Breaking News

Monthly Archives: ಡಿಸೆಂಬರ್ 2020

ಬೇಡಿಕೆ ಸಧ್ಯಕ್ಕೆ ಈಡೇರಿಸಲಾಗದು ಸಚಿವ ಸವದಿ ಎಂದು ಸ್ಪಷ್ಟಪಡಿಸಿದ್ದಾರೆ. ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ಈ ನಡುವೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸಧ್ಯಕ್ಕೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸವದಿ, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸಾರಿಗೆ ಸಿಬ್ಬಂದಿಗಳ ಮನವೊಲಿಕೆ ಮಾಡಿ ಕೆಲಸಕ್ಕೆ ಹಾಜರಾಗಲು ಮನವಿ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳ ಜೊತೆ ಒಂದು ಸುತ್ತಿನ ಸಭೆ ನಡೆದಿದೆ. ನಮ್ಮ ಹಣಕಾಸಿನ ಇತಿಮಿತಿಯೊಳಗೆ ನೌಕರರ ಬೇಡಿಕೆ …

Read More »

ರಮೇಶ್ ಜಾರಕಿಹೊಳಿ ಸರ್ಕಾರ ತೆಗೆಯಲು ಕೈಹಾಕಿ ಹಾಕಿದಾಗ ಗೇಟ್ ಕೀಪರ್ ಕೆಲ್ಸ ಮಾಡಿದೊನೆ C.P.Y : HDK

ರಾಮನಗರ (ಚನ್ನಪಟ್ಟಣ): ಕಲ್ಚರ್ ಇಲ್ಲದ ಜನರ ಬಗ್ಗೆ ನಾನೇಕೆ ಚರ್ಚೆ ಮಾಡಲಿ, ಅವರ ಬ್ಯಾಕ್ ಗ್ರೌಂಡ್ ಏನು, ಎಷ್ಟು ಜನರಿಗೆ ಟೋಪಿ ಹಾಕಿ ಬಂದಿದ್ದಾರೆಂದು ನನಗೆ ಗೊತ್ತು ಎಂದು ಬಿಜೆಪಿ ಎಂಎಲ್​ಸಿ ಸಿ.ಪಿ.ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಗ್ರಾ.ಪಂ ಚುನಾವಣೆ ಹಿನ್ನೆಲೆ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಇದಕ್ಕಿಂತ ಮುಂಚೆ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ಡಿಕೆ,  ಯೋಗೇಶ್ವರ್ ರಾಜಕೀಯಕ್ಕೆ ಬರುವ …

Read More »

ಸಾರಿಗೆ ನೌಕರರ ಧಿಡೀರ್ ಪ್ರತಿಭಟನೆಯಿಂದ ಜನರಿಗೆ ತೊಂದರೆ:ಲಕ್ಷ್ಮಣ ಸವದಿ

ಬೆಂಗಳೂರು : ಸಾರಿಗೆ ನೌಕರರ ದಿಢೀರ್​ ಪ್ರತಿಭಟನೆ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಮಾತುಕತೆಗೆ ಆಹ್ವಾನಿಸಿದರೂ ಚರ್ಚೆ ಮಾಡಲು ನೌಕರರು ಸಿದ್ಧರಿಲ್ಲ. ಈ ಹಿನ್ನಲೆ ನಾಳೆಯಿಂದ ಸರ್ಕಾರಿ ದರದಲ್ಲಿಯೇ ಖಾಸಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಈ ಕುರಿತು ಮುಖ್ಯಮಂತ್ರಿಗಳು ಕೂಡ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅಲ್ಲದೇ ಅಧಿಕಾರಿಗಳ ಜೊತೆ ಕೂಡ ಮಾತುಕತೆ ನಡೆಸಿದ್ದೇವೆ. ನಾಳೆಯಿಂದ ಖಾಸಗಿ ವಾಹನ ಓಡಿಸುವುದಕ್ಕೆ ಸಿದ್ಧತೆ ನಡೆಸಿದ್ದೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ …

Read More »

ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ

  ಬೆಂಗಳೂರು (ಡಿ. 13): ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ನೌಕರರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂದು ಸಹ ರಸ್ತೆಗೆ ಇಳಿಯದ ಬಿಎಂಟಿಸಿ, ಕೆಎಸ್ಆರ್​ಟಿಸಿ ಬಸ್​ಗಳಿಂದ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಪರದಾಡುವಂತಾಗಿದೆ. ಇಂದು ಸಾರಿಗೆ ನೌಕರರ ಜೊತೆಗೆ ಮಾತುಕತೆಗೆ ಮುಂದಾಗುತ್ತಾರಾ ಡಿಸಿಎಂ ಹಾಗೂ …

Read More »

ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿರುವ ಸಚಿವ ನಿತಿನ್ ಗಡ್ಕರಿ

ನವದೆಹಲಿ,ಡಿ.- ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿರುವ ಸಚಿವ ನಿತಿನ್ ಗಡ್ಕರಿ, ಕೇಂದ್ರವು ಅವರ ಅಭಿವೃದ್ದಿಗಾಗಿ ಕಾಯ್ದೆಗಳನ್ನು ತರಲು ಮುಂದಾಗಿದೆ. ಆದರೆ ಪ್ರತಿಪಕ್ಷಗಳು ರೈತರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿವೆ ಎಂದು ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ತಂದಿರುವ ಮೂರು ಹೊಸ ಕಾನೂನುಗಳು ರೈತರ ಹಿತಾಸಕ್ತಿಗಾಗಿಯೇ ಆದರೆ ವಿಪಕ್ಷಗಳು ಈ ಬಗ್ಗೆ ಗೊಂದಲಗಳನ್ನು ಹರಡಿ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ. ರೈತರು ಏನು ಗಳಿಸುತ್ತಿದ್ದಾರೆ ಮತ್ತು …

Read More »

ಮುಷ್ಕರ ಹಿಂಪಡೆಯದಿದ್ದರೆ ಸರಕಾರಿ ದರದಲ್ಲಿಖಾಸಗಿ ಬಸ್ಸು ಪ್ರಾರಂಭ : ಲಕ್ಷ್ಮಣ ಸವದಿ

ಬೆಂಗಳೂರು : ಮುಷ್ಕರ ನಿರತ ಸಾರಿಗೆ ಸಿಬ್ಬಂದಿ ಮಿತ್ರರು ಮಾತುಕತೆಗೆ ಮುಕ್ತ ಆಹ್ವಾನ ನೀಡಿದ್ದರು ಸಹ ಮಾತುಕತೆಗೆ ಬಾರದೇ ಇದ್ದರೆ ರಾಜ್ಯದಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್ಸುಗಳನ್ನು ಸರ್ಕಾರಿ ಬಸ್ ದರದಲ್ಲಿ ಓಡಿಸುವ ವ್ಯವಸ್ಥೆ ಆರಂಭಿಸಲಾಗುತ್ತದೆ. ಎಂದು ಚರ್ಚೆ ನಡೆಸಿ ಆರಂಭಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ …

Read More »

ಲೋಕಲ್‌ ದಂಗಲ್: ಬೆಳಗಾವಿ ಚು. ವೀಕ್ಷಕರಾಗಿ ಇಬ್ರಾಹಿಂ ಮೈಗೂರ ನಿಯೋಜನೆ

ಬೆಳಗಾವಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ (ಆಡಳಿತ ಮತ್ತು ಮಾನವ ಸಂಪನ್ಮೂಲ) ಇಬ್ರಾಹಿಂ ಮೈಗೂರ ಅವರನ್ನು ಚುನಾವಣಾ ವೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ. ವೀಕ್ಷಕರು, 11 ಡಿ. 2020 ರಿಂದ ಬೆಳಗಾವಿಯಲ್ಲಿ ಸರ್ಕಿಟ್ ಹೌಸ್ ಹಳ ಕಟ್ಟಡದ ಕೊಠಡಿ ಸಂಖ್ಯೆ 9 ರಲ್ಲಿ ವಾಸ್ತವ್ಯ ಮಾಡಲಿದ್ದು, ಜಿಲ್ಲಾದ್ಯಂತ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವರು. ಈ ಅವಧಿಯಲ್ಲಿ ಸಾರ್ವಜನಿಕರು ಅವರನ್ನು ಸಂಪರ್ಕಿಸಬಹುದಾಗಿದೆ. …

Read More »

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು ಗೋಕಾಕದ ನಾಕಾ ನಂ,1ಒಂದರಲ್ಲಿ ನಗರಕ್ಕೆ ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ ವೇಳೆಯಲ್ಲಿ ಅಚಾನಕಗಾಗಿ ವಿದ್ಯುತ ಸ್ಪರ್ಶವಾಗಿ ಮೇಲಿಂದ ಬಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಗೋಕಾಕದಲ್ಲಿ ನಡೆದಿದೆ,.   ರಾಮಗಾನಟ್ಟಿ ಗ್ರಾಮದ ನಾಗಪ್ಪ ಬರಮಣ್ಣ ಹಿಡಕಲ್ (26) ಎಂಬ ಯುವಕ ಗೋಕಾಕ ನಗರಕ್ಕೆ ಸರಬರಾಜು ಮಾಡುತ್ತಿರುವ 24×7 ದಲ್ಲಿ ಕಾರ್ಯನಿರ್ವಹಿಸುತ್ತಿದಗದ ಎನ್ನಲಾಗಿದೆ,ಸದರಿ ಗಾಯಗೊಂಡ ವ್ಯಕ್ತಿಯನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ …

Read More »

ಸವದಿ ವಿರುದ್ಧ ಸಿಎಂ ಗರಂ

ಬೆಂಗಳೂರು,ಡಿ.12- ಸಾರಿಗೆ ನೌಕರರ ಬಿಕ್ಕಟ್ಟನ್ನು ಪರಿಹರಿಸಲು ವಿಫಲರಾಗಿರುವ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಕಾರ್ಯ ವೈಖರಿ ವಿರುದ್ದ ಮುಖ್ಯಮಂತ್ರಿ ಯಡಿಯೂರಪ್ಪ ಕೆಂಡ ಕಾರಿದ್ದಾರೆ. ಕಳೆದ ಮೂರು ದಿನಗಳಿಂದ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಬಸ್‍ಗಳ ಸಂಚಾರಕ್ಕೆ ಅವಕಾಶವನ್ನೂ ನೀಡದೇ ಬೀದಿಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಾರಂಭದಲ್ಲೇ ಈ ಬಿಕ್ಕಟ್ಟನ್ನು ಪರಿಹರಿಸಿದ್ದರೆ ಇಂದು ಸಮಸ್ಯೆ ಉದ್ಭವವಾಗುತ್ತಿತ್ತೇ ಎಂದು ಸವದಿ ಅವರನ್ನು ಪ್ರಶ್ನಿಸಿದ್ದಾರೆ. ನೌಕರರು ಬೀದಿಗೆ ಬರುವ ಮೊದಲು ಅವರ …

Read More »

ಯೋಗೀಶ್ ಗೌಡ ಹತ್ಯೆ ಮಾಡಲು ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಫಾರಿ ಕೊಟ್ಟಿದ್ದರು?

ಬೆಂಗಳೂರು : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಮಾಡಲು ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಫಾರಿ ಕೊಟ್ಟಿದ್ದರು ಎಂಬ ವಿಷಯ ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಈಗಾಗಲೇ ಯೋಗೀಶ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕಲಕರ್ಣಿ ಬೆಳಗಾವಿ ಹಿಂಡಲಗಾ ಜೈಲು ಸೇರಿದ್ದಾರೆ. ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇಡೀ ರಾಜ್ಯವೇ ಬೆಚ್ಚಿ ಬೀಳುವಂತ ಮಾಹಿತಿಯನ್ನು  ಹೊರ ಹಾಕಿದ್ದಾರೆ.  ಯೋಗೀಶ್ ಹತ್ಯೆಗೆ …

Read More »