Breaking News

Yearly Archives: 2020

ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆಗೆ ಮೊದಲ ಆದ್ಯತೆ ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಸಿಗ್ನಲ್ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ

ಬೆಂಗಳೂರು,ನ.13- ಉಪಚುನಾವಣೆ ಪೂರ್ಣಗೊಂಡ ಕೂಡಲೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಭರವಸೆ ನೀಡಿದ್ದರು. ಆದರೆ, ಇದೀಗ ನವೆಂಬರ್ 20ಕ್ಕೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಬಂದ ಬಂಡಾಯಶಾಸಕರು ಆಡಳಿತಾರೂಢ ಬಿಜೆಪಿ ಪಕ್ಷದ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ವಿಸ್ತರಣೆ ಕುರಿತು ಕೇಂದ್ರೀಯ ನಾಯಕತ್ವ ಮುಖ್ಯಮಂತ್ರಿಗಳ ಕೈಗಳನ್ನು ಕಟ್ಟಿಹಾಕಿದಂತಾಗಿದೆ. ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಸಂಪುಟ …

Read More »

ನಿಮ್ಮನ್ನು ಮಿಸ್ ಮಾಡಿಕೊಳ್ತೇವೆ- BIGBOSS TEAM

ಬೆಂಗಳೂರು: ಹಿರಿಯ ಪತ್ರಕರ್ತ, ಖ್ಯಾತ ಲೇಖಕ ರವಿ ಬೆಳಗೆರೆ ಅವರ ನಿಧನಕ್ಕೆ ನಟ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ರವಿ ಬೆಳಗೆರೆ ಅವರೊಂದಿಗಿನ ನೆನಪುಗಳನ್ನು ಮೆಲುಕು ಹಾಕಿರುವ ನಟ ಸುದೀಪ್, ಬಿಸ್‍ಬಾಸ್ ಕಾರ್ಯಕ್ರಮದ ಸಂದರ್ಭದ ಎರಡು ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ವೇದಿಕೆಯಲ್ಲಿದ್ದ ಈ ಫೋಟೋದಲ್ಲಿ ನಾನು ಅವರನ್ನು ಕೊನೆಯದಾಗಿ ನೋಡಿದ್ದೆ. ಉಳಿದ ಸ್ಪರ್ಧಿಗಳು ಖಂಡಿತ ಈ ಕ್ಷಣವನ್ನು ತಮ್ಮ ಜೀವನದಲ್ಲಿ ನೆನಪಿಟ್ಟುಕೊಳ್ಳುತ್ತಾರೆ. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. …

Read More »

ಇದು ಸಾವಲ್ಲ, ಅವ್ರ ಮರುಹುಟ್ಟು:ಯೋಗರಾಜ್ ಭಟ್

ಬೆಂಗಳೂರು: ನಿನ್ನೆ ಮೊನ್ನೆವರೆಗೂ ಫೋನ್‍ನಲ್ಲಿ ರವಿ ಬೆಳಗೆರೆಯೊಂದಿಗೆ ನನ್ನ ಸಿನಿಮಾಗಳ ಬಗ್ಗೆ ಮಾತನಾಡುತ್ತಿದ್ದೆ. ಅವರಿಗೆ ಅನಾರೋಗ್ಯ ಕಾಡುತ್ತಲೇ ಇತ್ತು. ಸಾವು ಬಂದು ಕರೆದಾಗ ಅತ್ಲಾಗೆ ನೋಡೋಣ ನಡಿ ಅಂತ ಹೊರಟುಬಿಟ್ಟಿದ್ದಾರೆನೋ ಅನ್ನಿಸುತ್ತಿದೆ ಎಂದು ನಿದೇರ್ಶಕ ಯೋಗರಾಜ್ ಭಟ್ ಸಂತಾಸ ಸೂಚಿಸಿದ್ದಾರೆ. ರವಿಬೆಳಗೆರೆಯ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯೋಗರಾಜ್ ಭಟ್, ಕನ್ನಡ ಅಭಿಮಾನಿಯಾಗಿ ಇದು ರವಿ ಬೆಳಗೆರೆ ಅವರ ಸಾವಲ್ಲ, ಅವರ ಹುಟ್ಟು. ಅವರ ನೆನಪು, …

Read More »

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. ಲಾಬೂರಾಮ್ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಸ್ ಡಿಎಂ ವೈದ್ಯ ಡಾ.ಕಿರಣ್ ಹೆಗಡೆ ತಿಳಿಸಿದ್ದಾರೆ. ಲಾಬೂರಾಮ್ ಅವರಿಗೆ ಗಂಟಲಿನಲ್ಲಿ ಬಾವು ಕಾಣಿಸಿಕೊಂಡಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನ ಗೊತ್ತಿರುವ ವೈದ್ಯರಿಂದ ಕೊಡಿಸುವುದಾಗಿ …

Read More »

ಆಶ್ರಯ ಮನೆ ಹಂಚಿಕೆಯಲ್ಲಿ ಅಕ್ರಮನ್ಯಾಯಕ್ಕಾಗಿ ಟವರ್ ಏರಿ ಕುಳಿತ ದಂಪತಿ

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ದಂಪತಿಗಳು ಮೊಬೈಲ್ ಟವರ್ ಏರಿ ಕುಳಿತ ಘಟನೆ ಜಿಲ್ಲೆಯ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ. ಮೋಹನ್ ರಾಜ್ ಮತ್ತು ಚಂದನ ಮೊಬೈಲ್ ಟವರ್ ಏರಿ ಕುಳಿತ ದಂಪತಿ. ಬಂಟೇನಹಳ್ಳಿ ಗ್ರಾಮ ಪಂಚಾತಿಯಲ್ಲಿ ಆಶ್ರಯ ಮನೆ ನೀಡುವುದಾಗಿ ದಂಪತಿಯಿಂದ ಒಂದು ಸಾವಿರ ಹಣ ಪಡೆದಿರುವ ಆರೋಪ ಕೇಳಿ ಬಂದಿದೆ. ಆದರೆ ಕೊನೆಗೆ ದಂಪತಿಗೆ ಆಶ್ರಯ ಮನೆ ನೀಡದೆ ವಂಚನೆ ಮಾಡಿರುವುದಾಗಿ ಆರೋಪ …

Read More »

ಚಲಿಸುತ್ತಿರುವ ಜನಶತಾಬ್ದಿ ರೈಲಿನಿಂದ ಯುವತಿ ತುಂಗಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಯುವತಿ

ಶಿವಮೊಗ್ಗ :  ಚಲಿಸುತ್ತಿರುವ ಜನಶತಾಬ್ದಿ ರೈಲಿನಿಂದ ಯುವತಿ ತುಂಗಾ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ರೈಲಿನಲ್ಲಿ  ಯುವತಿ ಸಹನಾ (24) ತನ್ನ ಪೋಷಕರೊಂದಿಗೆ ಪ್ರಯಾಣಿಸುತ್ತಿದ್ದಳು.   ರೈಲು ಶಿವಮೊಗ್ಗದ ತುಂಗಾ ಸೇತುವೆ ಮೇಲೆ ಬರುತ್ತಿದ್ದ ವೇಳೆ ಯುವತಿ ನದಿಗೆ ಹಾರಿದ್ದಾಳೆ ಎನ್ನಲಾಗುತ್ತಿದೆ. ಕೆಲವರು ಕಾಲು ಜಾರಿ ಬಿದ್ದಿದ್ದಾಳೆ ಎಂದು ಸಹ ಹೇಳಲಾಗುತ್ತಿದೆ. ತಕ್ಷಣ ಯುವತಿಯ ತಂದೆ- ತಾಯಿ ರೈಲ್ವೆ ಪೊಲೀಸರಿಗೆ ಮಾಹಿತಿ …

Read More »

ಉಮೇಶ ಕತ್ತಿಯವರನ್ನ ಮಂತ್ರಿ ಮಾಡಲು ಮೊದಲಿನಿಂದಲೂ ಒತ್ತಾಯ ಇದೆ.: ರಮೇಶ್ ಜಾರಕಿಹೊಳಿ

ಬೆಳಗಾವಿ : ಉಮೇಶ ಕತ್ತಿಯವರನ್ನ ಮಂತ್ರಿ ಮಾಡಲು ಮೊದಲಿನಿಂದಲೂ ಒತ್ತಾಯ ಇದೆ. ರಾಜಕೀಯದಲ್ಲಿ ಹಿರಿಯರು ಇದ್ದಾರೆ. ಅವರಿಗೆ ಮಂತ್ರಿ ಸ್ಥಾನ ಸಿಕ್ಕರೆ ಒಳ್ಳೆಯದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಇದ್ದಿದ್ದಕ್ಕೆ ಕೆಲವು ಶಾಸಕರು ಇಲಾಖೆ ಕಾಮಗಾರಿ ಕುರಿತು ಭೇಟಿಗೆ ಬಂದಿದ್ದರು.ಬೇರೆ ಯಾವುದೇ ವಿಚಾರವಾಗಿ ಭೇಟಿಯಾಗಿಲ್ಲ ಎಂದರು. ದೊಡ್ಡ ಇಲಾಖೆಯ ಜವಾಬ್ದಾರಿ ಕೊಟ್ಟಿದ್ದು, ಮಂತ್ರಿ ಸ್ಥಾನ ಕೊಡಿಸುವ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ. ನನ್ನ …

Read More »

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ,ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ತಾಲ್ಲೂಕಿನ ಮುತ್ಯಾನಟ್ಟಿ ಗುಡ್ಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಐವರ ವಿರುದ್ಧದ ಆರೋಪ ಸಾಬೀತಾಗಿದ್ದು, ಆರೋಪಿಗಳಿಗೆ ಬೆಳಗಾವಿಯ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ಮತ್ತು ಪೋಕ್ಸೋ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.ಅಷ್ಟೇ ಅಲ್ಲ ಪ್ರತಿ ಆರೋಪಿಗಳಿ ತಲಾ 5ಲಕ್ಷ ರೂ. ದಂಡ ವಿಧಿಸಿದೆ. ಮುತ್ಯಾನಟ್ಟಿಯ ಸಂಜು ದಡ್ಡಿ (24), ಸುರೇಶ ಭರಮಪ್ಪ ಬೆಳಗಾವಿ (24), ಸುನೀಲ ಲಗಮಪ್ಪ ಡುಮ್ಮಗೋಳ (21), …

Read More »

ಬೊಲೆರೋ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಮೂವರ ಸಾವು

ಚಾಮರಾಜನಗರ: ಬೊಲೆರೋ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೀಕರ ಅಪಘಾತ ಸಂಭವಿಸಿದೆ. ಸಾವನ್ನಪ್ಪಿದ ಮೂವರು ಬೈಕ್ ಸವಾರರಾಗಿದ್ದಾರೆ. ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಪಳನಿಮೇಡು ಗ್ರಾಮದ ಡೇವಿಡ್, ಶೇಷುರಾಜು ಹಾಗೂ ಶೆಟು ಸಾವನ್ನಪ್ಪಿದ್ದ ದುರ್ದೈವಿಗಳು. ಸತ್ತೇಗಾಲ ಹಾಗೂ ಧನಗೆರೆ ಮುಖ್ಯರಸ್ತೆಯಲ್ಲಿ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬೈಕ್ ನಲ್ಲಿ ಮೂವರು ತೆರಳುತ್ತಿದ್ದರು. ಬೈಕ್ ಗೆ ಕೊಳ್ಳೇಗಾಲದಿಂದ ಸತ್ತೇಗಾಲದ ಕಡೆಗೆ ಹೋಗುತ್ತಿದ್ದ …

Read More »

ವಿದ್ಯಾರ್ಥಿಗಳೂ ಟ್ಯಾಬ್ ಉಪಯುಕ್ತತೆಯ ಕುರಿತಂತೆ ಹೆಮ್ಮೆಪಟ್ಟಿದ್ದು ಖುಷಿ ತಂದಿತು – ಸುರೇಶ್‍ಕುಮಾರ್

ಬೆಂಗಳೂರು: ಇಂದು ಬೆಂಗಳೂರು ಹೊರವಯಲದ ದೇವನಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪಬ್ಲಿಕ್ ಟಿವಿ ಜ್ಞಾನ ದೀವಿಗೆಯ ಟ್ಯಾಬ್ ವಿತರಿಸಿದರು. ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ವತಿಯಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಬಡ ಮಕ್ಕಳಿಗೆ ಸಹಾಯವಾಗಲಿ ಎಂದು ಟ್ಯಾಬ್ ನೀಡಲಾಗುತ್ತಿದೆ. ಕೊರೊನಾ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗಬಾರದು ಎಂಬ ಉದ್ದೇಶದಿಂದ ಈ ಕಾರ್ಯವನ್ನು ಮಾಡಲಾಗಿದೆ. ಇದಕ್ಕೆ ಶಿಕ್ಷಣ ಸಚಿವರು ಸಂಪೂರ್ಣ ಸಾಥ್ …

Read More »