ವಿಜಯಪುರ: ತಮ್ಮನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಅಭಿಮಾನಿ ಫೋಸ್ಟ್ ಮಾಡಿರುವುದನ್ನು ನಮ್ಮ ಖಾತೆಗೆ ಹಂಚಿಕೊಳ್ಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಎಂ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಮಾಡಿರುವ ಆರೋಪಕ್ಕೆ ನಿನ್ನೆ ಸಚಿವ ಕೆ.ಎಸ್.ಈಶ್ವರಪ್ಪ, ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದರು. ಈ ಹೇಳಿಕೆಗೆ ಖಾರವಾಗಿ ಫೇಸ್ಬುಕ್ ಮೂಲಕ ಯತ್ನಾಳ್ ಬೆಂಬಲಿಗ ಎನ್ನಲಾದ …
Read More »Yearly Archives: 2020
ಮಲ್ಪೆ ಬಂದರಿನಲ್ಲಿ ಬಲೆಗೆ ಬಿದ್ವು 750, 250 ಕೆ.ಜಿ.ತೂಕದ ಮೀನುಗಳು- ಕ್ರೇನ್ ಬಳಸಿ ಸಾಗಣೆ
ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಮೀನುಗಳು ಬಲೆಗೆ ಬಿದ್ದಿವೆ. ಭಾರೀ ಗಾತ್ರದ ಎರಡು ತೊರಕೆ ಮೀನುಗಳು ಆಳಸಮುದ್ರ ದೋಣಿಯ ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ. ತೂಗುತ್ತಿದೆ. ಮಲ್ಪೆ ಸುಭಾಸ್ ಸಾಲಿಯಾನ್ ಅವರ ಮಾಲೀಕತ್ವದ ನಾಗಸಿದ್ಧಿ ದೋಣಿಯ ಬಲೆಗೆ ಬಿದ್ದಿರುವ ಈ ಮೀನುಗಳನ್ನು ಬಂದರಿನಲ್ಲಿ ಕ್ರೇನ್ ಮೂಲಕ ಇಳಿಸಲಾಯಿತು. ತೊರಕೆ ಮೀನು ತುಂಬಾ ರುಚಿಕರವಾಗಿದ್ದು, ವಿದೇಶಗಳಿಗೆ ರಫ್ತಾಗುತ್ತದೆ. ಬೃಹತ್ …
Read More »ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಪ್ರತಿಯಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್‍ಗಳ ಮೂಲಕ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ …
Read More »ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ ದರ್ಶನ ಪಡೆದಿದ್ದಾರೆ. ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.
Read More »ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಬೆಂಬಲಿಸಿ: ಶಾಸಕ ಸತೀಶ್ ಜಾರಕಿಹೊಳಿ
ಬೆಂಗಳೂರು : ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಡೆಸುತ್ತಿರುವ ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು. ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಇಂದು ರೈತರ ಹಸ್ತಾಕ್ಷರ ಚಳುವಳಿ (ಸಹಿ)ಅಭಿಯಾನಕ್ಕೆ ಬೆಂಬಲ ನೀಡಿ ಮಾತನಾಡಿದರು. ಕೇಂದ್ರ ಸರ್ಕಾರದ 3 ಕೃಷಿ ಸುಗ್ರಿವಾಜ್ಞೆಗಳಾದ ಕೃಷಿ ವ್ಯಾಪಾರ ಮತ್ತು ವಾಣಿಜ್ಯ ಸುಗ್ರಿವಾಜ್ಞೆ, ರೈತರ ಬೆಲೆ ಭರವಸೆ ಮತ್ತು ಕೃಷಿ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು …
Read More »ಯೋಗ, ಯೋಗ್ಯತೆ ಇರುವ ಯಾರು ಬೇಕಾದರೂ ಸಿಎಂ ಆಗಬಹುದು: ಸಿ.ಟಿ.ರವಿ
ಕೊಪ್ಪಳ: ಸಮಗ್ರ ಕರ್ನಾಟಕದ ಯೋಗ ಯೋಗ್ಯತೆ ಇದ್ದವರು ಯಾರು ಬೇಕಾದರು ಸಿಎಂ ಆಗಬಹುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಈ ಮಾತು ಆಡಲು ವಿಶ್ವಾಸ ಬಂದಿದ್ದರೆ ಅದು ಕರ್ನಾಟಕ ಏಕೀಕರಣದಿಂದ ಏಕೀಕರಣ ಆಶಯಕ್ಕೆ ಮಣ್ಣು ಹಾಕುವ ಕೆಲಸ ಮಾಡಬಾರದು. ಯತ್ನಾಳರಷ್ಟು ಬುದ್ಧಿವಂತ ನಾನಲ್ಲ, ನಾನು ಪಕ್ಷದ, ಜನರ ನೆಲೆಯಲ್ಲಿ ಕೆಲಸ ಮಾಡುವವನು. ಸಮಗ್ರ …
Read More »ಕಾರಣ ಕೊಡದೇ ಯತ್ನಾಳರನ್ನ ಪಕ್ಷದಿಂದ ಉಚ್ಛಾಟಿಸಬೇಕು: ಕೆ.ಎಸ್.ಈಶ್ವರಪ್ಪ
ಕೊಪ್ಪಳ: ಶಾಸನ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಾರಣ ನೀಡದೇ ಪಕ್ಷದಿಂದ ಉಚ್ಛಾಟಿಸಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೆಲವರು ಬಾಯಿ ಚಪಲಕ್ಕೆ ಮೂರ್ಖತನದ ಹೇಳಿಕೆ ನೀಡುತ್ತಿರುತ್ತಾರೆ. ಇತ್ತೀಚೆಗೆ ನಡೆದ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿಗಳು ಎಲ್ಲರಿಗೂ ನಿಮ್ಮ ಕ್ಷೇತ್ರದ ಸಮಸ್ಯೆ ಏನು ಅಂತ ಕೇಳಿ, ಬಗೆಹರಿಸಿಕೊಳ್ಳುವಂತೆ ಹೇಳಿದ್ದರು. ಆ ಸಭೆಯಲ್ಲಿ ಸುಮ್ಮನೆ ಬಾಯಿ ಮಚ್ಚಿ ಕುಳಿತುಕೊಂಡು, ಉತ್ತರನ …
Read More »ರಸ್ತೆ ದಾಟಿ ಬಂದ ಮೇಲೆ ಮೈಕೈ ನೋವು ಗ್ಯಾರೆಂಟಿ. ವಾಹನಗಳು ಸುರಕ್ಷಿತವಾಗಿ ಇರುತ್ತವೆ ಅನ್ನೋ ನಂಬಿಕೆಯೂ ಇಲ್ಲಾ
ರಾಯಚೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿಯಾದ ಮಳೆ ಜನಜೀವನವನ್ನ ಅಸ್ತವ್ಯಸ್ತಮಾಡಿದೆ. ರೈತರು ಬೆಳೆ ಕಳೆದುಕೊಂಡಿದ್ದಾರೆ, ನೂರಾರು ಮನೆಗಳು ಬಿದ್ದಿವೆ. ಇದರ ಜೊತೆ ಜೊತೆಗೆ ಜಿಲ್ಲೆಯ ರಸ್ತೆಗಳು ಸಹ ಹಾಳಾಗಿ ಹೋಗಿವೆ. ಜಿಲ್ಲೆಯಿಂದ ಆರಂಭವಾಗುವ ರಾಯಚೂರು- ಬಾಚಿ ರಾಜ್ಯ ಹೆದ್ದಾರಿ ಸಂಖ್ಯೆ 20 ಇದು ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ. ರಸ್ತೆ ತುಂಬಾ ಎಲ್ಲಿ ನೋಡಿದ್ರೂ ಆರಡಿ ಮೂರಡಿ ಗುಂಡಿಗಳೇ ಕಾಣಿಸುತ್ತವೆ. ರಾಯಚೂರು ಹೊರವಲಯದ ಸಾಥಮೈಲ್ ನಿಂದ ಕಲ್ಮಲವರೆಗೆ ಇರುವ ರಸ್ತೆ ಆ …
Read More »