ವಿಜಯಪುರ(ಡಿಸೆಂಬರ್. 25): ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುತ್ತೋ, ಬದಲಾವಣೆಯಾಗುತ್ತೋ ಗೊತ್ತಿಲ್ಲ. ಮತ್ತೇನಾದರೂ ಆಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸದಾಗಿ ರಾಜಕೀಯ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ, ಬದಲಾವಣೆ ಬಗ್ಗೆ ನೀವು ಮಾಧ್ಯಮದವರೇ ಅದನ್ನು ಎಬ್ಬಿಸಿದ್ದೀರಿ. ನೀವು ಯಾವಾಗ ಯಾರ ಪರವಾಗಿ ಸುದ್ದಿ ಬಿತ್ತರಿಸುತ್ತಿರೋ ಗೊತ್ತಿಲ್ಲ. ಎಲ್ಲವೂ …
Read More »Daily Archives: ಡಿಸೆಂಬರ್ 25, 2020
ಬೆಳಗಾವಿಯಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನಾಚರಣೆ, ಕಿಸಾನ್ ಸಮ್ಮಾನ ಕಾರ್ಯಕ್ರಮ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ, ನಗರ, ಗ್ರಾಮೀಣ ಮಂಡಳ ಘಟಕಗಳ ಆಶ್ರಯದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವನಾಚೆ ಮಾತನಾಡಿ, …
Read More »ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆಕ್ರೋಶ
ವಿಜಯಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 16ರಂದು ವಿಜಯಪುರಕ್ಕೆ ಆಗಮಿಸುತ್ತಿದ್ದಾರೆ ಸಂಪುಟ ವಿಸ್ತರಣೆಯಾಗುತ್ತೋ, ಇನ್ನೇನು ಆಗುತ್ತೋ ಎಂಬುದು ಗೊತ್ತಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಯತ್ನಾಳ್ ಓರ್ವ ಆರ್ಡಿನರಿ ಶಾಸಕ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಯತ್ನಾಳ್ ಪಕ್ಷದ ಅಧ್ಯಕ್ಷರಲ್ಲ, ಅವರೊಬ್ಬ ಆರ್ಡಿನರಿ ಶಾಸಕ. ಬೀದಿಯಲ್ಲಿ ನಿಂತು ಮಾತನಾಡುವುದು ಅವರಿಗೆ ಶೋಭೆ ತರಲ್ಲ. ಪಕ್ಷದ ಚೌಕಟ್ಟಿನಲ್ಲಿ …
Read More »ಪ್ರಧಾನಿ ಮೋದಿಯವರು ತಾವು ಪ್ರಧಾನಿಯಲ್ಲ, ಸಾಮಾನ್ಯ ಸೇವಕ ಎನ್ನುವಾಗ ನಾನು ಸಾಮಾನ್ಯ ಕಾರ್ಯಕರ್ತನೆ
ವಿಜಯಪುರ: ಯತ್ನಾಳ್ ಓರ್ವ ಆರ್ಡಿನರಿ ಶಾಸಕ ಎಂಬ ಕೇಂದ್ರ ಸಚಿವ ಸದಾನಂದಗೌಡ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸದಾನಂದಗೌಡ ಹೇಳಿದ್ದು ನೂರಕ್ಕೆ ನೂರರಷ್ಟು ನಿಜ. ಒಳ್ಳೆಯ ಸಲಹೆ ನೀಡಿದ್ದಾರೆ. ನಮ್ಮ ಪ್ರಧಾನಿ ಮೋದಿಯವರು ತಾವು ಪ್ರಧಾನಿಯಲ್ಲ, ಸಾಮಾನ್ಯ ಸೇವಕ ಎನ್ನುವಾಗ ನಾನು ಸಾಮಾನ್ಯ ಕಾರ್ಯಕರ್ತನೆ ಎಂದು ಹೇಳಿದ್ದಾರೆ. ನಾನು ಓರ್ವ ಸಾಮಾನ್ಯ ಶಾಸಕ. ರಾಷ್ಟ್ರೀಯ ನಾಯಕ ಎಂದು ನಾನೆಲ್ಲೂ ಹೇಳಿಲ್ಲ. ನಾನು ವಾಜಪೇಯಿ ಅವಧಿಯಲ್ಲಿ ಕೇಂದ್ರ ಸಚಿವನಾಗಿದ್ದೆ. ಡಿ.ವಿ.ಸದಾನಂದಗೌಡರು …
Read More »ಕಬ್ಬನ್ನು ಸಾಗಿಸಲು ಎತ್ತಿನ ಗಾಡಿಗಳನ್ನು ಬಳಸುವ ಮೂಲಕ ಪ್ರಾಣಿಗಳಿಗೆ ಚಿತ್ರಹಿಂಸೆ ನೀಡುವ ಪದ್ಧತಿಗೆ ಕಡಿವಾಣ ಹಾಕಬೇಕೆಂದ ಡಾ.ಸೋನಾಲಿ ಸರ್ನೋಬತ್
, ಬೆಳಗಾವಿ– ಮಿತಿ ಮೀರಿದ ಪ್ರಮಾಣದಲ್ಲಿ ಕಬ್ಬನ್ನು ಸಾಗಿಸಲು ಎತ್ತಿನ ಗಾಡಿಗಳನ್ನು ಬಳಸುವ ಮೂಲಕ ಪ್ರಾಣಿಗಳಿಗೆ ಚಿತ್ರಹಿಂಸೆ ನೀಡುವ ಪದ್ಧತಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ, ನಿಯತಿ ಫೌಂಡೇಶನ್ ಚೆರಮನ್, ಭಾರತೀಯ ಜನತಾಪಾರ್ಟಿಯ ಬೆಳಗಾವಿ ಗ್ರಾಮೀಣ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಒತ್ತಾಯಿಸಿದ್ದಾರೆ. ಡಾ.ಸೋನಾಲಿ ಸರ್ನೋಬತ್ ಈ ಕುರಿತು ರಾಜ್ಯ ಪಶುಸಂಗೋಪನೆ ಸಚಿವ ಪ್ರಭು ಚೌಹ್ವಾಣ್, ಬೆಳಗಾವಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮತ್ತು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ …
Read More »ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು
ಗೋಕಾಕ: ಕಳೆದ ದಿ.22 ರಂದು ನಡೆದ ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು ಅದರ ನಿಮಿತ್ಯವಾಗಿ ಶುಕ್ರವಾರದಂದು ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮತ ಏಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಏಣಿಕೆ ಮೇಲ್ವಿಚಾರಕರಿಗೆ ಹಾಗೂ ಸಿಬ್ಬಂದಿಗೆ ಒಂದು ದಿನದ ತರಬೇತಿಥಿಟಿಜಿಟಿu ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನೀಡಲಾಯಿತು. ನಂತರ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರು, ದಿ. …
Read More »ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ
ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …
Read More »ಗ್ರಾಪಂ. ಚುನಾವಣೆ : ಅಧಿಕಾರಕ್ಕಾಗಿ ಸವದಿ-ಕುಮಠಳ್ಳಿ ಬೆಂಬಲಿಗರ ಫೈಟ್ !
ಬೆಳಗಾವಿ : ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಪಂ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಮಹೇಶ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. ಅಥಣಿ ತಾಲ್ಲೂಕಿನ 149 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್ 27 ಕ್ಕೆ ಚುನಾವಣೆ ನಿಗದಿಯಾಗಿದೆ. 56 ಸದಸ್ಯರನ್ನು ಹೊಂದಿರುವ ಸಂಕೋನಟ್ಟಿ ಪಂಚಾಯಿತಿಯಲ್ಲಿ ಬಹುಮತ ಸಾಧಿಸಲು ಬಿಜೆಪಿ ಎರಡೂ ಬಣಗಳು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ …
Read More »ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನ ರೇಪ್ ಮಾಡಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್
ಬೆಂಗಳೂರು(ಡಿ. 25): ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನ ರೇಪ್ ಮಾಡಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ, ಹಾಗೂ ಪದೇ ಪದೇ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಆನ್ಲೈನ್ ಫೂಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯ ಮೂಲದ ಸಾಗರ್ ಗೌಡ ಬಂಧಿತನಾಗಿರುವ ಆರೋಪಿಯಾಗಿದ್ದಾನೆ. ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ …
Read More »ಗೋವಾದ ಲಾಡ್ಜ್ ಒಂದರಲ್ಲಿ ವೇ-ಶ್ಯಾವಾಟಿಕೆ ಮಾಡುತ್ತಿದ್ದ ಕನ್ನಡ ನಟಿ ಬಂಧನ!
ಗೋವಾದ ಲಾಡ್ಜ್ ಒಂದರಲ್ಲಿ ವೇ-ಶ್ಯಾವಾಟಿಕೆ ಮಾಡುತ್ತಿದ್ದ ಕನ್ನಡ ನಟಿ ಬಂಧನ! ಶಾಕಿo-ಗ್ ಸತ್ಯ ಈಗ ಲೀ- ಬಣ್ಣದ ಲೋಕ ಎಲ್ಲರನ್ನು ಕೈಬೀಸಿ ಕರೆಯುತ್ತದೆ. ಹಲವಾರು ಕಲಾವಿದರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು, ಯಶಸ್ಸು ಪಡೆಯುತ್ತಾರೆ. ಸಿನಿರಂಗದಲ್ಲಿ ಕೆಲವು ವರ್ಷಗಳು ನಂತರ ಎಲ್ಲಾ ಕಲಾವಿದರಿಗೂ ಒಂದೇ ರೀತಿ ಅವಕಾಶಗಳು ಸಿಗುವುದಿಲ್ಲ. ಕೆಲವರಿಗೆ ನಟನೆಯಲ್ಲಿ ಅವಕಾಶ ಕಡಿಮೆ ಆಗಿ, ಅವರ ಆರ್ಥಿಕ ಸ್ಥಿತಿ ಹದಗೆಡುತ್ತದೆ. ಅಂತಹ ಸಮಯದಲ್ಲಿ ಕೆಲವು ಕಲಾವಿದರು ತಮ್ಮ ಜೀವನ ನಡೆಸಲು …
Read More »