ಬಳ್ಳಾರಿ: ಉಪ ಚುನಾವಣೆ ಗೆದ್ದರೆ ಮುಖ್ಯಮಂತ್ರಿ ಆಗುವ ಭ್ರಮೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಶಿರಾದಲ್ಲಿ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣಾ ಉಸ್ತುವಾರಿ ತೆಗೆದುಕೊಂಡಿದ್ದಾರೆ. ವಿಜಯೇಂದ್ರ ಹೋದ ಕಡೆ ಸೋಲು ಇಲ್ಲ. ಆದ್ರೆ ಶಿರಾದ ಜನತೆ ಮಾತ್ರ ಬಿಜೆಪಿಗೆ ಮತ ನೀಡಲಿದ್ದಾರೆ. ಈ ಹಿಂದೆ ಕೆ.ಆರ್.ಪೇಟೆ ಗೆಲುವಿಗೆ ಶ್ರಮಿಸಿದ್ದರು. ಆದ್ರೆ ಕಾಂಗ್ರೆಸ್ ಒಳ ಜಗಳದಿಂದಲೇ ಸೋಲುತ್ತೆ. ಸಿದ್ದರಾಮಯ್ಯನರವರು ಶಿರಾ ವಿಧಾನಸಭಾ …
Read More »Yearly Archives: 2020
ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ
ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ …
Read More »ಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ.:ಈರಣ್ಣಾ ಕಡಾಡಿ
ಬೆಳಗಾವಿ:ಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕಿದೆ, ಕೇಂದ್ರ ಸರಕಾರದ ಮಹತ್ತರ ಯೋಜನೆಯನ್ನು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸೋಮವಾರ ನಗರದ ಧರ್ಮನಾಥ ಭವನದಲ್ಲಿ ಬೆಳಗಾವಿ ಗ್ರಾಮಾಂತರ, ಮಹಾನಗರ ಮತ್ತು ಚಿಕ್ಕೋಡಿ ಜಿಲ್ಲೆಯ ಪ್ರಮುಖರ ಪ್ರಶಿಕ್ಷಣ ವರ್ಗದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 2014ರ ಬಳಿಕ …
Read More »ಏಂಟು ತಿಂಗಳಿಂದ ಬಂದ ಆಗಿರುವ ರಾಜ್ಯದ ಶಾಲೆಗಳು ಮುಂದಿನ ವಾರದಲ್ಲಿ ಆರಂಭವಾಗುವ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಿನ್ನೆಲೆ ಕಳೆದ ಏಂಟು ತಿಂಗಳಿಂದ ಬಂದ ಆಗಿರುವ ರಾಜ್ಯದ ಶಾಲೆಗಳು ಮುಂದಿನ ವಾರದಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳು, ತಜ್ಞರೊಂದಿಗೆ ಈ ಕುರಿತು ಸಭೆ ನಡೆಸಲು ತಯಾರಿ ನಡೆಸಿದ್ದಾರೆ. ನವೆಂಬರ್ 4, 5, 6 ನೇ ದಿನಾಂಕದಂದು ಸಭೆ ನಡೆಸಲಿದ್ದಾರೆ. ಸತತ ಮೂರು ದಿನಗಳು ಸಭೆ ನಡೆಸಿ, ಶಾಲೆ ಆರಂಭದ ಬಗ್ಗೆ ಚರ್ಚಿಸಿದ ಬಳಿಕ ಶಾಲೆಗಳನ್ನು …
Read More »ಐಪಿಎಲ್2020: 2ನೇ ಸ್ಥಾನ ಯಾರಿಗೆ?ಇವತ್ತು ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ.
ಬೆಂಗಳೂರು: 2020ರ ಐಪಿಎಲ್ ಟೂರ್ನಿಯಲ್ಲಿ 45 ದಿನಗಳಲ್ಲಿ 54 ತಂಡಗಳು ಪೂರ್ಣಗೊಂಡರೂ ಪ್ಲೇ ಆಫ್ ರೇಸ್ ಅಂತ್ಯವಾಗಿಲ್ಲ. ಇವತ್ತು ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಇವತ್ತು ದೆಹಲಿ ಮತ್ತು ಬೆಂಗಳೂರು ನಡುವೆ ಐಪಿಎಲ್ ಮ್ಯಾಚ್ ನಡೆಯಲಿದೆ. ಇಂದಿನ ಮ್ಯಾಚ್‍ನಲ್ಲಿ ಆರ್‌ಸಿಬಿ ಗೆಲ್ಲಲೇಬೇಕಾಗಿದೆ. ಗೆದ್ದರಷ್ಟೇ ಪ್ಲೇ ಆಫ್‍ಗೆ ಆರ್ ಸಿಬಿಗೆ ಎಂಟ್ರಿ ಸಿಗುತ್ತೆ. ಅಪ್ಪಿತಪ್ಪಿ ಸೋತರೆ ಆಗ ಬೆಂಗಳೂರು ತಂಡದ ಭವಿಷ್ಯ ಹೈದ್ರಾಬಾದ್-ಮುಂಬೈ ನಡುವಿನ ಪಂದ್ಯದ ಮೇಲೆ ಅವಲಂಬಿತ ಆಗಿರುತ್ತೆ. …
Read More »ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 75 ರೂಪಾಯಿ ಹೆಚ್ಚಿಸಲಾಗಿದೆ.
ಹೊಸದಿಲ್ಲಿ: ತರಕಾರಿ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನತೆಗೆ ಮತ್ತೆ ಎಲ್ ಪಿ ಜಿ ದರ ಏರಿಕೆಯ ಬಿಸಿ ತಟ್ಟಿದೆ. ಕಳೆದ ತಿಂಗಳಷ್ಟೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿತ್ತು. ಮತ್ತೆ ಇದೀಗ 19 ಕೆಜಿ ಕಮರ್ಷಿಯಲ್ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 75 ರೂಪಾಯಿ ಹೆಚ್ಚಿಸಲಾಗಿದೆ. ಈ ಕುರಿತು ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. 19 …
Read More »ನಟಿ ಉಮಾಶ್ರೀ ಮನೆ ಕಳ್ಳತನ ಮಾಡಲಾಗಿದೆ. ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ
ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ. ನಟಿ ಉಮಾಶ್ರೀ ಅವರಮನೆಯನ್ನು ಕಳ್ಳತನ ಮಾಡಲಾಗಿದೆ. ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಕಳವು ಮಾಡಿದ ಖದೀಮರಿಗೆ ಬಲೆಬಿಸಿದ್ದಾರೆ.
Read More »ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ
ಗೋಕಾಕ: ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ ಹಾಡಿದೆ . ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೇಲೆ ಆಗಿದೆ ಗೋಕಾಕ ನಗರಸಭೆ ಅಧ್ಯಕ್ಷ ರಾಗಿ ಜಯಾನಂದ ಹುಣ ಚ್ಯಾಳಿ ಆಯ್ಕೆ ಆದರೆ ಗೋಕಾಕ ನಗರ ಸಭೆ ಉಪಾಧ್ಯಕ್ಷ ರಾಗಿ. ಬಸವ ರಾಜ ಅರೆನ್ನವರ ಆಯ್ಕೆ ಯಾಗಿದ್ದಾರೆ ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೆಲಾಗಿದ್ದು ಇಬ್ಬರು ಒಳ್ಳೆಯ …
Read More »ಭಾರತದಲ್ಲಿ ಕೊರೊನಾ ಏರಿಳಿತದ ಆಟ : 24 ಗಂಟೆಯಲ್ಲಿ 45,231 ಪಾಸಿಟಿವ್, 496 ಡೆತ್
ನವದೆಹಲಿ/ಮುಂಬೈ,ನ.2-ದೇಶದಲ್ಲಿ ಕಳೆದ ಏಳು ವಾರಗಳಿಂದ ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಇಳಿಮುಖದ ವೇಗ ನಿಧಾನವಾಗುತ್ತಿದೆ. ಚಳಿಗಾಲ ಮತ್ತು ಹಬ್ಬದ ಋತುವಿನಲ್ಲಿ ಡೆಡ್ಲಿ ಕೊರೊನಾ ವೈರಸ್ ಏರಿಳಿತದ ಆಟ ಮುಂದುವರಿದಿದೆ. ದೇಶಾದ್ಯಂತ ಮಾರಕ ಕೊರೊನಾ ವೈರಸ್‍ನ ಹಾವಳಿ ಇಳಿಮುಖವಾಗುವ ಮುನ್ಸೂಚನೆ ಮತ್ತೆ ಗೋಚರಿಸ ತೊಡಗಿದ್ದು, ದಿನನಿತ್ಯದ ಸೋಂಕು ಪ್ರಕರಣಗಳಲ್ಲಿ ಇಳಿಕೆಯಾದರೂ ಸಾವು ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ.ಕಳೆದ ಆರು ದಿನಗಳಿಂದಲೂ 50,000 ಸನಿಹದಲ್ಲೇ ಪಾಸಿಟಿವ್ ಪ್ರಕರಣಗಳ ದಾಖಲೆ ಮುಂದುವರಿದಿದೆ. ಸತತ ನಾಲ್ಕನೇ ದಿನ …
Read More »ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್
ಬೆಂಗಳೂರು: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್‍ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್‍ಪಿಬಿ ನಟಿಸಿದ್ದಾರೆ. 8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್‍ಪಿಬಿ …
Read More »