ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯನಿಗೆ ಹುಚ್ಚು. ಮುಖ್ಯಮಂತ್ರಿ ಸ್ಥಾನ ಹೋದನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದು ಹೋಗಿದೆ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಎಂದಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು. ಸಿದ್ದರಾಮಯ್ಯನಿಗೆ ಆಕಾಶದಿಂದ ಸುದ್ದಿ ಉದುರಿದ್ಯಾ? ಮೋದಿ, ನಡ್ಡಾ, ಅಮಿತ್ ಶಾ ಫೋನ್ ಮಾಡಿ ಹೇಳಿದ್ರಾ? ನೀವು ಜನರ ಮಧ್ಯೆ ಹೋಗಿ …
Read More »Monthly Archives: ನವೆಂಬರ್ 2020
ಹಿಂಡಲಗಾ ಜೈಲಿನಲ್ಲಿ ಸೊಳ್ಳೆ ಕಾಟ ತಾಳಲಾರದೆ ವಿನಯ್, ಸೊಳ್ಳೆ ಬತ್ತಿಯಾದ್ರೂ ಕೊಡಿ:ವಿನಯ್ ಕುಲಕರ್ಣಿ
ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಲ್ಲಿ ರಾತ್ರಿ ಕಳೆದಿದ್ದಾರೆ. ಗುರುವಾರ ಬೆಳಗ್ಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದು ಬಂಧಿಸಿತ್ತು. 1 ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಕರೆದುಕೊಂಡು ಹೋಗಲಾಗಿತ್ತು. ಸದ್ಯ ಹಿಂಡಲಗಾ ಜೈಲಿನ ರೆಡ್ ಝೋನ್ ಸೆಲ್‍ನಲ್ಲಿ ಇರುವ ವಿನಯ್ ಕುಲಕರ್ಣಿ, ಕೋವಿಡ್ ಹಿನ್ನೆಲೆ ಜೈಲು …
Read More »ಸರ್ಕಾರಿ ನೌಕರರಿಗೆ ಐಡಿ ಕಾರ್ಡ್ ಮತ್ತು ನಾಮಫಲಕ ಕಡ್ಡಾಯ
ಬೆಂಗಳೂರು,ನ.5- ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಯನ್ನು ಧರಿಸಲು ಹಾಗೂ ಮೇಜಿನ ಮೇಲೆ ನಾಮಫಲಕ ಪ್ರದರ್ಶಿಸಲು ಸರ್ಕಾರ ಆದೇಶಿಸಿದೆ. ಕರ್ತವ್ಯದ ಅವಧಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ತಮ್ಮ ತಮ್ಮ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸಿ ಪ್ರದರ್ಶಿಸಬೇಕು.ಹಾಗೆಯೇ ಕಚೇರಿಯಲ್ಲಿ ಕುಳಿತುಕೊಳ್ಳುವ ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಸಿಬ್ಬಂದಿ ಮತ್ತು ಅಧಿಕಾರಿಗಳ ಹೆಸರು, ಹುದ್ದೆ ಸೂಚಿಸುವ ನಾಮಫಲಕವನ್ನು …
Read More »ವಿನಯ್ ಕುಲಕರ್ಣಿ ಸಿಬಿಐ ವಿಚಾರಣೆ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ
ಚಿತ್ರದುರ್ಗ: ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಜೊತೆ ನಾನೂ ಮಾತನಾಡಿದ್ದೇನೆ. ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ಹೇಳಿದ್ದಾನೆ. ಹೀಗಾಗಿ ವಿಚಾರಣೆ ಹಂತದಲ್ಲಿರುವಾಗ ನಾನು ಏನೂ ಹೇಳುವುದಿಲ್ಲ ಎಂದರು. ಕೊರೊನಾಗೆ ವ್ಯಾಕ್ಸಿನ್ ಬರುವ ತನಕ ಗ್ರಾ.ಪಂ. ಚುನಾವಣೆ …
Read More »ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳ ತೆರವು
ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಮಾಡಿದ್ದಾರೆ. ಕಳೆದ ತಿಂಗಳು ವಕೀಲರದ ಹರ್ಷ ಮುತಾಲಿಕ್, ಮಸೀದಿಯಲ್ಲಿನ ಧ್ವನಿ ವರ್ಧಕಗಳಿಂದ ಇತರೇ ಧರ್ಮದರಿಗೆ ತೊಂದರೆ ಆಗುತ್ತಿದೆ. ದಿನಕ್ಕೆ ಐದಾರು ಬಾರಿ ಪ್ರಾರ್ಥನೆ ಮಾಡಲಾಗತ್ತೆ. ಇದ್ದರಿಂದ ಮಕ್ಕಳಿಗೆ, ವಯಸ್ಸಾದವರಿಗೆ, ಹೃದಯ ಸಂಬಂಧಿ ಖಾಯಿಲೆ ಇರುವವರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಬೇಕು ಎಂದು ದೂರು ನೀಡಿದ್ದರು.ಈಗ ಈ …
Read More »ಬಿಗ್‍ಬಾಸ್ ಸೀಸನ್-7ರ ವಿನ್ನರ್ ನಟ ಶೈನ್ ಶೆಟ್ಟಿ ಅವರಿಗೆ ಬಿಗ್‍ಬಾಸ್ ಕಾರ್ಯಕ್ರಮದ ಪ್ರಶಸ್ತಿಯ ಕಾರು 10 ತಿಂಗಳ ಬಳಿಕ ದೊರಕಿದೆ.
ಬೆಂಗಳೂರು: ಬಿಗ್‍ಬಾಸ್ ಸೀಸನ್-7ರ ವಿನ್ನರ್ ನಟ ಶೈನ್ ಶೆಟ್ಟಿ ಅವರಿಗೆ ಬಿಗ್‍ಬಾಸ್ ಕಾರ್ಯಕ್ರಮದ ಪ್ರಶಸ್ತಿಯ ಕಾರು 10 ತಿಂಗಳ ಬಳಿಕ ದೊರಕಿದೆ. ಬಿಗ್‍ಬಾಸ್ ಸೀಸನ್-7ರ ವಿನ್ನರ್ ಶೈನ್‍ಶೆಟ್ಟಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಧಾರಾವಾಹಿ ಮೂಲಕ ಜನರಿಗೆ ಹತ್ತಿರವಾಗಿದ್ದ ಅವರು, ನಂತರ ತೆರೆ ಮರೆಗೆ ಜಾರಿದ್ದರು. ಆದರೆ ಬಿಗ್‍ಬಾಸ್ ಸೀಸನ್-7ರಲ್ಲಿ ಕಾಣಿಸಿಕೊಂಡು ಕರುನಾಡ ಜನರ ಮನಸ್ಸುನ್ನು ಕದ್ದಿದ್ದರು. ಈಗ ಅವರ ಗೆಲುವಿಗೆ ಪ್ರಶಸ್ತಿಯಾಗಿ ಬಂದ ಕಾರನ್ನು ಟಾಟಾ ಮೋಟರ್ಸ್ ಅವರಿಗೆ …
Read More »ಕೊನೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅರೆಸ್ಟ್
ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಯೋಗೇಶ್ವರ್ ಕೊಲೆ ಪ್ರಕರಣದಲ್ಲಿ ಬೆಳಗ್ಗೆಯಿಂದ ಸತತ 9 ಗಂಟೆಗಳ ಕಾಲ ವಿನಯ್ ಅವರನ್ನು ವಶಕ್ಕೆ ಪಡೆದು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸದ್ಯ ಅವರನ್ನು ಬಂಧಿಸಿ ಕೊರೊನಾ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಧಾರವಾಡದ ಬರಾಕೊಟ್ರಿಯಲ್ಲಿರುವ ಕುಲಕರ್ಣಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಸಿಬಿಐ ಅಧಿಕಾರಿ ರಾಕೇಶ್ ರಂಜನ್ …
Read More »ಲೈಸನ್ಸ್ ಇಲ್ಲದೆ ನಾಡ ಪಿಸ್ತೂಲ್ ಇಟ್ಟುಕೊಂಡು ಬೈಕ್ ಮೇಲೆ ತೆರಳುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ: ಲೈಸನ್ಸ್ ಇಲ್ಲದೆ ನಾಡ ಪಿಸ್ತೂಲ್ ಇಟ್ಟುಕೊಂಡು ಬೈಕ್ ಮೇಲೆ ತೆರಳುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಯಾಳಗಿ ಗ್ರಾಮದ ರಾಮರೆಡ್ಡಿ ಮಾಲಿಪಾಟೀಲ್, ಬೆಂಗಳೂರಿನ ಶ್ರೀರಾಮಪುರಂದ ಸುರೇಶ್ ತುಂಗರಾಜ, ವಿನೋದ ರಾಜಾ ಬಂಧಿತ ಆರೋಪಿಗಳು. ಇಲ್ಲಿನ ರಿಂಗ್ ರಸ್ತೆಯಲ್ಲಿನ ಜಮಖಂಡಿ ನಾಕಾ ಬಳಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು ವಾಹನ ತಪಾಸಣೆ ವೇಳೆ ಸಿಕ್ಕಿ ಬಿದ್ದಿದ್ದು, ಎರಡು ಮಚ್ಚು, ಒಂದು ನಾಡ ಪಿಸ್ತೂಲ್, ಜೀವಂತ ಗುಂಡು ಪತ್ತೆಯಾಗಿವೆ. ಮೂವರನ್ನು …
Read More »ನವೆಂಬರ್ 14 ರಿಂದ ನವೆಂಬರ್ 16 ರ ವರೆಗೆ ಆಚರಿಸುವ ದೀಪಾವಳಿ ಹಬ್ಬವನ್ನು ರೋಗಾಣು ಹರಡದಂತೆ ಮುನ್ನೆಚ್ಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ
ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ನವೆಂಬರ್ 14 ರಿಂದ ನವೆಂಬರ್ 16 ರ ವರೆಗೆ ಆಚರಿಸುವ ದೀಪಾವಳಿ ಹಬ್ಬವನ್ನು ರೋಗಾಣು ಹರಡದಂತೆ ಮುನ್ನೆಚ್ಚ್ಚರಿಕೆ ವಹಿಸಿ ಸರರ್ಕಾರದ ಮಾರ್ಗಸೂಚಿ ಪ್ರಕಾರ ಆಚರಿಸಲು ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ ಅವರು ಆದೇಶಿಸಿದ್ದಾರೆ. ಮಾರ್ಗಸೂಚಿಗಳು: ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವನಾಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು, ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್ 1 ರಿಂದ ನವೆಂಬರ್ 12 ರ ವರೆಗೆ ಮಾತ್ರ ತೆರೆದಿರತಕ್ಕದು. ಪರವಾನಿಗೆದಾರರು ಸಂಬಂಧಪಟ್ಟ …
Read More »ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ರಾಜಕೀಯ ದುರುದ್ದೇಶ: ಡಿಕೆ ಶಿವಕುಮಾರ್
ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣ ವಿಚಾರಣೆಗಾಗಿ ಕಾಂಗ್ರೆಸ್ ಮುಖಂಡರ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ನಾನು ಗಮನಿಸಿದ್ದೇನೆ. ಈ ಹಿಂದೆ, ವಿನಯ್ ಕುಲಕರ್ಣಿ ಬಳಿ ಎಲ್ಲವನ್ನೂ ವಿಚಾರಿಸಿದ್ದೇನೆ. ಈಗಾಗಲೇ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿ …
Read More »