Breaking News

Yearly Archives: 2020

ಅಕ್ಟೋಬರ್ 31ಕ್ಕೆ ‘ಬ್ಲೂ ಮೂನ್’ – ಒಂದೇ ತಿಂಗಳಲ್ಲಿ ಎರಡು ಹುಣ್ಣಿಮೆ

ಬೆಂಗಳೂರು: ಅಕ್ಟೋಬರ್ 31ಕ್ಕೆ ನಭೋಮಂಡದಲ್ಲಿ ಬ್ಲೂ ಮೂನ್ ವಿದ್ಯಮಾನ ಜರುಗಲಿದೆ. ಬ್ಲೂ ಮೂನ್ ಅಂದ್ರೆ ಚಂದಿರ ನೀಲಿ ಬಣ್ಣಕ್ಕೆ ಬದಲಾಗಲ್ಲ. ಚಂದ್ರನ ಮೂಲ ಬಣ್ಣವಾಗಿರುವ ನೀಲಿ ಬಣ್ಣದಲ್ಲೇ ಚಂದ್ರನಿರಲಿದ್ದಾನೆ. ಒಂದೇ ತಿಂಗಳಲ್ಲಿ ಎರಡು ಹುಣ್ಣಿಮೆಗಳು ಬರುವ ಪ್ರಾಕೃತಿಕ ವಿದ್ಯಮಾನವನ್ನೇ ಬ್ಲೂಮೂನ್ ಅಂತಾ ಕರೆಯುತ್ತಾರೆ. ಪ್ರತಿ 2 ಅಥವಾ 3 ವರ್ಷಕ್ಕೊಮ್ಮೆ ಒಂದೇ ತಿಂಗಳಲ್ಲಿ 2 ಬಾರಿ ಹುಣ್ಣಿಮೆ ಸಂಭವಿಸುತ್ತದೆ. ಈ ರೀತಿ ಒಂದೇ ತಿಂಗಳಲ್ಲಿ ಎರಡು ಬಾರಿ ಹುಣ್ಣಿಮೆ ಸಂಭವಿಸುವ …

Read More »

ಪತಿಗೆ ಮದ್ಯ ಕುಡಿಸಿ, ತಲೆಗೆ ಹೊಡೆದು ಕತ್ತು ಕೊಯ್ದು ಕೊಲೆ – ಕೊಲೆಗೈದು ಕಾರಿನ ಡಿಕ್ಕಿಯಲ್ಲಿಟ್ಟು ಬೆಂಕಿ ಹಚ್ಚಿದ ಪತ್ನಿ

ಹಾಸನ: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಇಲ್ಲಿ ಹೆಂಡತಿಯೇ ಗಂಡನನ್ನ ಕೊಲೆ ಮಾಡಿ ಕಾರಿನ ಡಿಕ್ಕಿಯಲ್ಲಿಟ್ಟು ಗುರುತೇ ಸಿಗದಂತೆ ಸುಟ್ಟು ಹಾಕಿದ ತಪ್ಪಿಗೆ ಇಬ್ಬರು ಮಕ್ಕಳನ್ನು ಅನಾಥರನ್ನಾಗಿ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಅಕ್ಟೋಬರ್ 28 ರಂದು ಬೆಳ್ಳಂಬೆಳಗ್ಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಟ್ಟನವಿಲೆ ಗ್ರಾಮದ ಸಮೀಪ ಕಾರೊಂದು ಸುಟ್ಟ ಸ್ಥಿತಿಯಲ್ಲಿದ್ದು, ಅದರ ಡಿಕ್ಕಿಯಲ್ಲಿ ಸಂಪೂರ್ಣ ಸುಟ್ಟು ಕರಕಲಾದ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. …

Read More »

ರಸ್ತೆ ಪಕ್ಕದಲ್ಲಿ ಹುಲ್ಲಿಗೆ ಹಚ್ಚಿದ್ದ ಬೆಂಕಿಯಿಂದ ಸುಟ್ಟು ಕರಕಲಾಯಿತು ಬೈಕ್

ಗದಗ: ರಸ್ತೆ ಪಕ್ಕದ ಒಣ ಹುಲ್ಲಿಗೆ ಬೆಂಕಿ ಹಚ್ಚಿದ್ದರಿಂದ ದಟ್ಟವಾದ ಹೊಗೆಯಲ್ಲಿ ದಾರಿ ಕಾಣದೆ ಬೈಕ್ ಸವಾರ ಸೇರಿ ಕುಟುಂಬದ ಮೂವರು ಬೆಂಕಿನಲ್ಲಿ ಬಿದ್ದ  ಘಟನೆ ಜಿಲ್ಲೆಯ ರೋಣ ಪಟ್ಟಣದ ಬಳಿ ನಡೆದಿದೆ. ರೋಣ ಹಾಗೂ ಜಕ್ಕಲಿ ನಡುವೆ ಘಟನೆ ಸಂಭವಿಸಿದೆ. ಬೆಂಕಿ ದುರಂತದಲ್ಲಿ ಬೈಕ್ ಸವಾರ, ಹಿಂಬದಿ ಕುಳಿತ ತಾಯಿ ಮಗುವಿಗೆ ಗಂಭೀರ ಗಾಯಗಳಾಗಿವೆ. ಬೈಕ್ ಸವಾರ 29 ವರ್ಷದ ನಾಗರಾಜ್ ರ್ಯಾವಣಕಿ, 2 ವರ್ಷದ ಮಗು ಲಲಿತಾ …

Read More »

ದೇವರಗುಂಡಿ ಜಲಪಾತದಲ್ಲಿ ಮಾಡೆಲ್‍ಗಳ ಅರೆಬೆತ್ತಲೆ ಫೋಟೋ ಶೂಟ್

ಮಂಗಳೂರು: ಬೆಂಗಳೂರಿನ ಇಬ್ಬರು ಮಾಡೆಲ್ ಗಳು ಕರಾವಳಿಯ ಪುಣ್ಯಕ್ಷೇತ್ರದ ಬಳಿ ಇರುವ ದೇವರ ಜಲಪಾತದ ಎದುರು ಅರೆಬೆತ್ತಲೆಯಾಗಿ ಫೋಟೋ ಶೂಟ್ ಮಾಡಿದ್ದು, ಇದೀಗ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ 13 ಶತಮಾನದ ಇತಿಹಾಸವಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವಿದೆ. ಇಲ್ಲಿ ನೆಲೆಸಿರೋ ಪರಮಾತ್ಮ ಇಲ್ಲಿಂದ 2 ಕಿಲೋಮೀಟರ್ ದೂರದಲ್ಲಿರುವ ಈ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದ ಎಂಬ ಐತಿಹ್ಯ ಇದೆ. ಹೀಗಾಗಿ ಇದಕ್ಕೆ …

Read More »

ರವೀಂದ್ರ ಜಡೇಜಾ ಅವರ ಸ್ಫೋಟಕ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟ್‌ಗಳ ರೋಚಕ ಜಯ

ದುಬೈ: ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರ ಸ್ಫೋಟಕ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಗೆಲ್ಲಲು 173 ರನ್‌ಗಳ ಸವಾಲನ್ನು ಪಡೆದ ಚೆನ್ನೈ ಅಂತಿಮವಾಗಿ 20 ಓವರ್‌ಗಳಲ್ಲಿ 178 ರನ್‌ ಹೊಡೆಯಿತು. ಈ ಪಂದ್ಯವನ್ನು ಕೋಲ್ಕತ್ತಾ ಸೋತಿರುವ ಕಾರಣ ಪ್ಲೇ ಆಫ್‌ ಹಾದಿ ಕಠಿಣವಾಗಿದ್ದು ಉಳಿದ ತಂಡಗಳ ಫಲಿತಾಂಶದ ಮೇಲೆ ನಿರ್ಧಾರವಾಗಲಿದೆ. ಚೆನ್ನೈ ಗೆದ್ದಿದ್ದು ಹೇಗೆ? 17. 2 …

Read More »

ಈ ಬಾರಿ ಎಲ್ಲರೂ ಒಗ್ಗಟ್ಟಾಗಿ ಹದಿನಾರು ಸ್ಥಾನಗಳನ್ನು ಅವಿರೋಧ ಆಯ್ಕೆ ಮಾಡಿ, ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಲು ನಿರ್ಧರಿಸಿದ್ದೇವೆ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಕಳೆದ 2015ರಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಿಂದ ಭಿನ್ನಾಭಿಪ್ರಾಯಗಳು ಮೂಡಿದ್ದವು. ಹೀಗಾಗಿ ಈ ಬಾರಿ ಎಲ್ಲರೂ ಒಗ್ಗಟ್ಟಾಗಿ ಹದಿನಾರು ಸ್ಥಾನಗಳನ್ನು ಅವಿರೋಧ ಆಯ್ಕೆ ಮಾಡಿ, ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಲು ನಿರ್ಧರಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.  ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು,  ಪಕ್ಷದ ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ನಮ್ಮಲ್ಲಿರುವ ಭಿನ್ನಾಪ್ರಾಯ ಬದಿಗಿಟ್ಟು  ಒಂದಾಗಿ ಹೋಗುವ ನಿಟ್ಟಿನಲ್ಲಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿನ 16 ಕ್ಷೇತ್ರದಲ್ಲಿ …

Read More »

ಡಿ.1ರವರೆಗೆ ಮತ್ತೆ ಲಾಕ್‍ಡೌನ್..!

ಜರ್ಮನಿ,ಅ.29- ವಿಶ್ವವನ್ನೇ ಕಂಗೆಡಿಸಿರುವ ಮಹಾಮಾರಿ ಕೊರೊನಾ ಕೆಲವು ದೇಶಗಳಲ್ಲಿ ನಿಯಂತ್ರಣದಲ್ಲಿದ್ದರೂ ಇನ್ನು ಕೆಲವು ದೇಶಗಳಲ್ಲಿ ತನ್ನ ಅಬ್ಬರವನ್ನು ಮುಂದುವರೆಸಿದ್ದು ಆತಂಕಕಾರಿಯಾಗಿದೆ. ಕೊರೊನಾ ಮಹಾಮಾರಿಯನ್ನು ತಡೆಯಲು ಆಯಾ ದೇಶಗಳಲ್ಲಿ ಅಗತ್ಯವಾದ ಕ್ರಮಗಳನ್ನು ಕೈಗೊಂಡಿದ್ದರೂ ಇದರ ಕಾಟ ಕಡಿಮೆಯಾಗದಿರುವುದರಿಂದ ಕೆಲವು ದೇಶಗಳಲ್ಲಿ ಮತ್ತೆ ಲಾಕ್‍ಡೌನ್ ಏರಿಕೆ ಮಾಡಲು ಸರ್ಕಾರಗಳು ಮುಂದಾಗಿವೆ. ಜರ್ಮನಿ ಹಾಗೂ ಫ್ರಾನ್ಸ್ ಗಳಲ್ಲಿ ಕೊರೊನಾ ಮಹಾಮಾರಿಯ ಕಾಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುವುದರಿಂದ ಆ ದೇಶಗಳಲ್ಲಿ 2ನೇ ಲಾಕ್‍ಡೌನ್ ಮಾಡಲು …

Read More »

ಸಿಐಡಿ ಘಟಕದ ಡಿಜಿಪಿ ಟಿ. ಸುನೀಲ್‍ಕುಮಾರ್ ಅವರು ಈ ತಿಂಗಳ ಅಂತ್ಯದಲ್ಲಿ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ.

ಬೆಂಗಳೂರು, ಅ. 29- ಸಿಐಡಿ ಘಟಕದ ಡಿಜಿಪಿ ಟಿ. ಸುನೀಲ್‍ಕುಮಾರ್ ಅವರು ಈ ತಿಂಗಳ ಅಂತ್ಯದಲ್ಲಿ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ ಸುನೀಲ್‍ಕುಮಾರ್ ಅವರು ಬಿಎಸ್‍ಸಿ ಕೃಷಿ ಪದವಿಯನ್ನು ಪಾಸ್ ಮಾಡಿ ನವದೆಹಲಿಯಲ್ಲಿ ತೋಟಗಾರಿಕೆಯಲ್ಲಿ ಸ್ನಾತಕೋತ್ತರ ಪದವಿ ಪಡೆದು 1986ರಲ್ಲಿ ಐಎಫ್‍ಎಸ್(ಅರಣ್ಯ) ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅರಣ್ಯ ಅಧಿಕಾರಿಯಾಗಿದ್ದರು. ತದನಂತರ 1989ರಲ್ಲಿ ಐಪಿಎಸ್ ಪರೀಕ್ಷೆ ಪಾಸ್ ಮಾಡಿ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ರಾಜ್ಯಕ್ಕೆ ಬಂದರು. ಬೀದರ್ ಜಿಲ್ಲೆಯ ಹುಮ್ನಾಬಾದ್ ಉಪವಿಭಾಗದಲ್ಲಿ ಎಎಸ್‍ಪಿಯಾಗಿ …

Read More »

ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು: ಜಮೀರ್ ಅಹ್ಮದ್

ಬೆಂಗಳೂರು: ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು ಅನ್ನೋದು ಜನರ ಮತ್ತು ನನ್ನ ವೈಯಕ್ತಿಯ ಅಭಿಪ್ರಾಯ. ಇದು ಪಕ್ಷ ವಿರೋಧಿ ಹೇಳಿಕೆಯಾಗಲ್ಲ ಎಂದು ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಆರ್.ಆರ್.ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. ಪರ ಪ್ರಚಾರ ನಡೆಸಿದ ಜಮೀರ್ ಅಹ್ಮದ್ ಮಾಧ್ಯಮಗಳ ಜೊತೆ ಮಾತನಾಡಿದರು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನರ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ …

Read More »

ಹೊಸದಾಗಿ ಡಿಡಿಸಿ ಬ್ಯಾಂಕ್ ಉದ್ಘಾಟನೆ ಪ್ರಧಾನಿ ಮೋದಿ ಅವರುಗೆ ಆಹ್ವಾನ ನೀಡುತ್ತೇವೆ ಎಂದು ಶಾಸಕ‌ ಉಮೇಶ ಕತ್ತಿ ಹೇಳಿದರು‌.

ಬೆಳಗಾವಿ: ಹೊಸದಾಗಿ ಡಿಡಿಸಿ ಬ್ಯಾಂಕ್ ಉದ್ಘಾಟನೆ ಪ್ರಧಾನಿ ಮೋದಿ ಅವರುಗೆ ಆಹ್ವಾನ ನೀಡುತ್ತೇವೆ ಎಂದು ಶಾಸಕ‌ ಉಮೇಶ ಕತ್ತಿ ಹೇಳಿದರು‌. ಇಲ್ಲಿನ ಯು‌.ಕೆ 27 ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ನೂರು ವರ್ಷದ ಸಂಭ್ರಮಾಚರಣೆಗೆ  ಭಾಗವಹಿಸಲು ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲು  ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ  ಜಿಲ್ಲೆಯ ಎಲ್ಲ ಮಂ ಬಿಜೆಪಿ ‌ನಾಯಕರು ದೆಹಲಿ ಹೋರಟಿದ್ದೇವೆ ಎಂದರು. ಬೆಳಗಾವಿ ಡಿಸಿಸಿ ಬ್ಯಾಂಕ್ ನ್ನು …

Read More »