ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಡ್ರಗ್ಸ್ ಸಿಗದೇ ನಟಿಯರನ್ನು ಅರೆಸ್ಟ್ ಮಾಡಿದ್ದಾರೆ ಎಂದವರಿಗೆ ಅರಗಿಸಿಕೊಳ್ಳಲಾಗದ ಸತ್ಯ ಬಯಲಾಗಿದೆ. ಅರೋಪಿಗಳು ಒಳಸಂಚು ರೂಪಿಸಿ ದಂಧೆ ನಡೆಸುತ್ತಿದ್ದರು ಜೊತೆಗೆ ಡ್ರಗ್ಸ್ ವ್ಯವಹಾರ ನಡೆಸುತ್ತಿದ್ದರು ಎಂಬುವುದನ್ನು ಸಿಸಿಬಿ ಬಯಲಿಗೆಳೆದಿದೆ. ಹೀಗಾಗಿ ಸಂಜನಾ, ರಾಗಿಣಿ ಮನೆಯಲ್ಲಿ ಅಥವಾ ಅವರ ಬಳಿ ಡ್ರಗ್ಸ್ ಸಿಕ್ಕಿಲ್ಲ. ಆದರೆ ಈ ಇಬ್ಬರು ನಟಿಮಣಿಯರು ಈ ದಂಧೆಯಲ್ಲಿ ಹಣ ಮಾಡಿರುವುದು ಸಾಭೀತಾಗಿದೆ. ಈವರೆಗಿನ ತನಿಖೆಯಲ್ಲಿ ವೀರೇನ್ ಖನ್ನನೇ ಕಿಂಗ್ ಪಿನ್ …
Read More »Monthly Archives: ನವೆಂಬರ್ 2020
ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಇದ್ದಿದ್ದಕ್ಕೆ ರೋಗಿ ಕೊನೆಯುಸಿರೆಳೆದಿದ್ದಾರೆ ಎಂದು ಶಾಂತಿನಗರದ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 47 ವರ್ಷದ ರವೀಂದ್ರನಾಥ್ ಎಂಬುವವರು ಕೊರೊನಾ ಸೋಂಕು ನೆಗೆಟಿವ್ ಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆ ಮನೆಯಲ್ಲಿ ಆಕ್ಸಿಜನ್ …
Read More »ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ
ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು. ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ. ಮಾಜಿ ಸಚಿವರ ಪರ ಜಾಮೀನು …
Read More »ಕೊರೊನಾ ವೈರಸ್ ಹೆಸರಲ್ಲಿ ಲೂಟಿ ಮಾಡುವುದು ಇನ್ನೂ ನಿಂತಿಲ್ಲ.
ಬೆಂಗಳೂರು: ಮಾಹಾಮಾರಿ ಕೊರೊನಾ ವೈರಸ್ ಹೆಸರಲ್ಲಿ ಲೂಟಿ ಮಾಡುವುದು ಇನ್ನೂ ನಿಂತಿಲ್ಲ. ಸರ್ಕಾರದಿಂದ ಹಣ ಕಳುಹಿಸಿದರೂ ಖಾಸಗಿ ಆಸ್ಪತ್ರೆಗಳು ಇನ್ನೂ ಹಣ ವಸೂಲಿ ಮಾಡುವುದರಲ್ಲಿಯೇ ನಿರತವಾಗಿವೆ. ಕೊರೊನಾ ಬಂದವರ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ನೀಡುತ್ತಿದೆ. ಸರ್ಕಾರದಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ವ್ಯಕ್ತಿಗಳ ಬಿಲ್ ಅನ್ನ ಸರ್ಕಾರದ ವತಿಯಿಂದ ನೀಡಲಾಗುತ್ತೆ. ಖಾಸಗಿಯಾಗಿ ಚಿಕಿತ್ಸೆ ಪಡೆಯುವವರನ್ನ ಹೊರತು ಪಡಿಸಿ ಉಳಿದವರ ವೆಚ್ಚವನ್ನ ಸರ್ಕಾರವೇ ಭರಿಸುತ್ತದೆ. ಈಗ ಇದನ್ನೇ ಬಂಡವಾಳ ಮಾಡಿಕೊಂಡಿರೋ ಬೆಂಗಳೂರಿನ …
Read More »ಕೆಎಎಎಸ್ ಅಧಿಕಾರಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತ ಅಧಿಕಾರಿ ಡಾ.ಸುಧಾ ಮೇಲೆ ನಡೆದ ಎಸಿಬಿ ರೇಡ್‍ನಲ್ಲಿ ಮತ್ತೊಂದು ತಿಮಿಂಗಲ ಸಿಕ್ಕಿ ಬಿದ್ದಿದೆ.
ಬೆಂಗಳೂರು: ಕೆಎಎಎಸ್ ಅಧಿಕಾರಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತ ಅಧಿಕಾರಿ ಡಾ.ಸುಧಾ ಮೇಲೆ ನಡೆದ ಎಸಿಬಿ ರೇಡ್‍ನಲ್ಲಿ ಮತ್ತೊಂದು ತಿಮಿಂಗಲ ಸಿಕ್ಕಿ ಬಿದ್ದಿದೆ. ಸುಧಾ ಅತ್ಯಾಪ್ತೆ ರೇಣುಕಾ ಚಂದ್ರಶೇಖರ್ ಮನೆ ಮೇಲೆ ರೇಡ್ ಮಾಡಿದ್ದ ಎಸಿಬಿ ಅಧಿಕಾರಿಗಳು ಸಿಕ್ಕಿದ ಸಂಪತ್ತುಗಳನ್ನು ನೋಡಿ ದಂಗಾಗಿ ಹೋಗಿದ್ದಾರೆ. ಬ್ಯಾಟರಾಯನಪುರದಲ್ಲಿರುವ ರೇಣುಕಾ ಚಂದ್ರಶೇಖರ್ ಪ್ಲಾಟ್‍ನಲ್ಲಿ ಮಣಬಾರದಷ್ಟು ಚಿನ್ನಾಭರಣ, ನಗ-ನಾಣ್ಯ, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಇದೆಲ್ಲದರ ಒಟ್ಟು ಮೌಲ್ಯ 250 …
Read More »ಕಾಲೇಜುಗಳು ಬಾಗಿಲು ಮುಚ್ಚಿರುವುದರಿಂದ ಉದ್ಯೋಗವಿಲ್ಲದೇ ಕುರಿಗಾಯಿಯಾದ ಉಪನ್ಯಾಸಕ
ರಾಯಚೂರು: ಕೊರೊನಾ ಹಿನ್ನೆಲೆಯಲ್ಲಿ ಕಾಲೇಜುಗಳು ಬಾಗಿಲು ಮುಚ್ಚಿರುವುದರಿಂದ ಜಿಲ್ಲೆಯ ಅತಿಥಿ ಉಪನ್ಯಾಸಕರೊಬ್ಬರು ದಿನಗೂಲಿ ಕುರಿಗಾಯಿಯಾಗಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟ ನಿಭಾಯಿಸಲು ನಿತ್ಯ 200ರೂ ಕೂಲಿಯಂತೆ ಕುರಿ ಮೇಯಿಸಲು ಹೋಗುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಅತಿಥಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿರುವ ದೇವದುರ್ಗ ತಾಲೂಕಿನ ಹುಲಿಗುಡ್ಡ ಗ್ರಾಮದ ವೀರನಗೌಡ ವೇತನವಿಲ್ಲದೇ ಸಂಕಷ್ಟಕ್ಕೆ ಒಳಗಾಗಿ ಕುರಿ ಮೇಯಿಸುತ್ತಿದ್ದಾರೆ. ಎಂಎ, ಬಿಎಡ್ ಪದವೀಧರ ವೀರನಗೌಡ ಸರ್ಕಾರಿ ಪದವಿ ಕಾಲೇಜು ಮಸ್ಕಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ …
Read More »13 ವರ್ಷ ಪ್ರೀತಿ, ದೈಹಿಕ ಸಂಪರ್ಕ – ಮದುವೆ ದಿನ ಹುಡುಗ ಎಸ್ಕೇಪ್
ಉಡುಪಿ: ಯುವತಿಯನ್ನ 13 ವರ್ಷ ಪ್ರೀತಿಸಿ ಮದುವೆಯ ದಿನ ಮಂಟಪಕ್ಕೆ ಬಾರದೆ ಕೈಕೊಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮಣಿಪಾಲದ ಪ್ರೇಮಿಗಳಾದ ಮಮತಾ ಮತ್ತು ಪರ್ಕಳದ ಗಣೇಶ್ ಅವರ ದಶಕದ ಪ್ರೇಮ ಕಥೆಯಿದು. ಹ್ಯಾಂಗ್ಯೋ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ನಡುವೆ 13 ವರ್ಷದ ಹಿಂದೆ ಪ್ರೇಮಾಂಕುರವಾಗಿತ್ತು ಈ ಅವಧಿಯಲ್ಲಿ ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿದೆ. ಮದುವೆಯಾಗುವುದಾಗಿ ಯುವಕ ನಂಬಿಸಿ 13 ವರ್ಷ ದಿನ ದೂಡಿದ್ದಾನೆ. ಎರಡು ಬಾರಿ ಅಬಾರ್ಷನ್ …
Read More »ನವದೆಹಲಿ: ನೋಟು ನಿಷೇಧ ನಿರ್ಧಾರದಿಂದ ಕಪ್ಪು ಹಣ ಕಡಿಮೆಯಾಗಿದ್ದು, ತೆರಿಗೆ ಹೆಚ್ಚಳವಾಗಿದೆ : ನರೇಂದ್ರ ಮೋದಿ
ನವದೆಹಲಿ: ನೋಟು ನಿಷೇಧ ನಿರ್ಧಾರದಿಂದ ಕಪ್ಪು ಹಣ ಕಡಿಮೆಯಾಗಿದ್ದು, ತೆರಿಗೆ ಹೆಚ್ಚಳವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಐತಿಹಾಸಿಕಾ ನೋಟು ನಿಷೇಧ ನಿರ್ಧಾರಕ್ಕೆ 4 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ ಈ ನಿರ್ಧಾರದಿಂದ ಪಾರದರ್ಶಕತೆ ಹೆಚ್ಚಾಗಿದ್ದು ರಾಷ್ಟ್ರೀಯ ಅಭಿವೃದ್ಧಿಗೆ ನೆರವಾಗಿದೆ ಎಂದು ತಿಳಿಸಿದ್ದಾರೆ. ಟ್ವೀಟ್‌ನಲ್ಲೇ ಏನು ಬದಲಾವಣೆಯಾಗಿದೆ ಎಂಬುದನ್ನು ಪ್ರಧಾನಿ ಮೋದಿ ತಿಳಿಸಿದ್ದಾರೆ. ಟ್ವೀಟ್‌ನಲ್ಲಿ ಏನಿದೆ? ನೋಟು ನಿಷೇಧದ ಬಳಿಕ ‘ಆಪರೇಷನ್ ಕ್ಲೀನ್ ಮನಿʼ ಬಳಿಕ …
Read More »ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಂಯೋಗದೊಂದಿಗೆ, ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಉಚಿತ ಟ್ಯಾಬ್
ಯಾದಗಿರಿ: ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಂಯೋಗದೊಂದಿಗೆ, ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಉಚಿತ ಟ್ಯಾಬ್ ನೀಡಲಾಯಿತು. ಜ್ಞಾನ ದೀವಿಗೆ ಯೋಜನೆ ಮೊದಲ ಹಂತದಲ್ಲಿ ಮೊಟ್ಟ ಮೊದಲ ಬಾರಿಗೆ, ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹತ್ತಿಕುಣಿಯ ಸರ್ಕಾರಿ ಪ್ರೌಢಶಾಲೆ ಆಯ್ಕೆಯಾಗಿದೆ. ಇಂದು ಪಬ್ಲಿಕ್ ಟಿವಿ ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಪಬ್ಲಿಕ್ ಟಿವಿ ಕ್ಯಾಪ್ಟನ್ ಹೆಚ್.ಆರ್ ರಂಗನಾಥ್ …
Read More »ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಜಯಭೇರಿ ಹಿಂದೆ ಮಂಡ್ಯ ಮೂಲದ ಡಾ.ವಿವೇಕ್ ಮೂರ್ತಿ ಪಾತ್ರ ದೊಡ್ಡದು.
ಮಂಡ್ಯ: ವಿಶ್ವದ ದೊಡ್ಡಣ್ಣ ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಜಯಭೇರಿ ಹಿಂದೆ ಮಂಡ್ಯ ಮೂಲದ ಡಾ.ವಿವೇಕ್ ಮೂರ್ತಿ ಪಾತ್ರ ದೊಡ್ಡದು. ಬೈಡನ್ ಪರ ಚುನಾವಣಾ ತಂತ್ರಗಾರರ ಪೈಕಿ ವಿವೇಕ್ ಕೂಡ ಒಬ್ಬರು. ಈ ನಡುವೆಯೆ ವಿವೇಕ್ ಅವರಿಗೆ ಮಹತ್ವದ ಹುದ್ದೆ ಸಿಗೋದು ಪಕ್ಕ ಆಗಿದ್ದು, ಆ ಮೂಲಕ ಮಂಡ್ಯದ ಹೆಸರು ಅಮೆರಿಕಾದಲ್ಲೂ ಕಮಾಲ್ ಮಾಡುತ್ತಿದೆ. ಅಂದಹಾಗೆ ಡಾ.ವಿವೇಕ್ ಮೂರ್ತಿ ಮಂಡ್ಯ ತಾಲೂಕಿನ ಹಲ್ಲೆಗೆರೆ ಗ್ರಾಮದವರು. ಡಾ.ಎಚ್.ಎನ್.ಲಕ್ಷ್ಮಿನಾರಾಯಣಮೂರ್ತಿ ಮತ್ತು ಮೈತ್ರೇಯಿ …
Read More »