ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.ಹೌದು. ಇಂದಿನಿಂದ 5 ದಿನ ಅಂದರೆ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು, ಶ್ರೀಕ್ಷೇತ್ರ ಮದುಮಗಳಂತೆ ಅಲಂಕಾರಗೊಂಡಿದೆ. ಈ ಮೂಲಕ ಭಕ್ತರನ್ನು ಸೆಳೆಯುತ್ತಿದೆ. ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್‍ಬುಕ್‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ಈ …
Read More »Monthly Archives: ಡಿಸೆಂಬರ್ 2020
ಸರಣಿ ಕಳ್ಳತನ- ಖದೀಮರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿಜಯಪುರ: ಬುಧವಾರ ತಡರಾತ್ರಿಯಲ್ಲಿ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಂಧಗಿ ಪಟ್ಟಣದ ಸಂಗೀತಾ ಮೊಬೈಲ್ ಶೋರೂಂನಲ್ಲಿ ಲಕ್ಷಾಂತರ ರೂ. ಮೌಲ್ಯದ ಮೊಬೈಲ್‍ಗಳನ್ನು ಖದೀಮರು ದೋಚಿದ್ದಾರೆ. ಅಲ್ಲದೆ ಸಿದ್ದೇಶ್ವರ ಸೂಪರ್ ಬಾಜಾರ್, ಪೂಜಾರಿ ಟೈರ್ ರಿಮೊಡಿಂಗ್ ಶಾಫ್ ಹಾಗೂ ಸ್ಪೂರ್ತಿ ವೈನ್ ಶಾಫ್ ಗಳಲ್ಲಿಯೂ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ.ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. …
Read More »ಪ್ರತಿಪಕ್ಷಗಳ ವಿರೋಧದ ನಡುವೆ ಜಾರಿಗೆ ತಂದ ಕಾಯ್ದೆ, ಇಂತಹ ಸರಕಾರ ಈವರೆಗೂ ಕಂಡಿಲ್ಲ
ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾಂತ್ಯ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ನಾವು ರೈತರ ಪರವಾಗಿದ್ದು, ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ಕೇಂದ್ರ ಸರಕಾರವು ರದ್ದು ಮಾಡಬೇಕು. ಕಾಯ್ದೆಗಳಲ್ಲಿ ತಿದ್ದುಪಡಿ ತಂದರೆ ಯಾವ ಪ್ರಯೋಜನವು ಇಲ್ಲ, ಕಾಯ್ದೆಗಳನ್ನೇ ರದ್ದು ಮಾಡಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವು ವಿರೋಧ ಪಕ್ಷಗಳನ್ನು ಗಣನೆಗೆ …
Read More »ಕಲ್ಯಾಣ ಕರ್ನಾಟಕದ ಜನರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಘೋಷಣೆಯಾಗಿರುವ 1,100 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಯೋಜನಾ ಇಲಾಖೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಜನರಿಗೆ ಇದು ಭರ್ಜರಿ ಸಿಹಿಸುದ್ದಿಯಾಗಿದೆ. ಸದನದಲ್ಲಿ ಪೂರಕ ಅಂದಾಜು ವಿಷಯದ ಮೇಲೆ ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಅನುದಾನದ ಬಗ್ಗೆ ಪ್ರಸ್ತಾಪಿಸಿದರು. ಅನುದಾನ ಘೋಷಣೆಯಾದರೂ ಬಿಡುಗಡೆಯಾಗದಿರುವುದರಿಂದ ಯಾವುದೇ ಕಾಮಗಾರಿ ಕೈಗೊಳ್ಳಲು ಸಾಧ್ಯವಿಲ್ಲ. ತಕ್ಷಣ ಅನುದಾನ ಬಿಡುಗಡೆಗೆ ಕ್ರಮ …
Read More »ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ- 4ಎ ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ನವದೆಹಲಿ: ದಾಂಡೇಲಿ ಅರಣ್ಯದ ಮೂಲಕ ಹಾದು ಹೋಗುವ ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ- 4ಎ ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ನವೆಂಬರ್ 2019ರಲ್ಲಿ ಕಾಮಗಾರಿಗೆ ತಡೆ ಪರಿಸರವಾದಿ ಹಾಗೂ ನಿರ್ದೇಶಕ ಸುರೇಶ್ ಹೆಬ್ಳಿಕರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲ್ಲಿಸಿದ್ದ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಂಗಳೂರು : ಕುತೂಹಲ ಮೂಡಿಸಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಬೆಳಗಾವಿ ಭಾಗದಲ್ಲಿ ಸತೀಶ್ ಜಾರಕಿಹೊಳಿ ಅವರು ಸಾಕಷ್ಟು ಪ್ರಭಾವ ಹೊಂದಿದ್ದು, ಹೀಗಾಗಿ ಸತೀಶ್ ಜಾರಿಕಿಹೊಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಮವಾರ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ …
Read More »ಜನ್ಮ ದಿನದಂದೇ ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್
ಬೆಂಗಳೂರು: ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ದಂಪತಿಗೆ ಗಂಡು ಮಗುವಿನ ಜನನವಾಗಿದೆ ವಿಶೇಷ ಅಂದ್ರೆ ಇಂದು ಪವನ್ ಒಡೆಯರ್ ಅವರ ಹುಟ್ಟುಹಬ್ಬವಾಗಿದೆ. ಹೀಗಾಗಿ ಇಂದೇ ಮಗನ ಜನನ ಕೂಡ ಆಗಿರುವುದು ಕುಟುಂಬದ ಸಂತಸ ಮತ್ತಷ್ಟು ಹೆಚ್ಚಿಸಿದೆ. ಈ ಖುಷಿಯ ವಿಚಾರವನ್ನು ಪವನ್ ಒಡೆಯರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಪವನ್ …
Read More »ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು 10 ಕೋಟಿ ರೂ.ಆಸ್ತಿಯನ್ನು ಅಡವಿಟ್ಟಿದ್ದಾರೆ.
ಮುಂಬೈ: ಲಾಕ್‍ಡೌನ್ ವೇಳೆ ವಲಸೆ ಕಾರ್ಮಿಕರಿಗೆ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ಬಾಲಿವುಡ್ ನಟ ಸೋನು ಸೂದ್ ನೆರವಾಗಿದ್ದರು. ಈ ಕುರಿತು ಸಾಕಷ್ಟು ಮೆಚ್ಚುಗೆ ಸಹ ವ್ಯಕ್ತವಾಗಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು 10 ಕೋಟಿ ರೂ.ಆಸ್ತಿಯನ್ನು ಅಡವಿಟ್ಟಿದ್ದಾರೆ. ಮುಂಬೈನ ವಿವಿಧ ಪ್ರದೇಶಗಳಲ್ಲಿರುವ 8 ಆಸ್ತಿಗಳನ್ನು ಸೋನು ಸೂದ್ ಅಡವಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು …
Read More »ಸ್ಪಾ ಹೆಸರಿನಲ್ಲಿ ಸೆಕ್ಸ್ ದಂಧೆ…….7 ಯುವತಿಯರು ಸೇರಿದಂತೆ 18 ಜನ ಅರೆಸ್ಟ್,…..
ಲಕ್ನೊ: ಸ್ಪಾ ಹೆಸರಿನಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 7 ಯುವತಿಯರು ಸೇರಿದಂತೆ 18 ಜನರನ್ನ ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ ಕಾರ್ಯಚರಣೆ ನಡೆಸಿದ್ದ ಗ್ರೇಟರ್ ನೋಯ್ಡಾದ ಕೋತವಾಲಿಯ ಬೀಟಾ-2 ಪೊಲೀಸರು 18 ಜನರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರೇಟರ್ ನೋಯ್ಡಾದ ಜಗತ್ ಫಾರಂನೊಳಗೆ ಸ್ಪಾ ಹೆಸರಿನಲ್ಲಿ ಅನೈತಿಕ ಚುಟವಟಿಕೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ದೂರುಗಳ ಬಂದ ಹಿನ್ನೆಲೆ ಡಿಸಿಪಿ ರಾಜೇಶ್ ಕುಮಾರ್ …
Read More »ಹಠ ಬಿಡದ ಅನ್ನದಾತರಿಂದ ಹೋರಾಟ ತೀವ್ರ
ನವದೆಹಲಿ: ಕೇಂದ್ರ ಒಪ್ತಿಲ್ಲ – ರೈತರು ಪಟ್ಟು ಸಡಿಲಿಸ್ತಿಲ್ಲ. ಕೇಂದ್ರ ಕಳಿಸಿದ ಲಿಖಿತ ಭರವಸೆಯನ್ನು ಕೂಡ ರೈತರು ಒಪ್ಪಿಲ್ಲ. ಪರಿಣಾಮ, ಸತತ 14ನೇ ದಿನವೂ ದೆಹಲಿ ಹೊರ ವಲಯದಲ್ಲಿ ಅನ್ನದಾತರ ಪ್ರತಿಭಟನೆ ಮುಂದುವರಿದಿದೆ. ಮಂಗಳವಾರ ರಾತ್ರಿ ಅಮಿತ್ ಶಾ ಜೊತೆಗಿನ ಸಂಧಾನ ಸಭೆ ವಿಫಲವಾದ ಬಳಿಕ ಇವತ್ತಿನ ಸಭೆ ರದ್ದು ಮಾಡಿದ ಕೇಂದ್ರ ಸರ್ಕಾರ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇರುತ್ತೆ ಎಂಬ ಭರವಸೆ ಸೇರಿ ಹಲವು ತಿದ್ದುಪಡಿಗಳಿಗೆ ಸಮ್ಮತಿ …
Read More »