Breaking News

Yearly Archives: 2020

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯು ಚುನಾವಣೆಗೆ ಮಾಡಿರುವ ತಂತ್ರ: ಸತೀಶ್ ಜಾರಕಿ ಹೊಳಿ

ಗೋಕಾಕ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯು ಚುನಾವಣೆಗೆ ಮಾಡಿರುವ ತಂತ್ರವಾಗಿದೆ. ನಿಗಮ, ಪ್ರಾಧಿಕಾರ ಸ್ಥಾಪನೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಬೇಕು. ಜಾತಿಗೊಂದು ನಿಗಮ, ಪ್ರಾಧಿಕಾರ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ. ಭಾರತದಲ್ಲಿ 5 ರಿಂದ ಆರು ಸಾವಿರ ಜಾತಿಗಳಿವೆ ಎಲ್ಲಾ ಜಾತಿಗಳಿಗೆ ಬಿಜೆಪಿಯು ನಿಗಮ ಪ್ರಾಧಿಕಾರ ಮಾಡುವ ಮುಖಾಂತರ ಪ್ರಜಾಪ್ರಭುತ್ವ ವಿರೋಧಿ ಕೆಲಸವನ್ನು ಮಾಡಲು ಹೊರಟಿದೆ ಎಂದು ಶಾಸಕ, ಕೆಪಿಸಿಸಿ …

Read More »

ಸರಕಾರದ ನಿರ್ಧಾರ ಖಂಡಿಸಿ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‍ಗೆ ಕರೆ

ಬೆಂಗಳೂರು : ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ಖಂಡಿಸಿ ಇಂದು ವಾಟಲ್ ನಾಗರಾಜ್ ಹಾಗೂ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರಕಾರದ ನಿರ್ಧಾರವನ್ನು ಖಂಡಿಸಿ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿ ಬೆಂಬಲ ಸೂಚಿಸಲಾಯಿತು. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವಿರೋಧ ವ್ಯಕ್ತವಾಗುತ್ತಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಈ ಹಿಂದೆ …

Read More »

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿ.ಎಲ್ ಸಂತೋಷರನ್ನ ಭೇಟಿಯಾದ ಸಚಿವ ರಮೇಶ ಜಾರಕಿಹೊಳಿ

ಬೆಂಗಳೂರು : ಬಿಜೆಪಿ  ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು ಜಲಸಂಪನ್ಮೂಲ ಸಚಿವ  ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕ ಬಿ.ಎಲ್ ಸಂತೋಷ್  ಅವರಿಗೆ ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಜತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ …

Read More »

ಸರ್ಕಾರಿ ಜಮೀನು ವಿವಾದದಿಂದ ಪಿಡಿಓ ವಾಹನಕ್ಕೆ ಬೆಂಕಿ ಇಟ್ಟ ಘಟನೆ

ಚಿಕ್ಕಮಗಳೂರು: ಸರ್ಕಾರಿ ಜಮೀನು ವಿವಾದದಿಂದ ಪಿಡಿಓ ವಾಹನಕ್ಕೆ ಬೆಂಕಿ ಇಟ್ಟ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಬಾಸಾಪುರ ಗ್ರಾಮದಲ್ಲಿ ನಡೆದಿದೆ. ಬಗರ್ ಹುಕುಂ ಜಮೀನಿಗಾಗಿ 2 ಕುಟುಂಬಗಳ ನಡುವೆ ಕಲಹ ಉಂಟಾಗಿದ್ದು, ಜಮೀನಿನಲ್ಲೇ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಪೊಲೀಸರು ಭದ್ರಾವತಿ ತಾಲೂಕಿನ ಪಿಡಿಓ ಹನುಮಂತಪ್ಪನನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಸ್ಥಳಕ್ಕೆ …

Read More »

ರಾಜ್ಯ ಸರ್ಕಾರ ಒಪ್ಪಿಗೆ ನೀಡದಿದ್ದರೆ ಸಿಬಿಐ ತನಿಖೆ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೆ ಸಿಬಿಐ ಯಾವುದೇ ರಾಜ್ಯದಲ್ಲಿ ತನಿಖೆ ನಡೆಸಲು ಸಾಧ್ಯವಿಲ್ಲ. ಯಾವುದೇ ರಾಜ್ಯದಲ್ಲಾಗಲಿ ಸಿಬಿಐ ತನಿಖೆಗೆ ಮುನ್ನ ಆಯಾ ರಾಜ್ಯದ ಒಪ್ಪಿಗೆ ಪಡೆದಿರಬೇಕು. ರಾಜ್ಯ ಸರ್ಕಾರ ಒಪ್ಪಿಗೆ ನೀಡದಿದ್ದರೆ ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲಹಾಬಾದ್‍ನ ಫರ್ಟಿಕೋ ಮಾರ್ಕೆಟಿಂಗ್ ಕಂಪೆನಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ ಅಧಿಕಾರಿಗಳು ಸಲ್ಲಿಸಿದ್ದ …

Read More »

ಪತ್ನಿಕೊಂದ ಪಾಪಿ ಗಂಡ, ಮಗು ಬಚಾವ್

ಕೊರಟಗೆರೆ, ನ.19- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಂದ್‍ಪಾಷನ ಪೈಶಾಚಿಕ ಕೃತ್ಯಕ್ಕೆ ಸಾವನ್ನಪ್ಪಿದ ಮಹಿಳೆಯನ್ನು ಜಬೀನಾ (32) ಎಂದು ಗುರುತಿಸಲಾಗಿದೆ. ತಂದೆಯಿಂದ ತೀವ್ರವಾಗಿ ಗಾಯಗೊಂಡಿರುವ 9 ವರ್ಷದ ಮಹಮದ್ ಆಲಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರಟಗೆರೆ ಪಟ್ಟಣದ ರೇಣುಕಾ ಆಸ್ಪತ್ರೆಯ ಹಿಂಭಾಗ ವಾಸಿಸುತ್ತಿದ್ದ ದಂಪತಿ ಪ್ರತಿ ನಿತ್ಯ …

Read More »

ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸುತ್ತಿದ್ದ ಆರು ಮಂದಿಯನ್ನು ಭಾರತೀನಗರ ಪೊಲೀಸರು ಬಂಧಿಸಿ 5.83 ಲಕ್ಷ ಹಣವನ್ನು ವಶ

ಬೆಂಗಳೂರು,:- ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸುತ್ತಿದ್ದ ಆರು ಮಂದಿಯನ್ನು ಭಾರತೀನಗರ ಪೊಲೀಸರು ಬಂಧಿಸಿ 5.83 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಸಾಹೀಲ್ ಅಹಮ್ಮದ್(25), ಸಯ್ಯದ್ ಸುಹೇಲ್(25), ಸಯ್ಯದ್ ಜವಾದ್(20), ಮಹಮದ್ ಸಾಲ್ಹೆ ಅಲಿ ಅಪೀಸ್(20), ಮಹಮದ್ ಶಾಬಾಜ್(24) ಮತ್ತು ಸಯ್ಯದ್ ರವೂಪ್(19) ಬಂಧಿತರು. ಆರೋಪಿಗಳು ಎಕೆಝೆಡ್ ಸೀಫುಡ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ರಾತ್ರಿ ವೇಳೆ ಸಂಚು ರೂಪಿಸಿ ದರೋಡೆ ನಡೆಸಿ, ನಂತರ ಅವರೇ ಠಾಣೆಗೆ ಬಂದು ದೂರು ನೀಡುತ್ತಿದ್ದರು ನವೆಂಬರ್ 9 …

Read More »

ರಸ್ತೆ ಮಧ್ಯೆ ವಾಹನ ಅಡ್ಡಗಟ್ಟಿ ದರೋಡೆ ಮಾಡಿದ್ ಪ್ರಕರಣವನ್ನ ಕೆಲವೇ ಗಂಟೆಗಳಲ್ಲಿ ಮಾನ್ವಿ ಠಾಣೆ ಪೊಲೀಸರು ಭೇದಿಸಿ ಆರೋಪಿಗಳನ್ನ ಬಂಧಿಸಿದ್ದಾರೆ.

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಓಮಿನಿ ವಾಹನವನ್ನ ಅಡ್ಡಗಟ್ಟಿ ದರೋಡೆ ಮಾಡಿದ್ದ ಪ್ರಕರಣವನ್ನ ಕೆಲವೇ ಗಂಟೆಗಳಲ್ಲಿ ಮಾನ್ವಿ ಠಾಣೆ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ರಾಯಚೂರು ಮಾನ್ವಿ ಮಧ್ಯೆ ರಸ್ತೆಯಲ್ಲಿ ಓಮಿನಿ ವಾಹನ ಅಡ್ಡಗಟ್ಟಿ ದರೋಡೆ ಮಾಡಿದ್ದ ಶೇಕ್ ಅಬ್ದುಲ್, ಗುರುಕುಮಾರ್, ಸೈಯದ್ ಹಕೀಂ ,ಅಸ್ಲಾಂ ಷಾ ಹಾಗೂ ದರೋಡೆಗೆ ಸಾಥ್ ನೀಡಿದ್ದ ಓಮಿನಿ ಚಾಲಕ ಗುರುರಾಜನನ್ನ ಬಂಧಿಸಲಾಗಿದೆ ನಾಲ್ಕು ಜನರ ತಂಡ ವಾಹನವನ್ನ ಅಡ್ಡಗಟ್ಟಿ 5 ಲಕ್ಷ …

Read More »

ಡಿಸೆಂಬರ್ 10ರ ವರೆಗೆ ಬಸ್‍ಗಳಲ್ಲಿ ವಿದ್ಯಾರ್ಥಿಗಳು ಸಂಚರಿಸಬಹುದಾಗಿದೆ.

ಬೆಂಗಳೂರು: ವಿದ್ಯಾರ್ಥಿಗಳು ಕಾಲೇಜಿಗೆ ಸಂಚರಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದ್ದು, 2019-20ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್ ಪಾಸ್ ಬಳಸಿ ಡಿಸೆಂಬರ್ 10ರ ವರೆಗೆ ಸಂಚರಿಸಲು ಅವಕಾಶ ನೀಡಿದೆ. ಈ ಕುರಿತು ಸಾರಿಗೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನವೆಂಬರ್ 17ರಿಂದ ರಾಜ್ಯದ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು, ಪದವಿ, ವೂದ್ಯಕೀಯ, ತಾಂತ್ರಿಕ, ಡಿಪ್ಲೋಮಾ, ಅನುದಾನಿತ, ಅನುದಾನ ರಹಿತ ಕಾಲೇಜುಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ. …

Read More »

ಸದ್ಯದಲ್ಲೇ ಕೊರೋನಾ ಲಸಿಕೆ,,,!

ಬೆಂಗಳೂರು: ಸದ್ಯದಲ್ಲೇ ಕೊರೋನಾ ಲಸಿಕೆಯ ಗುಡ್‍ನ್ಯೂಸ್ ಸಿಗುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೋರೋನಾ ಲಸಿಕೆ ಹಂಚಿಕೆ, ಸುರಕ್ಷಿತ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ಲಸಿಕೆ ವಿತರಿಸಲು ಮಾಡಿಕೊಂಡಿರುವ ವ್ಯವಸ್ಥೆಗಳ ಕುರಿತು ಅಂಕಿ ಅಂಶ ಸಮೇತ ಕೇಂದ್ರಕ್ಕೆ ಮಾಹಿತಿ ನೀಡಿದೆ. ಸಾರ್ವಜನಿಕರಿಗೆ ಕೊರೋನಾ ಲಸಿಕೆ ನೀಡಲು ರಾಜ್ಯ ರೆಡಿ ಇದೆ ಎಂಬ ಸಂದೇಶ ರವಾನಿಸಿದೆ.ಈಗಾಗಲೇ ಲಸಿಕೆ ಸ್ಟೋರೇಜ್‍ಗೆ ಬೆಂಗಳೂರಿನ ದಾಸಪ್ಪ ಆಸ್ಪತ್ರೆ, ಬಾಗಲಕೋಟೆಯ ಜಿಲ್ಲಾಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲಾ …

Read More »