Breaking News

Daily Archives: ಡಿಸೆಂಬರ್ 7, 2020

ಬೆಳಗಾವಿ ಲೋಕಸಭೆ ಉಪಚುನಾವಣೆ: ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ

ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …

Read More »

ಸಚಿವ ಆರ್.ಅಶೋಕ್ ವಿರುದ್ಧ ಸ್ಪೀಕರ್ ಗರಂ

ಬೆಂಗಳೂರು, ಡಿ.7- ಸಾಫ್ಟ್‍ವೇರ್‍ನಲ್ಲಿರುವ ದೋಷದಿಂದಾಗಿ ಪಹಣಿಯ ಬೆಳೆ ಕಾಲಂನಲ್ಲಿ ಕುಷ್ಕಿ ಎಂದು ಅಧಿಕಾರಿಗಳು ನಮೂನೆ ಮಾಡುತ್ತಿದ್ದು, ರೈತರಿಗೆ ಯಾವುದೇ ರೀತಿಯ ಸಾಲ ಸೌಲಭ್ಯ ಸಿಗುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರ ಮೇಲೆ ವಿಧಾನಸಭೆ ಸ್ಪೀಕರ್ ಸೇರಿದಂತೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಮುಗಿಬಿದ್ದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಡಿ.ಪಿ.ರಾಜೇಗೌಡ ಆವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಲು ಕಂದಾಯ ಸಚಿವ ಅಶೋಕ್ ಆವರು ಮುಂದಾಗುತ್ತಿದ್ದಂತೆ ಸ್ಪೀಕರ್ ಕಾಗೇರಿ …

Read More »

ಅಧಿವೇಶನದ ಮೊದಲ ದಿನವೇ ವಿಧಾನಸಭೆ ಖಾಲಿ ಖಾಲಿ..!

ಬೆಂಗಳೂರು, ಡಿ.7- ಚಳಿಗಾಲದ ಅಧಿವೇಶನದ ಮೊದಲ ದಿನವೇ ವಿಧಾನಸಭೆ ಖಾಲಿ ಖಾಲಿ ಹೊಡೆದಿತ್ತು. ಆಡಳಿತ ಮತ್ತು ಪ್ರತಿಪಕ್ಷಗಳ ಸಾಲಿನಲ್ಲಿ ಬೆರಳೆಣಿಕೆಯಷ್ಟು ಸದಸ್ಯರು ಮಾತ್ರ ಹಾಜರಿದ್ದರು. ಉಳಿದಂತೆ ಬಹುತೇಕ ಆಸನಗಳು ಖಾಲಿ ಖಾಲಿಯಾಗಿದ್ದವು. ಆಡಳಿತ ಪಕ್ಷದಿಂದ ಮುಖ್ಯಮಂತ್ರಿ ಸೇರಿದಂತೆ 12 ಸಚಿವರು, 26 ಶಾಸಕರು, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‍ನ 25 ಶಾಸಕರು ಹಾಗೂ ಜೆಡಿಎಸ್‍ನಿಂದ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಐವರು ಶಾಸಕರು ಮಾತ್ರ ಹಾಜರಾಗಿದ್ದರು. ಸದನದ …

Read More »

ಭಾರತ್ ಬಂದ್‍ಗೆ ಕಾಂಗ್ರೆಸ್ -ಟಿಎಸ್‍ಆರ್ ಬೆಂಬಲ

ನವದೆಹಲಿ, ಡಿ.6- ಕೃಷಿಗೆ ಸಂಬಂಧಪಟ್ಟ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಕರೆ ನೀಡಲಾರಿಗುವ ಭಾರತ್ ಬಂದ್‍ಗೆ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜ್ಯಗಳು ಬೆಂಬಲ ಘೋಷಿಸಿವೆ. ಕೃಷಿ ಕಾನೂನುಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು. ಅವುಗಳನ್ನು ಸಂಸತ್‍ನಲ್ಲಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಪಂಜಾಬ್‍ನ ರೈತರು ದೆಹಲಿಗೆ ತೆರಳಿ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೂ ಕೇಂದ್ರ …

Read More »

ಫೈಝರ್ ಕೋವಿಡ್ ಲಸಿಕೆ ಬಳಕೆ ಬಗ್ಗೆ ಭಾರತದಲ್ಲಿ ಗೊಂದಲ

ನವದೆಹಲಿ: – ಕೊರೊನಾ ನಿಯಂತ್ರಣಕ್ಕೆ ತುರ್ತು ಸಂದರ್ಭದಲ್ಲಿ ಬಳಸಲು ಮಾನ್ಯತೆ ಪಡೆದಿರುವ ಫೈಝರ್ ಲಸಿಕೆ ಗುಣಮಟ್ಟದ ಬಗ್ಗೆ ಉತ್ಪಾದಕ ಕಂಪೆನಿಯೇ ಗೊಂದಲಕಾರಿ ಹೇಳಿಕೆ ನೀಡಿದೆ. ಇಂಗ್ಲೆಂಡ್ ಸರ್ಕಾರ ಮತ್ತು ಬಹರೈನ್ ಆರೋಗ್ಯ ಪ್ರಾಧಿಕಾರದಿಂದ ಅಂಗೀಕಾರ ಪಡೆದಿರುವ ಫೈಝರ್‍ಲಸಿಕೆಯನ್ನು ಕೊರೊನಾ ವಿರುದ್ಧ ಹೋರಾಟಕ್ಕೆ ತುರ್ತು ಸಂದರ್ಭದಲ್ಲಿ ಬಳಸಬಹುದೆಂದು ನಿರ್ಣಯಿಸಲಾಗಿದೆ. ಭಾರತ ಸರ್ಕಾರ ಕೂಡ ಈ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸಲು ಒಪ್ಪಿ ಕೊಂಡಿದ್ದು, ಲಕ್ಷಾಂತರ ಡೊಸೇಜ್‍ಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಈಗ ಫೈಝರ್‍ನ …

Read More »

ರಮೇಶ್ ಜಾರಕಿಹೊಳಿ ಮನಸು ಮಾಡಿದರೆ , ಗೋಕಾಕ್ ಜಿಲ್ಲೆ ಆಗಿಸಬಹುದು

ಗೋಕಾಕ : ಗ್ರಾ.ಪ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿನ್ನೆಯ ಮೇಲೆ ನಡೆಯುವುದಿಲ್ಲ. ಪರೋಕ್ಷವಾಗಿ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ. ಗೋಕಾಕ ನಲ್ಲಿ ಈ ಬಾರಿ ಚುನಾವಣೆಯಲ್ಲಿ  ಹೆಚ್ಚು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ವಿಶ್ವಾಸ ವ್ಯಕ್ತ ಪಡಿಸಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಭಾರೀ ತಯಾರಿಗಳು ನಡೆದಿವೆ. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬೆಂಬಲಿತ …

Read More »

ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು:ಪ್ರಿಯಾಂಕ್ರಾ ಚೋಪ್ರಾ

ನವದೆಹಲಿ: ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು ಎಂದು ಬಾಲಿವುಡ್ ನಟಿ ಪ್ರಿಯಾಂಕ್ರಾ ಚೋಪ್ರಾ ಮನವಿ ಮಾಡಿದ್ದಾರೆ.ಪ್ರಿಯಾಂಕಾ ಚೋಪ್ರಾ ಅವರು ಭಾನುವಾರ ರೈತರ ಪ್ರತಿಭಟನೆಯ ಸಂಬಂಧ ತಮ್ಮ ಟ್ವೀಟ್ ನಲ್ಲಿ ಹಂಚಿಕೊಂಡರು. ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿದರು ಮತ್ತು ಕೇಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ತಮ್ಮ ಕಳವಳವನ್ನು ತುರ್ತಾಗಿ ಪರಿಹರಿಸಬೇಕೆಂದು ಎಂದು ತಿಳಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ಗಾಯಕ-ನಟ ದಿಲ್ಜಿತ್ …

Read More »

ಗೋ ಕಡಿಯೋಕೆ ಅವಕಾಶ ಕೊಡ್ತೀವಿ ಅಂತ ತಾಕತ್ ಇದ್ರೆ ಘೋಷಣೆ ಮಾಡ್ಲಿ- ‘ಕೈ’ಗೆ ಈಶ್ವರಪ್ಪ ಸವಾಲ್

ಬೆಂಗಳೂರು: ಕಾಂಗ್ರೆಸ್ಸಿನವರು ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆ ಪ್ರಣಾಳಿಕೆಯಲ್ಲಿ ನಾವು ಗೋಹತ್ಯೆ ನಿಷೇಧ ಮಾಡಲ್ಲ ಅಂತ ಹೇಳಲಿ. ಗೋ ಕಡಿಯೋಕೆ ಅವಕಾಶ ಕೊಡ್ತೀವಿ ಅಂತ ತಾಕತ್ ಇದ್ದರೆ ಘೋಷಣೆ ಮಾಡಲಿ ಎಂದು ಸಚಿವ ಈಶ್ವರಪ್ಪ ಸವಾಲೆಸೆದಿದ್ದಾರೆ. ವಿಧಾನಸೌಧದಲ್ಲಿ ಲವ್ ಜಿಹಾದ್ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿ, ಗೋವನ್ನ ನಾವು ತಾಯಿ ಅಂತೀವಿ. ಗೋವನ್ನ ತಾಯಿ ಸ್ವರೂಪ ಅಂತ ನಾವು ಕಾಣ್ತೀವಿ. ನಮ್ಮ ತಾಯಿಗೆ ವಯಸ್ಸಾಯ್ತು …

Read More »

ಸುರೇಶ್ ಅಂಗಡಿಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು ಅಭಿಮಾನಿಗಳ ಒತ್ತಾಯ

ಬೆಳಗಾವಿ-ಸೋಲಿಲ್ಲದ ಸರದಾ,ಸರಳ ಸಜ್ಜನ ರಾಜಕಾರಣಿಯಾಗಿದ್ದ ಸುರೇಶ್ ಅಂಗಡಿ ಅವರನ್ನು ಅವರ ಅಭಿಮಾನಿಗಳು ಮರೆತಿಲ್ಲ,ಪ್ರತಿದಿನ ಅವರ ಮನೆಗೆ ಅಭಿಮಾನಿಗಳ ದಂಡು ಹರಿದು ಬರುತ್ತಿದೆ. ಸುರೇಶ ಅಂಗಡಿಯವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕೋರಿ ವಿವಿಧ ಗ್ರಾಮಗಳ ಅವರ ಅಭಿಮಾನಿಗಳು ಹಾಗೂ ಭಾಜಪ ಕಾರ್ಯಕರ್ತರು ಇಂದು ಅವರ ಕುಟುಂಬ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದಾರೆ.ಸುರೇಶ್ ಅಂಗಡಿ ಅವರು ಬಿಜೆಪಿ ಕಾರ್ಯಕರ್ತರ ಜೀವಾಳವಾಗಿದ್ದರು.ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು …

Read More »

ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳ ಸಭೆ

ಬೆಳಗಾವಿ- ಕೇಂದ್ರ ಸರ್ಕಾರದ ರೈತ ವಿರೋಧ ನಿಲುವು ಖಂಡಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಬೆಳಗಾವಿ ಡಾ. ಬಿ ಆರ್ ಅಂಬೇಡ್ಕರ್ ಗಾರ್ಡನ್ ನಲ್ಲಿ ಸಭೆ ನಡೆಸಿದ ರೈತ ಮುಖಂಡರು, ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ರೈತ ಸಂಘಟನೆ, ‌ಕಾರ್ಮಕ ಸಂಘಟನೆ, ಕನ್ನಡ ಪರ ಸಂಘಟನೆ, ಆಟೋ ಚಾಲಕರ ಸಂಘಟನೆ ಬೆಂಬಲ …

Read More »