ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಚಿಕ್ಕಮಗಳೂರು, ಕಳಸ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ …
Read More »Yearly Archives: 2020
ಲಕ್ಷಾಂತರ ಮೀನುಗಳ ಮಾರಣಹೋಮ – 150 ಕುಟುಂಬಗಳ ಆದಾಯಕ್ಕೆ ಕೊಡಲಿಪೆಟ್ಟು
ರಾಯಚೂರು: ತಾಲೂಕಿನ ಕಟ್ಲಾಟಕೂರ ಕೆರೆಯ ನೀರು ರಾತ್ರೋ ರಾತ್ರಿ ವಿಷವಾಗಿದ್ದು ಲಕ್ಷಾಂತರ ಮೀನುಗಳು ಸಾವನ್ನಪ್ಪಿವೆ. ಇದರಿಂದ ಮೀನುಗಾರಿಕೆಯನ್ನೇ ನಂಬಿ ಬದುಕುತ್ತಿದ್ದ ಗ್ರಾಮದ 150 ಕುಟುಂಬಗಳ ಮುಖ್ಯ ಆದಾಯಕ್ಕೆ ಕತ್ತರಿ ಬಿದ್ದಿದೆ.ಕೆರೆಯಲ್ಲಿನ 5 ಲಕ್ಷಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿದ್ದು ಮೀನುಗಾರರು ಬೀದಿಗೆ ಬರುವಂತಾಗಿದೆ. ಕೆರೆಯ ನೀರಿಗೆ ವಿಷಪ್ರಾಶನವಾಗಿದ್ದು ಬಹುತೇಕ ಎಲ್ಲಾ ಮೀನುಗಳು ಸಾವನ್ನಪ್ಪಿವೆ ಎಂದು ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 350 ಎಕರೆ ಪ್ರದೇಶದ ಕೆರೆ ಈ ವರ್ಷ ಸತತವಾಗಿ ಸುರಿದ ಮಳೆಯಿಂದ …
Read More »ಆರೋಗ್ಯ ಸಿಬ್ಬಂದಿ ಧಮ್ಕಿ ಹಾಕಿ ಕೊರೊನಾ ಸೋಂಕು ತಪಾಸಣೆ ಮಾಡಿಸಿಕೊಳ್ಳದೆ ನೂರಾರು ಪ್ರಯಾಣಿಕರು ನಗರಕ್ಕೆ
ಯಾದಗಿರಿ: ಮುಂಬೈನಿಂದ ಯಾದಗಿರಿ ಜಿಲ್ಲೆಗೆ ಎಂಟ್ರಿ ಕೊಟ್ಟು ಜಿಲ್ಲೆಯ ಜನರ ಮೇಲೆ ದಾಳಿ ಮಾಡಿದ್ದ ಕೊರೊನಾ 50ಕ್ಕೂ ಅಧಿಕ ಜನರ ಪ್ರಾಣ ಬಲಿ ಪಡೆದಿದೆ. ಈಗ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹೊತ್ತಿನಲ್ಲಿ ಮತ್ತೆ, ಯಾದಗಿರಿಗೆ ಮುಂಬೈ ಕಂಟಕ ಎದುರಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಮುಂಬೈನಿಂದ ರಾಜ್ಯಕ್ಕೆ ಬಂದ ವ್ಯಕ್ತಿ ಓರ್ವ ನಾನು ಯಾವ ಟೆಸ್ಟ್ ಮಾಡಸಲ್ಲ ಏನು ಮಾಡತ್ತಿರಿ ಮಾಡಿಕೊಳ್ಳಿ ಎಂದು ಆರೋಗ್ಯ ಸಿಬ್ಬಂದಿ ಅವಾಜ್ ಹಾಕಿ ಉದ್ಧಟತನ …
Read More »ವಿವಾದದಿಂದಲೇ ಸುದ್ದಿಯಾಗುತ್ತಿರುವ ಕಿಮ್ಸ್ ಆಸ್ಪತ್ರೆ,ಹೃದಯಾಘಾತದಿಂದ ವೃದ್ಧ ಸಾವು
ಹುಬ್ಬಳ್ಳಿ: ವಿವಾದದಿಂದಲೇ ಸುದ್ದಿಯಾಗುತ್ತಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಇದೀಗ ಕಿಮ್ಸ್ ಆರೋಗ್ಯ ಅಧಿಕಾರಿಗಳು ಮಾಡಿದ ಕೆಲಸದಿಂದ ಮನೆಯ ಹಿರಿಯನ ಮುಖವನ್ನು ನೋಡದೇ ಅಂತ್ಯಕ್ರಿಯೆ ಮಾಡುವಂತ ಪರಿಸ್ಥಿತಿ ತಂದಿಟ್ಟಿರುವುದು ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಳ್ಳ ಗ್ರಾಮದ 72 ವರ್ಷದ ವೃದ್ಧ ಬಸಪ್ಪ ಹುಬ್ಬಳ್ಳಿ ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಅವರನ್ನು ಕೋವಿಡ್ ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಕೋವಿಡ್ ಇದೆ …
Read More »ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ.
ನವದೆಹಲಿ: ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ. ಡೇವಿಡ್ ವಾರ್ನರ್ ಅವರು ಸದ್ಯ ಯುಇಎಯಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಭಾಗಿಯಾಗಿದ್ದಾರೆ. ತನ್ನ ನಾಯಕತ್ವದ ಸನ್‍ರೈಸಸ್ ಹೈದರಾಬಾದ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ನಿನ್ನೆ ನಡೆದ ಪಂಜಾಬ್ ವಿರುದ್ಧ ಪಂದ್ಯದಲ್ಲಿ ಹೈದರಾಬಾದ್ ತಂಡ 69 ರನ್‍ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. ಈ ನಡುವೆ ಇಂದು ಟ್ವೀಟ್ ಮಾಡಿರುವ …
Read More »ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ: ಹೆಚ್‍ಡಿ.ರೇವಣ್ಣ ಆಕ್ರೋಶ
ಹಾಸನ: ಹಾಸನ ನಗರಸಭೆ ಅಧ್ಯಕ್ಷಗಾದಿಯನ್ನು ಎಸ್‍ಟಿ ಅಭ್ಯರ್ಥಿಗೆ ಮೀಸಲಿರಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಹಾಸನದಲ್ಲಿ ಶಾಸಕ ಹೆಚ್‍ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ಹಾಸನ ನಗರಸಭೆ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗುವುದು ಖಚಿತವಾಗಿದ್ದು, ಬಹುಮತವಿದ್ದರೂ ಜೆಡಿಎಸ್ ಪಕ್ಷ ಅಧ್ಯಕ್ಷ ಸ್ಥಾನದಿಂದ ವಂಚಿತವಾಗಿದೆ. ಈ ಬಗ್ಗೆ ಹಾಸನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ರೇವಣ್ಣ, ಮೀಸಲು ನಿಗದಿಯಲ್ಲಿ ನ್ಯಾಯ ದೇವತೆಗೆ ಅನ್ಯಾಯ ಮಾಡಿದ್ದಾರೆ ಎಂದರು. ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ ಇರಬಹುದು. ಜಿಲ್ಲೆಯಲ್ಲಿ …
Read More »ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ.
ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ. ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‍ನಲ್ಲಿ ಧೋನಿ ನೇತೃತ್ವದ ತಂಡ ಆರಂಭದಲ್ಲೇ ಎಡವಿದೆ. ಟೂರ್ನಿಯ ಆರಂಭದ ಮೊದಲ ಪಂದ್ಯವನ್ನು ಗೆದ್ದರೂ ನಂತರ ಅದೇ ಲಯದಲ್ಲಿ ತಂಡವನ್ನು ತೆಗೆದುಕೊಂಡು ಹೋಗುವಲ್ಲಿ ಧೋನಿ ಎಡವಿದ್ದಾರೆ. ಹೀಗಾಗಿ ವ್ಯಕ್ತಿಯೋರ್ವ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿದ್ದಾನೆ. …
Read More »ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ
ಬೆಂಗಳೂರು: ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …
Read More »ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.
ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …
Read More »ಮಂಕಡಿಂಗ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್ಸ್ಟ್ರೈಕರ್ ಬ್ಯಾಟ್ಸ್ಮನ್ನನ್ನು ಮಂಕಡಿಂಗ್ ( ನಾನ್ಸ್ಟ್ರೈಕರ್ ಬ್ಯಾಟ್ಸ್ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …
Read More »