ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಏಳನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಪಾಟ್ನಾ ರಾಜಭವನದೊಳಗೆ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ನಿತೀಶ್ ಕುಮಾರ್ ನಾಲ್ಕನೇ ಅವಧಿಗೆ ಬಿಹಾರದ ಗದ್ದುಗೆ ಏರಿದ್ದಾರೆ. ಇನ್ನು ಬಿಜೆಪಿಯ ತರ್ಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ತರ್ಕಿಶೋರ್ ಪ್ರಸಾದ್ ಕಟಿಹಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸುಶೀಲ್ ಮೋದಿ ಅವರ ಆಪ್ತರಲ್ಲಿ …
Read More »Yearly Archives: 2020
ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಯಡಿಯೂರಪ್ಪರವರಿಗೆ ಮನವಿ ಮಾಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ: ಕೋವಿಡ್ 19ಗೆ ಸಂಬಂಧಿಸಿದಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ. ಈ ಮನವಿ ಕುರಿತು ಸಿಎಂ ಯಡಿಯೂರಪ್ಪನವರು ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ಗೌರವಧನ ಬಿಡುಗಡೆಗೆ ಆದೇಶ ನೀಡಬೇಕೆಂದು ಅವರು …
Read More »ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಪ್ರವೀಣ್ ಶೆಟ್ಟಿ ಸರಕಾರಕ್ಕೆ ಎಚ್ಚರಿಕೆ
ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಆದೇಶ ವಾಪಾಸ್ ಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಅಧ್ಯಕ್ಷ ಪ್ರವೀಣ್ ಶೆಟ್ಟಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಇಂದು ಮರಾಠರು ನಾಳೆ ಮಾರವಾಡಿಗಳು, ತಮಿಳರು ಹೀಗೆ ಸರಕಾರ ಬೇರೆಯವರಿಗೆ ಪ್ರಾಧಿಕಾರ ರಚನೆ ಮಾಡಲು ಮುಂದಾಗಿದೆ. ಇದು ಎಷ್ಟರ ಮಟ್ಟಿಗೆ ಸರಿ, ಸರಕಾರ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಮರಾಠಿಗರು ಕನ್ನಡ ರಾಜ್ಯೋತ್ಸವದ …
Read More »ಲಿಂಗಾಯತ ಅಭಿವೃದ್ಧಿಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ.:ಹೊರಟ್ಟಿ,ಎಂ.ಬಿ.ಪಾಟೀಲ್
ಬೆಂಗಳೂರು, ನ. 15: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನೆಲ್ಲೆ ಲಿಂಗಾಯತ ಅಭಿವೃದ್ಧಿ ನಿಗಮ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶೀಘ್ರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಪತ್ರ ಬರೆಯುವ ಮುಖಾಂತರ …
Read More »ಬ್ಯಾಂಡ್ ಬಾರಿಸಿ ತಮಟೆ ಬಾರಿಸಿ ಬಾಯಿ ಬಡಿದುಕೊಂಡರೆ ಯಾರಿಗೂ ಸಚಿವ ಸ್ಥಾನ ಸಿಗಲ್ಲ:ರೇಣುಕಾಚಾರ್ಯ
ದಾವಣಗೆರೆ: ಬ್ಯಾಂಡ್ ಬಾರಿಸಿ ತಮಟೆ ಬಾರಿಸಿ ಬಾಯಿ ಬಡಿದುಕೊಂಡರೆ ಯಾರಿಗೂ ಸಚಿವ ಸ್ಥಾನ ಸಿಗಲ್ಲ ಎಂದು ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ವಿಚಾರವಾಗಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಎಲ್ಲ ಶಾಸಕ ಸಭೆ ಮಾಡಿ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡುವಂತೆ ಸಿಎಂಗೆ ಒತ್ತಾಯ ಮಾಡಿದ್ದೇವೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು ದಾವಣಗೆರೆ ಮಧ್ಯ …
Read More »ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ.ಸಿಎಂ:ಲಕ್ಷ್ಮಣ್ ಸವದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ತಕ್ಷಣ ಎರಡು ತಿಂಗಳ ವೇತನ ಕೊಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸವದಿ, ಸಾರಿಗೆ ಇಲಾಖೆ ಸಿಬ್ಬಂದಿಯ ಮೂರು ತಿಂಗಳ ವೇತನ ಸಮಸ್ಯೆ ಇದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ವೇತನ ಕೊಡಲು ಸಂಕಷ್ಟ …
Read More »ಏರಿಯಾದಲ್ಲಿ ನಮ್ಮ ಹವಾನೇ ಜಾಸ್ತಿ ಇರಬೇಕು ರಸ್ತೆ ಪಕ್ಕದಲ್ಲೇ ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್
ಬೆಂಗಳೂರು: ಏರಿಯಾದಲ್ಲಿ ಹವಾ ಮೆಂಟೈನ್ ಮಾಡಬೇಕೆಂದು ಯುವಕನೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಸ್ನೇಹಿತರೇ ಆದ ಅಶೋಕ್ ಮತ್ತು ಅವನ ಸಹಚರರು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಕಾರ್ತಿಕ್ ಹಾಗೂ ಹಂತಕ ಅಶೋಕ್ ಒಂದೇ ಗ್ಯಾಂಗ್‍ನ ಸದಸ್ಯರಾಗಿದ್ದು, ಏರಿಯಾದಲ್ಲಿ ನಾನೇ ಜಾಸ್ತಿ ಹವಾ ಮಾಡಬೇಕೆಂದು ಆಶೋಕ್ ಸ್ನೇಹಿತ ಕಾರ್ತಿಕ್ ಅನ್ನೇ ಕೊಲೆ ಮಾಡಿದ್ದಾನೆ.ಕಾರ್ತಿಕ್ ಮತ್ತು ಅಶೋಕ್ …
Read More »200ಕೋಟಿ gst ವಂಚನೆ ಮಾಡಿದ್ದ 4ಜನ ಅರೆಸ್ಟ್…..!
ಬೆಂಗಳೂರು: ಗುಪ್ತಚರ(ಡಿಜಿಜಿಐ) ವಿಭಾಗ ಹಾಗೂ ಜಿಎಸ್‍ಟಿ ಬೆಂಗಳೂರು ಝೋನಾಲ್ ಯುನಿಟ್(ಬಿಝೆಡ್‍ಯು) ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 200 ಕೋಟಿ ರೂಪಾಯಿ ಜಿಎಸ್‍ಟಿ ತೆರಿಗೆ ವಂಚನೆ ಮಾಡಿದ ಆರೋಪದಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಚೀನಾ ಮೂಲದ ಕಂಪನಿಗಳು ಸೇರಿದಂತೆ ಬಹುರಾಷ್ಟ್ರೀಯ ಕಂಪನಿಗಳಿಗೆ ಸೇವೆ ನೀಡಿದ ನೆಪದಲ್ಲಿ ಸುಮಾರು 1,000 ಕೋಟಿ ರೂಪಾಯಿ ಮೌಲ್ಯದ ನಕಲಿ ಇನ್‍ವೈಸ್‍ಗಳನ್ನು ಸೃಷ್ಟಿಸಲಾಗಿದೆ ಎಂದು ಆಪಾದಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಜಿಎಸ್‍ಟಿ ಗುಪ್ತಚರ …
Read More »ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ
ಬೆಂಗಳೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ ಸಿಎಂಗೆ ಮನವಿ ಮಾಡಿದ್ದಾರೆ. ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ಸಂಬಂಧಿಸಿದಂತೆ ಸರಕಾರದ ಈ ನಿರ್ಧಾರದ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿದ್ದು, ಇದರ ನಡುವೆ ಡಿಸಿಎಂ ಲಕ್ಷ್ಮಣ ಸವದಿ ಸೋಮವಾರ ಸಿಎಂ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ. …
Read More »ಸಾವಿರಾರು ಕೋಟಿ ಒಡೆಯ ಇದ್ದರೂ ತನ್ನ ಸ್ವಂತ ಜಿಲ್ಲೆಗೆ ಮನೆಗೆ ಹೋಗಲು ಕೋರ್ಟ್ ಅನುಮತಿ ಪಡೆಯಬೇಕು…
ನವದೆಹಲಿ: ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಹಿನ್ನಡೆಯಾಗಿದ್ದು, ಬಳ್ಳಾರಿ ಪ್ರವೇಶದ ಅರ್ಜಿಗೆ ಸಿಬಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಡಿಸೆಂಬರ್‍ನಲ್ಲಿ ಪ್ರಕರಣದ ವಿಸ್ತೃತ ವಿಚಾರಣೆ ನಡೆಸಲು ಮುಂದಾಗಿದೆ. ಬಳ್ಳಾರಿ ಸೇರಿ 3 ಜಿಲ್ಲೆಗಳ ಪ್ರವೇಶಕ್ಕೆ ಜನಾರ್ಧನ ರೆಡ್ಡಿ ಅನುಮತಿ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಿತು. …
Read More »