Breaking News

Yearly Archives: 2020

ನಾಳೆ ಬೆಳಗಾವಿಗೆ ಯಡಿಯೂರಪ್ಪ;

ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಬೆಳಗ್ಗೆ 9.45 ಗಂಟೆಗೆ ಅವರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಇತ್ತೀಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ವಿಶ್ವೇಶ್ವರ ನಗರದ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಅವರು 11 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಅದೇ ವಿಮಾನದಲ್ಲಿ ನಿರ್ಗಮಿಸುವರು

Read More »

ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ

ದಾವಣಗೆರೆ : ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹಿರಿಯ ರಂಗಕರ್ಮಿ, ಹೆಸರಾಂತ ರಂಗ ಕಲಾವಿಧ ಎಂದೇ ಗುರ್ತಿಸಿಕೊಂಡಿದ್ದಂತ ಕೊಡಗನೂರು ಜಯಕುಮಾರ್ (70) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತವಾದ ತಕ್ಷಣ ಆಸ್ಪತ್ರೆಗೆ ದಾಖಲಾದ್ರೂ.. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರು ಜೂನಿಯರ್ ರಾಜಕುಮಾರ್ ಅಂತಲೇ ಪ್ರಸಿದ್ಧಿಯಾಗಿದ್ದರು. ಕಿರುತೆರೆಯಲ್ಲಿ ಪಾಪ ಪಾಂಡು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ …

Read More »

ಹೈಕಮಾಂಡ್ ಅಧಿಕೃತ ಘೋಷಣೆ ಮಾಡುವ ಮೊದಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರ್‌ ಆರ್ ನಗರ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಬಹಿರಂಗ

ಮೈಸೂರು: ಹೈಕಮಾಂಡ್ ಅಧಿಕೃತ ಘೋಷಣೆ ಮಾಡುವ ಮೊದಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರ್‌ ಆರ್ ನಗರ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಬಹಿರಂಗಪಡಿಸಿದ್ದಾರೆ. ಇಂದು (ಮಂಗಳವಾರ) ಮೈಸೂರಿನಲ್ಲಿ ಮಾತನಾಡಿದ ಅವರು, ಆರ್‌ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಂದು ಹೇಳಿದ ಸಿದ್ದರಾಮಯ್ಯಾವರು, ಇಂದು (ಮಂಗಳವಾರ) ಸಂಜೆ ಅಧಿಕೃತವಾಗಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ. ಕೆಪಿಸಿಸಿ ಇಂದ ಒಂದೇ ಹೆಸರನ್ನ ಶಿಫಾರಸ್ಸು ಮಾಡಲಾಗಿತ್ತು. ಅವರು ಹೆಸರು ಅಂತಿಮವಾಗಿ ಸಂಜೆ …

Read More »

B.J.P.ಕುತಂತ್ರಕ್ಕೆ ಹೆದರುವ ಮಗ ನಾನಲ್ಲ – DK ಶಿವಕುಮಾರ್ ಘರ್ಜನೆ

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ಹೊರಬಂದ ಶಿವಕುಮಾರ್​ ರೇಡ್​ ಬಗ್ಗೆ ಮಾತನಾಡಿದರು. ಸದಾಶಿವನಗರದಲ್ಲಿರುವ ತಮ್ಮ ನಿವಾಸಿದಿಂದ ಹೊರಬಂದ ಶಿವಕುಮಾರ್ ರೇಡ್​ ಬಗ್ಗೆ ಪ್ರತಿಕ್ರಿಯಿಸಿದರು. ನಿಮ್ಮ ಅಭಿಮಾನ, ಪ್ರೀತಿ ಮರೆಯಲು ಸಾಧ್ಯವಿಲ್ಲ. ಇಡೀ ದೇಶದ ಜನರು ನೋಡುತ್ತಿದ್ದಾರೆ. ಬೆಳಗ್ಗೆಯಿಂದ ಮನೆ ಮುಂದೆ ಅಥವಾ ರಸ್ತೆ ಇರಬಹುದು, ರಾಜ್ಯದಲ್ಲಿ, ಹೊರಗಡೆ ನನಗಾಗಿ ಮತ್ತು ಪಕ್ಷಕ್ಕೆ ಪ್ರೀತಿ ಅಭಿಮಾನ ತೋರಿಸಿದ ನಿಮ್ಮ ಋಣ …

Read More »

ಯೋಧ ರಸ್ತೆ ಅಪಘಾತಕ್ಕೆ ಬಲಿಪತ್ನಿಯನ್ನು ಸಂತೈಸುತ್ತಲೇ ಕಣ್ಣೀರು ಹಾಕಿದ ಹೆಬ್ಬಾಳಕರ್

ಬೆಳಗಾವಿ – ಸಮೀಪದ ನಾವಗೆ ಗ್ರಾಮದ ಯೋಧ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.   ನಾವಗೆ ಗ್ರಾಮದ ಶಿವಾಜಿ ಆನಂದ ತಳವಾರ ( 45) ಸೋಮವಾರ ತುಮಕೂರು ಬಳಿ ರಸ್ತೆ ಅಪಘಾತದಿಂದ ಸಾವಿಗೀಡಾಗಿದ್ದಾರೆ. ಶಿವಾಜಿ ಸಂಚರಿಸುತ್ತಿದ್ದ ಬೈಕ್ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ರಜೆಯ ಮೇಲೆ ಬಂದಿದ್ದ ಶಿವಾಜಿ ಮೈಸೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗಲು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. 19 ವರ್ಷದಿಂದ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಶಿವಾಜಿಗೆ ಈಚೆಗಷ್ಟೆ ಬಡ್ತಿ ಸಿಕ್ಕಿತ್ತು. 12 …

Read More »

ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದ ಪ್ರಹ್ಲಾದ್ ಜೋಶಿ

ಬೆಳಗಾವಿ  – ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮೊದಲಿನಿಂದಲೂ ಕಮಿಶನ್ ಏಜಂಟ್ ರೀತಿಯಲ್ಲಿ ಪಕ್ಷ ಕೆಲಸ ಮಾಡಿಕೊಂಡು ಬಂದಿದೆ ಎಂದು ಟೀಕಿಸಿದ್ದಾರೆ. 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಸದಾ ರೈತ ವಿರೋಧಿಯಾಗಿಯೇ ನಡೆದುಕೊಂಡು ಬಂದಿದೆ. ಎಲ್ಲದಕ್ಕೂ ದಲ್ಲಾಳಿ ವ್ಯವಹಾರ ಮಾಡಿಕೊಂಡು ಬಂದಿದೆ. ಚುನಾವಣೆಯಲ್ಲಿ ನೀಡಿದ ಯಾವ ಆಶ್ವಾಸನೆಯನ್ನೂ ಈಡೇರಿಸುವುದು ಗೊತ್ತಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೇಲಿನ ದಾಳಿಗೂ ರಾಜಕೀಯಕ್ಕೂ ಸಂಬಂಧವಿಲ್ಲ. …

Read More »

8,000 ಶಿಕ್ಷಕ ಹುದ್ದೆಗಳು ಖಾಲಿಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 8,000 ಶಿಕ್ಷಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿ ಆರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ಅಕ್ಟೋಬರ್ 20,2020ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ವಿದ್ಯಾರ್ಹತೆ: ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತರು ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಬಿ.ಎಸ್ಸಿ, ಬಿಸಿಎ, ಎಂಸಿಎ, ಎಂಎಸ್ಸಿ, …

Read More »

ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲಾ ಪಂಜಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಸೇರುವ ಸಂಬಂಧ ಮೋಹನ್ ಭಾಗವತ್, ಸದಾನಂದಗೌಡ ಅವರನ್ನು ಭೇಟಿಯಾಗಲು ವಿನಯ್ ಕುಲಕರ್ಣಿ ಪ್ರಯತ್ನ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಮೈಸೂರು …

Read More »

ಡಿಕೆಶಿಯ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಸಿಕ್ಕಿದ್ದು ಬರೀ 1 ರೂ. ನಾಣ್ಯಗಳು ಮಾತ್ರ!

ರಾಮನಗರ: ಡಿಕೆ ಬ್ರದರ್ಸ್ ಮನೆಗಳ ಮೇಲೆ ಸಿಬಿಐ ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಪುರದ ದೊಡ್ಡ ಆಲಹಳ್ಳಿ, ಕೋಡಿಹಳ್ಳಿಯಲ್ಲಿ ಅಧಿಕಾರಿಗಳಿಗೆ ನಗದು ಹಣ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳಿಗೆ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಸಿಕ್ಕಿದ್ದು ಬರೀ 1 ರೂ ನಾಣ್ಯಗಳು ಮಾತ್ರವಂತೆ. ಬೆಳಗ್ಗೆ 6 ಗಂಟೆಗೆ ಸಿಬಿಐ ಅಧಿಕಾರಿಗಳು ದೊಡ್ಡ ಆಲಹಳ್ಳಿಯ ನಿವಾಸದ ಮೇಲೆ ದಾಳಿ ಮಾಡಿದ್ದರು. ನಂತರ ಮಧ್ಯಾಹ್ನ 1 ಗಂಟೆಗೆ ಕೋಡಿಹಳ್ಳಿಯ ಗೌರಮ್ಮ ಇರುವ ನಿವಾಸದ …

Read More »

ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ.

ಹೈದರಾಬಾದ್: ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇನ್‍ಸ್ಟಾಗ್ರಾಂನಲ್ಲಿ ಮದ್ವೆಯ ಮಾಹಿತಿಯನ್ನ ಕಾಜಲ್ ಹಂಚಿಕೊಂಡಿದ್ದಾರೆ. ನಾನು ಇದೇ ಅಕ್ಟೋಬರ್ 30ರಂದು ಗೌತಮ್ ಕಿಟ್ಚು ಅವರನ್ನು ಮುಂಬೈನಲ್ಲಿ ಮದುವೆ ಆಗುತ್ತಿದ್ದೇನೆ. ಮದುವೆಗೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನ ಮಾತ್ರ ಆಹ್ವಾನಿಸಲಾಗಿದೆ. ಹೊಸ ಜೀವನಕ್ಕೆ ಕಾಲಿಡಲು ನಾನು ಥ್ರಿಲ್ ಆಗಿದ್ದೇನೆ. ಇಷ್ಟು ದಿನ ನೀವು ತೋರಿಸಿದ ಅನಿಯಮಿತ ಪ್ರೀತಿಗೆ ಅಭಾರಿಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ. ಹೊಸ …

Read More »