ಬೆಳಗಾವಿ: ಕೆಎಸ್‍ಆರ್ ಪಿ ಉತ್ಸವದ ಅಂಗವಾಗಿ ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ನಡೆಯಿತು. ಹಿರಿಯ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಸೈಕಲ್ ಓಡಿಸಿ ಎಲ್ಲರ ಗಮನ ಸೆಳೆದರು. ಅನೇಕ ಪೊಲೀಸ್ ಅಧಿಕಾರಿಗಳು ಸೈಕಲ್ ಓಡಿಸಿ ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದರು. ಇಂದು ಬೆಳಗ್ಗೆ ಬೆಳಗಾವಿಯ ಸುವರ್ಣ ಸೌಧದಿಂದ ಪ್ರಾರಂಭವಾದ ಸೈಕಲ್ ಜಾಥಾ ಬೆಳಗಾವಿಯ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಎಲ್ಲರ ಗಮನ ಸೆಳೆಯಿತು. ಸೈಕಲ್ ಜಾಥಾದಲ್ಲಿ ಬೆಳಗಾವಿ ಪೊಲೀಸ್ …
Read More »Monthly Archives: ಡಿಸೆಂಬರ್ 2020
LPG ಗ್ರಾಹಕರಿಗೆ ಶಾಕ್: ಸಿಲಿಂಡರ್ ದರ 55 ರೂ. ಹೆಚ್ಚಳ
ನವದೆಹಲಿ: ಕಚ್ಚಾತೈಲದ ಬೆಲೆ ಏರಿಕೆಯಾಗಿರುವ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಾದಿಯಲ್ಲಿದೆ. ಅದೇ ರೀತಿ ಎಲ್ಪಿಜಿ ಗ್ರಾಹಕರಿಗೂ ಕೂಡ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 55 ರೂಪಾಯಿ ಹೆಚ್ಚಳ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ ಬದಲಾವಣೆ ಮಾಡಿಲ್ಲ. ಜುಲೈನಲ್ಲಿ 14.2 ಕೆಜಿ ಗೃಹ ಬಳಕೆ ಸಿಲಿಂಡರ್ ದರ ಪರಿಷ್ಕರಿಸಿದ್ದು, 4 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಅದಕ್ಕಿಂತ ಹಿಂದೆ …
Read More »ರಾಜ್ಯದಲ್ಲಿ 2 ದಿನ ಭಾರೀ ಮಳೆ : 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಡಿಸೆಂಬರ್ 3 ರಂದು ಕನ್ಯಾಕುಮಾರಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ …
Read More »ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು ಗುಣಮುಖ, 1.81 ಲಕ್ಷ ಸಕ್ರಿಯ ಪ್ರಕರಣ
ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ 6.37 ಕೋಟಿಗೂ ಹೆಚ್ಚಾಗಿದ್ದು, ಸಾವಿನ ಸಂಖ್ಯೆ 14.77 ಲಕ್ಷಕ್ಕೆ ತಲುಪಿದೆ. ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ರಾಷ್ಟ್ರಗಳ ಸಾಲಿನಲ್ಲಿ ಮೊದಲನೇ ಸ್ಥಾನದಲ್ಲೇ ಮುಂದುವರಿದಿರುವ ಅಮೆರಿಕದಲ್ಲಿ ಈವರೆಗೆ 1.39 ಕೋಟಿಗೂ ಅಧಿಕ ಜನರಿಗೆ ಸೋಂಕು ತಗುಲಿದ್ದು, 2.74 ಲಕ್ಷಕ್ಕೂ …
Read More »ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ
ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227. ಡಿಸೆಂಬರ್ 1ರಂದು ರಾಜ್ಯದಲ್ಲಿ 1,330 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಮಂಗಳವಾರ 94 ಸಾವಿರ ಪರೀಕ್ಷೆಗಳನ್ನು ಮಾಡಲಾಗಿದೆ. ಇವುಗಳಲ್ಲಿ 20,629 ಆಂಟಿಜೆನ್ ಮತ್ತು 74,256 ಆರ್‌ಟಿಪಿಸಿಆರ್ ಪರೀಕ್ಷೆಗಳು ಸೇರಿವೆ. ಕಳೆದ ಕೆಲವು ದಿನಗಳಿಂದ 1 …
Read More »ನೆಲಸಮಗೊಳಿಸಿರುವ ಬಡವರ ಮನೆ ನಿರ್ಮಿಸಿ ಕೊಡಿ : ಅಶೋಕ ಪೂಜಾರಿ
ಗೋಕಾಕ : ತಾಲ್ಲೂಕಿನ ಧುಪದಾಳ ಗ್ರಾಮದಲ್ಲಿ ನೆಲಸಮ ಮಾಡಿದ ಬಡವರ ಮನೆಗಳನ್ನು ಸರ್ಕಾರದಿಂದ ಶೀಘ್ರದಲ್ಲಿ ಮರು ನಿರ್ಮಾಣ ಮಾಡಬೇಕು ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧುಪದಾಳ( ನವಿಲಮಾಳ) ಸಮೀಪದಲ್ಲಿರುವ ಸರ್ವೆ ನಂ.173/1ರಲ್ಲಿ 140 ಎಕರೆ ಜಮೀನು ಪಾಳು ಬಿದ್ದಿದೆ. ಈ ಜಾಗದಲ್ಲಿ ವಸತಿ ರಹಿತ ಬಡವರು, ಕೂಲಿ ಕಾರ್ಮಿಕರು , ಗೋಕಾಕ್ ಮಿಲ್ ಕಾರ್ಮಿಕರು ಸುಮಾರು 8 ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದಾರೆ. …
Read More »ಖಾನಾಪುರ : ಮಗಳ ಗಂಡನನ್ನ ಕೊಚ್ಚಿ ಕೊಲೆಗೈದ ಪಾಪಿ ಮಾವ
ಕಕ್ಕೇರಿ : ಕೌಟುಂಬಿಕ ಕಲಹದಿಂದ ಅಳಿಯನನ್ನ ಕೊಚ್ಚಿ ಕೊಲೆಗೈದಿರುವ ಘಟನೆ ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಿಷ್ಟಪ್ಪ ಕೊನಸಕುಂಪಿ(43) ಕೊಲೆಯಾದ ದುರ್ದೈವಿ. ಸೋಮವಾರ ರಾತ್ರಿ ಬಿಷ್ಟಪ್ಪ ತನ್ನ ಹೆಂಡತಿಯ ತಂದೆಯೊಂದಿಗೆ ಜಗಳವಾಡಿದ್ದಾನೆ. ಬಳಿಕ ರಾತ್ರಿ ಭತ್ತದ ರಾಶಿ ಕಾಯಲು ಕಣದಲ್ಲಿ ಹೋಗಿದ್ದಾನೆ. ಈ ವೇಳೆ ಮಾವ ಮಲಗಿದ್ದ ಬಿಷ್ಟಪ್ಪ ನ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಂದು ಹಾಕಿ, ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಹೆಸರು ತಿಳಿದು …
Read More »ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಆಟ : ರಾಹುಲ್ ಜಾರಕಿಹೊಳಿ
ಕಬಡ್ಡಿ ಕ್ರೀಡೆಯನ್ನ ಉಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶದ ಯುವಕರ ಮೇಲಿದೆ ಸವದತ್ತಿ: ‘ ನಶಿಸಿ ಹೋಗುತ್ತಿರುವ ಕಬಡ್ಡಿ ಕ್ರೀಡೆಯನ್ನ ಮತ್ತೆ ಜನಪ್ರಿಯಗೊಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶ ಯುವಕರ ಮೇಲಿದೆ’ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಸಿಂದೋಗಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ, ಮಾತನಾಡಿದರು. ‘ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕಬಡ್ಡಿ ಪಂದ್ಯಾವಳಿಗಳನ್ನು ಆಯೋಜಿಸಬೇಕು. ಇದರಿಂದ ನಶಿಸಿ ಹೊಗುತ್ತಿರುವ …
Read More »ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ, ಸಚಿವ ಸ್ಥಾನ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು
ಬೆಳಗಾವಿ: ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ, ಸಚಿವ ಸ್ಥಾನ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಲಸಿಗರು ಹಾಗೂ ಮೂಲ ಬಿಜೆಪಿಗರ ಮಧ್ಯೆ ಯಾವುದೇ ತಿಕ್ಕಾಟವಿಲ್ಲ. ಬಿಜೆಪಿಯಲ್ಲಿನ ತಿಕ್ಕಾಟ ಇದು ಮಾಧ್ಯಮಗಳ ಸೃಷ್ಟಿ ಎಂದರು. ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿ, ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಮುಂದಿನ …
Read More »ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿನ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ರೈತರ ಅನುಕೂಲಕ್ಕಾಗಿ ಮೆಕ್ಕಜೋಳ ಖರೀದಿಗೆ ನಮ್ಮ ಸಂಸ್ಥೆ ಮುಂದಾಗಿದ್ದು, ಅಂದಾಜು …
Read More »