ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರ ಆತಂಕದ ಬೆನ್ನಲ್ಲೇ ನೈಟ್ ಕರ್ಫ್ಯೂ ಕೂಡ ಜಾರಿಯಾಗಿದೆ. ಈ ನಡುವೆಯೇ ನಿಗದಿಯಂತೆ ಜನವರಿ 1ರಿಂದ ಶಾಲೆಗಳು ಪುನರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಸಿಇಒ, ಡಿಡಿಪಿಐ, ಡಿಡಿಪಿಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಜನವರಿ 1ರಿಂದ ಶಾಲೆಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ. ಕೊರೊನಾ ರೂಪಾಂತರ ವೈರಸ್ ಇದ್ದರೂ ಆತಂಕಪಡುವ ಅಗತ್ಯವಿಲ್ಲ ಎಂದು …
Read More »Monthly Archives: ಡಿಸೆಂಬರ್ 2020
ಕೊರೋನದ ಹೊಸ ಪ್ರಭೇದ ಪತ್ತೆ; ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಕೋವಿಡ್ 19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು …
Read More »ಶಾಲೆ ಆರಂಭದ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್
ಬೆಂಗಳೂರು : ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನವರಿಯಿಂದಲೇ ಶಾಲೆ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮ ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ …
Read More »ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ
ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇಂದಿನಿಂದ 9 ದಿನಗಳವರೆಗೆ ಅಂದರೆ ಜನೆವರಿ 2 ವರೆಗೆ ಈ ಆದೇಶ ಅನ್ವಯವಾಗಲಿದೆ. ಇನ್ನು ಹೊರ ದೇಶದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಬೇಕು. ರಾತ್ರಿ ಹೊತ್ತು …
Read More »ರಾಜ್ಯದಲ್ಲಿ ಹೆಚ್ಚಿನ ಚಳಿಯಿದೆ. ಜಾಕೆಟ್, ಸ್ವೆಟರ್ ಹಾಕಿದರೂ ಚಳಿ ಕಡಿಮೆಯಾಗುತ್ತಿಲ್ಲ.
(ಡಿಸೆಂಬರ್ 23): ಸಿಲಿಕಾನ್ ಸಿಟಿಯಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಚಳಿಯಿದೆ. ಕಳೆದ ಹದಿನೈದು ದಿನಗಳ ಹಿಂದೆ ಚಂಡಮಾರುತ ಕಾರಣದಿಂದ ಚಳಿ ಹೆಚ್ಚಿತ್ತು. ಇದೀಗ ಚಂಡಮಾರುತದಿಂದಲ್ಲದೇ ಹೋದರೂ ಚಳಿಗಾಲಕ್ಕೆ ಚಳಿಯಿದೆ ಎಂದುಕೊಳ್ಳುವವರಿದ್ದಾರೆ. ಆದರೆ, ಕಳೆದ ವರುಷಕ್ಕೆ ಹೋಲಿಸಿದರಲ್ಲಿ ಈ ಬಾರಿ ರಾಜ್ಯದಲ್ಲಿ ಹೆಚ್ಚಿನ ಚಳಿಯಿದೆ. ಜಾಕೆಟ್, ಸ್ವೆಟರ್ ಹಾಕಿದರೂ ಚಳಿ ಕಡಿಮೆಯಾಗುತ್ತಿಲ್ಲ. ಕಳೆದೊಂದು ವಾರದಿಂದ ಅತಿಯಾದ ಚಳಿಯಿದ್ದು, ಬೆಳಗ್ಗೆ ಹಾಗೂ ರಾತ್ರಿ ವೇಳೆ ಇನ್ನಷ್ಟು ಹೆಚ್ಚಿದೆ. ನಿಮ್ಮೆ ಮಂಗಳವಾರ ಬೆಂಗಳೂರಿನ ಹೆಚ್ಎಎಲ್ ಬಳಿ ಕನಿಷ್ಠ …
Read More »ಗ್ರಾಹಕರ ವಿಶ್ವಾಸರ್ಹತೆ ಗಳಿಸಿದ ಸಂತೃಪ್ತಿ ವಿಜಯ ಸೌಹಾರ್ಧ ಸಹಕಾರಿಗಿದೆ : ಮುರುಗೇಶ ನಿರಾಣಿ
ಮುಧೋಳ – ನಿರಾಣಿ ಉದ್ಯಮ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಲಿಮಿಟೆಡ್ ಸೌಹಾರ್ದ ಸಹಕಾರಿ ಕ್ಷೇತ್ರದಲ್ಲಿ ಅಲ್ಪಾವಧಿಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸರಿ ಸಮವಾಗಿ ಸೇವೆ ನೀಡುವಷ್ಟು ಸದೃಢವಾಗಿ ಬೆಳೆದು ನಿಂತಿದೆ. ವಿನೂತನ ಯೋಜನೆಗಳೊಂದಿಗೆ ಮಹತ್ತರ ಹೆಜ್ಜೆ ಗುರುತುಗಳನ್ನು ಮೂಡಿಸುವ ಮೂಲಕ ಗ್ರಾಹಕರ ವಿಶ್ವಾಸಾರ್ಹ ಸಂಸ್ಥೆಯಾಗಿ ಹೊರಹೊಮ್ಮಿದ್ದು ಹೆಮ್ಮೆಯ ಸಂಗತಿ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಬೀಳಗಿ ಶಾಸಕ ಮುರುಗೇಶ ನಿರಾಣಿ ತಿಳಿಸಿದರು. ಮುಧೋಳದ ಸಹಕಾರಿಯ ಪ್ರಧಾನ ಕಚೇರಿ …
Read More »ಮಾಸ್ಕ್ ಹಾಕದ್ದಕ್ಕೆ ಯುವಕನಿಗೆ ಲಾಠಿ ಏಟು- ಸಾರ್ವಜನಿಕರಿಂದ ಠಾಣೆಗೆ ಮುತ್ತಿಗೆ
ಚಿಕ್ಕಮಗಳೂರು: ಮಾಸ್ಕ್ ಹಾಕದ್ದಕ್ಕೆ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದು, ಈ ಮೂಲಕ ಮಾಸ್ಕ್ ಹಾಕುವಂತೆ ಜಾಗೃತಿ ಮೂಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಘಟನೆ ನಡೆದಿದ್ದು, ಯುವಕ ಲಕ್ಷ್ಮಣಗೆ ಪಿಎಸ್‍ಐ ಶಂಭುಲಿಂಗಯ್ಯರಿಂದ ಲಾಠಿ ಏಟು ನೀಡಿದ್ದಾರೆ. ಲಾಠಿ ಏಟಿನಿಂದ ಯುವಕನ ಮೂಗು, ಕಣ್ಣಿಗೆ ಗಾಯವಾಗಿದ್ದು, ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪಿಎಸ್‍ಐ ಶಂಭುಲಿಂಗಯ್ಯ ಅವರನ್ನು ಜನ ತರಾಟೆಗೆ ತೆಗೆದುಕೊಂಡಿದ್ದು, ಆಲ್ದೂರು ಪೊಲೀಸ್ ಠಾಣೆಗೆ ಸಾರ್ವಜನಿಕರು ಮುತ್ತಿಗೆ …
Read More »ಸಿದ್ದರಾಮಯ್ಯನವರ ಚೇಲಾ ಎಂದ ಶ್ರೀನಿವಾಸ್ ಪ್ರಸಾದ್ ಸ್ನೇಹದ ಮಹತ್ವದ ವ್ಯತ್ಯಾಸ ಗೊತ್ತಿಲ್ಲ”
ಮಾನ್ಯ ಸಂಸದರಾದ ಶ್ರೀನಿವಾಸ್ ಪ್ರಸಾದ್ ಅವರಿಗೆ ಅತ್ಯಂತ ಗೌರವಪೂರ್ವಕವಾಗಿ ನೀಡಿದ ಪ್ರತಿಕ್ರಿಯೆಗೆ ಎದುರಾಗಿ ಶ್ರೀನಿವಾಸ್ ಪ್ರಸಾದ್ ಅವರು ಅತ್ಯಂತ ಕೀಳು ಮಟ್ಟದಲ್ಲಿ ಪ್ರತಿಕ್ರಿಯಿಸಿದ್ದು ನನ್ನನ್ನು ಸಿದ್ದರಾಮಯ್ಯನವರ ಚೇಲಾ ಎಂದು ಕರೆದಿದ್ದು ಒಂದು ಜಿಲ್ಲಾ ಪಂಚಾಯತ್ ಸ್ಥಾನವನ್ನೂ ಸಹ ಗೆಲ್ಲಲಾಗದವ ಎಂಬ ಮಾತನ್ನು ಆಡಿರುತ್ತಾರೆ. ಸ್ನೇಹದ ಮಹತ್ವದ ವ್ಯತ್ಯಾಸ ಗೊತ್ತಿಲ್ಲದೇ ಚೇಲಾ ಎಂಬ ಪದವನ್ನು :ಬಳಸಿರುವ ಸಂಸದರು ತಮ್ಮ ಸ್ಥಾನದ ಘನತೆಯನ್ನು ಅರಿತು ಮಾತನಾಡಬೇಕು. ಇಲ್ಲವಾದರೆ ಮುತ್ಸದ್ಧಿತನಕ್ಕೂ ಅವಿವೇಕತನಕ್ಕೂ ಅಂತಹ ವ್ಯತ್ಯಾಸ …
Read More »ಕ್ಯಾನ್ಸರ್ ಪೀಡಿತ ಮಕ್ಕಳ ಸೇವೆಯಲ್ಲಿ ಲಯನ್ಸ್ ಕ್ಲಬ್.
ಅಂತರರಾಷ್ಟ್ರೀಯ ಮಟ್ಟದ ಸೇವಾ ಸಂಸ್ಥೆಯಾದ ಲಯನ್ಸ್ ಕ್ಲಬ್ ಸದಾ ಸಮಾಜದ ಪಿಡುಗುಗಳ ವಿರುದ್ಧ ಹೋರಾಡುತ್ತಾ ಸ್ವಸ್ಥ ಸಮಾಜಕ್ಕಾಗಿ ಪರಿಶ್ರಮಿಸುತ್ತಿರುವ ಸಂಸ್ಥೆ. ಲಯನ್ಸ್ ಸಂಸ್ಥೆ ಜಿಲ್ಲೆ 317F ವತಿಯಿಂದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ, ಕ್ಯಾನ್ಸರ್ ಪೀಡಿತರಾಗಿ ತಮ್ಮ ಜೀವನದ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವಂತಹ ಮಕ್ಕಳ ಮನೋರಂಜನೆಗಾಗಿ ಪ್ರತಿವರ್ಷದಂತೆ ಈ ವರ್ಷವೂ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಶ್ರೀಮತಿ ಶೋಭಾ ಶ್ರೀನಿವಾಸ್ ರವರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಲಯನ್ಸ್ ಕ್ಲಬ್ ನ ಗೌರ್ನರ್ ದೀಪಕ್ ಸುಮನ್ …
Read More »ರಸ್ತೆ ಮಾಡದಿದ್ರೆ ವೋಟ್ ಇಲ್ಲ ಐದು ಸರಿ ಚುನಾವಣೆ ಬಹಿಷ್ಕಾರ ಮಾಡಿದ ಗ್ರಾಮಸ್ಥರು
ಕೋಲಾರ: ರಸ್ತೆಗಾಗಿ ಗ್ರಾಮ ಪಂಚಾಯಿತಿ ಮತದಾನದಿಂದ ದೂರ ಉಳಿಯುವ ಮೂಲಕ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಗ್ರಾಮಸ್ಥರು 5 ಚುನಾವಣೆ ಬಹಿಷ್ಕರಿಸಿದಂತಾಗಿದೆ.ಜಿಲ್ಲೆಯ ಮಾಲೂರು ತಾಲೂಕಿನ ಮತಗಟ್ಟೆ ಸಂಖ್ಯೆ 17 ಕಂಬಿಪುರ ಗ್ರಾಮಸ್ಥರು ಮತದಾನದಿಂದ ದೂರ ಉಳಿಯುವ ಮೂಲಕ ಬಹಿಷ್ಕಾರ ಹಾಕಿದರು. ಬೆಳಗ್ಗೆ 9 ಗಂಟೆಯಾದರೂ ಮತ ಕೇಂದ್ರದತ್ತ ಸುಳಿಯದ ಮತದಾರರು, ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದರ ಹಿನ್ನೆಲೆಯಲ್ಲಿ ಮತಗಟ್ಟೆ …
Read More »