ಚಿಕ್ಕಮಗಳೂರು: ಕಳೆದ 15 ವರ್ಷಗಳಿಂದ ನೀರೇ ಇಲ್ಲದ ಮಕ್ಕಳ ಆಟದ ಮೈದಾನವಾಗಿದ್ದ ಬೃಹತ್ ಕೆರೆಗೆ ನೀರು ಹರಿದು ಬರುತ್ತಿದ್ದು ಚಿಕ್ಕಮಗಳೂರು ತಾಲೂಕಿನ ಬೆಳವಾಡಿ, ಕಳಸಾಪುರ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ತಾಲೂಕಿಣ ಬೆಳವಾಡಿಯ ಬೃಹತ್ ಕೆರೆಗೆ ನೀರು ಬಂದಿದ್ದು, ರೈತರಿಗೆ ಮರುಳುಗಾಡಲ್ಲಿ ಓಯಾಸಿಸ್ ಸಿಕ್ಕಂತಾಗಿದ್ದು, ಸ್ಥಳೀಯರ ಪಾಲಿಗೆ ಈ ಕೆರೆ ಪ್ರವಾಸಿ ತಾಣವಾಗಿದೆ. ತಾಲೂಕಿನ ಬೆಳವಾಡಿ, ಕಳಸಾಪುರ ಸೇರಿದಂತೆ ಈ ಭಾಗದ ಹತ್ತಾರು ಹಳ್ಳಿಗಳು …
Read More »Yearly Archives: 2020
14 ತಿಂಗಳ ಬಳಿಕ ಮೆಹಬೂಬಾ ಮುಫ್ತಿ ಬಿಡುಗಡೆ,ಕೇಂದ್ರದ ನಿರ್ಧಾರ ಕ್ರೂರ ಎಂದು ಕಿಡಿ
ಶ್ರೀನಗರ: ಜಮ್ಮು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ, ಮಾಜಿ ಸಿಎಂ ಮೆಹಬೂಬಾ ಮುಫ್ತಿಯರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 5ರಂದು 370ನೇ ವಿಧಿ ರದ್ದುಪಡಿಸಿದ ಬಳಿಕ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಮೆಹಬೂಬಾ ಮುಫ್ತಿ ಕಿಡಿ ಕಾರಿದ್ದಾರೆ. ಪೂರ್ತಿ ಕಪ್ಪು ಬಣ್ಣದ ವಿಡಿಯೋವನ್ನು ಹಂಚಿಕೊಂಡಿರುವ ಅವರು, ಆಡಿಯೋ ಮೆಸೇಜ್ ಮೂಲಕ ಕಿಡಿಕಾರಿದ್ದಾರೆ. ಒಂದೂ ವರ್ಷಕ್ಕೂ ಹೆಚ್ಚು ಕಾಲ ಅಂದರೆ …
Read More »ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ.
ಬೆಂಗಳೂರು: ಕೊರೊನಾ ಮಧ್ಯೆ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಅಲ್ಲದೇ ಸಾಕಷ್ಟು ಅವಾಂತರ ಸೃಷ್ಟಿಸಿದ್ದಾನೆ. ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಮಹಾ ಮಳೆ ಮುಂದುವರಿದಿದ್ದು, ಇದು ಇಲ್ಲಿಗೆ ನಿಲ್ಲೋ ಲಕ್ಷಣಗಳು ಕಾಣುತ್ತಿಲ್ಲ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಜನ ತತ್ತರಿಸಿ ಹೋಗಿದ್ದಾರೆ.ಕೊರೊನಾದಿಂದ ಈಗಾಗಲೇ ಜನ …
Read More »ನಿವೃತ್ತ ಐಪಿಎಸ್ ಅಧಿಕಾರಿ ಬಿಎನ್ ಎಸ್ ರೆಡ್ಡಿ ವಿರುದ್ಧ ಎಫ್‌ಐಆರ್
ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಬಿಎನ್ಎಸ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದಿರಾನಗರ ಕ್ಲಬ್ ನಲ್ಲಿ ನಿಯಮ ಉಲ್ಲಂಘನೆ ಮಾಡಿ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಕ್ಲಬ್ ಸದಸ್ಯ ರಾಮ್ ಮೋಹನ್ ಕೋರ್ಟ್‌ಗೆ ದೂರು ನೀಡಿದ್ದರು.ಕೋರ್ಟ್ ನಿರ್ದೇಶನದಂತೆ ಈಗ ಬಿಎನ್‌ಎಸ್ ರೆಡ್ಡಿ ಮತ್ತು ನಾಗೇಂದ್ರ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 120 ,418, 465, 471, 420,468, 417ರ ಅಡಿ ಪ್ರಕರಣ ದಾಖಲಾಗಿದೆ.ದೂರಿನಲ್ಲಿ …
Read More »ರಾಜ್ಯದ ನಗರಗಳ ಹವಾಮಾನ ವರದಿ: 14-10-2020
ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಇನ್ನುಳಿದಂತೆ ಹಲವೆಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. …
Read More »ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ ಶಂಕರಟ್ಟಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಅಥಣಿ :ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ ಶಂಕರಟ್ಟಿ ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು. ಈ ವೇಳೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶುವೈದ್ಯ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಸಂದರ್ಭದಲ್ಲಿ ಬಸವರಾಜ ಖೇಮಲಾಪುರ ವಿಪತ್ತು ನಿರ್ವಾಹಕ ಘಟಕದ ಸಂಯೋಜಕರು ದರೂರ ಹಾಗೂ ವಲಯ ಮೇಲ್ವಿಚಾರಕರು , ಸೇವಾಪ್ರತಿನಿಧಿಗಳು ಮತ್ತು ವೈದ್ದ್ಯಾದಿಕಾರಿಗಳು ಮತ್ತು ನರ್ಸ್ ಸ್ವಯಂ ಸೇವಕರು ಜಕ್ಕಪ್ಪ ತೀರ್ಥ, ವಿಠ್ಠಲ್ ಕುಂಬಾರ್, …
Read More »ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ
ಚಲಿಸುವ ಗಡಿಯಾರ ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ ಹಗಲಲಿ ಕನಸ ನಕ್ಷತ್ರಗಳು ಮರೆಯಾಗುವಂತೆ ಮಾಯವಾಗುವ ನೆನಪೇ ಒಂದು ಚಲಿಸುವ ಗಡಿಯಾರ ಕತ್ತಲೆ ಬೆಳಕನಾವರಿಸುವಂತೆ ಮನವನಾವರಿಸುವ ನೆನಪೇ ಒಂದು ಚಲಿಸುವ ಗಡಿಯಾರ…. ನವಿರಾದ ಸುಖಗಳ ನಡುವೆ ಸಿಹಿಯಾದ ಅನುಭವ ಬೆರೆಸುವ ನೆನಪೇ ಒಂದು ಚಲಿಸುವ ಗಡಿಯಾರ ಭವಿಷ್ಯದ ಗರ್ಭದಲಿ ಗರಿಬಿಚ್ಚಿ ನಲಿವಂತೆ ಸಿಹಿನೆನಪಿನ ತರಂಗಗಳನ್ನು ಬಡಿದೆಬ್ಬಿಸುವ ನೆನಪೇ ಒಂದು ಚಲಿಸುವ ಗಡಿಯಾರ ಹೃದಯದ ಭಾವನೆಗಳನ್ನು …
Read More »ತುಮಕೂರಲ್ಲಿ ಕಂಗನಾ ವಿರುದ್ಧ ಎಫ್‍ಐಆರ್
ತುಮಕೂರು: ಕೋರ್ಟ್ ಆದೇಶದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ. ಕಂಗನಾ ಅವರು ಟ್ವಿಟರ್ ನಲ್ಲಿ ರೈತರನ್ನ ಭಯೋತ್ಪಾದಕರು ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲ ರಮೇಶ್ ನಾಯ್ಕ್, ಜೆಎಂಎಫ್‍ಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕೋರ್ಟ್ ನಿರ್ದೇಶನ ಮೇರೆಗೆ ನಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿ ತಂದಿದ್ದ ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು …
Read More »ಕೊಪ್ಪಳ : ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಟಿ.ಶ್ರೀಧರ್
ಕೊಪ್ಪಳ : ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಟಿ.ಶ್ರೀಧರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. 2012ರ ಐಪಿಎಸ್ ಬ್ಯಾಚ್ ನಲ್ಲಿ ಇವರು, ಬೆಂಗಳೂರುನಲ್ಲಿ ಗುಪ್ತಚರ ವಿಭಾಗ ಸೇರಿ ವಿವಿಧ ಮೂರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಪ್ಪಳಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಬೀದರ್ ನಲ್ಲಿ ಎಸ್ಪಿಯಾಗಿ ಕಾರ್ಯನಿರ್ವವಹಿಸಿದ್ದಾರೆ. ಶಿಕ್ಷಣ: ಬಳ್ಳಾರಿ ಜಿಲ್ಲೆಯ ಶಿರಗುಪ್ಪ ತಾಲ್ಲೂಕಿನವರು. ಪ್ರಾಥಮಿಕ ಶಿಕ್ಷಣವನ್ನು ಶಿರಗುಪ್ಪ, ಸಿಂಧನೂರಿನಲ್ಲಿ, ಕಾಲೇಜ್ ಶಿಕ್ಷಣ ಧಾರವಾಡದಲ್ಲಿ ಪಡೆದಿದ್ದಾರೆ. …
Read More »ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ
ಬೆಳಗಾವಿ: 50 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸುಳೇಬಾವಿ ಗ್ರಾಮದ ಬಳಿ ನಡೆದಿದೆ. ಫುಲ್ ಶರ್ಟ್, ನೀಲಿ ಜಾಕೆಟ್ ಧರಿಸಿರುವ ವ್ಯಕ್ತಿ ಸುಳೇಬಾವಿ ಮತ್ತು ಸಲದಾಳ ರೈಲು ನಿಲ್ದಾಣದ ಮಧ್ಯೆ ರೈಲು ಹಳಿಗಳ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಕೆಂಪು ಬಣ್ಣದ ಛತ್ರಿ, ನೀಲಿ ಚೀಲ ದೊರೆತಿದೆ ಎಂದು ಬೆಳಗಾವಿ ನಗರದ ರೈಲ್ವೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
Read More »