ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, 60 ಲಕ್ಷ ಟನ್ ಸಕ್ಕರೆಯನ್ನು ರೈತರಿಂದ ಖರೀದಿಸಿ ವಿದೇಶಗಳಿಗೆ ರಫ್ತು ಮಾಡಲು ನಿರ್ಧರಿಸಲಾಗಿದೆ. ಹೀಗೆ ಬಂದ ಹಣವನ್ನು ರೈತರ ಖಾತೆಗೆ ಜಮಾವಣೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ ಎಂದು ಕೇಂದ್ರ ಸಚಿವ …
Read More »Daily Archives: ಡಿಸೆಂಬರ್ 16, 2020
ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ
ಮಂಗಳೂರು: ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್, ಮಹಿಳಾ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಂದರು ಠಾಣಾ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಿಸುವುದರ ಜತೆಗೆ ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮತದಾರರ ಪಟ್ಟಿಯ ಪರಿಷ್ಕರಣೆ
ಬೆಳಗಾವಿ : ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಿಸುವುದರ ಜತೆಗೆ ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ನಡೆಸಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕ(ರೋಲ್ ಅಬ್ಸರ್ವರ್) ಎಲ್.ಕೆ.ಅತೀಕ್ ಸೂಚನೆ ನೀಡಿದರು. ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಡಿ.16) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಶೇ.71 ರಷ್ಟು ಜನರ …
Read More »ನಾಳೆಯಿಂದ ಇಂಡೋ- ಆಸೀಸ್ `ಟೆಸ್ಟ್
ಅಡಿಲೇಡ್, ಡಿ.15- ಟೆಸ್ಟ್ ವಿಶ್ವಕಪ್ ಫೈನಲ್‍ಗೇರಲು ಹೋರಾಟ ನಡೆಸುತ್ತಿರುವ ವಿರಾಟ್ ಕೊಹ್ಲಿ ಬಳಗದ ಟೀಂ ಇಂಡಿಯಾವು ನಾಳೆಯಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಅಗ್ನಿ ಪರೀಕ್ಷೆಯನ್ನು ಎದುರಿಸುತ್ತಿದೆ. ನಾಲ್ಕು ಪಂದ್ಯಗಳ ಟೆಸ್ಟ್‍ನಲ್ಲಿ ಭಾರತವು ಗೆದ್ದು ತಮ್ಮಲ್ಲೇ ಟ್ರೋಫಿ ಉಳಿಸಿಕೊಳ್ಳಲು ಮುಂದಾಗಿದ್ದರೆ, ತವರಿನಲ್ಲಿ ಮಿಂಚುವ ಮೂಲಕ ಕಳೆದ ಬಾರಿಯ ಸೋಲಿನ ಸೇಡು ತೀರಿಸಿಕೊಳ್ಳಲು ಟ್ರಾವಿಸ್ ಹೆಡ್ ಬಳಗ ಸಜ್ಜಾಗಿದೆ. #ಪಿಂಕ್ ಬಾಲ್ ಟೆಸ್ಟ್: ಅಡಿಲೇಡ್ ನಡೆಯಲಿರುವ ಮೊದಲ ಟೆಸ್ಟ್ …
Read More »ಹೊಸ ವರ್ಷಕ್ಕೆ ಕಿಕ್ಕೇರಿಸಲು ರೆಡಿಯಾಗಿದ್ದ ಡ್ರಗ್ಸ್ ಪೆಡ್ಲರ್‌ಗಳ ಬಂಧನ..!
ಬೆಂಗಳೂರು, ಡಿ.16- ಮಾದಕ ವಸ್ತುಗಳನ್ನು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ ಅಂತಾರಾಜ್ಯ ನಾಲ್ವರು ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1 ಕೋಟಿ 15 ಲಕ್ಷ ಬೆಲೆಯ ಹ್ಯಾಶಿಶ್ ಆಯಿಲ್, ಗಾಂಜಾ ವಶಪಡಿಸಿಕೊಂಡಿದ್ದಾರೆ. ತಮಿಳುನಾಡು ಕೃಷ್ಣಗಿರಿಯ ಕಮಲೇಶನ್ (31), ಸತೀಶ್‍ಕುಮಾರ್ (27), ಹೆಬ್ಬಾಳದ ಕೆಂಪಾಪುರದ ತಿರುಪಾಲ್ ರೆಡ್ಡಿ (32) ಮತ್ತು ಆರ್‍ಟಿ ನಗರದ ಏಜಾಜ್ ಪಾಷ (45) ಬಂಧಿತ ಡ್ರಗ್ ಪೆಡ್ಲರ್‍ಗಳು. ಅಮೃತಹಳ್ಳಿ …
Read More »ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ
ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, …
Read More »ಗೋಕಾಕ: ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ
ಗೋಕಾಕ: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ (45) ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮಧ್ಯಾಹ್ನ 12.30ಕ್ಕೆ ನೆರವೇರಿಸಲಾಯಿತು.ಬುಧವಾರದಂದು ಬೆಳಿಗ್ಗೆ 11.00ಕ್ಕೆ ಯೋಧ ಕಲ್ಲಪ್ಪ ಅವರ ಪಾರ್ಥಿವ ಶರೀರ ಗೋವಾ ಮಾರ್ಗವಾಗಿ ಲೋಳಸೂರ ಗ್ರಾಮಕ್ಕೆ ತಲುಪಿತು. ಅವರ ಜಮೀನಿನಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಯಿತು. ನೂರಾರು ಜನ ಆಗಮಿಸಿ ಅಂತಿಮ ದರ್ಶನ ಪಡೆದರು. ಯೋಧ ಕಲ್ಲಪ್ಪ ಬಾಂವಚಿ …
Read More »ಗೋಕಾಕ: ಡಿ. 19 ರಂದು ಎಸ್ಎಸ್ಎಲ್ ಸಿ, ಪಿಯುಸಿ ಟಾಪರ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
ಗೋಕಾಕ: ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ವತಿಯಿಂದ ಡಿ. 19 ರಂದು ಮುಂಜಾನೆ 10 ಘಂಟೆಗೆ ನಗರದ ಕೆ.ಎಲ್.ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಮಗದುಮ್ಮ ಹೇಳಿದರು. ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಎಸ್ ಎಲ್ …
Read More »ಮನೆ ಪಾಠಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ
ಬೆಂಗಳೂರು: ಮನೆ ಪಾಠಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ ನಡೆಸಿರುವ ಘಟನೆಯೊಂದು ಮಾಚೋಹಳ್ಳಿಯಲ್ಲಿ ನಡೆದಿದೆ. ರವಿ ಕಿರಣ್ ಅಲಿಯಾಸ್ ಕಿರಣ್ (26) ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. ಆರೋಪಿಯ ಪತ್ನಿ ಟ್ಯೂಷನ್ ನಡೆಸುತ್ತಿದ್ದರು. ಆರೋಪಿ ಕ್ಯಾಬ್ ಚಾಲಕನಾಗಿದ್ದನೆಂದು ವರದಿಯಾಗಿದೆ. ವರ್ಷದ ಹಿಂದೆ ಘಟನೆ ನಡೆದಿದ್ದು, ಇದೀಗ ಘಟನೆ ಬೆಳಕಿಗೆ ಬಂದಿದೆ. 10ನೇ ತರಗತಿ ಓದುತ್ತಿದ್ದ ಬಾಲಕಿ ಮನೆಪಾಠಕ್ಕೆಂದು ಶಿಕ್ಷಕಿಯ ಮನೆಗೆ ಬಂದಿದ್ದಾಳೆ. ಈ ವೇಳೆ ಶಿಕ್ಷಕಿ ಮನೆಯಲ್ಲಿರಲಿಲ್ಲ …
Read More »ರಾಜೀನಾಮೆ ನೀಡಲು ಮುಂದಾಗಿದ್ದಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿಕಾಂಗ್ರೆಸ್ ಅವರನ್ನು ತಡೆದಿದೆ.
ಬೆಂಗಳೂರು,ಡಿ.16- ವಿಧಾನಪರಿಷತ್‍ನಲ್ಲಿ ನಿನ್ನೆ ನಡೆದ ಕೋಲಾಹಲದ ಹಿನ್ನೆಲೆಯಲ್ಲಿ ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ರಾಜೀನಾಮೆ ನೀಡಲು ಮುಂದಾಗಿದ್ದರಾದರೂ ಕಾಂಗ್ರೆಸ್ ಅವರನ್ನು ತಡೆದಿದೆ. ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ಅವರು ಇಷ್ಟೆಲ್ಲಾ ರಂಪಾಟವಾದ ಮೇಲೂ ಹುದ್ದೆಯಲ್ಲಿ ಮುಂದುವರೆದರೆ ತಾವು ಅಧಿಕಾರಕ್ಕೆ ಅಂಟಿಕೊಂಡವರು ಎಂಬ ತಪ್ಪು ಸಂದೇಶ ರವಾನೆಯಾಗುತ್ತದೆ. ಸಭಾಪತಿ ಹುದ್ದೆಗೆ ಅದು ಘನತೆ ತರುವುದಿಲ್ಲ. ಹಾಗಾಗಿ ನಾನು ರಾಜೀನಾಮೆ ನೀಡುತ್ತೇನೆ ಎಂದು ಅವಿಶ್ವಾಸ ಮಂಡನೆಯಾದ ದಿನದಿಂದಲೂ ಆಂತರಿಕವಾಗಿ ಹೇಳುತ್ತಲೇ ಬಂದಿದ್ದಾರೆ. ಆದರೆ ಅದಕ್ಕೆ ಪ್ರತಿಪಕ್ಷದ …
Read More »