Breaking News

Yearly Archives: 2020

ಕರ್ನಾಟಕ ಸರ್ಕಾರ ಕೂಡ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ

ಬೆಂಗಳೂರು,ನ.3- ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ ನಂತರ ಇದೀಗ ಕರ್ನಾಟಕ ಸರ್ಕಾರ ಕೂಡ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದೆ. ರಾಜ್ಯದಲ್ಲಿ ಮುಸ್ಲಿಂ ಪುರುಷರು ಹಿಂದೂ ಹುಡುಗಿಯರಿಗೆ ಆಮಿಷವೊಡ್ಡಿ ತಮ್ಮ ಜಾತಿಯ ವಿಚಾರವನ್ನು ರಹಸ್ಯವಾಗಿಟ್ಟು ಲವ್ ಜಿಹಾದ್ ಮಾಡಿಕೊಂಡಿರುವ ಘಟನೆಗಳು ಹೆಚ್ಚಾಗಿರುವ ಹಿನ್ನೆಲೆ ಕಠಿಣ ಕಾನೂನು ರಚಿಸುವುದಕ್ಕೆ ಸರ್ಕಾರ ತೀರ್ಮಾನಿಸಿದೆ. ಇದರಿಂದ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಆಡಳಿತದ ನಾಲ್ಕನೇ …

Read More »

ಆರ್.ಆರ್.ನಗರದಲ್ಲಿ ಮತದಾನ ಮಾಡಿದ ತಾರೆಯರು

ಬೆಂಗಳೂರು,ನ.3- ಆರ್‍ಆರ್‍ನಗರ ಉಪಚುನಾವಣೆಯ ಮತದಾನದಲ್ಲಿ ನಟ ದರ್ಶನ ಸೇರಿದಂತೆ ಹಲವಾರು ನಟನಟಿಯರು ತಮ್ಮ ಹಕ್ಕು ಚಲಾಯಿಸಿದರು. ನೆನಪಿರಲಿ ಪ್ರೇಮ್ ಅವರು ಪತ್ನಿ ಸಮೇತ ಕ್ಲಾರೆಟ್ ಸ್ಕೂಲ್ ಮತಗಟ್ಟೆಯಲ್ಲಿ ವೋಟ್ ಮಾಡಿದರು. ತಮ್ಮ ಹಕ್ಕು ಚಲಾಯಿಸಿದ ನಂತರ ಸರ್ಕಾರ ಮತದಾನಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿದೆ. ಯಾರೂ ಆತಂಕ ಪಡುವುದು ಬೇಡ. ಎಲ್ಲರೂ ಮತದಾನ ಮಾಡಿ ಎಂದು ಮನವಿ ಮಾಡಿದರು. ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು. ನಾವು ಮತದಾನ ಮಾಡಿಲ್ಲವೆಂದರೆ ನಮ್ಮ …

Read More »

ಭೀಮಾ ತೀರದ ರಕ್ತಸಿಕ್ತ ಇತಿಹಾಸಕ್ಕೆ ಅಂತ್ಯ ಹಾಡುವೆ : ಐಜಿಪಿ ರಾಘವೇಂದ್ರ ಸುವಾಸ್

ಹುಬ್ಬಳ್ಳಿ,ನ.3- ವಿಜಯಪುರ ಭೀಮಾ ತೀರದಲ್ಲಿನ ಅಪರಾಧ ಕೃತ್ಯಗಳಿಗೆ ತಾತ್ವಿಕ ಅಂತ್ಯ ಹಾಡುವುದಾಗಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುವಾಸ್ ಹೇಳಿದ್ದಾರೆ. ಭೀಮಾ ತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಘಟನೆ ನಡೆದ ರಾಷ್ಟ್ರೀಯ ಹೆದ್ದಾರಿ ಕನ್ನಾಳ ಕ್ರಾಸ್ ಬಳಿ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾದೇವ ಸಾಹುಕಾರ ಭೈರಗೊಂಡ ಹತ್ಯೆಗೆ ಸಂಚು ರೂಪಿಸಿ 15-20 ಯುವಕರು ದಾಳಿ ನಡೆಸಿದ್ದಾರೆ. ವಾಹನ …

Read More »

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ವಿರುದ್ಧ ಎಫ್‍ಐಆರ್

ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಬಿಗ್‍ಬಿ ವಿರುದ್ಧ ಮಹಾರಾಷ್ಟ್ರದ ಬಿಜೆಪಿ ಶಾಸಕ ಅಭಿಮನ್ಯು ಪವಾರ್ ದೂರು ದಾಖಲಿಸಿದ್ದಾರೆ. ಇದೀಗ ಈ ದೂರಿನನ್ವಯ ಪೊಲೀಸರು ಬಿಗ್ ಬಿ ಹಾಗೂ ಕಾರ್ಯಕ್ರಮ ನಡೆಸಿದ ಚಾನೆಲ್ ಮೇಲೆ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಅಮಿತಾಬ್ ಬಚ್ಚನ್ ನಿರೂಪಣೆಯ ಕೌನ್ ಬನೇಗಾ ಕರೋಡ್‍ಪತಿಯಲ್ಲಿ ಶುಕ್ರವಾರ ಕರ್ಮವೀರ್ ವಿಶೇಷ ಎಪಿಸೋಡ್ ಪ್ರಸಾರ …

Read More »

ಬಕೆಟ್ ಹಿಡಿಯುವ ರಾಜಕಾರಣಿಯಾಗಿದ್ರೆ ಬಹಳ ಹಿಂದೆಯೇ ಮಂತ್ರಿಯಾಗ್ತಿದ್ದೆ : ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಹೊಗಳಿಕೊಂಡು, ಬಕೆಟ್ ಹಿಡಿಯುವ ರಾಜಕಾರಣಿಯಾಗಿದ್ದರೆ ನಾನು ಮಂತ್ರಿಯಾಗಲು 2012ರವರೆಗೆ ಕಾಯಬೇಕಿರಲಿಲ್ಲ. ಬಹಳ ಮುಂಚೆಯೇ ಮಂತ್ರಿ ಆಗುತ್ತಿದ್ದೆ. ನನಗೆ ಅಧಿಕಾರ ಮತ್ತು ಜವಾಬ್ದಾರಿ ಎಂದು ಬಂದಾಗ ಜವಾಬ್ದಾರಿ ತೆಗೆದುಕೊಳ್ಳಲು ಉತ್ಸುಕನಾಗಿರುತ್ತೇನೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಎಐಟಿ ಕಾಲೇಜು ಬಳಿ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಬಳಿಕ ಮಾತನಾಡಿದ ಅವರು, ಅಧಿಕಾರಕ್ಕೆ ಅಂಟಿಕೊಳ್ಳುವ ಜಾಯಮಾನ ನನ್ನದ್ದಲ್ಲ. ಮಂತ್ರಿಸ್ಥಾನ ನನಗೆ ಸಿಕ್ಕಿರುವ ಅಧಿಕಾರ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ …

Read More »

ತಾಯಿ ಮೂಕಾಂಬಿಕೆ ಕೊಟ್ಟ ಉಡುಗೊರೆ ನೀನು – ಮಗನ ಹುಟ್ಟುಹಬ್ಬಕ್ಕೆ ರಕ್ಷಿತಾ ವಿಶ್

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ಗಳು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುವುದು ಕಾಮನ್. ಅದೇ ರೀತಿಯಾಗಿ ಸ್ಟಾರ್ ಮಕ್ಕಳು ಕೂಡ ಬರ್ತ್ ಡೇಯನ್ನು ಅಷ್ಟೇ ಸ್ಪೇಷಲ್ ಆಗಿ ಸೆಲೆಬ್ರೇಟ್ ಮಾಡೋದು ಟ್ರೇಂಡ್ ಆಗಿದೆ. ಕ್ರೇಜಿ ಕ್ವೀನ್ ರಕ್ಷಿತಾ ಮತ್ತು ಜೋಗಿ ಪ್ರೇಮ್ ದಂಪತಿಯ ಮುದ್ದಾದ ಮಗ ಸೂರ್ಯ 12ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಮಗನ ಹುಟ್ಟುಹಬ್ಬಕ್ಕೆ ತಾಯಿ ರಕ್ಷಿತಾ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯ ಮೂಲಕವಾಗಿ ವಿಶ್ ಮಾಡಿದ್ದಾರೆ. ಇನ್‍ಸ್ಟಾದಲ್ಲಿ ರಕ್ಷಿತಾ ಬರೆದುಕೊಂಡಿದ್ದೇನು?: ನೀನು …

Read More »

ಅತ್ತೆ-ಸೊಸೆ, ತಾಯಿ-ಮಗಳಂತೆ ಚೆನ್ನಾಗಿರಲಿ: ಸಿ.ಟಿ ರವಿ

ಚಿಕ್ಕಮಗಳೂರು: ಕಾಂಗ್ರೆಸ್ಸಿನಂತಹ ಜನರನ್ನು ನೀವು ಎಲ್ಲೂ ನೋಡಿರಲು ಸಾಧ್ಯವಿಲ್ಲ. ಏಕೆಂದರೆ ಅವರು ಚುನಾವಣೆಯಲ್ಲಿ ಗೆದ್ದರೆ ಜನಾದೇಶ ಅಂತಾರೆ, ಸೋತರೆ ಇವಿಎಂ ಮೇಲೆ ಆರೋಪಿಸುತ್ತಾರೆ. ಈ ರೀತಿಯ ಜನರನ್ನು ನೀವೆಲ್ಲೂ ನೋಡಲು ಆಗುವುದಿಲ್ಲ ಎಂದು ಸಚಿವ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಎಐಟಿ ಕಾಲೇಜು ಬಳಿ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಬಳಿಕ ಮಾತನಾಡಿದ ಅವರು, ಆರ್.ಆರ್.ನಗರದಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಹಾಗೂ …

Read More »

ಡಿಸಿಸಿ ಬ್ಯಾಂಕ ಚುನಾವಣೆ ವಿಷಯದಲ್ಲಿ ಒಂದಾದಂತೆ ಜಿಲ್ಲೆಯ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಶಕ್ತಿ ಪ್ರದರ್ಶಿಸುವ ಮೂಲಕ ಚಿಕ್ಕೋಡಿ ಜಿಲ್ಲೆ ಮಾಡಿಸಲು ಮುಂದಾಗಬೇಕು:

ಚಿಕ್ಕೋಡಿ : ಬೆಳಗಾವಿ ಡಿಸಿಸಿ ಬ್ಯಾಂಕ ಚುನಾವಣೆ ವಿಷಯದಲ್ಲಿ ಒಂದಾದಂತೆ ಜಿಲ್ಲೆಯ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಶಕ್ತಿ ಪ್ರದರ್ಶಿಸುವ ಮೂಲಕ ಚಿಕ್ಕೋಡಿ ಜಿಲ್ಲೆ ಮಾಡಿಸಲು ಮುಂದಾಗಬೇಕು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಜಿಲ್ಲೆಗಾಗಿ ಬಹಳ ದಿನಗಳಿಂದ ಹೋರಾಟ ನಡೆಯುತ್ತಿದೆ. ಆದ್ದರಿಂದ ಈ ಭಾಗದ ಜನರ ಹಿತದೃಷ್ಟಿಯಿಂದ ಚಿಕ್ಕೋಡಿ ಜಿಲ್ಲೆ ಮಾಡಬೇಕು. ಚಿಕ್ಕೋಡಿಗೆ ಸರಕಾರಿ …

Read More »

ಸೇತುವೆಯಿಂದ ಬಿದ್ದ ಕಾರು-ಇಬ್ಬರ ಸಾವು

ಕಾರವಾರ: ನಗರದ ಲಂಡನ್ ಬ್ರಿಜ್ ಬಳಿ ಸೇತುವೆಯಿಂದ ಮಂಗಳವಾರ ಬೆಳಗ್ಗೆ ಕಾರೊಂದು ಕೆಳಗೆ ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ. ಮೃತರು ಚಿಕ್ಕಮಗಳೂರಿನ ನಿವಾಸಿಗಳೆಂದು ತಿಳಿದು ಬಂದಿದೆ. ಕಾರ್ ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದ …

Read More »

ವೋಟ್ ಮಾಡಿ ಎಲ್ಲೆಂದರಲ್ಲಿ ಗ್ಲೌಸ್ ಬಿಸಾಕಿದ ಮತದಾರ

ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್‍ಆರ್ ನಗರದ ಉಪಚುನಾವಣೆಗೆ ಈಗಾಗಲೇ ಮತದಾನ ಆರಂಭವಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಪೀಣ್ಯ ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಎಲ್ಲೆಂದರಲ್ಲಿ ಬಿಸಾಕಿರುವುದು ಕಂಡು ಬಂದಿದೆ. ಹೌದು. ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಬಿಸಾಡಲಾಗಿದೆ. ಮತದಾನ ಮಾಡಿದ ಬಳಿಕ ಜನ ಎಲ್ಲೆಂದರಲ್ಲಿ ಹಾಕಿಹೋಗಿದ್ದಾರೆ. ಮತದಾನ ಮಾಡಲು ಒಬ್ಬ ವ್ಯಕ್ತಿಗೆ ಒಂದು ಗ್ಲೌಸ್ ವಿತರಣೆ ಮಾಡಲಾಗುತ್ತಿದೆ. ಆದರೆ ಸಿಬ್ಬಂದಿ ಮತದಾರರಲ್ಲಿ ಜಾಗೃತಿ ಮೂಡಿಸಿಲ್ಲ. …

Read More »