: ಆನ್ ಲೈನ್ ಗೇಮ್ ಗಳಿಂದ ಹೆಚ್ಚುತ್ತಿರುವ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ ಆಲ್ ಲೈನ್ ಗೇಮ್ ಗಳನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ. ಆನ್ ಲೈನ್ ಗೇಮ್ ಗೆ ದಾಸರಾಗಿದ್ದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿದ್ದರು. ಅಲ್ಲದೇ ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದವು. ಇದರ ಬೆನ್ನಲ್ಲೇ ದಿಟ್ಟ ಕ್ರಮ ಕೈಗೊಂಡಿರುವ ಆಂದ್ರ ಸರ್ಕಾರ, ರಾಜ್ಯದಲ್ಲಿ ಆನ್ ಲೈನ್ …
Read More »Daily Archives: ಡಿಸೆಂಬರ್ 2, 2020
ಕಲಬುರಗಿ ಜಿಲ್ಲೆಯ 19 ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಸಲಾಗುತ್ತಿಲ್ಲ:ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ
ಕಲಬುರಗಿ : ನ್ಯಾಯಾಲಯದಲ್ಲಿನ ಪ್ರಕರಣ ಬಾಕಿ, ಅವಧಿ ಮುಕ್ತಾಯವಾಗದ ಹಾಗೂ ಮತ್ತಿತರರ ಕಾರಣದಿಂದ ಕಲಬುರಗಿ ಜಿಲ್ಲೆಯ 19 ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಸಲಾಗುತ್ತಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ. ಯಾವ ಗ್ರಾಮ ಪಂಚಾಯತಿಗಳಲ್ಲಿ ಚುನಾವಣೆ ಇಲ್ಲ ಎಂದು ನೋಡುವುದಾದರೆ. ಚಿತ್ತಾಪುರ ತಾಲೂಕಿನ 20-ಡೊಣಾಗಾಂವ, 25-ಕೋಲ್ಲೂರ, 27-ರಾಂಪೂರಹಳ್ಳಿ. ಚಿಂಚೋಳಿ ತಾಲೂಕಿನ 14-ಕರ್ಚಖೇಡ, 15-ಗರಗಪಳ್ಳಿ. ಕಮಲಾಪುರ ತಾಲೂಕಿನ 03-ಮರಗುತ್ತಿ, 17-ಮುದ್ದಡಗಾ. ಕಾಳಗಿನ ತಾಲೂಕಿನ 11-ಶೇಳ್ಳಗಿ, 16-ಮೋಘಾ, …
Read More »B.S.Y. ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟವಾಗಿದೆ. ಶುಕ್ರವಾರ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆ ಮತ್ತು ಶನಿವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಆಗಮಿಸಲಿದ್ದಾರೆ. ಶುಕ್ರವಾರ ಮಧ್ಯಾಹ್ನ 3.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, ರಾತ್ರಿ 7.30ಕ್ಕೆ ಯು.ಕೆ.27 ಹೊಟೆಲ್ ನಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು. ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿರುವ ಯಡಿಯೂರಪ್ಪ ಶನಿವಾರ ಬೆಳಗ್ಗೆ 10 …
Read More »ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಹಲವು ರಹಸ್ಯಗಳಿವೆ: ಯತ್ನಾಳ್
ವಿಜಯಪುರ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದು, ಪ್ರಕರಣದ ಹಿಂದೆ ದೊಡ್ಡ ಕಥೆಯಿದೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಹಲವು ರಹಸ್ಯಗಳಿವೆ. ಈ ಬಗ್ಗೆ ಕಾಲ ಬಂದಾಗ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
Read More »ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ
ಬೆಳಗಾವಿ: ‘ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ ಕೇಳಿ ಬಂದಿದೆ. ಕೊರೊನಾ ಕಾರಣದಿಂದ ಹೊರಗಿನ ಆಹಾರ ಪೂರೈಸದಂತೆ ಸರ್ಕಾರ ನಿರ್ದೇಶನ ನೀಡಿದೆ. ಸಂಬಂಧಿಕರ ಭೇಟಿಗೂ ಸಹ ಅವಕಾಶ ವಿಲ್ಲ. ಆದೆರ ಕೈದಿಗಳಿಗೆ ಹೊರಗಿನವರು ಅಧಿಕಾರಿಗಳ ಸಹಾಯದಿಂದ ಆಹಾರ ತಂದು ಕೊಡಲಾಗುತ್ತದೆ ಎಂದು ದೂರು …
Read More »ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಇತ್ತೀಚೆಗೆ ಕೋವಿಡ್ ಗೆ ಬಲಿಯಾದ ಬೆಳಗಾವಿ ಜಿಲ್ಲೆಯ ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಈ ನೆರವು ಮಂಜೂರು ಮಾಡಲಾಗಿದೆ. ಪತ್ರಕರ್ತ ಮಲ್ಲಪ್ಪ ರಾಮದುರ್ಗ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಬೆಳಗಾವಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ರಾಜ್ಯ ಸಂಘದ ಉಪಾಧ್ಯಕ್ಷ ಪುಂಡಲಿಕ …
Read More »ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಎಂದು ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿ
ಖಾನಾಪುರ: ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೀಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೆಹೇಕ್ ಶಕೀಲ್ ಸಂಗೊಳ್ಳಿ (19) ಮೃತ ವಿದ್ಯಾರ್ಥಿನಿ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಖಾಸಗಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್ ಮಾಡುತ್ತಿದ್ದ ಮೆಹೇಕ್ ಶಕೀಲ್ ಪ್ರಥಮ ವರ್ಷ ಮುಗಿಸಿದ್ದರು. ‘ಕೂಲಿ ಮಾಡುತ್ತಿರುವ ನಾವು ಈ ವರ್ಷ ಕೋವಿಡ್-19 ಸಂಕಷ್ಟದಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಾಗಿದ್ದರಿಂದ ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಇದರಿಂದ ನೊಂದು …
Read More »ಹೆಚ್.ಡಿ.ಕುಮಾರಸ್ವಾಮಿ ಅವರ ಭೂಹಗರಣದ ಸಂಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ: ಎಸ್.ಆರ್.ಹಿರೇಮಠ್
ರಾಯಚೂರು: ಒಂದು ತಿಂಗಳಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಭೂಹಗರಣದ ಸಂಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದೇಗೌಡರು ಹೆಚ್‍ಡಿಕೆ ಭೂ ಕಬಳಿಕೆ ಬಗ್ಗೆ ಹೇಳಿದ್ದರು. ಲೋಕಾಯುಕ್ತ ಮೆಟ್ಟಿಲು ಏರಿದ್ದರೂ , ಹೈಕೋರ್ಟ್ ಸೂಚಿಸಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಮನಗರದ ಕೇತಗಾನಹಳ್ಳಿ ಪರಿಶಿಷ್ಟ ಜಾತಿಗೆ ಸೇರಿದ 200 ಎಕರೆ, 65 ಎಕರೆ ಗೋಮಾಳ ಕಬಳಿಕೆ ಮಾಡಿದ್ದಾರೆ. …
Read More »ಲೋಕಸಭೆ ಉಪಚುನಾವಣೆ ಹಾಗೂ ಗ್ರಾಮ ಪಂಚಾಯತ್ ಚುನಾವಣೆ ಪಕ್ಷದ ನಿರ್ಧಾರದಂತೆ
ಬೆಂಗಳೂರು: ಬೆಳಗಾವಿ ಲೋಕಸಭೆ ಉಪಚುನಾವಣೆ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಹಲವು ಸಭೆಗಳು ನಡೆಯಲಿದ್ದು, ಯಾರಿಗೆ ಟಿಕೇಟ್ ನೀಡಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗ್ರಾಮ ಪಂಚಾಯತ್ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷದ ನಿಷ್ಠಾವಂತ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರಿಗೆ ಟಿಕೇಟ್ ನೀಡಲಾಗುವುದು. ಚುನಾವಣೆಯಲ್ಲಿ …
Read More »ಗ್ರಾಪಂ.ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ.:ರಮೇಶ್ ಜಾರಕಿಹೊಳಿ
ಬೆಳಗಾವಿ: ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಇದರಿಂದ ಕಾರ್ಯಕರ್ತರು ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ’ ಅಂತಾ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಬೆಳಗಾವಿ ನಗರದ ಧರ್ಮನಾಥ್ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಿಬೇಕು. …
Read More »