Breaking News
Home / 2020 / ಡಿಸೆಂಬರ್ (page 50)

Monthly Archives: ಡಿಸೆಂಬರ್ 2020

ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ

ನವದೆಹಲಿ,:ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ಪಡೆ ವಾಹನದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾದ್ಯಾಯ ಹಾಗೂ ಪೊಲೀಸ್ ಮಹಾ ನಿರ್ದೇಶಕ ವೀರೇಂದ್ರ ಅವರು ಡಿ.14 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್‍ನಲ್ಲಿ ಸೂಚಿಸಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆ, ರಾಜಕೀಯ ಗಲಭೆಗಳಿಗೆ …

Read More »

ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ರಮೇಶ್ ಜಾರಕಿಹೊಳಿ ನೇಮಕ

ಬೆಂಗಳೂರು, ಡಿ.11- ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ಫೆ. 8 ಮತ್ತು 9 ರಂದು ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ನೇಮಕ,ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳ ಸಭೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸರ್ವಾನುಮತ ದಿಂದ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು ಎಂದು ಅಧಿಕೃತ …

Read More »

(ಡಿ.೧೪) ಬೆಳಿಗ್ಗೆ ೧೦ ಘಂಟೆಯಿಂದ ಸಂಜೆ ೫.೩೦ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಬೆಳಗಾವಿ- smart city ಯೋಜನೆಯಡಿ ರಸ್ತೆ ಅಗಲೀಕರಣ ಹಾಗೂ ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಸೋಮವಾರ (ಡಿ.೧೪) ಬೆಳಿಗ್ಗೆ ೧೦ ಘಂಟೆಯಿಂದ ಸಂಜೆ ೫.೩೦ ಘಂಟೆಯವರೆಗೆ ೩೩ ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ಕಂಗ್ರಾಳಿ ಕೆ.ಎಚ್ ಹಾಗೂ ಅಲತಗಾ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಅದೇ ರೀತಿ ಹು.ವಿ.ಸ.ಕಂ.ನಿ. ವತಿಯಿಂದ ತುರ್ತು ನಿರ್ವಹಣೆಯಿಂದ ಬೆಳಿಗ್ಗ್ಗೆ ೧೦ ಘಂಟೆಯಿಂದ ಸಂಜೆ ೪ ಘಂಟೆಯವರೆಗೆ ೧೧೦ ಕೆ.ವ್ಹಿ. ಉಚಗಾಂವ ಉಪಕೇಂದ್ರದಿಂದ …

Read More »

ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ ಅನ್ನ ಸಾಂಬಾರ್ ರೆಡಿ,ಬಸ್ ಗಳನ್ನು ನಿಲ್ಧಾಣದಲ್ಲೇ ಪಾರ್ಕ್ ಮಾಡಿ ಹೋರಾಟ

ಬೆಳಗಾವಿ ಬಸ್ ನಿಲ್ಧಾಣ ಇವತ್ತು ಅಕ್ಷರಶಃ ಹೋರಾಟದ ಕೇಂದ್ರವಾಗಿದೆ ಇವತ್ತು ಇಡೀ ದಿನ ಈ ನಿಲ್ಧಾಣದಲ್ಲಿ ಕ್ರಾಂತಿಯ ಕಿಡಿಯ ಜೊತೆಗೆ ಒಲೆಯೂ ಹೊತ್ತಿದೆ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ನಡೆಯುತ್ತಿರುವ ಸಾರಿಗೆ ನೌಕರರ ಹೋರಾಟಕ್ಕೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯೆಕ್ತವಾಗಿದೆ. ಧರಣಿ ನಡೆಸುತ್ತಿರುವ ಸಾರಿಗೆ ನೌಕರರು ಮದ್ಯಾಹ್ನದ ಊಟವನ್ನು ನಿಲ್ಧಾಣದಲ್ಲೇ ಮಾಡಿದರು.ಈಗ ರಾತ್ರಿ ಊಟಕ್ಕೆ ಅಡುಗೆ ತಯಾರಿಸುವ ಕಾರ್ಯ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದಲ್ಲೇ ನಡೆಯುತ್ತಿದೆ ಮುಷ್ಕರದಲ್ಲಿ ಪಾಲ್ಗೊಂಡ …

Read More »

ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಸಂಜನಾ ಅವರು ಗಂಭೀರವಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವರಿಗೆ ಶಸ್ತ್ರಚಿಕಿತ್ಸೆ ನೀಡುವ ಅಗತ್ಯವಿದೆ. ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಸಂಜನಾ ಪರ ವಕೀಲರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಅಂಗೀಕರಿಸಿದ ನ್ಯಾಯಾಲಯ ಸಂಜನಾ ಅವರಿಗೆ ಷರತ್ತು ಬದ್ಧ ಜಾಮೀನು …

Read More »

ಸಾರಿಗೆ ಸಂಸ್ಥೆಯ ನೌಕರರ ಮನವಿ ಆಲಿಸಿ ಸಂಧಾನ  ಮೂಲಕ  ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಬೇಕು: ಸತೀಶ ಜಾರಕಿಹೊಳಿ

ಬೆಳಗಾವಿ:   ರಾಜ್ಯ  ಸರ್ಕಾರ  ಸಾರಿಗೆ ಸಂಸ್ಥೆಯ ನೌಕರರ ಮನವಿ ಆಲಿಸಿ ಸಂಧಾನ  ಮೂಲಕ  ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಪ್ರತಿ ತಿಂಗಳು  ಸರಿಯಾಗಿ  ವೇತನ ನೀಡಬೇಕು. ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಹೀಗೆ ಸಾರಿಗೆ ಸಿಬ್ಬಂದಿಯ  ಅನೇಕ ಅಂಶಗಳುಳ್ಳ ಬೇಡಿಕೆ ಇವೆ.  ಮುಖ್ಯಮಂತ್ರಿಗಳು,ಸಾರಿಗೆ ಮಂತ್ರಿಗಳು  ಮಧ್ಯೆಸ್ಥಿಕೆ ವಹಿಸಿ ನೌಕರರಿಗೆ ಸಂಧಾನ ಮಾಡಬೇಕು …

Read More »

ಟಿಕೆಟ್ ವಿಚಾರವಾಗಿ  ಈಗಾಗಲೇ ನನ್ನ ಹೆಸರು ಕೇಳಿ ಬಂದಿದೆ.  ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಸುತ್ತಿದ್ದಾರೆ:ಸತೀಶ ಜಾರಕಿಹೊಳಿ

ಬೆಳಗಾವಿ:   ಜಿಲ್ಲೆಯ ಶಾಸಕರು ಹಾಗೂ   ಹಿರಿಯ  ನಾಯಕರೊಂದಿಗೆ ಚರ್ಚಿಸಿ ಲೋಕಸಭಾ ಉಪಚುನಾವಣೆ ಸೂಕ್ತ ಅಭ್ಯರ್ಥಿಯನ್ನು   ಅಂತಿಮಗೊಳಿಸಲಾಗುವುದು  ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಕೆಟ್ ವಿಚಾರವಾಗಿ  ಈಗಾಗಲೇ ನನ್ನ ಹೆಸರು ಕೇಳಿ ಬಂದಿದೆ.  ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಸುತ್ತಿದ್ದಾರೆ ಮತ್ತು ಸಹಜವಾಗಿಯೂ ಆಗಿದೆ. ಬೆಂಗಳೂರಿನಲ್ಲಿ ಕುಳಿತು ಹೇಳಲು ಸಾಧ್ಯವಿಲ್ಲ. ಕಮಿಟಿ ಇದೆ.  ಇನ್ನೊಂದು ಬಾರಿ‌ ಸಭೆ ನಡೆಸಿ …

Read More »

100ರೂ.ಗೆ 200ರೂಪಾಯಿ ಕೇಳ್ತೀಯಾ, ಏನ್ ಮಾಡೋಕ್ಕೆ ಆಗುತ್ತೆ, ಸಿಕ್ಕಿದ್ದೇ ಚಾನ್ಸ್ ದುಡ್ಡು ಮಾಡಿಕೊಳ್ಳಿ

ಬೆಂಗಳೂರು, ಡಿ.11- ಸಾರಿಗೆ ನೌಕರರ ದಿಢೀರ್ ಪ್ರತಿಭಟನೆಯಿಂದ ಇಂದು ನಗರದ ರಸ್ತೆ ತುಂಬೆಲ್ಲಾ ಆಟೋಗಳದ್ದೇ ಕಾರುಬಾರು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಇಂದು ಬೆಳಗ್ಗೆಯಿಂದಲೆ ಸೇವೆಯನ್ನು ಸ್ಥಗಿತಗೊಳಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರಿಂದ ಬಸ್‍ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು. ದೈನಂದಿನ ಕೆಲಸ-ಕಾರ್ಯಗಳಿಗೆ ತೆರಳುವ ಸಾರ್ವಜನಿಕರಿಗೆ ಹಾಗೂ ನೌಕರರಿಗೆ ಭಾರೀ ತೊಂದರೆ ಉಂಟಾಗಿತ್ತು. ಮೊದಲೆ ಕೊರೊನಾದಿಂದ ಬಾಡಿಗೆ ಇಲ್ಲದೆ ಕಂಗಾಲಾಗಿದ್ದ ಆಟೋಚಾಲಕರಿಗೆ ಸಾರಿಗೆ ನೌಕರರ ಪ್ರತಿಭಟನೆ ಬಯಸದೆ ಬಂದ ಭಾಗ್ಯದಂತಾಗಿದೆ. …

Read More »

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು : ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಸಿದರು. SCP , TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಿದರು. ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿಸಿ ಪಾಟೀಲ್, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಸರ್ಕಾರದ ಅಪರ‌ ಮುಖ್ಯ …

Read More »

ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ

ಬೆಂಗಳೂರು: ಸಾರಿಗೆ ನೌಕರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ನೌಕರರು ಮುಷ್ಕರ ಆರಂಭಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚಿಸಿರುವ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರ ಮನವೊಲಿಕೆಗೆ ಯತ್ನಿಸಿದ್ದಾರೆ. ರಾಜ್ಯಾದ್ಯಾಂತ ಬಸ್ ಸಂಚಾರ ಸ್ತಬ್ಧವಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ನಂತಹ …

Read More »