ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ EVM ಅಂದ್ರೆ ಮತ ಯಂತ್ರಗಳನ್ನು ಬಳಿಸುತ್ತಿಲ್ಲ,ಬ್ಯಾಲೇಟ್ ಬಾಕ್ಸ್ ಗಳನ್ನು ಬಳಸಲಾಗುತ್ತಿದೆ.ಈ ಬಾರಿ ಬಟನ್ ಒತ್ತುವ ಪರಿಸ್ಥಿತಿ ಇಲ್ಲವೇ ಇಲ್ಲ,ಅಭ್ಯರ್ಥಿಯ ಗುರುತಿನ ಎದುರು ಶಿಕ್ಕಾ ಹೊಡೆದ್ರ ವೋಟ್ ಪಕ್ಕಾ…… ಬೆಳಗಾವಿ, ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11) ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ (ಡಿ.6) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ …
Read More »Daily Archives: ಡಿಸೆಂಬರ್ 6, 2020
ಅಧಿವೇಶನದಲ್ಲಿ ಸರ್ಕಾರದ ಬೆವರಿಳಿಸಲು ಪ್ರತಿ ಪಕ್ಷ ಕಾಂಗ್ರೆಸ್ ಸಜ್ಜು
ಬೆಂಗಳೂರು, ಡಿ.6- ಗೋಹತ್ಯೆ ನಿಷೇಧ, ಲವ್‍ಜಿಹಾದ್, ಭೂ ಸುಧಾರಣೆ, ಎಪಿಎಂಸಿಯಂತಹ ವಿವಾದಿತ ಕಾಯ್ದೆಗಳ ಅಂಗೀಕಾರಕ್ಕೆ ವಿಧಾನಮಂಡಲದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಲು ಕಾಂಗ್ರೆಸ್ ನಿರ್ಧರಿಸಿದೆ. ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಇಂದು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನೆಯಲ್ಲಿ ನಡೆದ ಉಭಯ ಸದನಗಳ ನಾಯಕರ ಹಾಗೂ ಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರದ ನಡವಳಿಕೆಗಳ ಕುರಿತು ತೀವ್ರ ಆಕ್ರೋಶ ವ್ಯಕ್ತವಾಯಿತು. ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಪೂರಕವಾದ ಯಾವುದೇ ಕಾನೂನುಗಳನ್ನು ಜಾರಿಗೆ ತರುತ್ತಿಲ್ಲ. …
Read More »ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ನಾಳೆಯಿಂದ
ಬೆಂಗಳೂರು, ಡಿ.6- ಹಿಂದೆಂದಿಗಿಂತಲೂ ಭಾರೀ ಬಿರುಸಿನ ಸ್ಪರ್ಧೆ ಕಂಡಿರುವ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ನಾಳೆಯಿಂದ ಆರಂಭಗೊಳ್ಳಲಿದೆ. ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 2,930 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ 2,832 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆಯಲಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಡಿ. 22ರಂದು ನಡೆಯಲಿದೆ. ಮೊದಲ …
Read More »ಮದ್ವೆಗೆ ಮೂರು ದಿನ ಮುನ್ನ ಯುವಕನ ಮರ್ಮಾಂಗ ಕತ್ತರಿಸಿದ ಗೆಳೆಯರು!
ಲಕ್ನೋ: ಮದುವೆಗೆ ಮೂರು ದಿನವಿರುವಾಗಲೇ ಯುವಕನ ಮರ್ಮಾಂಗ ಕತ್ತರಿಸಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಕೊಟ್ಟಾಲಿ ನಗರದ ಇದಗ್ ಪ್ರದೇಶದಲ್ಲಿ ನಡೆದಿದೆ.ಸಮೀರ್ ಹಲ್ಲೆಗೊಳಗಾದ ಯುವಕ. ಸಮೀರ್ ಮದುವೆಗೆ ಮೂರು ದಿನಗಳ ಬಾಕಿ ಇತ್ತು. ಫರ್ವೇಜ್ ಎಂಬಾತನ ಬಳಿ ಸಮೀರ್ ಒಂದು ಲಕ್ಷ ರೂ. ಸಾಲ ಪಡೆದುಕೊಂಡಿದ್ದನು. ಅದೇ ವಿಚಾರವಾಗಿ ಇಬ್ಬರ ಮಧ್ಯೆ ಹಲವು ಬಾರಿ ಜಗಳ ನಡೆದಿತ್ತು. ಹಣಕಾಸಿನ ಸಂಬಂಧ ಸಮೀರ್ ಮತ್ತು ಫರ್ವೇಜ್ ನಡುವೆ ದ್ವೇಷದ ಜ್ವಾಲೆ ಹೊತ್ತಿಕೊಂಡಿತ್ತು. …
Read More »ಮನೆ ಮುಂದೆ ವಾಹನ ನಿಲ್ಲಿಸಿದರೂ ಶುಲ್ಕ ,ಉಸಿರಾಡಲೂ ಬಿಬಿಎಂಪಿಗೆ ಶುಲ್ಕ ಕಟ್ಟಬೇಕೇ..?
ಬೆಂಗಳೂರು, ಡಿ.6- ಮನೆ ಮುಂದೆ ವಾಹನ ನಿಲ್ಲಿಸಿದರೂ ಶುಲ್ಕ ಕಟ್ಟಬೇಕು ಎನ್ನುವ ಪ್ರಸ್ತಾವನೆ ಸಲ್ಲಿಸಿರುವ ಬಿಬಿಎಂಪಿ ಆಯುಕ್ತರ ನಿರ್ಧಾರ ನೋಡಿದರೆ ನಾವು ಬ್ರಿಟಿಷರ ಆಡಳಿತದಲ್ಲಿ ಇದ್ದೇವೆನೋ ಎನ್ನುವ ಭಾವನೆ ಬರುತ್ತಿದೆ. ಲಗಾನ್ ಸಿನಿಮಾದ ಸಂಭಾಷಣೆ ತೀನ್ ಗುನಾ ಲಗಾನ್ ಲಗೇಗಾ ಈ ಸಂದರ್ಭದಲ್ಲಿ ನೆನಪಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಉಪಾಧ್ಯಕ್ಷ ಸುರೇಶ್ ರಾಥೋಡ್ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಭಾರೀ ಪ್ರಮಾಣದಲ್ಲಿ ವಾಹನಗಳ ಪಾರ್ಕಿಂಗ್ …
Read More »ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ : ಇಬ್ಬರು ವಶಕ್ಕೆ
ಬೆಂಗಳೂರು, ಡಿ.- ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕೋಲಾರ ಜಿಲ್ಲಾ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ವಶದಲ್ಲಿರುವ ಇಬ್ಬರ ಪೈಕಿ ಒಬ್ಬಾತ ಬೆಂಗಳೂರಿನವನು ಎಂಬುದು ಗೊತ್ತಾಗಿದೆ. ವರ್ತೂರು ಪ್ರಕಾಶ್ ಅಪಹರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 18 ಮಂದಿಯನ್ನು ವಿಚಾರಣೆಗೊಳಪಡಿಸಿ ಪೊಲೀಸರು ಕೆಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಫಾರಂಹೌಸ್ ಬಳಿ ವರ್ತೂರು ಪ್ರಕಾಶ್ ಅವರನ್ನು ಹಣ ಕ್ಕಾಗಿ ಅಪಹರಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಪಹರಣಕಾರರ ಸುಳಿವಿದೆ. …
Read More »ಜನವರಿ ವೇಳೆಗೆ ತುರ್ತು ಸಂದರ್ಭದ ಬಳಕೆಗೆ ಲಭ್ಯವಾಗಲಿವೆದೆ ಲಸಿಕೆ
ನವದೆಹಲಿ, ಡಿ.5- ಮೂರನೇ ಹಂತದ ಪರೀಕ್ಷೆ ಮುಗಿಸಿರುವ ಎರಡು ಕೊರೊನಾ ಲಸಿಕೆಗಳು ಮುಂದಿನ ವರ್ಷದ ಜನವರಿ ವೇಳೆಗೆ ತುರ್ತು ಸಂದರ್ಭದ ಬಳಕೆಗೆ ಲಭ್ಯವಾಗಲಿವೆ ಎಂದು ಹೇಳಿರುವ ಏಮ್ಸ್‍ನ ನಿರ್ದೇಶಕರಾದ ರಣದೀಪ್ ಗುಲೇರಿಯಾ ಅವರು, ಲಸಿಕೆಗಳು ಸಾರ್ವಜನಿಕರ ಬಳಕೆಗೆ 2022ರ ವೇಳೆಗೆ ದೊರೆಯಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. ಇತ್ತೀಚೆಗೆ ಇಂಗ್ಲೆಂಡ್‍ನಿಂದ ಅಂಗೀಕಾರ ಪಡೆದಿರುವ ಫಿಝರ್ ಕೊರೊನಾ ಲಸಿಕೆ, ಸಂಕಟ ಸಮಯದಲ್ಲಿ ನೆರವಾಗುವ ಸ್ಪರ್ಧೆಯಲ್ಲಿ ಜಗತ್ತಿನ ಇತರೆ ಲಸಿಕೆಗಳಿಗಿಂತ ಮುಂದಿದೆ. ಭಾರತ ತನ್ನದೇ …
Read More »ಡಿ. 7ರಿಂದ 15ರವರೆಗೆ ವಿಧಾನಸೌಧದ ಸುತ್ತ ನಿಷೇಧಾಜ್ಞೆ
ಬೆಂಗಳೂರು, ಡಿ.6- ವಿಧಾನಸೌಧದಲ್ಲಿ ನಡೆಯುವ ಅಧಿವೇಶನದ ಸಂಬಂಧ ಡಿ. 7ರಿಂದ 15ರವರೆಗೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ವಿಧಿಸಲಾಗಿದೆ. ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನಗಳು ನಡೆಯಲಿದ್ದು, ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ …
Read More »ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧ………..
ಬೆಳಗಾವಿ : ಕೊರೊನಾ ಎರಡನೇ ಅಲೆ ಅಪ್ಪಳಿಸುವ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಆಚರಿಸುವುದನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ. ಇಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆಯನ್ನು ನಿಷೇಧ ಮಾಡಲು ಈಗಾಗಲೇ ಸಿಎಂ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಾನು ಈ ಕುರಿತು ಚರ್ಚೆ ಮಾಡಿದ್ದೇವೆ. ಇದಕ್ಕೆ ಸಿಎಂ ಕೂಡಾ ಸಮ್ಮತಿ ನೀಡಿದ್ದಾರೆ. ಆದ ಕಾರಣ ಶೀಘ್ರದಲ್ಲಿ ಸರ್ಕಾರ …
Read More »ಕಾಂಗ್ರೆಸ್ ಜೊತೆ ಕೈ ಜೋಡಿಸೋದು ಬೇಡ ಅಂತಾ ನಾವು ಹೆಚ್‍ಡಿಕೆಗೆ ಮೊದಲೇ ಹೇಳಿದ್ದೆವು.: ಹೊರಟ್ಟಿ
ಧಾರವಾಡ: ಕಾಂಗ್ರೆಸ್ ಜೊತೆ ಕೈ ಜೋಡಿಸೋದು ಬೇಡ ಅಂತಾ ನಾವು ಹೆಚ್‍ಡಿಕೆಗೆ ಮೊದಲೇ ಹೇಳಿದ್ದೆವು. ಕೊಂಚ ತಡೆದುಕೊಳ್ಳಿ ಅಂದಿದ್ದೆವು ಎಂದು ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಹೊರಟ್ಟಿ, ದೋಸ್ತಿ ಸರ್ಕಾರದಲ್ಲಿ ಸಿದ್ದರಾಮಯ್ಯ ಜೆಡಿಎಸ್ ಮುಗಿಸೋದು ನನ್ನ ಕೆಲಸ ಅಂದಿದ್ದರು. ಸಿದ್ದರಾಮಯ್ಯ ಹೆಚ್‍ಡಿಕೆ ಜೊತೆಯಾಗಿ ಕೂತು ಮಾತಾಡೋ ಸ್ಥಿತಿ ನಿರ್ಮಾಣವಾಗಲಿಲ್ಲ. ಇಬ್ಬರೂ ಕುಳಿತು ಮಾತನಾಡಬಹುದಿತ್ತು. ಸಮನ್ವಯತೆಯಿಂದ ಹೋಗಬೇಕಿತ್ತು ಆದರೆ ಇದು ಒತ್ತಾಯದ ಮದುವೆ ಆದಂತಾಯಿತು ಎಂದು ಹೇಳಿದರು. …
Read More »