Breaking News

Yearly Archives: 2020

ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ

ಕಲಬುರಗಿ: ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಲಬುರಗಿ ಮಹಿಳಾ ಠಾಣೆಯ ಪೊಲೀಸರು ಯುವಕನ ಪೋಷಕರಿಗೆ ಥಳಿಸಿದ್ದು, ಯುವಕ ಅಯ್ಯಪ್ಪ ಸ್ವಾಮಿ ತಂದೆ ತುಕಾರಾಮ್ ಮತ್ತು ತಾಯಿ ಸುಜಾತ ಅವರನ್ನು ಪೊಲೀಸ್ ಠಾಣೆಯಲ್ಲೇ ಮನ ಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಿಂದ ಪೋಷಕರನ್ನು ಕರೆಸಿ ಪೊಲೀಸರು ಹಲ್ಲೆ ಮಾಡಿದ್ದಾರೆ. ಕಲಬುರಗಿಯ ಯುವತಿ ವಿಜಯಪುರ ಯುವಕನ ಮಧ್ಯೆ …

Read More »

ಕರ್ನಾಟಕ ಬಂದ್‍ಗೆ ಬೆಂಬಲ ನೀಡಿ: ಸಾ.ರಾ.ಗೋವಿಂದು

ಬೆಂಗಳೂರು, ನ.23- ಕನ್ನಡಿಗರ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಇಂದು ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾಗಿದೆ. ನಮ್ಮವರಿಂದಲೇ ನಮಗೆ ನಿರಂತರ ಅನ್ಯಾಯವಾಗುತ್ತಿದೆ. ಹಾಗಾಗಿ ನಾವೆಲ್ಲ ಒಟ್ಟಾಗಿ ಹೋರಾಟ ಮಾಡಿ ಕನ್ನಡವನ್ನು, ಕನ್ನಡಿಗರನ್ನು ಕಾಪಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದಕ್ಕಾಗಿ ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದ್ದೇವೆ. ಎಲ್ಲರೂ ಬೆಂಬಲ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮನವಿ ಮಾಡಿದರು. ಮರಾಠ ಅಭಿವೃದ್ಧಿ ನಿಗಮ …

Read More »

ರಮೇಶ್ ಜಾರಕಿಹೊಳಿ ಕಿಂಗ್ ಮೇಕರ್ ಅಲ್ಲ. ಅವರು ಉತ್ಸಾಹದಿಂದ ಕೆಲಸ ಮಾಡುತ್ತಾರೆ.:ಅಶ್ವತ್ಥನಾರಾಯಣ್

ತುಮಕೂರು, ನ.23- ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವು ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಅಸ್ತ್ರ ಬಳಸುತ್ತಿಲ್ಲ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುವವರು ಎಂದು ಡಿಸಿಎಂ ಅಶ್ವತ್ಥನಾರಾಯಣ್ ತಿರುಗೇಟು ನೀಡಿದ್ದಾರೆ. ರೋಷನ್ ಬೇಗ್ ಅವರ ಮೇಲೂ ಸಿಬಿಐ ಅಧಿಕಾರಿಗಳು ಕಾನೂನು ಪ್ರಕಾರ ದಾಳಿ ನಡೆಸಿದ್ದಾರೆ. ಅದರ ವಿಚಾರಣೆಯೂ ನ್ಯಾಯ ಸಮ್ಮತವಾಗಿ ನಡೆಯಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಬಗ್ಗೆ ಮುಖ್ಯಮಂತ್ರಿ ಅವರ ತೀರ್ಮಾನವೇ …

Read More »

ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978.

ಬೆಂಗಳೂರು: ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978. ಸಿನಿಮಾ ರಿಲೀಸ್ ಆಗಿ ಇನ್ನೂ 3 ದಿನ ಕಳೆದಿಲ್ಲ, ಎಲ್ಲರ ಬಾಯಲ್ಲೂ ಇದರದ್ದೇ ಮಾತು. ಅಷ್ಟೇ ಅಲ್ಲ ಈ ಸಿನಿಮಾವನ್ನ ಸ್ಟಾರ್ ನಟರು ಮೆಚ್ಚಿಕೊಂಡಿದ್ದು ಚಿತ್ರತಂಡಕ್ಕೆ ಮತ್ತಷ್ಟು ಸ್ಪೂರ್ತಿ ನೀಡಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರತಂಡಕ್ಕೆ ಮತ್ತಷ್ಟು ಬಲ ತುಂಬಲು ಕೈ ಜೋಡಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ …

Read More »

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಇತ್ತೀಚೆಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದರು. ಆದರೆ ಅನುದಾನದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ. ಇದೀಗ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Read More »

ಬಿಜೆಪಿ ತೊರೆದು ಕಾಡಾ ಮಾಜಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆಯಾದರು.

ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ತುಂಗಭದ್ರಾ ಕಾಡಾ ಮಾಜಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಅವರು ಬಿಜೆಪಿ ತೊರೆದು ಸಾವಿರಾರು ಬೆಂಬಲಿಗರ ಜೊತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಹಾಗೂ ಹಲವು ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸೇರ್ಪಡೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಆರ್.ಬಸನಗೌಡ ತುರ್ವಿಹಾಳ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ …

Read More »

ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವು:ಸತೀಶ್ ಜಾರಕಿಹೊಳಿ

ರಾಯಚೂರು: ಮಸ್ಕಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶ ಹಾಗೂ ಆರ್.ಬಸನಗೌಡ ಅವರ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಲು ಬಂದಿರುವ ಮುಖಂಡರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಮೂಲಕ ವೇದಿಕೆಗೆ ಕರೆತರಲಾಯಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಜಿಲ್ಲೆಯ ಮುಖಂಡರು ಭಾಗವಹಿಸಿದ್ದಾರೆ. ಮಸ್ಕಿ: ಪಕ್ಷದ ಗೆಲುವಿಗಾಗಿ ನೀವು ತೋರಿರುವ ಬೆಂಬಲ, ಪ್ರೀತಿ, ಉತ್ಸಾಹ, …

Read More »

ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿಯವರನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿನಯ್ ಕುಲ್ಕರ್ಣಿಯವರನ್ನು ಇನ್ನಷ್ಟು ವಿಚಾರಣೆ ನಡೆಸಲಿರುವ ಅಗತ್ಯವಿರುವುದರಿಂದ ಮತ್ತಷ್ಟು ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಸಿಬಿಐ …

Read More »

ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್‍ಗೆ ಬರುತ್ತಾರೆ:ಡಿ.ಕೆ.ಶಿವಕುಮಾರ್

ಕೊಪ್ಪಳ, ನ.23: ಬಿಜೆಪಿಯಿಂದಲೇ ಕಾಂಗ್ರೆಸ್‍ಗೆ ಸೇರ್ಪಡೆ ಆಗುವವರು ಬಹಳಷ್ಟು ಮಂದಿ ಇದ್ದಾರೆ. ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್‍ಗೆ ಬರುತ್ತಾರೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪರಿಗೆ ತಮ್ಮ ಸರಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ …

Read More »

ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.

ರಾಯಚೂರು: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಸೇರಿದಂತೆ ಹಲವು ಮುಖಂಡರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖಂಡರ ಆಗಮನವನ್ನು ಬೆಂಬಲಿಗರು ನಿರೀಕ್ಷಿಸುತ್ತಿದ್ದು, ಆರ್.ಬಸನಗೌಡ ತುರುವಿಹಾಳ ಅವರು ಬೆಂಬಲಿಗರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ …

Read More »