ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರ ನೇಮಕಾತಿ ಆದೇಶ ಹೊರಡಿಸುವ ಚಿಂತನೆ ನಡೆಸಿದೆ ಎನ್ನಲಾಗಿದೆ. ಉಪನ್ಯಾಸಕರಾಗಿ ಆಯ್ಕೆಯಾಗಿರುವ ನೂರಾರು ಅಭ್ಯರ್ಥಿಗಳು ನೇಮಕಾತಿ ಆದೇಶ ಹೊರಡಿಸುವಂತೆ ಸರ್ಕಾರವನ್ನು ಆಗ್ರಹಿಸಿ ಶನಿವಾರ ಆರನೇ ದಿನವೂ ಪಿಯು ಮಂಡಳಿ ಮುಂಭಾಗ ಅಹೋರಾತ್ರಿ ಧರಣಿ ನಡೆಸಿದರು. ಕೊರೊನಾ ವೈರಸ್ ಸಂದರ್ಭದಲ್ಲಿ ಮಳೆ, ಗಾಳಿ ನಡುವೆಯೂ ಉಪನ್ಯಾಸಕರು ಹೆಚ್ಚು ಕಾಲ ಧರಣಿ ಮುಂದುವರೆಸಿ …
Read More »Yearly Archives: 2020
ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್ನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್ನ ಕಾರ್ಗೋ ಗೋಡೌನ್ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ …
Read More »ಭಾರತ-ಚೀನಾದ ಗಡಿ ವಿವಾದ ಈಗ ಬೃಹದಾಕಾರವಾಗಿ ಬೆಳೆದು ನಿಂತಿದೆ.
ದೆಹಲಿ: ಕಳೆದ ಏಪ್ರಿಲ್ನಿಂದ ಸಣ್ಣ ಪ್ರಮಾಣದಲ್ಲಿ ಆರಂಭವಾದ ಭಾರತ-ಚೀನಾದ ಗಡಿ ವಿವಾದ ಈಗ ಬೃಹದಾಕಾರವಾಗಿ ಬೆಳೆದು ನಿಂತಿದೆ. ರಾಜಕೀಯ, ಸೇನಾ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆಗಳು ನಡೆದರೂ ಗಡಿ ಬಿಕ್ಕಟ್ಟು ಬಗೆಹರಿಯುತ್ತಿಲ್ಲ. ಈಗ ಭಾರತ ಮತ್ತು ಚೀನಾದ ನಡುವೆ ಗಡಿ ಬಿಕ್ಕಟ್ಟಿನ ಪರಿಹಾರದ ಬಗ್ಗೆ ಗೌಪ್ಯ ಮಾತುಕತೆ ಕೂಡ ನಡೆಯುತ್ತಿದೆ. ಜೊತೆಗೆ, ನೀವು ಗಡಿಯಿಂದ ಹಿಂದೆ ಸರಿದ್ರೆ, ನಾವೂ ಹಿಂದೆ ಸರಿಯುತ್ತೇವೆ ಅಂತಾ ಭಾರತ ನೇರವಾಗಿ ಚೀನಾಗೆ ಹೇಳಿದೆ. ಎರಡೂ ದೇಶಗಳ …
Read More »ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ.
ಮೈಸೂರು: ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ. ಎಲ್ಲೆ ಹೋದ್ರೂ ಕಲರ್ ಫುಲ್ ಲೈಟಿಂಗ್ಸ್‌ಗಳು ಎಲ್ಲರನ್ನೂ ಸೆಳೆಯುತ್ತಿದೆ. ಆದ್ರೆ ಇದೇ ಕೊರೊನಾ ಹೆಚ್ಚಾಗಲು ಕಾರಣವಾಗುತ್ತಾ ಅನ್ನೋ ಭಯ ಕಾಡುಲು ಶುರು ಮಾಡಿದೆ. ಎಲ್ಲೇ ನೋಡಿದ್ರೂ ಕಾಣುವ ಝಗಮಗಿಸೋ ದೀಪಾಲಂಕಾರ. ಬೀದಿ ಬೀದಿಗಲ್ಲಿ ಫಳ ಫಳ ಹೊಳೆಯೋ ಕಲರ್ ಫುಲ್ ವಿದ್ಯುತ್ ದೀಪ.. ಮರದ ಮೇಲೆ, ಕಟ್ಟಡದ ಮೇಲೆ, ರಸ್ತೆಯ ಉದ್ದಕ್ಕೂ ಕಣ್ಣು ಕುಕ್ಕುವ ಲೈಟಿಂಗ್ಸ್. ಮಿಂಚುವ …
Read More »ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು
ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದರೂ ನೆರೆ ಮಾತ್ರ ತಗ್ಗಿಲ್ಲ. ಇನ್ನೂ ಹಲವು ಜನ ಮನೆಗೆ ತೆರಳಲಾಗದೆ ಕಾಳಜಿ ಕೇಂದ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಇನ್ನಷ್ಟು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗುತ್ತಿದೆ. ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ. ಭೀಮಾ ನದಿಯ ಮಹಾ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿ ಅಪಾಯ ಮಟ್ಟ …
Read More »ಅಕ್ಟೋಬರ್ 31 ರಂದು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸರಳ ಮತ್ತು ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 31 ರಂದು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸರಳ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ.ಹಿರೇಮಠ ಅವರು ತಿಳಿಸಿದರು. ಮಹರ್ಷಿ ವಾಲ್ಮೀಕಿ ಅವರ ಜಯಂತಿಯ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಷಿ ವಾಲ್ಮೀಕಿ ಜಯಂತಿಯ ದಿನದಂದು ಕಿಲ್ಲಾಕೋಟೆ ಬಳಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, …
Read More »ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ವಾಲ್ಮೀಕಿ ಮಹರ್ಷಿ ಮೂರ್ತಿ ಆದಷ್ಟು ಬೇಗ ಎರಡು ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುವುದು
ಬೆಳಗಾವಿ: ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ವಾಲ್ಮೀಕಿ ಮಹರ್ಷಿ ಮೂರ್ತಿ ಪ್ರತಿಷ್ಠಾಪನೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇಸಿದರು. ಶಿವಾಜಿ ಪ್ರತಿಮೆ ಸ್ಥಾಪನೆ ವಿವಾದಕ್ಕೆ ಇಡಾಗಿದ್ದ ಮಣಗುತ್ತಿ ಗ್ರಾಮದಲ್ಲಿ, ಮೂರು ಗ್ರಾಮಗಳ ಗ್ರಾಮಸ್ಥರ ಮುಖಂಡರೊಂದಿಗೆ ಚರ್ಚಿಸಿ, ಒಮ್ಮತ ಅಭಿಪ್ರಾಯದಿಂದ ಮೂರ್ತಿ ಪ್ರತಿಷ್ಠಾಪನೆ ಅಡಿಗಲ್ಲು ಸಮಾರಂಭವನ್ನು ನಡೆಯಿತು. ಇದೇ ವೇಳೆ ಮಾತನಾಡಿದ ಅವರು, ಗ್ರಾಮದ ಹಿತದೃಷ್ಟಿಯಿಂದ ಧರ್ಮದಲ್ಲಿ ರಾಜಕೀಯ ಮಾಡುವುದು ಬೇಡ. ಎಲ್ಲರೂ ಗ್ರಾಮದ ಅಭಿವೃದ್ಧಿಗೆ …
Read More »ನಾವು ಬಹಳ ಕೇರ್ ಫುಲ್ ಆಗಿರ್ಬೇಕು – ಡ್ರಗ್ಸ್ ಮಾಫಿಯಾ ಬಗ್ಗೆ ಹರಿಪ್ರಿಯಾ ಮಾತು
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಬಗ್ಗೆ ನೀರ್ ದೋಸೆ ಬೆಡಗಿ ನಟಿ ಹರಿಪ್ರಿಯಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಹರಿಪ್ರಿಯ ಮತ್ತು ದಿಗಂತ್ ನಟನೆಯ ತೆಲುಗು ಸಿನಿಮಾದ ರಿಮೇಕ್ ಚಿತ್ರವೊಂದು ಸೆಟ್ಟೇರಿದೆ. ಈ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನನಗೆ ಡ್ರಗ್ಸ್ ಬಗ್ಗೆ ಮಾಹಿತಿ ಇಲ್ಲ. ನಿಮ್ಮ ಮಾಧ್ಯಮಗಳಿಂದಾನೇ ಆ ವಿಷಯ ಎಲ್ಲ ಗೊತ್ತಾಯ್ತು ಎಂದಿದ್ದಾರೆ. ನಾನು ಯಾವ ಪಾರ್ಟಿನಲ್ಲೂ ಇದುವರೆಗೂ ಭಾಗಿಯಾಗಿಲ್ಲ. ಡ್ರಗ್ಸ್ …
Read More »ಎಂಟಿಎಂನಿಂದ ಬಂತು ತುಕ್ಕು ಹಿಡಿದ 2 ಸಾವಿರದ ನೋಟು
ಧಾರವಾಡ: ಸಾಮಾನ್ಯವಾಗಿ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡರೆ ಹೊಸ ನೋಟುಗಳು ಬರುತ್ತವೆ. ಆದರೆ ಧಾರವಾಡದ ಎಟಿಎಂ ಒಂದರಲ್ಲಿ ತುಕ್ಕು ಹಿಡಿದ ನೋಟು ಬರುತ್ತಿವೆ. ಅದೂ 100 ಹಾಗೂ 500 ರೂ. ನೋಟಲ್ಲ, ಬದಲಾಗಿ ಎರಡು ಸಾವಿರದ ನೋಟುಗಳು. ಧಾರವಾಡ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಎಸ್‍ಬಿಐ ಎಟಿಎಂನಲ್ಲಿ ಈ ನೋಟುಗಳು ಬಂದಿದ್ದರಿಂದ ಡ್ರಾ ಮಾಡಿದ ವ್ಯಕ್ತಿ ಹೌಹಾರಿದ್ದಾನೆ. ಗೌಸ್ ನವಲೂರ ಎಂಬ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಈ ಎಸ್‍ಬಿಐ …
Read More »ಧಾರವಾಡದ ಲಕ್ಷ್ಮಿ ನಾರಾಯಣ ದೇವಸ್ಥಾನದ ಜಾತ್ರೆಗೆ ಈ ವರ್ಷ ನಿರ್ಬಂಧ ಹೇರಲಾಗಿದೆ.
ಧಾರವಾಡ: ಕೊರೊನಾ ಹಿನ್ನೆಲೆ ನಗರದ ಲಕ್ಷ್ಮಿ ನಾರಾಯಣ ದೇವಸ್ಥಾನದ ಜಾತ್ರೆಗೆ ಈ ವರ್ಷ ನಿರ್ಬಂಧ ಹೇರಲಾಗಿದೆ. ಈ ಮೂಲಕ 117 ವರ್ಷಗಳ ಜಾತ್ರೆಗೆ ಈ ವರ್ಷ ಬ್ರೇಕ್ ಬಿದ್ದಂತಾಗಿದೆ. ಕಳೆದ 117 ವರ್ಷಗಳಿಂದ ಧಾರವಾಡ ನಗರದ ರವಿವಾರ ಪೇಟೆಯಲ್ಲಿರುವ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಪಾರಂಪರಿಕವಾಗಿ ಜಾತ್ರೆಯನ್ನು ಆಚರಿಸುತ್ತ ಬಂದಿದ್ದರು. ಅತ್ಯಂತ ವಿಜ್ರಂಭಣೆಯಿಂದ ಮಾಡಲಾಗುವ ದಸರಾ ಹಬ್ಬದ ವೇಳೆಯೇ ಲಕ್ಷ್ಮಿ ನಾರಾಯಣ ಜಾತ್ರೆಯನ್ನು ಮಾಡುವ ಈ ಸಂಪ್ರದಾಯಕ್ಕೆ ಕೊರೊನಾದಿಂದಾ ತಡೆಯಾಗಿದೆ. ಪ್ರತಿ …
Read More »