# ಮಹಾಂತೇಶ್ ಬ್ರಹ್ಮ ಅವರು ಗಡಿಯಲ್ಲಿ ನಿಂತು ದೇಶ ಕಾಯುವ ಸೈನಿಕರಷ್ಟೇ ಶಿಸ್ತಿನ ಸಿಪಾಯಿಗಳು, ರಾಷ್ಟ್ರೀಯತೆ ಸಿದ್ಧಾಂತಗಳನ್ನು ರಕ್ತದ ಕಣಕಣದಲ್ಲಿ ತುಂಬಿಕೊಂಡವರು. ಎಲ್ಲಿ ನೋವಿದೆಯೋ, ಎಲ್ಲಿ ಕಷ್ಟವಿದೆಯೋ, ಎಲ್ಲಿ ಬಂಧನವಿದೆಯೋ ಅಂತಹ ಜನರಿಗಾಗಿ ಸೇವೆ ಮಾಡುವ ಅವಕಾಶ ನನಗು ಬೇಕು ಎಂದು ತಾಯಿ ಭಾರತ ಮಾತೆಯಲ್ಲಿ ಕೇಳುವವರು ಒಂದೆ ಮಾತಿನಲ್ಲಿ ಹೇಳಬೇಕೆಂದರೆ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕರ್ತರು. ಭೂಕಂಪವಾಗಲಿ, ಚಂಡಮಾರುತವಾಗಲಿ, ಅತಿವೃಷ್ಟಿಯಾಗಲಿ, ಅನಾವೃಷ್ಟಿಯಾಗಲಿ, ಕಾಲರ ಪ್ಲೇಗಿನಿಂದ ಹಿಡಿದು ಈಗಿನ …
Read More »Yearly Archives: 2020
ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ:ಪರಿಷತ್ ಸದಸ್ಯ ವಿಶ್ವನಾಥ್ ಅವರ ಪ್ರಶ್ನೆ
ಮೈಸೂರು: ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ ಎಂದು ತಮ್ಮ ಪಕ್ಷದ ನಾಯಕರನ್ನೇ ಪರಿಷತ್ ಸದಸ್ಯ ವಿಶ್ವನಾಥ್ ಅವರು ಪ್ರಶ್ನೆ ಮಾಡಿದ್ದಾರೆ. ಸದ್ಯ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಬಿಜೆಪಿ ಬಿಹಾರದಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ತಿಳಿಸಿದೆ. ಇದೇ ವಿಚಾರ ಈಗ ಸಖತ್ ಚರ್ಚೆಯಾಗುತ್ತಿದೆ. ಇಂದು ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ …
Read More »ಉತ್ತರ ಕರ್ನಾಟಕದ ಜನ ಸಂಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ಮಾನವೀಯತೆಯಿಲ್ಲ,ಕರ್ನಾಟಕವನ್ನು ಕೇಂದ್ರ ಸರ್ಕಾರ ಗುಲಾಮರ ರೀತಿ ನೋಡುತ್ತಿದೆ.:ವಾಟಾಳ್ ನಾಗರಾಜ್
ರಾಯಚೂರು: ಸರ್ಕಾರ ಪ್ರವಾಹ ಪರಸ್ಥಿತಿಯನ್ನು ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಉತ್ತರ ಕರ್ನಾಟಕದ ಜನ ಸಂಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ಮಾನವೀಯತೆಯಿಲ್ಲ ಅಂತ ರಾಯಚೂರಿನಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ. ರಾಯಚೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ವಾಟಾಳ್ ನಾಗರಾಜ್ ಸರ್ಕಾರ ಹಾಗೂ ವಿವಿಧ ಪಕ್ಷಗಳ ರಾಜಕಾರಣಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ಎಲ್ಲರೂ ಹೆಲಿಕಾಪ್ಟರ್ ರಾಜಕಾರಣಿಗಳಾಗಿದ್ದಾರೆ. ಯಡಿಯೂರಪ್ಪನವರ ಬಳಿ ಹೆಲಿಕಾಪ್ಟರ್ ಇದೆ. ಜೆಡಿಎಸ್, ಕಾಂಗ್ರೆಸ್ಸಿನವರು ಹೆಲಿಕಾಪ್ಟರಿನಲ್ಲೇ ಬರುತ್ತಾರೆ. ಇನ್ನು …
Read More »ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ ಹೊರಡಿಸಲೇಬೇಕು. ಡಿಸೆಂಬರ್ 10ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ವಾಲ್ಮೀಕಿ ಸಮುದಾಯದ ಸಚಿವರು ಮತ್ತು ಶಾಸಕರು ಹಾಲಿಯಿಂದ ಮಾಜಿಯಾಗಲು ಸಿದ್ದರಿದ್ದಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.
ಬೆಂಗಳೂರು,ಅ.23- ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಡಿಸೆಂಬರ್ 10ರೊಳಗೆ ರಾಜ್ಯ ಸರ್ಕಾರ ಅಕೃತವಾಗಿ ಆದೇಶ ಹೊರಡಿಸದಿದ್ದರೆ ಸಮುದಾಯದ ಸಚಿವರು ಮತ್ತು ಶಾಸಕರು ರಾಜೀನಾಮೆ ನೀಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ .ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ …
Read More »ಕನ್ನಡಿಗರ ಬಗ್ಗೆ ನಿರ್ಲಕ್ಷ್ಯವೇಕೆ ‘ಧಮ್’ ಇದ್ರೆ ಕರ್ನಾಟಕಕ್ಕೂ ಉಚಿತವಾಗಿ ಲಸಿಕೆ ಕೊಡಿಸಿ : ಸಿದ್ದರಾಮಯ್ಯ ಚಾಲೆಂಜ್
ಬೆಂಗಳೂರು, ಅ.23-ಬಿಹಾರ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ಸಂದರ್ಭಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಿಹಾರದ ಜನತೆಗೆ ಕೊರೊನಾಗೆ ಉಚಿತ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆ ಇಲ್ಲ ಎಂಬ ಕಾರಣಕ್ಕಾಗಿ ನಮ್ಮ ಆರೋಗ್ಯ ಲೆಕ್ಕಕ್ಕಿಲ್ಲವೇ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಟ್ವೀಟರ್‍ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜ್ಯದ …
Read More »ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ. ಡಿಕೆಶಿ ಎಂಥ ದೊಡ್ಡವರು, ಅವರ ಮುಂದೆ ನಾನು ಸಣ್ಣವನು”:ಮುನಿರತ್ನ ತಿರುಗೇಟು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸರಿಸಮನಾಗಲು ನನಗೆ ಸಾಧ್ಯವೇ ಇಲ್ಲ. ಇದೊಂದು ಜನ್ಮದಲ್ಲಿ ಮಾತ್ರ ಅಲ್ಲ, ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ ಎಂದು ಆರ್‍ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ತಿರುಗೇಟು ನೀಡಿದ್ದಾರೆ. ಇಂದು ಜಾಲಹಳ್ಳಿ ವಾರ್ಡ್ ನಲ್ಲಿ ಸ್ಕೂಟರ್ ನಲ್ಲಿ ಓಡಾಡ್ಕೊಂಡೇ ಮನೆ ಮನೆ ಪ್ರಚಾರ ಮಾಡುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯುದ್ಧದಲ್ಲಿ ಎದುರಾಳಿ ಸರಿಸಮ ಇದ್ರೆ ಹೊರಾಡಬಹುದೆಂದು ಮುನಿರತ್ನ …
Read More »ದಿಗ್ಗಜ ಆಟಗಾರ ಕಪಿಲ್ ದೇವ್ ಅವರಿಗೆ ಹೃದಯಘಾತಆಸ್ಪತ್ರೆಗೆ ದಾಖಲು
ನವದೆಹಲಿ: ಟೀ ಇಂಡಿಯಾ ಚೊಚ್ಚಲ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ, ದಿಗ್ಗಜ ಆಟಗಾರ ಕಪಿಲ್ ದೇವ್ ಅವರಿಗೆ ಹೃದಯಘಾತವಾಗಿತ್ತು. ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. 61 ವರ್ಷದ ಕಪಿಲ್ ದೇವ್ ಅವರಿಗೆ ಸದ್ಯ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ, ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕೂರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 2020ರ ಐಪಿಎಲ್ ಟೂರ್ನಿಯ …
Read More »ಕೆಜಿಎಫ್-2, ಯಶ್ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ.
ಬೆಂಗಳೂರು: ಕೆಜಿಎಫ್-2, ಯಶ್ ಅಭಿಮಾನಿಗಳು ಮಾತ್ರವಲ್ಲದೆ ಪ್ರತಿಯೊಬ್ಬ ಸಿನಿಮಾ ಅಭಿಮಾನಿಯೂ ಬಹುನೀರಿಕ್ಷೆಯಿಂದ ಕಾಯುತ್ತಿರುವ ಸಿನಿಮಾವಾಗಿದೆ. ಸದ್ಯ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ. ಹೌದು. ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆ ಮಾಡುವಂತೆ ಟ್ವಿಟ್ಟರ್ ಮೂಲಕವಾಗಿ ಅಭಿಮಾನಿಗಳು ಸಿನಿಮಾ ತಂಡದ ಮುಂದೆ ಬೇಡಿಕೆ ಇಡುತ್ತಿದ್ದಾರೆ. ‘ವೀನೀಡ್ ಕೆಜಿಎಫ್2 ಟೀಸರ್’ ಹ್ಯಾಶ್‍ಟ್ಯಾಗ್‍ನೊಂದಿಗೆ ಟ್ವೀಟ್ ನ ಸುರಿಮಳೆ ಗೈದಿದ್ದಾರೆ. ಬೆಳಗ್ಗಿನಿಂದಲೇ ಈ ವಿಚಾರ ಟ್ವಿಟರ್‍ನಲ್ಲಿ ಟ್ರೆಂಡಿಂಗ್ ಆಗಿದೆ. ಚಾಪ್ಟರ್-2 ಅಕ್ಟೋಬರ್ 23 …
Read More »ಪದವಿ ಕಾಲೇಜು ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಆದರೆ ಪಿಯು ಕಾಲೇಜು ಸದ್ಯಕ್ಕೆ ಆರಂಭ ಇಲ್ಲ
ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಬಂದ್ ಮಾಡಲಾಗಿದ್ದ ಪದವಿ ಕಾಲೇಜು ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಆದರೆ ಪಿಯು ಕಾಲೇಜು ಸದ್ಯಕ್ಕೆ ಆರಂಭ ಇಲ್ಲ ಎಂದು ಹೇಳಲಾಗುತ್ತಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನವೆಂಬರ್ 17ರಿಂದ ಎಲ್ಲಾ ಪದವಿ ಕಾಲೇಜುಗಳನ್ನು ಆರಂಭ ಮಾಡುವಂತೆ ತೀರ್ಮಾನಿಸಲಾಯಿತು. ಆದರೆ ಸಭೆಯಲ್ಲಿ ಪಿಯು ಕಾಲೇಜು ಆರಂಭದ ಬಗ್ಗೆ ಚರ್ಚೆಯಾಗಿಲ್ಲ. ಪೋಷಕರ ಅನುಮತಿ ಕಡ್ಡಾಯ, ಯಾರಿಗೂ ಒತ್ತಡ …
Read More »ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ
ಬೆಳಗಾವಿ : ವಿಜಯದ ದ್ಯೋತಕವಾಗಿರುವ “ವೀರಜ್ಯೋತಿ” ಯನ್ನು ಸ್ವಾಗತಿಸುವ ಮೂಲಕ “ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ಅವರು ಜ್ಯೋತಿ ಹೊತ್ತುಬಂದ ವಾಹನಕ್ಕೆ ಪೂಜೆ ಸಲ್ಲಿಸಿ ಜ್ಯೋತಿಯನ್ನು ಸ್ವಾಗತಿಸಿದರು. ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಇಂದು ಬೆಳಿಗ್ಗೆ ಹೊರಟ ಜ್ಯೋತಿಯನ್ನು ನೂರಾರು ಜನರ ಹರ್ಷೋದ್ಘಾರಗಳ ಮಧ್ಯೆ ಸ್ವಾಗತಿಸಲಾಯಿತು. ಇದಾದ ಬಳಿಕ ಬೈಲೂರಿನ ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ …
Read More »