Breaking News

Monthly Archives: ಡಿಸೆಂಬರ್ 2020

ಡೀಸೆಲ್ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ

: ಡೀಸೆಲ್ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಐವರು ಸಜೀವ ದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ. ಲಖನೌದಿಂದ ಆಗ್ರಾಗೆ ತೆರಳುತ್ತಿದ್ದ ಕಾರು, ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಚಲಿಸುತ್ತಿದ್ದ ಟ್ರಕ್ ಏಕಾಏಕಿ ರಾಂಗ್ ಟರ್ನ್ ತೆಗೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನ ಡೋರ್ ಲಾಕ್ ಆಗಿದ್ದ ಕಾರಣ ಹೊರಬರಲಾಗದೇ ಕಾರಿನಲ್ಲಿದ್ದ …

Read More »

ಗ್ರಾ. ಪಂ. ಮೊದಲ ಹಂತದ ಚುನಾವಣೆ,ಲಘುಲಾಠಿ ಪ್ರಹಾರ, ಪಿಸ್ತೂಲ್ ಇಟ್ಟುಕೊಂಡ ಅಧಿಕಾರಿ,07 ನೆ ವಯಸ್ಸಿನಲ್ಲಿ ಮತದಾನ ಮಾಡಿದ ಅಜ್ಜಮ್

ಬೆಳಗಾವಿ – ರಾಜ್ಯದ ವಿವಿಧೆಡೆ ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಎಲ್ಲೆಡೆ ಪೊಲೀಸ್ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಶಾಂತ ಮತ್ತು ಸುರಕ್ಷಿತ ಮತದಾನ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಮತ್ತು ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ ಜನ ಗುಂಪುಗೂಡಲು ಪ್ರಯತ್ನಿಸಿದ್ದರಿಂದ ಲಘುಲಾಠಿ ಪ್ರಹಾರ ನಡೆಸಲಾಗಿದೆ. ದೇಸೂರು ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ಕರ್ತವ್ಯಕ್ಕೆ ಬಂದಿದ್ದ ಸಿಬ್ಬಂದಿ ಪಿಸ್ತೂಲ್ ಇಟ್ಟುಕೊಂಡು ಬಂದಿದ್ದರಿಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಯನ್ನು ಬದಲಿಸಲಾಗಿದೆ. …

Read More »

ದುಬೈನಲ್ಲಿ ಭಾರತೀಯನಿಗೆ ಹೊಡೀತು 7 ಕೋಟಿ ರೂ. ಜಾಕ್‍ಪಾಟ್..!

ದುಬೈ, ಡಿ. 22- ಕೊರೊನಾ ಲಾಕ್‍ಡೌನ್‍ನಿಂದಾಗಿ ಹಲವರ ಬದುಕು ದುಸ್ತರವಾಗಿದ್ದು ತುತ್ತಿನ ಚೀಲ ತುಂಬಿಸಿಕೊಳ್ಳಲು ಹರಸಾಹಸಪಡುವಂತಾಗಿದೆ. ಇದೇ ರೀತಿ ಕೇರಳದ ವ್ಯಕ್ತಿಯೊಬ್ಬರು ಕೊರೊನಾದಿಂದಾಗಿ ಕೆಲಸ ಕಳೆದುಕೊಂಡು ಕೆಲಸಕ್ಕಾಗಿ ಕಂಪೆನಿಗಳಿಗೆ ಅಲೆಯುತ್ತಿರುವಾಗಲೇ 7 ಕೋಟಿ ಜಾಕ್‍ಪಾಟ್ ಹೊಡೆಯುವ ಮೂಲಕ ಅವನ ಅದೃಷ್ಟವನ್ನೇ ಬದಲಿಸಿದೆ. ಕೇರಳ ಮೂಲದ ನವನೀತ್ ಸಂಜೀವನ್ ಎಂಬುವವರು ದುಬೈನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಉತ್ತಮ ಕೆಲಸದಲ್ಲಿದ್ದು ಒಳ್ಳೆಯ ಸಂಬಳವನ್ನು ಪಡೆಯುತ್ತಿದ್ದರೂ ಆದರೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಅವರು ಕೆಲಸ ಕಳೆದುಕೊಂಡಿದ್ದರು. ಆಗ …

Read More »

ಕ್ರಿಕೆಟಿಗ ಸುರೇಶ್ ರೈನಾ, ಬಾಲಿವುಡ್ ಸೆಲೆಬ್ರಿಟಿ ಸುಸ್ಸಾನ್ ಖಾನ್ ಸೇರಿದಂತೆ ಹಲವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಬಾಲಿವುಡ್ ಸೆಲೆಬ್ರಿಟಿ ಸುಸ್ಸಾನ್ ಖಾನ್ ಸೇರಿದಂತೆ ಹಲವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಂಬೈ ವಿಮಾನ ನಿಲ್ದಾಣದ ಬಳಿಯಿರುವ ಡ್ರಾಗನ್ ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು ಕೋವಿಡ್ ಮಾರ್ಗ ಸೂಚಿ ಪಾಲಿಸದ ಕಾರಣಕ್ಕೆ ಸುರೇಶ್ ರೈನಾ, ಸುಸ್ಸಾನ್ ಖಾನ್, ಸಿಂಗರ್ ಗುರು ರಾಂಧವ ಹಾಗೂ ಕ್ಲಬ್ ನ ಇಬ್ಬರು ಸ್ಟಾಫ್ ಸೇರಿದಂತೆ ಒಟ್ಟು 34 ಜನರನ್ನು ಬಂಧಿಸಿದ್ದಾರೆ. …

Read More »

ಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ

ಬೆಳಗಾವಿ – ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ. ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. *ಎಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 867 ಉದ್ಯೋಗ ಸೃಷ್ಟಿ …

Read More »

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಪೆಟ್ರೋಲ್ ಬಂಕ್ ಬಳಿ ಎಸೆದು ಹೋಗಿರುವ ಘಟನೆ

ಮುಂಬೈ: ನಾಲ್ಕು ವರ್ಷದ ಬಾಲಕಿಯ ಮೇಲೆ ಬಸ್ ಚಾಲಕನೊಬ್ಬ ಅತ್ಯಾಚಾರವೆಸಗಿ, ಬಳಿಕ ಬಾಲಕಿಯನ್ನು ಗೋಣಿ ಚೀಲದಲ್ಲಿ ತುಂಬಿ ಮುಂಬೈ-ಅಹ್ಮದಾಬಾದ್ ಹೆದ್ದಾರಿ ಬಳಿಯ ಪೆಟ್ರೋಲ್ ಬಂಕ್ ಬಳಿ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಮಾರನೆ ದಿನ ಬೆಳಿಗ್ಗೆ ಗೋಣಿ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಅದರಲ್ಲಿ ಬಾಲಕಿ ಇರುವುದು ಕಂಡು ದಂಗಾಗಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಾರ್ಕ್ ಮಾಡಿದ್ದ ಲಕ್ಸುರಿ ಬಸ್ ಬಳಿ ಬಾಲಕಿ …

Read More »

ಗ್ರಾಪಂ ಚುನಾವಣೆಯಲ್ಲಿ ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ತೀರ್ಮಾನ:B.J.P.

ಬೆಂಗಳೂರು,ಡಿ.21- ಗ್ರಾಪಪಂಚಾಯ್ತಿ ಚುನಾವಣೆಯನ್ನೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಭೂಮಿಕೆ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ, ಗ್ರಾಪಂ ಚುನಾವಣೆಯಲ್ಲಿ ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಪದಾಧಿಕಾರಿಗಳ ಸಭೆ ಮೂಲಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೂ ತಯಾರಿ ನಡೆಸಿರುವ ಬಿಜೆಪಿ ಗ್ರಾಪಂ ಚುನಾವಣೆಯನ್ನೇ ಮುಖ್ಯ ಭೂಮಿಕೆ ಮಾಡಿಕೊಳ್ಳಲು ಸಿದ್ಧವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಪ್ರತಿನಿಧಿ ಸಮಾವೇಶ ಆಯೋಜಿಸಲು …

Read More »

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ; ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ಸರ್ಕಾರ ಬಡವರು ತುತ್ತು ಅನ್ನಕ್ಕೂ ಪರದಾಡಬಾರದು ಎಂಬ ಉದ್ದೇಶದಿಂದ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಬಡವರ ಹೊಟ್ಟೆ ತುಂಬಿಸಲು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಲ್ಲಿ ಬಡವರಿಗೆ ಉಚಿತ ಅಕ್ಕಿ ನೀಡುವ ಮೂಲಕ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದೆ. ಆದರೆ, ಅದೇ ಅಕ್ಕಿ ಇಂದು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದು, ಹಾಡು ಹಗಲೇ ರೇಷನ್ ಅಂಗಡಿಯಿಂದ ಅಕ್ಕಿ ತಂದು ತಮ್ಮದೆ ಒಂದು ಬ್ರಾಂಡ್ ನ ಚಿಲಕ್ಕೆ ಹಾಕಿ ಅಕ್ಕಿ …

Read More »

ಗ್ರಾಮ ಪಂಚಾಯಿತಿ ಚುನಾವಣೆ ಊರಿನತ್ತ ಹೊರಟ ಮತದಾರರು

ಬೆಂಗಳೂರು (ಡಿ. 22): ಕರ್ನಾಟಕದಲ್ಲಿ ಇಂದಿನಿಂದ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ರಾಜ್ಯದ 30 ಜಿಲ್ಲೆಗಳಲ್ಲಿಯೂ ಆಯ್ದ ತಾಲೂಕುಗಳಲ್ಲಿ ಇಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಮಾಡಲು ಬೆಂಗಳೂರಿನಲ್ಲಿ ನೆಲೆಸಿರುವ ಬಹುತೇಕ ಜನರು ತಮ್ಮ ಊರುಗಳತ್ತ ಹೊರಟಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮೆಜೆಸ್ಟಿಕ್ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನೆರೆದ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಬಸ್​ಗಳಿಗೆ ಕಾಯುತ್ತಿದ್ದ ದೃಶ್ಯ ಕಂಡುಬಂದಿತು. ಮಧ್ಯಾಹ್ನದ ವೇಳೆಗೆ ಊರುಗಳಿಗೆ ತೆರಳಿ …

Read More »

₹1 ಕೋಟಿ ಲಂಚ ಕೇಳಿದ್ರಾ ಅಬಕಾರಿ ಸಚಿವ ಹೆಚ್​​. ನಾಗೇಶ್? ಪ್ರಧಾನಿ ಮೋದಿಗೆ ದೂರು

ಕೋಲಾರ: ಕೋಲಾರದ ಉಸ್ತುವಾರಿ ಸಚಿವ ಹಾಗೂ ಅಬಕಾರಿ ಸಚಿವ ಹೆಚ್.ನಾಗೇಶ್ ವಿರುದ್ಧ ಪ್ರಧಾನ ಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪದ ದೂರು ದಾಖಲಾಗಿದೆ. ಅಬಕಾರಿ ಅಧಿಕಾರಿಯೊಬ್ಬರ ವರ್ಗಾವಣೆಗೆ ಒಂದು ಕೋಟಿ ರೂಪಾಯಿ ಲಂಚಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಸಚಿವ ಹೆಚ್​​​.ನಾಗೇಶ್ ಅವರ ವಿರುದ್ದ ಸಲ್ಲಿಕೆಯಾಗಿರುವ ದೂರು ತಡವಾಗಿ ಬೆಳಕಿಗೆ ಬಂದಿದೆ. ಅಧಿಕಾರಿಯ ಪುತ್ರಿಯೊಬ್ಬರು ಪ್ರಧಾನ ಮಂತ್ರಿ ಕಚೇರಿಗೆ ಸಲ್ಲಿಸಿರುವ ಈ ದೂರು ರಾಜ್ಯದ ಇ-ಜನಸ್ಪಂದನ ವಿಭಾಗದಲ್ಲಿಯೂ ಸಹ ಅಧಿಕೃತವಾಗಿ ದಾಖಲಾಗಿದೆ ಎನ್ನಲಾಗಿದೆ. …

Read More »