ಚಾಮರಾಜನಗರ: ಕಾಡು ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾನ್ ಜೋನಸ್, ಜಾನ್ ಬೋಸ್ಕೊ, ಅಂಥೋಣಿ ಆನಂದ್ ಕುಮಾರ್, ಸೈಮನ್ ಸ್ಟಾಲಿನ್, ಭಾಗ್ಯರಾಜ್, ಅಂತೋಣಿ ರಾಜ್ ಹಾಗೂ ಸೇಸುರಾಜ್ ಎಂದು ಗುರುತಿಸಲಾಗಿದ್ದು, ಇವರನ್ನು ಚಾಮರಾಜನಗರ ಜಿಲ್ಕೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಕರಚಿಕಟ್ವೆ ಬಳಿ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ 7 ನಾಡ ಬಂದೂಕು ಹಾಗೂ ಸಿಡಿಮದ್ದುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ …
Read More »Monthly Archives: ನವೆಂಬರ್ 2020
ಬಾಗಿಲ ಚಿಲಕ ಮೀಟಿ ತೆಗೆದು ಮನೆಯ ಒಳಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿ
ಮುಂಡಗೋಡ – ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದೆರಡು ವರ್ಷಗಳಿಂದ ರಾತ್ರಿ ವೇಳೆಯಲ್ಲಿ ಮನೆಯ ಜನರು ಮಲಗಿರುವಾಗಲೇ ಮನೆಯ ಹಿಂದಿನ ಬಾಗಿಲ ಚಿಲಕ ಮೀಟಿ ತೆಗೆದು ಮನೆಯ ಒಳಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ತಡಸ್ ಗ್ರಾಮದ ಕಮಲಾನಗರ ತಾಂಡಾದ ಕ್ರಷ್ಣಾ ಲಮಾಣಿ (೩೮) ಬಂಧಿತ ಆರೋಪಿಯಾಗಿದ್ದು ಬಂಧಿತನಿಂದ ಸುಮಾರು ೩.೫ ಲಕ್ಷ ರೂ ಬೆಲೆಯ ೭೦ ಗ್ರಾಂ ತೂಕದ ಬಂಗಾರದ …
Read More »ಯಲ್ಲಮ್ಮನ ಭಕ್ತರು ಮಂಗಳವಾರ ಯಲ್ಲಮ್ಮನನ್ನು ನೆನೆದು ತಲ್ಲೂರಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ, ಯಲ್ಲಮ್ಮನಿಗೆ ವಿಧಿ ವಿಧಾನಗಳನ್ನು ನೆರವೇರಿಸಿದರು.
ಯರಗಟ್ಟಿ: ತಾಲೂಕಿನ ತಲ್ಲೂರ ಗ್ರಾಮದ ಯಲ್ಲಮ್ಮನ ಭಕ್ತರು ಮಂಗಳವಾರ ಯಲ್ಲಮ್ಮನನ್ನು ನೆನೆದು ತಲ್ಲೂರಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ, ಯಲ್ಲಮ್ಮನಿಗೆ ವಿಧಿ ವಿಧಾನಗಳನ್ನು ನೆರವೇರಿಸಿದರು. ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಿದ್ದು ಮಹಾರಾಷ್ಟ್ರದ ಯಲ್ಲಮ್ಮನ ಭಕ್ತರು ಯಲ್ಲಮ್ಮನಗುಡ್ಡಕ್ಕೆ ಆಗಮಿಸುತ್ತಿರುವುದರಿಂದ ಕೊರೊನಾ ವ್ಯಾಪಕವಾಗಿ ಹರಡಬಹುದು ಎಂಬ ಉದ್ದೇಶದಿಂದ ಈಗಾಗಲೇ ಜಿಲ್ಲಾಧಿಕಾರಿ ಯಲ್ಲಮ್ಮನ ದೇವಸ್ಥಾನಕ್ಕೆ ನವೆಂಬರ್ ತಿಂಗಳ ಅಂತ್ಯದ ವರೆಗೂ ನಿರ್ಬಂಧ ಹೇರಿದ್ದಾರೆ. ಸಾಮೂಹಿಕವಾಗಿ ಯಲ್ಲಮ್ಮನಿಗೆ ಮಾಡುವ ವಿಧಿ ವಿಧಾನಗಳ ಬಗ್ಗೆ ಅಪಾರ ನಂಬಿಕೆ ಹೊಂದಿದ …
Read More »ಕೋಲ್ಕತ್ತಾ ಮನೆಗೆ ಹೈದರಾಬಾದ್ ಪ್ಲೇ ಆಫ್‍ಗೆ,ಶುಕ್ರವಾರ ಕೊಹ್ಲಿ, ವಾರ್ನರ್ ಮುಖಾಮುಖಿ
ಶಾರ್ಜಾ: ಇಂದು ನಡೆದ ಐಪಿಎಲ್-2020ಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸನ್‍ರೈಸರ್ಸ್ ಹೈದರಾಬಾದ್ ತಂಡ 10 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ. ಶಾರ್ಜಾ ಮೈದಾನದಲ್ಲಿ ನಡೆದ 56ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಶಹಬಾಜ್ ನದೀಮ್ ಮತ್ತು ಸಂದೀಪ್ ಶರ್ಮಾ ಅವರ ಬೌಲಿಂಗ್ ದಾಳಿಗೆ ತತ್ತರಿಸಿ. ನಿಗದಿತ 20 ಓವರಿನಲ್ಲಿ ಕೇವಲ 149 ರನ್ ಪೇರಿಸಿತು. ಈ ಗುರಿಯನ್ನು ಬೆನ್ನಟ್ಟಿದ ಸನ್‍ರೈಸರ್ಸ್ ಹೈದರಾಬಾದ್ …
Read More »ಆಕ್ಟ್-1978: ಟ್ರೇಲರ್ ಮೂಲಕ ಕೌತುಕದ ಬಾಂಬಿಟ್ಟರು ಮಂಸೋರೆ!
ಒಂದೊಳ್ಳೆ ಸಿನಿಮಾ ಎಂಟ್ರಿ ಕೊಟ್ರೆ ತಿಂಗಳಿಂದೀಚೆಗೆ ಕವುಚಿಕೊಂಡಿರೋ ಕೊರೊನಾ ಗ್ರಹಣ ತಂತಾನೇ ಕಳಚಿಕೊಳ್ಳುತ್ತೆ. ಇದು ಸಿನಿಮಾ ಪ್ರೇಮಿಗಳ ಒಕ್ಕೊರಲಿನ ಅಭಿಪ್ರಾಯ. ಅದರಲ್ಲಿಯೇ ಮತ್ತೆ ಸಿನಿಮಾ ಮಂದಿರಗಳು ಗಿಜಿಗುಡುತ್ತಾ ಕಳೆಗಟ್ಟಿಕೊಳ್ಳಲೆಂಬ ಹಾರೈಕೆಯೂ ಇದೆ. ಅದೆಷ್ಟೋ ಸಿನಿಮಾ ಪ್ರೇಮಿಗಳ ಈ ಮನದಿಂಗಿತವನ್ನು ನಿಜವಾಗಿಸುವಂಥಾ ಗಾಢ ಭರವಸೆ ಹೊತ್ತು ಆಕ್ಟ್-1978 ಚಿತ್ರದ ಟ್ರೇಲರ್ ಲಾಂಚ್ ಆಗಿದೆ. ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಅದಕ್ಕೆ ದಕ್ಕಿರೋ ವೀಕ್ಷಣೆ, ನಾನಾ ದಿಕ್ಕುಗಳಿಂದ ಹರಿದು ಬರುತ್ತಿರೋ ಸದಭಿಪ್ರಾಯಗಳೆಲ್ಲವೂ ಒಂದು ಮಹಾ …
Read More »ಹಿರಿಯ ಕಲಾವಿದ ಹೆಚ್. ಜಿ. ಸೋಮಶೇಖರ್ ಇನ್ನಿಲ್ಲ..!
ಸಿನಿಮಾ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಬಹಳಷ್ಟು ಸೇವೆ ಸಲ್ಲಿಸಿದಂತಹ ಹಿರಿಯ ರಂಗಭೂಮಿ ನಟ ಹೆಚ್.ಜಿ. ಸೋಮಶೇಖರ ರಾವ್ (ಸೋಮಣ್ಣ)86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ನಮ್ಮನ್ನು ಅಗಲಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ …
Read More »ಕರ್ನಾಟಕ ಸರ್ಕಾರ ಕೂಡ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ
ಬೆಂಗಳೂರು,ನ.3- ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ ನಂತರ ಇದೀಗ ಕರ್ನಾಟಕ ಸರ್ಕಾರ ಕೂಡ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದೆ. ರಾಜ್ಯದಲ್ಲಿ ಮುಸ್ಲಿಂ ಪುರುಷರು ಹಿಂದೂ ಹುಡುಗಿಯರಿಗೆ ಆಮಿಷವೊಡ್ಡಿ ತಮ್ಮ ಜಾತಿಯ ವಿಚಾರವನ್ನು ರಹಸ್ಯವಾಗಿಟ್ಟು ಲವ್ ಜಿಹಾದ್ ಮಾಡಿಕೊಂಡಿರುವ ಘಟನೆಗಳು ಹೆಚ್ಚಾಗಿರುವ ಹಿನ್ನೆಲೆ ಕಠಿಣ ಕಾನೂನು ರಚಿಸುವುದಕ್ಕೆ ಸರ್ಕಾರ ತೀರ್ಮಾನಿಸಿದೆ. ಇದರಿಂದ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಆಡಳಿತದ ನಾಲ್ಕನೇ …
Read More »ಆರ್.ಆರ್.ನಗರದಲ್ಲಿ ಮತದಾನ ಮಾಡಿದ ತಾರೆಯರು
ಬೆಂಗಳೂರು,ನ.3- ಆರ್‍ಆರ್‍ನಗರ ಉಪಚುನಾವಣೆಯ ಮತದಾನದಲ್ಲಿ ನಟ ದರ್ಶನ ಸೇರಿದಂತೆ ಹಲವಾರು ನಟನಟಿಯರು ತಮ್ಮ ಹಕ್ಕು ಚಲಾಯಿಸಿದರು. ನೆನಪಿರಲಿ ಪ್ರೇಮ್ ಅವರು ಪತ್ನಿ ಸಮೇತ ಕ್ಲಾರೆಟ್ ಸ್ಕೂಲ್ ಮತಗಟ್ಟೆಯಲ್ಲಿ ವೋಟ್ ಮಾಡಿದರು. ತಮ್ಮ ಹಕ್ಕು ಚಲಾಯಿಸಿದ ನಂತರ ಸರ್ಕಾರ ಮತದಾನಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿದೆ. ಯಾರೂ ಆತಂಕ ಪಡುವುದು ಬೇಡ. ಎಲ್ಲರೂ ಮತದಾನ ಮಾಡಿ ಎಂದು ಮನವಿ ಮಾಡಿದರು. ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು. ನಾವು ಮತದಾನ ಮಾಡಿಲ್ಲವೆಂದರೆ ನಮ್ಮ …
Read More »ಭೀಮಾ ತೀರದ ರಕ್ತಸಿಕ್ತ ಇತಿಹಾಸಕ್ಕೆ ಅಂತ್ಯ ಹಾಡುವೆ : ಐಜಿಪಿ ರಾಘವೇಂದ್ರ ಸುವಾಸ್
ಹುಬ್ಬಳ್ಳಿ,ನ.3- ವಿಜಯಪುರ ಭೀಮಾ ತೀರದಲ್ಲಿನ ಅಪರಾಧ ಕೃತ್ಯಗಳಿಗೆ ತಾತ್ವಿಕ ಅಂತ್ಯ ಹಾಡುವುದಾಗಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುವಾಸ್ ಹೇಳಿದ್ದಾರೆ. ಭೀಮಾ ತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಘಟನೆ ನಡೆದ ರಾಷ್ಟ್ರೀಯ ಹೆದ್ದಾರಿ ಕನ್ನಾಳ ಕ್ರಾಸ್ ಬಳಿ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾದೇವ ಸಾಹುಕಾರ ಭೈರಗೊಂಡ ಹತ್ಯೆಗೆ ಸಂಚು ರೂಪಿಸಿ 15-20 ಯುವಕರು ದಾಳಿ ನಡೆಸಿದ್ದಾರೆ. ವಾಹನ …
Read More »ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ವಿರುದ್ಧ ಎಫ್‍ಐಆರ್
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಬಿಗ್‍ಬಿ ವಿರುದ್ಧ ಮಹಾರಾಷ್ಟ್ರದ ಬಿಜೆಪಿ ಶಾಸಕ ಅಭಿಮನ್ಯು ಪವಾರ್ ದೂರು ದಾಖಲಿಸಿದ್ದಾರೆ. ಇದೀಗ ಈ ದೂರಿನನ್ವಯ ಪೊಲೀಸರು ಬಿಗ್ ಬಿ ಹಾಗೂ ಕಾರ್ಯಕ್ರಮ ನಡೆಸಿದ ಚಾನೆಲ್ ಮೇಲೆ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಅಮಿತಾಬ್ ಬಚ್ಚನ್ ನಿರೂಪಣೆಯ ಕೌನ್ ಬನೇಗಾ ಕರೋಡ್‍ಪತಿಯಲ್ಲಿ ಶುಕ್ರವಾರ ಕರ್ಮವೀರ್ ವಿಶೇಷ ಎಪಿಸೋಡ್ ಪ್ರಸಾರ …
Read More »