Breaking News

Yearly Archives: 2020

ಮದುವೆಯಾಗು ಎಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವತಿ

ಕಲಬುರಗಿ: ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಸೂರು ನಾಯಕ ತಾಂಡಾದಲ್ಲಿ ನಡೆದಿದೆ. ಮೃತ ಯುವತಿಯನ್ನು ಕಾವೇರಿ ಪವಾರ್(23) ಎಂದು ಗುರುತಿಸಲಾಗಿದೆ. ಪ್ರಿಯಕರ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮನನೊಂದು ಕಾವೇರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಕಾವೇರಿ ಮತ್ತು ಸಲಗರ ಕಾಲೋನಿ ಯುವಕ ಮಾನಸಿಂಗ್ ರಾಠೋಡ್ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ತನ್ನನ್ನು ಮದುವೆಯಾಗು ಎಂದಿದ್ದಕ್ಕೆ ಮಾನಸಿಂಗ್ ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ …

Read More »

ಗೆಳೆಯರೊಂದಿಗೆ ಈಜಲು ಹೋದ 15 ವರ್ಷದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಗದಗ: ಗೆಳೆಯರೊಂದಿಗೆ ಈಜಲು ಹೋದ 15 ವರ್ಷದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಗಸ್ತ್ಯತೀರ್ಥ ಹೊಂಡದಲ್ಲಿ ಘಟನೆ ನಡೆದಿದೆ. ಬ್ಯಾಡಗಿ ಮೂಲದ ಹರ್ಷವರ್ಧನ್ ಅರಕೇರಿ ಈಜಲು ಬಾರದೆ ಹೊಂಡದಲ್ಲಿ ಸಾವನ್ನಪ್ಪಿದ ಬಾಲಕ. ದೀಪಾವಳಿ ಹಬ್ಬಕ್ಕೆಂದು ಬ್ಯಾಡಗಿಯಿಂದ ಲಕ್ಷ್ಮೇಶ್ವರದ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕ, ಸ್ಥಳೀಯ ನಾಲ್ಕು ಜನ ಸ್ನೇಹಿತರೊಂದಿಗೆ ಈಜಲು ಹೋಗಿದ್ದಾನೆ. ಬಟ್ಟೆಗಳನ್ನು ಹೊಂಡದ ದಡದಲ್ಲಿಟ್ಟು ನೀರಿಗೆ ಹಾರಿದ್ದಾರೆ. ಹೊಂಡದಲ್ಲಿದ್ದ ಹೂಳಲ್ಲಿ ಸಿಲುಕಿದ್ದರಿಂದ ಈಜಲು ಬಾರದೆ …

Read More »

ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಧರ್ಮದೇಟು

ಬೆಂಗಳೂರು: ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಧರ್ಮದೇಟು ಬಿದ್ದಿದೆ. ಬೆಂಗಳೂರಿನ ಗಾಂಧಿನಗರದ ತ್ರಿಭವನ್ ಥೇಟರ್ ಬಳಿ ಈ ಘಟನೆ ನಡೆದಿದೆ. ವ್ಯಕ್ತಿಗೆ ಸ್ಥಳೀಯರು ಥಳಿಸುತ್ತಿರುವ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ತೆಲುಗು ಭಾಷೆ ಮಾತನಾಡುವ ವ್ಯಕ್ತಿ ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸಾರ್ವಜನಿಕರು ಆತನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಧರ್ಮದೇಟು ಕೊಟ್ಟ ಬಳಿಕ ಸಾರ್ವಜನಿಕರೇ ಆ ವ್ಯಕ್ತಿಯನ್ನ ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ. …

Read More »

B.S.Y.ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಮಹದೇವ ಪ್ರಕಾಶ್ ಅವರು ಮಾಧ್ಯಮ ಸಲಹೆಗಾರರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.ಮೂಲಗಳ ಪ್ರಕಾರ ಇತ್ತೀಚಿಗೆ ಮಹಾದೇವ ಪ್ರಕಾಶ್ ಕಾರ್ಯವೈಖರಿಗೆ, ಯಡಿಯೂರಪ್ಪ ಅವರು …

Read More »

ಕನ್ನಡಿಗರನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ.:ವಾಟಾಳ್ ನಾಗರಾಜ್ , ಸಾ.ರಾ.ಗೋವಿಂದು

ಬೆಂಗಳೂರು, ನ.19- ಕನ್ನಡಿಗರನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ. ಯಾವುದೇ ಧಮ್ಕಿಗೂ ಹೆದರುವುದಿಲ್ಲ, ಜಗ್ಗುವುದಿಲ್ಲ. ಉಸಿರು ಇರುವವರೆಗೂ ಹೋರಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಇಂದು ವಿಧಾನಸೌಧದ ದೇವರಾಜ ಅರಸು ಪ್ರತಿಮೆ ಮುಂಭಾಗ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ವಾಟಾಳ್ ನಾಗರಾಜ್ , ಸಾ.ರಾ.ಗೋವಿಂದು ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದಕ್ಕೂ ಮುನ್ನ ಮಾತನಾಡಿದ ವಾಟಾಳ್, ಸರ್ಕಾರ ತನ್ನ ಧೋರಣೆಯನ್ನು ಬದಲಿಸದಿದ್ದರೆ ಡಿ.5ರಂದು ಅಖಂಡ ಕರ್ನಾಟಕ ಬಂದ್ …

Read More »

ನಗರಸಭೆ-ಪುರಸಭೆ- ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ರದ್ದು..!

ಬೆಂಗಳೂರು ನ19.ಇತ್ತೀಚೆಗಷ್ಟೇ ನಡೆದಿದ್ದ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಯನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ. ಇತ್ತೀಚೆಗಷ್ಟೇ ಮೀಸಲಾತಿಯ ವಿರುದ್ಧ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು ಈ ಸಂದರ್ಭದಲ್ಲಿ ಏಕಸದಸ್ಯಪೀಠ ಅದನ್ನ ವಜಾಗೊಳಿಸಿ ನವೆಂಬರ್ ಎರಡರ ಒಳಗೆ ಚುನಾವಣೆಗಳನ್ನು ನಡೆಸಲು ಸೂಚನೆ ನೀಡಿತ್ತು . ಅದರಂತೆ ಈಗಾಗಲೇ ರಾಜ್ಯದ ಹಲವಾರು ಕಡೆ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಪದಗ್ರಹಣ ಮಾಡಿದ್ದಾರೆ .ಆದರೆ …

Read More »

ಶಶಿಕಲಾ ಜೊಲ್ಲೆ ಸಂಪುಟದಿಂದ ಕೈ ಬಿಡುವ ಸಾಧ್ಯತೆ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ

ಬೆಂಗಳೂರು :  ಸಚಿವ ಸಂಪುಟ ಪುನಾರಚನೆಯಲ್ಲಿ ಶಾಸಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದ್ದು, ಈಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸಂಪುಟದಿಂದ ಕೈ ಬಿಡುವ ಸಾಧ್ಯತೆ ಇದೆ. ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ, ಪಟ್ಟಿ ನೀಡಿದ್ದಾರೆ. ಸುಮಾರು 50 ನಿಮಿಷಗಳ ಕಾಲ ಸಿಎಂ ಬಿಎಸ್ ವೈ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾವರ  …

Read More »

ಮಾಸ್ಕ್ ದಂಡದ ಮೊತ್ತವನ್ನು 2000 ರೂ ಗೆ ಹೆಚ್ಚಳ

ನವದೆಹಲಿ: ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದೆಹಲಿ ಸರ್ಕಾರ ದಂಡದ ಮೊತ್ತವನ್ನು 2000ರೂ ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ದೆಹಲಿಯಲ್ಲಿ ದಿನದಿಂದ ದಿನಕ್ಕೆ ಆರರಿಂದ ಏಳು ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸಾರ್ವಜನಿಕರು ಮಾಸ್ಕ್ ನಿರ್ಲಕ್ಷ್ಯ ಮಾಡುತ್ತಿರುವುದರಿಂದ ಕಠಿಣ ಕ್ರಮ ಕೈಗೊಂಡಿರುವ ಸರ್ಕಾರ 500 ರೂ ಇದ್ದ ಮಾಸ್ಕ್ ದಂಡದ ಮೊತ್ತವನ್ನು 2000 ರೂ …

Read More »

ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ ಜಾರಕಿಹೊಳಿ

ಗೋಕಾಕ : ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ತಮ್ಮ ಹುಟ್ಟು ಹಬ್ಬವನ್ನು ಗುರುವಾರ ಇಲ್ಲಿನ ಶಿವಾ ಪೌಂಡೇಷನ್ ಸಂಸ್ಥೆಯಲ್ಲಿರುವ ಹೆಚ್ ಐವಿ ಪೀಡಿತ, ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಆಚರಿಸಿಕೊಂಡರು. ಸರ್ವೋತ್ತಮ ಜಾರಕಿಹೊಳಿ ಅವರನ್ನು ಮುದ್ದಾದ ಮಕ್ಕಳು ಗುಲಾಬಿ ಹೂ ಕೊಡುವ ಮೂಲಕ ಸ್ವಾಗತಿಸಿದರು. ಜನ್ಮ ದಿನದ ಶುಭ ಕೋರಿದರು. ಬಳಿಕ ಸರ್ವೋತ್ತಮ ಮಕ್ಕಳ ಮುಂದೆಯೇ ಕೇಕ್ ಕತ್ತಿಸಿ, ಸಿಹಿ ಹಂಚಿಸಿದರು. ತದನಂತರ ಮಕ್ಕಳಿಗೆ ಸ್ಕೂಲ್ ಬ್ಯಾಗ್, …

Read More »

ರಾಹುಲ್, ಪ್ರಿಯಾಂಕಾರಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 103ನೇ ಜಯಂತಿ ಆಚರಣೆ

ಗೋಕಾಕ್ : ಇಲ್ಲಿನ ಹಿಲ್ ಗಾರ್ಡ್ ನ ಗೃಹ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜಯಂತಿಯನ್ನು ಅದ್ದೂರಿಯಿಂದ ಗುರುವಾರ ಆಚರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ರವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾಜಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿವೇಕ ಜತ್ತಿ ಮಾತನಾಡಿ, ಉಕ್ಕಿನ ಮಹಿಳೆ ಎಂದು ಕರೆಯುವ …

Read More »