ಬೆಂಗಳೂರು, ಡಿ.2- ಗ್ರಾಮ ಪಂಚಯತ್ ಚುನಾವಣೆ ಎದುರಾಗಿರುವ ಸಂದರ್ಭದಲ್ಲೇ ಕರ್ನಾಟಕದಲ್ಲಿ ಕುಟುಂಬ ರಾಜಕಾರಣ ಮತ್ತೇ ಸದ್ದು ಮಾಡುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಅಂದಾಜಿನ ಪ್ರಕಾರ ರಾಜ್ಯಸಭೆ, ಲೋಕಸಭೆ, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಸುಮಾರು 150 ಕುಟುಂಬ ಸದಸ್ಯರಿದ್ದಾರೆ. ಎಲ್ಲಾ ಚುನಾಯಿತ ಪ್ರತಿನಿಧಿಗಳಲ್ಲಿ 40 ಪ್ರತಿಶತಕ್ಕೂ ಹೆಚ್ಚು – ಸಂಸದರು ಮತ್ತು ಶಾಸಕರು, ಜಿಲ್ಲಾ ಪಂಚಾಯಿತಿಗಳು ಮತ್ತು ನಾಗರಿಕ ಸಂಸ್ಥೆಗಳ ಸದಸ್ಯರು – ಒಂದೆ ರಾಜಕೀಯ ಕುಟುಂಬ ಸೇರಿದವರಾಗಿದ್ದಾರೆ. …
Read More »Daily Archives: ಡಿಸೆಂಬರ್ 2, 2020
ಕಾರಿಗೆ ಮರಳು ತುಂಬಿದ ಟ್ರಕ್ ಡಿಕ್ಕಿ : 8 ಮಂದಿ ದುರ್ಮರಣ
ಲಕ್ನೋ, ಡಿ.2-ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರಿಗೆ ಮರಳು ತುಂಬಿದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 8 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ. ದೇವಿಗಂಜ್‍ನಲ್ಲಿ ತಮ್ಮ ಸಂಬಂಧಿಕರ ಮದುವೆ ಸಮಾರಂಭ ಮುಗಿಸಿ ಶಹಜಾದ್‍ಪುರಕ್ಕೆ ಹಿಂತಿರುಗುತ್ತಿದ್ದಾಗ ಕಾಡಾಧಾಮ್ ಪ್ರದೇಶದಲ್ಲಿ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದವರ ದೇಹಗಳು ಅಪ್ಪಚ್ಚಿಯಾಗಿದ್ದು, ಗ್ಯಾಸ್ ಕಟರ್ ಬಳಸಿ ದೇಹಗಳನ್ನು ಹೊರತೆಗೆಯಬೇಕಾಯಿತು ಎಂದು …
Read More »7ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ನೋಯ್ಡಾ ಗಡಿಯಲ್ಲಿ ರೈತರ ಜಮಾವಣೆ
ನವದೆಹಲಿ, ಡಿ.2-ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 7ನೆ ದಿನಕ್ಕೆ ಕಾಲಿಟ್ಟಿದ್ದು, ಇಂದು ರೈತರು ನೋಯ್ಡಾ-ಉತ್ತರ ಪ್ರದೇಶ ಗಡಿ ಭಾಗದಲ್ಲಿ ಧರಣಿ ನಡೆಸುತ್ತಿರುವುದರಿಂದ ದೆಹಲಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ರೈತ ಮುಖಂಡರು ಮತ್ತು ಸರ್ಕಾರದ ನಡುವಿನ ಮಾತುಕತೆ ಮುರಿದು ಬೀಳುತ್ತಿದ್ದಂತೆ ರೈತರು ತಮ್ಮ ಹೋರಾಟ ಮುಂದುವರೆಸಿದ್ದು, ನೋಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಉತ್ತರಪ್ರದೇಶ ಸಂಪರ್ಕಿಸುವ ಪ್ರಮುಖ ರಸ್ತೆ ಬಂದ್ ಆಗಿದೆ. ಪಂಜÁಬ್ ಮತ್ತು ಹರಿಯಾಣ ರೈತರು …
Read More »ಮತ್ತೆ ರಾಜ್ಯದಲ್ಲಿ ನೈಟ್ ಕರ್ಫ್ಯೂ?
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧವಾತ್ತಿರುವವರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಹೌದು. ಹೊಸ ವರ್ಷದ ಸಾರ್ವಜನಿಕ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ. ಹೊಸ ವರ್ಷಕ್ಕೆ ಒಂದು ವಾರ ಮೊದಲೇ ನೈಟ್ ಕರ್ಫ್ಯೂಗೆ ಪ್ಲಾನ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ ಡಿಸೆಂಬರ್ 26ರಿಂದ ನೈಟ್ ಕರ್ಫ್ಯೂ ಜಾರಿಗೆ ತರಲು ಚಿಂತನೆ ನಡೆದಿದೆ. ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಮತ್ತೆ ರಾತ್ರಿ ಕರ್ಫ್ಯೂ ಜಾರಿ ಆಗಬಹುದು. ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 …
Read More »ತಂದೆಯನ್ನ ಕೊಂದವನನ್ನೇ ತಾಯಿ ಮದ್ವೆ ಆಗಿ ಮೆರವಣಿಗೆ ಹೊರಟಂತಿದೆ- ಹಳ್ಳಿಹಕ್ಕಿ ಹೀಗಂದಿದ್ಯಾಕೆ?
ಮೈಸೂರು: ಸರ್ಕಾರದ ಇಂದಿನ ಸ್ಥಿತಿಯ ಬಗ್ಗೆ ಎಂಎಲ್‍ಸಿ ಹೆಚ್. ವಿಶ್ವನಾಥ್ ಅವರು ಮಾರ್ಮಿಕವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆಯನ್ನ ಕೊಂದವನನ್ನೆ ತಾಯಿ ಮದುವೆ ಆಗಿ ಮೆರವಣಿಗೆ ಹೊರಟಂತಿದೆ. ನಾವು ವಿರೋಧಿಸಿದವರೇ ಈಗ ಅವರ ಸ್ನೇಹಿತರಾಗಿದ್ದಾರೆ ಎಂದು ಅಸಮಾದಾನ ಹೊರಹಾಕಿದ್ದಾರೆ. ನಾವು ಯಾರನ್ನು ವಿರೋಧ ಮಾಡಿ ಬಂದ್ವಿ, ಅವರೇ ಈಗ ಬಿಎಸ್‍ವೈ ಸ್ನೇಹಿತರಾಗಿದ್ದಾರೆ. ಇದು ತಂದೆಯನ್ನ ಕೊಂದವನನ್ನ ತಾಯಿ ಮದುವೆಯಾದಂತೆ ಕಾಣುತ್ತಿದೆ. ಶೇಕ್ಸ್‍ಪಿಯರ್ ನಾಟಕದಲ್ಲಿ ಇದೆ ರೀತಿಯ ಪ್ರಸಂಗ …
Read More »ವೈದ್ಯರ ನಿರ್ಲಕ್ಷ್ಯ ಆರೋಪ – ಹುಟ್ಟುತ್ತಲೇ ಹೆಣ್ಣು ಮಗು ಸಾವು
ಹಾಸನ: ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ ಘಟನೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆತ್ತೂರು ಗ್ರಾಮದ ಚಾಂದಿನಿ ಅವರು ಹೆರಿಗೆ ನೋವಿನಿಂದ ನಿನ್ನೆ ಬೆಳಗ್ಗೆ 11 ಗಂಟೆಗೆ ಹಾಸನ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ತಂದೆ, ತಾಯಿ ಇಲ್ಲದ ಚಾಂದಿನಿಯನ್ನು ಅವರ ಅಣ್ಣನೇ ಕಾಳಜಿ ವಹಿಸಿ ಕಳೆದ ಒಂದು ವರ್ಷದ ಹಿಂದೆ ಮದುವೆ ಮಾಡಿದ್ದರುಹೆರಿಗೆ ನೋವಿನ ಕಾರಣ ಹಾಸನ ಹಿಮ್ಸ್ …
Read More »ನಾನು ಮಾಸ್ಕ್ ಧರಿದೇ ಜನರಲ್ಲಿ ಕೊರೊನಾ ಜಾಗೃತಿ ಮಾಡುತ್ತೇನೆ:ಶಾಸಕ ಸುನೀಲ
ಕಾರವಾರ: ವ್ಯಾಕ್ಸಿನ್ ಬರೋವರೆಗೂ ಕೊರೊನಾ ವಿರುದ್ಧ ಇರುವ ಏಕೈಕ ಅಸ್ತ್ರ ಮಾಸ್ಕ್ ಅಂತ ಪ್ರಧಾನಿಗಳಿಂದ ಹಿಡಿದು ತಜ್ಞ ವೈದ್ಯರವರೆಗೆ ಎಲ್ಲರೂ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಾತ್ರ ಇದಕ್ಕೆ ತದ್ವಿರುದ್ಧದ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ತಾನು ಮಾಸ್ಕ್ ಧರಿಸದೇ ಕೊರೊನಾ ಜಾಗೃತಿ ಮಾಡುತ್ತೇನೆ ಎಂದು ಭಟ್ಕಳದ ಬಿಜೆಪಿ ಶಾಸಕ ಸುನೀಲ್ ನಾಯ್ಕ ಎಡವಟ್ಟು ಹೇಳಿಕೆ ಕೊಟ್ಟಿದ್ದಾರೆ. ಭಟ್ಕಳದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, …
Read More »ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ
ಚಿಕ್ಕಮಗಳೂರು:ಗ್ರಾಮ ಪಂಚಾಯತ್ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆನ್‌ಲೈನ್ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸರ್ವಜನಿಕರು ಸೂಚಿಸಿದ್ದಾರೆ.ಶತಮಾನಗಳ ಬದುಕೆ ಬೀದಿಗೆ ಬೀಳುವಾಗ ಚುನಾವಣೆ ಬೇಕೇ …
Read More »ದೇಶದ ಎಲ್ಲರಿಗೂ ಲಸಿಕೆ ನೀಡ್ತೇವೆ ಅಂತ ಹೇಳೇ ಇಲ್ಲ – ಕೇಂದ್ರ ಸರ್ಕಾರ
ನವದೆಹಲಿ: ದೇಶದ ಎಲ್ಲ ಪ್ರಜೆಗಳಿಗೆ ಕೊರೊನಾ ಲಸಿಕೆ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಐಸಿಎಂಆರ್ ನಿರ್ದೇಶಕ ಬಲರಾಮ್ ಭಾರ್ಗವ್ ಮತ್ತು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ರಾಜೇಶ್ ಭೂಷಣ್ ದೇಶದಲ್ಲಿ ಎಲ್ಲ ಪ್ರಜೆಗಳಿಗೆ ಲಸಿಕೆ ನೀಡುವ ಬಗ್ಗೆ ಮಾತನಾಡಿಲ್ಲ. ಈ ವಿಚಾರದ ಬಗ್ಗೆ ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕೇ ಹೊರತು ಒಟ್ಟಾರೆಯಾಗಿ ಮಾತನಾಡಬಾರದು ಎಂದು ಹೇಳಿದರು. ಇಡೀ ದೇಶಕ್ಕೆ ಲಸಿಕೆ ನೀಡುವ …
Read More »ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ಸೈಕಲ್ ಓಡಿಸಿ ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದ ಅಧಿಕಾರಿಗಳು
ಬೆಳಗಾವಿ: ಕೆಎಸ್‍ಆರ್ ಪಿ ಉತ್ಸವದ ಅಂಗವಾಗಿ ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ನಡೆಯಿತು. ಹಿರಿಯ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಸೈಕಲ್ ಓಡಿಸಿ ಎಲ್ಲರ ಗಮನ ಸೆಳೆದರು. ಅನೇಕ ಪೊಲೀಸ್ ಅಧಿಕಾರಿಗಳು ಸೈಕಲ್ ಓಡಿಸಿ ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದರು. ಇಂದು ಬೆಳಗ್ಗೆ ಬೆಳಗಾವಿಯ ಸುವರ್ಣ ಸೌಧದಿಂದ ಪ್ರಾರಂಭವಾದ ಸೈಕಲ್ ಜಾಥಾ ಬೆಳಗಾವಿಯ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಎಲ್ಲರ ಗಮನ ಸೆಳೆಯಿತು. ಸೈಕಲ್ ಜಾಥಾದಲ್ಲಿ ಬೆಳಗಾವಿ ಪೊಲೀಸ್ ಇಲಾಖೆಯ …
Read More »