Breaking News

Daily Archives: ಡಿಸೆಂಬರ್ 15, 2020

ಕುಖ್ಯಾತ ರೌಡಿ ಲಿಂಗರಾಜನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು : 16 ಆರೋಪಿಗಳು ಅಂದರ್

ಹಾಸನ,- ಚನ್ನರಾಯಪಟ್ಟಣ ತಾಲೂಕು ಹಿರೀಸಾವೆ ಹಿರೀಸಾವೆ ಪೊಲೀಸ್ ಠಾಣಾ ಸರಹದ್ದಿನ ಕಮವರಳ್ಳಿಯಲ್ಲಿ ವಾರದ ಹಿಂದೆ ನಡೆದಿದ್ದ ಬೆಂಗಳೂರಿನ ಕುಖ್ಯಾತರೌಡಿ ಶೀಟರ್ ಲಿಂಗರಾಜನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 16 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೋಹನ @ ಡಬ್ಬಲ್ ಮೀಟರ್ ಮೋಹನ, ನಂಜಪ್ಪ @ ನಂಜ @ ಕರಿಯ, ನಾಗರಾಜ @ ನಾಗ, ಗ್ರೇಸ್ ವಾಲ್ಟರ್ @ ವಾಲ್ಟರ್, ನವೀನ್‍ ಕುಮಾರ, ಪ್ರದೀಪ @ ದಾಸರಹಳ್ಳಿ ಪ್ರದೀಪ, ಸುನೀಲ್‍ಕುಮಾರ @ ಸುನೀಲ್, …

Read More »

ಸುದ್ದಿಗಳ ಸತ್ಯಾಸತ್ಯತೆ ಪರಾಮರ್ಶಿಸಿ ಪ್ರಕಟಿಸಬೇಕು: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಯಾವುದೇ ಸುದ್ದಿ ಇರಲಿ ಪ್ರತ್ಯಕ್ಷವಾಗಿ ನೋಡಿದರೂ ಪ್ರಮಾಣಿಸಿ ನೋಡು ಎಂಬಂತೆ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದ ಬಳಿಕವೇ ಮಾಧ್ಯಮಗಳು ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಾಧ್ಯಮದವರಿಗಾಗಿ ಏರ್ಪಡಿಸಲಾಗಿದ್ದ “ಫ್ಯಾಕ್ಟ್ ಚೆಕ್” ಕುರಿತ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಸುದ್ದಿಗಳಿಂದ ಕೆಲವೊಮ್ಮೆ ಜನರಲ್ಲಿ …

Read More »

ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಪೋರ್ಟ್ಸ್ ಇಂಡೋರ್ ಸ್ಟೇಡಿಯಂ ನಿರ್ಮಿಸಲು ಶಾಸಕ ಅಭಯ ಪಾಟೀಲ ಪ್ರಸ್ತಾವನೆ

ಬೆಳಗಾವಿ: ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಪೋರ್ಟ್ಸ್ ಇಂಡೋರ್ ಸ್ಟೇಡಿಯಂ ನಿರ್ಮಿಸಲು ಶಾಸಕ ಅಭಯ ಪಾಟೀಲ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದ್ದಾರೆ. ಬೆಳಗಾವಿಯ ಯಳ್ಳೂರು ಗ್ರಾಮದ ಹದ್ದಿಯಲ್ಲಿರುವ 40 ಎಕರೆ ಸರ್ಕಾರಿ ಜಾಗದಲ್ಲಿ ಸುಧಾರಿತ ಶೈಲಿಯಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಶಾಸಕ ಅಭಯ ಪಾಟಲ ಇಂದು ಕ್ರೀಡಾ ಇಲಾಖೆಯ ಆಯುಕ್ತ ಶ್ರೀನಿವಾಸ ಜೊತೆಗೆ ಯಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಜಾಗ ಪರಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಅಭಯ ಪಾಟೀಲ, ಬೆಳಗಾವಿ ನಗರ …

Read More »

ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ರವಿಶಂಕರ್ ಗುರೂಜಿ ಆಯ್ಕೆ

ಗೋಕಾಕ: ಪ್ರತಿ ವರ್ಷ ಶ್ರೀ ಮಠದಿಂದ ಕೊಡಮಾಡುವ ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ರವಿಶಂಕರ್ ಗುರೂಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದ ೧೬ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡುತ್ತಿದ್ದರು. ಈ ಬಾರಿಯು ಲಿಂಗೈಕ್ಯ ಬಸವ …

Read More »

ಶೀಲ ಶೆಂಕಿಸಿ ಪತಿಯೇ ತನ್ನ ಪತ್ನಿಯನ್ನು ಸಲಾಕೆಯಿಂದ ಹೊಡೆದು ಕೊಲೆ

ಯಾದಗಿರಿ: ಶೀಲ ಶೆಂಕಿಸಿ ಪತಿಯೇ ತನ್ನ ಪತ್ನಿಯನ್ನು ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಯಾದಗಿರಿ ತಾಲೂಕಿನ ಮಾಧ್ವಾರ ಗ್ರಾಮದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಮಾಧ್ವಾರ ಗ್ರಾಮದ ರೇಣುಕಾಳನ್ನು ಆಕೆಯ ಪತಿ ಚೌಡಪ್ಪ ಕೊಲೆ ಮಾಡಿದ್ದಾನೆ. ರೇಣುಕಾ ಮತ್ತು ಚೌಡಪ್ಪ ಕಳೆದ ಒಂಭತ್ತು ವರ್ಷದಿಂದ ದಾಂಪತ್ಯ ನಡೆಸುತ್ತಿದ್ದರು. ಈ ಇಬ್ಬರಿಗೆ ಒಬ್ಬ ಮಗ ಕೂಡ ಇದ್ದಾನೆ. ಆದರೆ ಮೊದಲಿಂದಲೂ ಚೌಡಪ್ಪ ರೇಣುಕಾಳ ಶೀಲ ಶೆಂಕಿಸಿ ಜಗಳ …

Read More »

ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿರುವ ಘಟನೆ ನಡೆದಿದೆ.

ಬೆಂಗಳೂರು: ಇಂದು ಕರೆಯಲಾಗಿದ್ದ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿರುವ ಘಟನೆ ನಡೆದಿದೆ. ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಸಭಾಪತಿ ಕುರ್ಚಿಯಲ್ಲಿ ಉಪಸಭಾಪತಿ ಧರ್ಮೇಗೌಡ ಕುಳಿತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು ಗದ್ದಲ ಆರಂಭಿಸಿದ್ದಾರೆ. ಪರಿಷತ್ ಉಪಸಭಾಪತಿಯನ್ನು ಕುರ್ಚಿಯಿಂದ ಕೆಳಗೆಳೆದು ತಂದಿದ್ದಾರೆ. ಈ ವೇಳೆ ಬಿಜೆಪಿ ಸದಸ್ಯರು ಮಧ್ಯಪ್ರವೇಶಿಸಿದ್ದಾರೆ. ಒಂದು ಹಂತದಲ್ಲಿ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಸದಸ್ಯರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಕೊರಳಪಟ್ಟಿ ಹಿಡಿದು ಎಳೆದಾಡಿಕೊಂಡಿದ್ದಾರೆ. ತಳ್ಳಾಟದ ವೇಳೆ …

Read More »

ಕೃಷ್ಣಾ ನದಿಯಲ್ಲಿ ಮುಳುಗಿ ಯುವಕ ಸಾವು

ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದ ಹನುಮಾನ ದೇವರ ಕಾರ್ತಿಕೋತ್ಸವದ ಅಂಗವಾಗಿ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಗಂಗಾ ಸ್ನಾನಕ್ಕೆಂದು ನದಿಗೆ ಹೋದಾಗ, ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾಂತೇಶ ಕವಡಿಮಟ್ಟಿ(19) ಮೃತ ಯುವಕ. ಸೆಳ್ಳಗಿ ಗ್ರಾಮದ ಬಳಿಯಲ್ಲಿನ ಕೃಷ್ಣಾ ನದಿಗೆ ಹನುಮಾನ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಹೋಗಲಾಗಿತ್ತು. ಈ ವೇಳೆ ಗಂಗಾ ಸ್ನಾನಕ್ಕೆಂದು ತೆರಳಿದ ವೇಳೆ ನೀರಿನ ಸುಳಿವಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ. ಯುವಕನ ಸಾವಿನ …

Read More »

ಸಂಸತ್ ನ ಈ ವರ್ಷದ ಚಳಿಗಾಲದ ಅಧಿವೇಶನ ರದ್ದು

ಹೊಸದಿಲ್ಲಿ: ಕೊರೋನ ವೈರಸ್ ಹಾವಳಿಯ ಕಾರಣಕ್ಕೆ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಕೋವಿಡ್-19 ಹರಡುವುದನ್ನು ತಡೆಯಲು ಹಾಗೂ ಜನವರಿಯಲ್ಲಿ ನೇರವಾಗಿ ಬಜೆಟ್ ಅಧಿವೇಶನ ನಡೆಸುವ ಉದ್ದೇಶದಿಂದ ಚಳಿಗಾಲದ ಅಧಿವೇಶನ ರದ್ದುಪಡಿಸುವ ಕುರಿತಂತೆ ಸರ್ವಪಕ್ಷಗಳು ಒಲವು ಹೊಂದಿವೆ ಎಂದು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದಿಲ್ಲಿಯ ಹೈವೇಗಳಲ್ಲಿ ಸಾವಿರಾರು ರೈತರು ವಿವಾದಾತ್ಮಕ ರೈತ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡಸುತ್ತಿರುವ …

Read More »

ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಹೆಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ …

Read More »

ಯಾವುದೇ ಶಾಲೆಗೆ ಮಕ್ಕಳ ಮರು ದಾಖಲಾತಿ ಕಡ್ಡಾಯ; ಸಚಿವ ಸುರೇಶ್ ಕುಮಾರ್

ಬೆಂಗಳೂರು: ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಪೋಷಕರ ಕರ್ತವ್ಯವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಲು ಮುಂದಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳೊಂದಿಗೆ ಶಾಲಾ ಮಂಡಳಿಗಳು, ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಉಪಕ್ರಮಗಳ ಕುರಿತು …

Read More »