ಬೆಂಗಳೂರು, – ರಾಜ್ಯದಲ್ಲಿ ಕೋವಿಡ್-19 ಲಾಕ್‍ಡೌನ್ ಸಂದರ್ಭ ದಲ್ಲಿ ಎಲ್ಲ ಲಿಕ್ಕರ್ ಮಳಿಗೆಗಳು ಮತ್ತು ಬಾರ್‍ಗಳು ಮುಚ್ಚಿದ್ದರಿಂದ ಮದ್ಯ ಮಾರಾಟದಲ್ಲಿ ಭಾರೀ ಇಳಿಕೆಯಾಗಿತ್ತು. ಆದರೆ, ಲಾಕ್‍ಡೌನ್ ತೆರವುಗೊಂಡ ಬಳಿಕ ಅಬಕಾರಿ ಇಲಾಖೆ ತನ್ನ ಆದಾಯ ಹೆಚ್ಚಿಸಿಕೊಂಡಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಅತ್ಯಲ್ಪ ಆದಾಯ ಕುಸಿತ ಅನುಭವಿಸಿದೆ. 2019ರ ಏಪ್ರಿಲ್-ನವೆಂಬರ್ ಅವಧಿಯಲ್ಲಿ ರಾಜ್ಯ ಅಬಕಾರಿ ಇಲಾಖೆಯು 14,390.39 ಕೋಟಿ ರೂ. ಆದಾಯ ಪಡೆದಿದ್ದರೆ, ಈ ವರ್ಷ 13,778.30 ಕೋಟಿ ರೂ. …
Read More »Daily Archives: ಡಿಸೆಂಬರ್ 5, 2020
ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದ ಕಿಚ್ಚ ಸುದೀಪ್
ಬೆಂಗಳೂರು: ಮಂಡ್ಯದ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಿಚ್ಚ, ಈ ಪ್ರಕರಣದಲ್ಲಿ ಬಾಲಕಿಗೆ ನ್ಯಾಯ ಸಿಗುತ್ತದೆ ಮತ್ತು ತಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದೆ ಈ ರೀತಿ ಮಾಡುವವರಿಗೆ ತೀವ್ರ ತರಹದ ಸಂದೇಶ ರವಾನೆಯಾಗಲಿದೆ ಎಂದು ಭಾವಿಸಿದ್ದೇನೆ. ಈ ಮೂಲಕ ಮುಂದೆ ಈ …
Read More »ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ
ಹಾವೇರಿ: ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಮೃತರನ್ನು ಕೆ.ಎನ್.ಹನುಮಂತಪ್ಪ ನಿಂಗಪ್ಪ (60), ಗೀತಮ್ಮ (50) ಮತ್ತು ಶಿವಾನಿ (11) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರೆಲ್ಲರೂ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದವರು ಎನ್ನಲಾಗಿದೆ.
Read More »ಕರ್ನಾಟಕ ಬಂದ್ ಬಿಸಿಯೇ ಇಲ್ಲ- ಮಾರುಕಟ್ಟೆಯಲ್ಲಿ ಜನವೋ ಜನ
ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ನಿರ್ಧಾರದಿಂದ ಹಿಂದೆ ಸರಿಯದ ಕರ್ನಾಟಕ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್‌ಗೆ ರಾಜಧಾನಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ರಸ್ತೆಯಲ್ಲಿ ಎಂದಿನಂತೆ ಜನರು ಸಂಚರಿಸುತ್ತಿದ್ದು, ಬಿಎಂಟಿಸಿ ಬಸ್ಸುಗಳು ರಸ್ತೆಗೆ ಇಳಿದಿದೆ. ಕೆ.ಆರ್. ಮಾರುಕಟ್ಟೆಗೆ ಜನರು ಆಗಮಿಸಿ ಖರೀದಿಯಲ್ಲಿ ತೊಡಗಿದ್ದಾರೆ. ಅಂಗಡಿ, ಹೋಟೆಲ್‌ಗಳು ತೆರೆದಿದ್ದು ಗ್ರಾಹಕರು ಆಗಮಿಸುತ್ತಿದ್ದಾರೆ. ಕರ್ನಾಟಕ ಬಂದ್‌ಗೆ ಯಾವುದೇ ಅನುಮತಿ ಪಡೆದಿಲ್ಲ. ಹೀಗಾಗಿ ಯಾರೇ ಚೇಷ್ಟೆ ಮಾಡಿದರೂ ಕ್ರಮ …
Read More »ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಬಂದ್
ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ನಲ್ಲಿರುವ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ನೆರಳೆ ಮತ್ತು ಹಸಿರು ಮಾರ್ಗಗಳನ್ನು ಜೋಡಿಸುವ ಕಂಪೇಗೌಡ ನಿಲ್ದಾಣದಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಸುತ್ತಾರೆ. ಆದರೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈ ನಿಲ್ದಾಣವನ್ನು ಬಂದ್ ಮಾಡಲಾಗಿದೆ.ಮೇಲಾಧಿಕಾರಿಗಳ ಸೂಚನೆ ಮೇರೆಗೆ ಬಂದ್ ಮಾಡುತ್ತಿರುವುದಾಗಿ ಸಿಬ್ಬಂದಿ ತಿಳಿಸಿದ್ದಾರೆ. ಬಂದ್ ಆದ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಬಂದ ಪ್ರಯಾಣಿಕರು ವಾಪಸ್ ತೆರಳುತ್ತಿದ್ದಾರೆ.
Read More »ವಾಶಿಂಗ್ ಮಷಿನ್ ರಿಪೇರಿ ನೆಪದಲ್ಲಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ: ವಾಶಿಂಗ್ ಮಷಿನ್ ರಿಪೇರಿ ಮಾಡುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕಂಗ್ರಾಳಿ ಕೆ.ಎಚ್. ವಿಶಾಲ ಗಲ್ಲಿಯ ಮಾರುತಿ ಪರಶುರಾಮ ಜಾಧವ (೨೬), ವೈಭವ ನಗರದ ಶುಭಂ ರಾಜು ಬಾತಖಂಡೆ (೨೫) ಬಂಧಿತರು. ನ. 30 ರಂದು ರಾತ್ರಿ 9 ಗಂಟೆಗೆ ಶಿವಾಜಿ ನಗರದ ಶೋಭಾ ಗುರುರಾವ್ ಕಾಥವಟೆ ಎಂಬುವವರ ಮನೆಗೆ ವಾಶಿಂಗ್ ಮಶಿನ್ ರಿಪೇರಿ …
Read More »ಬಾಲಕಿ ಬೇರೊಬ್ಬನೊಂದಿಗೆ ವಿವಾಹವಾಗಲು ಮುಂದಾಗಿರುವ ವಿಷಯ ತಿಳಿದು ಆಕೆಯನ್ನು ಕಣಕುಂಬಿ ಅರಣ್ಯಕ್ಕೆ ಬೈಕ್ ನಲ್ಲಿ ಕರೆದೊಯ್ದು ಕೊಲೆ
ಬೆಳಗಾವಿ – 2019ರ ನವೆಂಬರ್ ತಿಂಗಳಲ್ಲಿ ಅಪಹರಣವಾಗಿದ್ದ ಅಪ್ರಾಪ್ತ ಬಾಲಕಿಯನ್ನು ನಂತರದಲ್ಲಿ ಕತ್ತು ಸೀಳಿ, ಕೊಲೆ ಮಾಡಿ ಕಣಕುಂಬಿ ಅರಣ್ಯದಲ್ಲಿ ಹೂತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಅಪಹರಿಸಲಾಗಿತ್ತು. ಈ ಕುರಿತು ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದರು. ಹಿಡಕಲ್ ಗ್ರಾಮದ ಆದರ್ಶ ದತ್ತು ಪಾರ್ಥನಹಳ್ಳಿ ಎಂಬಾತ ಬಾಲಕಿಯೊಂದಿಗೆ ಸಲುಗೆಯಿಂದಿದ್ದ ಮಾಹಿತಿ ಅರಿತ ಪೊಲೀಸರು ತೀವ್ರ ತನಿಖೆ ನಡೆಸಿದಾಗ ಸಂಪೂರ್ಣ ವಿವರ ಹೊರಬಿದ್ದಿದೆ. …
Read More »ಬಿ.ಎಸ್.ಯಡಿಯೂರಪ್ಪ ಸಭಾಭವನದ ಉದ್ಘಾಟನೆ ನೆರವೇರಿಸಿದ ವಿಜಯೇಂದ್ರ
ಬೆಳಗಾವಿ: ಬೆಳಗಾವಿಯ ಆಟೋನಗರದ ಗುರು ರೋಡ್ ಲೈನ್ಸ್ ಕಚೇರಿ ಆವರಣದಲ್ಲಿ ಗುರು ರೋಡ್ ಲೈನ್ಸ್ ಸಂಸ್ಥಾಪಕರಾದ ಗುರುದೇವ ಪಾಟೀಲ ಅವರ ಇಚ್ಚಾಶಕ್ತಿಯಿಂದ ನೂತನವಾಗಿ ನಿರ್ಮಿಸಲಾದ ಬಿ.ಎಸ್.ಯಡಿಯೂರಪ್ಪ ಸಭಾಭವನದ ಉದ್ಘಾಟನೆಯನ್ನು ಬಿ.ವೈ.ವಿಜಯೇಂದ್ರ ಅವರು ನೆರವೇರಿಸಿದರು. ಉದ್ಘಾಟನಾಪರ ಮಾತನಾಡಿದ ಅವರು,”ಪಕ್ಷದ ಕಾರ್ಯಕರ್ತ, ಅಪ್ಪಟ ಅಭಿಮಾನಿಯಾದ ಗುರುದೇವ ಪಾಟೀಲ ಅವರ ಸಂಕಲ್ಪಶಕ್ತಿಯಿಂದ ತಮ್ಮ ಸ್ವಂತ ಜಾಗದಲ್ಲಿ, ಸ್ವಂತ ಖರ್ಚಿನಲ್ಲಿ ತಂದೆಯವರ ಹೆಸರಿನಲ್ಲಿ ಸಭಾಭವನ ನಿರ್ಮಿಸಿದ್ದು ವೈಯಕ್ತಿಕವಾಗಿ ನನಗೆ ಅಭಿಮಾನ ತಂದಿದೆ ಎಂದರು. ರಾಜ್ಯದಲ್ಲಿ ರಾಜಕಾರಣಿಯಾಗಿ, …
Read More »