ಕೊಡಗು: ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ನಿರಂತರವಾಗಿ ಸರ್ಕಾರಿ ರಜೆ ಬಂದಿದ್ದೇ ತಡ, ಕೊಡಗು ಜಿಲ್ಲೆಗೆ ಸಾವಿರಾರು ಪ್ರವಾಸಿಗರು ದಾಂಗುಡಿ ಇಟ್ಟಿದ್ದಾರೆ. ಹೀಗಾಗಿ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ದುಬಾರೆ, ದುಬಾರೆ ಸಾಕಾನೆ ಶಿಬಿರ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಸಾವಿರಾರು ಪ್ರಯಾಣಿಕರು ತುಂಬಿ ತುಳುಕುತಿದ್ದಾರೆ. ಆದರೆ ಎಲ್ಲೆಡೆ ಸಾಮಾಜಿಕ ಅಂತರ ಮಾತ್ರ ಸಂಪೂರ್ಣ ಮಾಯವಾಗಿಬಿಟ್ಟಿದೆ. ಹೌದು, ವಿಶ್ವ ಪ್ರಸಿದ್ಧ ದುಬಾರೆ ಸಾಕಾನೆ …
Read More »Daily Archives: ಡಿಸೆಂಬರ್ 26, 2020
ಸುರೇಶ ಅಂಗಡಿ ಪುತ್ರಿ ಹಾಗೂ ಸಚಿವ ಜಗದೀಶ ಶೆಟ್ಟರ್ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್ ರಾಜಕೀಯದಲ್ಲಿ ಸಕ್ರಿಯ ನಮಗೆ ಟಿಕೆಟ್ ಕೊಡುವಂತೆ ಲಾಭಿ ಆರಂಭಿಸಿದ್ದಾರೆ.
ಬೆಳಗಾವಿ(ಡಿ.25): ಕೇಂದ್ರ ಸಚಿವ ಸುರೇಶ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವು ಆಗಿದೆ. ಈ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಈಗಾಗಲೇ ಆಯೋಗ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕಸರತ್ತುಆರಂಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಲ್ಲಿ 20ಕ್ಕೂ ಹೆಚ್ಚು ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿದ್ದಾರೆ. ಇದೀಗ ದಿ. ಸುರೇಶ ಅಂಗಡಿ ಪುತ್ರಿ ಹಾಗೂ ಸಚಿವ ಜಗದೀಶ ಶೆಟ್ಟರ್ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್ …
Read More »ರೋಗಿ ಕುಟುಂಬಸ್ಥರು, ಆಸ್ಪತ್ರೆ ನಡುವೆ ಹಗ್ಗಜಗ್ಗಾಟ; ಸಚಿವ ಸುಧಾಕರ್ ಮಧ್ಯ ಪ್ರವೇಶದ ಬಳಿಕ ಮೃತದೇಹ ಹಸ್ತಾಂತರ
ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರ ವಿಷಯದಲ್ಲಿ ಕಗ್ಗಂಟಾಗಿದ್ದ ಪ್ರಕರಣ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮಧ್ಯ ಪ್ರವೇಶದಿಂದ ಬಗೆಹರಿದಿದೆ. ರಾಜಸ್ಥಾನ ಮೂಲದ ಭೀಮರಾಮ್ ಪಟೇಲ್ ಎಂಬ ಅರವತ್ತೆರಡು ವರ್ಷದ ವ್ಯಕ್ತಿ ಮೃತಪಟ್ಟಿದ್ದು ಹೆಚ್ಚುವರಿ ಬಿಲ್ ಪಾವತಿ ವಿಷಯದಲ್ಲಿ ಕುಟುಂಬ ಸದಸ್ಯರು ಮತ್ತು ಜಯನಗರದಲ್ಲಿರುವ ಮಣಿಪಾಲ್ ಆಸ್ಪತ್ರೆ ಆಡಳಿತ ಸಿಬ್ಬಂದಿ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಮಾತ್ರವಲ್ಲ, ನಲವತ್ತು ದಿನಗಳ ಚಿಕಿತ್ಸೆ ಪಡೆದರೂ ಕೊರೋನಾ ಸೋಂಕು ನಿವಾರಣೆ ಆಗಲಿಲ್ಲ, ಆದರೂ ದೊಡ್ಡ …
Read More »ಪ್ರಧಾನಿ ಸಂವಾದದ ವೇಳೆ ನಿದ್ರೆಗೆ ಜಾರಿದ ಸಿಎಂ, B.S.Y.ಸದಾನಂದ ಗೌಡ,& ಕಾರಜೊಳ
ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸುವ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನಿದ್ರೆಗೆ ಜಾರಿದ್ದರು. ಈ ಕುರಿತ ವೀಡಿಯೋ ಈಗ ವೈರಲ್ ಆಗಿದೆ. ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ 6 ರಾಜ್ಯಗಳ ರೈತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಬೆಂಗಳೂರಿನಲ್ಲಿ ಕಾರ್ಯಕ್ರಮ ವೀಕ್ಷಿಸುತ್ತಿದ್ದ ವೇಳೆ ಈ ಮೂವರೂ ಸಾಲಿನಲ್ಲಿ ಕುಳಿತು ನಿದ್ದೆಗೆ ಜಾರಿದ್ದರು.
Read More »