ಚಿನಿಂದ ಕೊಚ್ಚಿ ಪಾಪಿ ಪತಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ
ಕೊಪ್ಪಳ: ಮಚ್ಚಿನಿಂದ ಕೊಚ್ಚಿ ಪಾಪಿ ಪತಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ಯಲ್ಲಪ್ಪ ಪತ್ನಿ ರೇಣುಕಾ (32)ಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪತಿ ಮತ್ತು ಪತ್ನಿ ರೇಣುಕಾ ಒಳಜಗಳವೇ ಕೊಲೆಗೆ ಕಾರಣ ಎನ್ನಲಾಗಿದ್ದು, ಕೆಲವು ತಿಂಗಳ ಹಿಂದೆ ಪತಿ-ಪತ್ನಿ ಇಬ್ಬರೂ ಜಗಳವಾಡಿಕೊಂಡಿದ್ದರು. ಬಳಿಕ ಯಲ್ಲಪ್ಪನ ಕಿರಿಕಿರಿಗೆ ಬೇಸತ್ತು ರೇಣುಕಾ ತವರು ಮನೆ …
Read More »ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ ರಾಗಿಣಿ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರಾಗಿಣಿ ದ್ವಿವೇದಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ಗುಜರಾತ್ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 4ರಂದು ರಾಗಿಣಿ ದ್ವಿವೇದಿ ಅರ್ಜಿ ವಿಚಾರಣೆ ನ್ಯಾಯಾಲಯದ ಮುಂದೆ ಬರಲಿದೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನವೆಂಬರ್ 3ರಂದು ಹೈಕೋರ್ಟ್ ವಜಾ ಮಾಡಿ ಆದೇಶಿಸಿತ್ತು.ಹೈಕೋರ್ಟ್ ಆದೇಶ …
Read More »ಚಿತ್ರದ ಅತಿ ಚೆಂದದ ಲಿರಿಕಲ್ ವಿಡಿಯೋ ಹಾಡಿನ ಕಚಗುಳಿ ಶುರು
ವಿಂಡೋಸೀಟ್’ ಚಿತ್ರದ “ಅತಿಚೆಂದದ ಹೂಗೊಂಚಲು ಕಿಟಕಿಯಾಚೆ ಕಂಡ ಹಾಗಿದೆ” ಹ್ಯಾಂಡ್ ಮೇಡ್ ಪೇಂಟಿಂಗ್ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ, ಫಸ್ಟ್ ಲುಕ್ ವಿಡಿಯೋ ತುಣುಕಿನಲ್ಲಿ ಈ ಹಾಡಿನ ಸಾಲು ಎಲ್ಲರ ಮನಸ್ಸಿಗೂ ಪ್ರಿಯವಾಗಿತ್ತು. ಯಾವಾಗ ಈ ಹಾಡು ಬಿಡುಗಡೆಯಾಗುತ್ತದೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ರು. ಇದೀಗ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಾಂಗ್ ‘ವಿಂಡೋಸೀಟ್’ ಚಿತ್ರತಂಡ ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡುತ್ತಿದೆ. ಎಲ್ಲರ ಬಾಯಲ್ಲೂ ಈಗ ಈ ಹಾಡಿನದ್ದೆ …
Read More »ಯೂಟ್ಯೂಬ್ ವಿಡಿಯೋ ನೋಡಿ ಕೆಫೆಯ ಪೇಮೆಂಟ್ ಸಿಸ್ಟಮ್ ಹ್ಯಾಕ್ ಮಾಡಿದ 17 ವರ್ಷದ ವಿದ್ಯಾರ್ಥಿ
ಮುಂಬೈ: ಅಪ್ರಾಪ್ತನೋರ್ವ ಯೂಟ್ಯೂಬ್ ವಿಡಿಯೋ ನೋಡಿ ಕೆಫೆಯ ಪೇಮೆಂಟ್ ಸಿಸ್ಟಮ್ ಹ್ಯಾಕ್ ಮಾಡಿದ್ದು, ಗ್ರಾಹಕರು ಕೆಫೆಗೆ ಪಾವತಿಸುವ ಹಣವನ್ನು ತನ್ನ ಖಾತೆಗೆ ಬರುವಂತೆ ಮಾಡುತ್ತಿದ್ದ ಪ್ರಕರಣ ಮುಂಬೈನಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿ ಯೂಟ್ಯೂಬ್ ವಿಡಿಯೋ ನೋಡಿ ಈ ಕೃತ್ಯ ಎಸಗಿದ್ದು, ಬಾಲಾಪರಾಧಿ ನ್ಯಾಯಾಲಯ ಎರಡು ವರ್ಷಗಳ ಕಾಲ ಕೌನ್ಸಲಿಂಗ್‍ಗೆ ಒಳಪಡಿಸುವಂತೆ ಸೂಚಿಸಿದೆ. ವಿದ್ಯಾರ್ಥಿ 12ನೇ ತರಗತಿಯಲ್ಲಿ ಶೇ.80ರಷ್ಟು ಅಂಕ ಗಳಿಸಿ ಉತ್ತೀರ್ಣನಾದ ಬಳಿಕ ಚಾರ್ಟೆಡ್ ಅಕೌಂಟೆನ್ಸಿ ಮಾಡುತ್ತಿದ್ದಾನೆ. ಸೆಪ್ಟೆಂಬರ್ …
Read More »ಭಾರತದಲ್ಲಿ ಕೊರೊನಾ ವೈರಸ್ ಸೃಷ್ಟಿಯಾಗಿದೆ ಚೀನಾದ ಮೊಂಡುವಾದ
ಬೀಜಿಂಗ್: ಇಡೀ ವಿಶ್ವಕ್ಕೆ ಕೊರೊನಾ ಹಬ್ಬಿಸಿ, ಸುಳ್ಳು ಮಾಹಿತಿಗಳನ್ನು ನೀಡಿದ್ದ ಚೀನಾ ಈಗ ಕೊರೊನಾ ವಿಚಾರದಲ್ಲಿ ಅತಿ ದೊಡ್ಡ ಸುಳ್ಳು ಹೇಳಿ ನಗೆಪಾಟಲಿಗೆ ಗುರಿಯಾಗಿದೆ. ಕೊರೊನಾ ವೈರಸ್ ಚೀನಾದಲ್ಲಿ ಸೃಷ್ಟಿಯಾಗಿಲ್ಲ. ಈ ವೈರಸ್‌ನ ಮೂಲ ಭಾರತ ಎಂದು ಹೇಳಿ ತನ್ನ ಮೇಲೆ ಬಂದಿದ್ದ ಕಳಂಕವನ್ನು ತೊಳೆಯಲು ಮತ್ತೊಂದು ಸುಳ್ಳು ಹೇಳಿದೆ. 2019ರ ಬೇಸಿಗೆಯಲ್ಲಿ ಪ್ರಾಣಿಗಳಿಂದ ಮನುಷ್ಯರಿಗೆ ಅಶುದ್ಧ ನೀರಿನ ಮೂಲಕ ಮೊದಲು ವೈರಸ್ ಹರಡಿದೆ. ಈ ವೈರಸ್ ಹೇಗೋ ವುಹಾನ್ …
Read More »ಕ್ರಿಮಿನಲ್‍ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಬೆಂಗಳೂರು- ಇಂದಿನಿಂದ ಆರಂಭವಾಗಿರುವ ಮಾಸಿಕ ಜನಸಂಪರ್ಕ ಸಭೆಗೆ ಉತ್ತಮ ಜನ ಸ್ಪಂದನೆ ದೊರೆತಿದ್ದು, ಕ್ರಿಮಿನಲ್‍ಗಳಿಗೆ ಈ ಸಭೆಯ ಮೂಲಕ ಪೊಲೀಸರು ಸ್ಪಷ್ಟ ಎಚ್ಚರಿಕೆಯ ಸಂದೇಶ ರವಾನಿಸಲು ಸಾಧ್ಯವಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್‍ಪಂಥ್ ತಿಳಿಸಿದ್ದಾರೆ. ಪೂರ್ವ ವಿಭಾಗದ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಉತ್ತಮ ಭಾಂದವ್ಯ ಇರಬೇಕು. ಜನರಿಗೆ ತಮ್ಮ ಕೆಲಸ ಯಾವ …
Read More »ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಮುಗಿಸಲು ಪ್ಲಾನ್ ಮಾಡಿವೆ: ಕೋನರೆಡ್ಡಿ
ಬೆಂಗಳೂರು, – ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಮುಗಿಸಲು ಪ್ಲಾನ್ ಮಾಡಿವೆ ಎಂದು ಆರೋಪಿಸಿದ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಸಮರೋಪಾದಿಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಹೇಳಿದರು. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ಮುಂಬರುವ ಗ್ರಾಪಂ ಚುನಾವಣೆ, ಪಕ್ಷದ ಬಲವರ್ಧನೆ ಕುರಿತ ತಾಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್ ಉಳಿಸಲು ಯುದ್ಧ ಮಾಡಬೇಕಿದೆ. ನಾಲ್ಕು …
Read More »