Breaking News

Daily Archives: ಡಿಸೆಂಬರ್ 27, 2020

ಎರಡನೇ ಹಂತದ ಚುನಾವಣೆ: 1789 ಮತಗಟ್ಟೆಗಳು ಚಿಕ್ಕೋಡಿ, ರಾಯಬಾಗಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ

ಬೆಳಗಾವಿ: ಎರಡನೇ ಹಂತದಲ್ಲಿ‌ ಗ್ರಾಮ‌ ಪಂಚಾಯತಿ ಚುನಾವಣೆ ನಡೆಯಲಿರುವ ಚಿಕ್ಕೋಡಿ ಮತ್ತು ರಾಯಬಾಗ ತಾಲ್ಲೂಕುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಸ್ಟರಿಂಗ್, ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಮ್ ಸೇರಿದಂತೆ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು. ಎರಡೂ ತಾಲ್ಲೂಕುಗಳಿಗೆ ಶನಿವಾರ (ಡಿ.27) ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮಸ್ಟರಿಂಗ್ ವ್ಯವಸ್ಥೆ ಮತ್ತು ‌ಮತ ಎಣಿಕೆ‌ ಕೇಂದ್ರಗಳನ್ನು ವೀಕ್ಷಿಸಿದರು. ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. …

Read More »

ಜನವರಿ ಒಂದರಿಂದ 10 ಮತ್ತು 12ನೆ ತರಗತಿ ಶಾಲೆ ಪ್ರಾರಂಭ

ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿಯನ್ವಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ ಒಂದರಿಂದ 10 ಮತ್ತು 12ನೆ ತರಗತಿ ಶಾಲೆ ಪ್ರಾರಂಭವಾಗಲಿದ್ದು, 6 ರಿಂದ 9ನೆ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದು ಡಿಡಿಪಿಐ ಸಿ.ನಂಜಯ್ಯ ತಿಳಿಸಿದ್ದಾರೆ. ಈ ಸಂಜೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಕ್ಕಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಮತ್ತು ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ …

Read More »

KSRTC ಸಹಾಯವಾಣಿ ಸಂಖ್ಯೆ ಬದಲಾವಣೆ

ಬೆಂಗಳೂರು, – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಪ್ರಯಾಣ ಸುಗಮಗೊಳಿಸಲು ಸಹಾಯವಾಣಿ ವ್ಯವಸ್ಥೆ ಒದಗಿಸುತ್ತಿದೆ. ನಿಗಮವು ಪ್ರಯಾಣಿಕರಿಗಾಗಿ ಒದಗಿಸಿರುವ ಕಾಲ್ ಸೆಂಟರ್ ಸಹಾಯವಾಣಿ ಸಂಖ್ಯೆ: 9449596666 ಬದಲಾಯಿಸಿ, ನೂತನ ಸಹಾಯವಾಣಿ ಸಂಖ್ಯೆ: 080-26252625ನ್ನು ಜ.1ರರಿಂದ ಜಾರಿಗೊಳಿಸಲು ತೀರ್ಮಾನಿಸಿದೆ. ಪ್ರಯಾಣಿಕರಿಗೆ ಸಲಹೆ/ದೂರುಗಳು ಹಾಗೂ ಇನ್ನಿತರೆ ಸಂಸ್ಥೆಯ ವಿಚಾರಣೆ/ಮಾಹಿತಿಗಾಗಿ ಕಾಲ್ ಸೆಂಟರ್ ಸಹಾಯವಾಣಿ ಸಂಖ್ಯೆ: 080-26252625 ಗೆ ಸಂಪರ್ಕಿಸುವಂತೆ ಕೋರಲಾಗಿದೆ.

Read More »

ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಭಾವಚಿತ್ರ

ಬೆಂಗಳೂರು,ಡಿ.27- ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಭಾವಚಿತ್ರ ಮತ್ತು ಪ್ರಮುಖ ರಾಜಕೀಯ ಪಕ್ಷಗಳ ಗುರುತನ್ನು ಬಳಸಿರುವುದು ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಸಮಸ್ಯೆ ತಂದೊಡ್ಡಿದೆ. ಈ ಸಂಬಂಧ ಹಲವು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದೆ ಎಂದು ರಾಜ್ಯ ಚುನಾವಣಾ ಆಯೋಗ ದಾಖಲಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಭ್ಯರ್ಥಿಗಳು ಎಲ್ಲಾ ಪಕ್ಷಗಳೊಂದಿಗೆ ಗುರುತಿಸಿಕೊಂಡಂತೆ ಕಂಡುಬರುತ್ತಿದೆ. ತಮ್ಮ ಗೆಲುವಿಗಾಗಿ ಮತದಾರರನ್ನು ಸೆಳೆಯಲು ಪ್ರಧಾನ ಮಂತ್ರಿ ನರೇಂದ್ರ ಮೋದಿ, …

Read More »

ಚುನಾವಣಾ ಕಾರ್ಯಕ್ಕೆ 1615 ಕೆಎಸ್‌ಆರ್‌ಟಿಸಿ ಬಸ್

ಬೆಂಗಳೂರು,ಡಿ.26- ರಾಜ್ಯದಲ್ಲಿ ನಡೆಯುವ 2ನೇ ಹಂತದ ಗ್ರಾಮಪಂಚಾಯ್ತಿ ಚುನಾವಣೆಗೆ ಕೆಎಸ್‍ಆರ್‍ಟಿಸಿಯಿಂದ 1615 ಬಸ್‍ಗಳನ್ನು ನೀಡಲಾಗಿದೆ. ಗ್ರಾಮಪಂಚಾಯ್ತಿ ಚುನಾವಣಾ ಕಾರ್ಯಕ್ಕಾಗಿ ಸಾಂದರ್ಭಿಕ ಒಪ್ಪಂದದ ಆಧಾರದ ಮೇಲೆ ಇಂದು ಬಸ್‍ಗಳನ್ನು ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಸುಮಾರು 5 ಸಾವಿರ ಬಸ್‍ಗಳು ಪ್ರತಿದಿನ ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿದ್ದು, ಚುನಾವಣಾ ಕಾರ್ಯಕ್ಕೆ ಬಸ್ ನೀಡಿರುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗುವುದಿಲ್ಲ. ರಾಜ್ಯದ 109 ತಾಲ್ಲೂಕುಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ನಡೆಯುತ್ತಿದ್ದು, ಪ್ರಯಾಣಿಕರ ಸಂಖ್ಯೆಯು ಕಡಿಮೆ ಇರುತ್ತದೆ. …

Read More »

ಗ್ರಾಮೀಣ ಕ್ಷೇತ್ರದಲ್ಲಿ ಕಮಲ ಅರಳಿಸಲು ನೂತನ ಕ್ಯಾಲೇಂಡರ್ ವಿತರಿಸಿದ ರಮೇಶ ಜಾರಕಿಹೊಳಿ

ಬೆಳಗಾವಿ- ಗ್ರಾಮೀಣ ಕ್ಷೇತ್ರದಲ್ಲಿ ಕಮಲ ಅರಳಿಸಲು ನೂತನ ಕ್ಯಾಲೇಂಡರ್ ವಿತರಿಸಿದ ರಮೇಶ ಜಾರಕಿಹೊಳಿ ಪೃಥ್ವಿ ಫೌಂಡೇಶನ್ ವತಿಯಿಂದ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕೊರೊನಾ ವಾರಿಯರ್ಸ್‍ಗೆ ಸತ್ಕಾರ ಮಾಡಿ ಬಳಿಕ ತಮ್ಮ ಭಾವಚಿತ್ರದ ಹೊಸ ವರ್ಷದ ಕ್ಯಾಲೇಂಡರ್‍ನ್ನು ಬಿಡುಗಡೆಗೊಳಿಸಿದರು. ಈ ವೇಳೆ ಪೃಥ್ವಿ ಸಿಂಗ್ ಮಾತನಾಡಿ ಸುಮಾರು 10 ಸಾವಿರ ಕ್ಯಾಲೇಂಡರ್‍ಗಳನ್ನು ಗ್ರಾಮೀಣ ಕ್ಷೇತ್ರದಲ್ಲಿ ವಿತರಿಸುತ್ತಿದ್ದೇವೆ. ಅದೇ ರೀತಿ ಗ್ರಾಮೀಣ ಕ್ಷೇತ್ರದಲ್ಲಿ …

Read More »