Breaking News

Yearly Archives: 2020

ಸರಳವಾಗಿ ವಿವಾಹವಾದ ಅಂತಾರಾಷ್ಟ್ರೀಯ ಹಾಕಿ ಆಟಗಾರ

ಮಡಿಕೇರಿ: ಅಂತಾರಾಷ್ಟ್ರೀಯ ಹಾಕಿ ಆಟಗಾರ ಕೊಡಗಿನ ಎಸ್.ಕೆ.ಉತ್ತಪ್ಪ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್‍ವೊಂದರಲ್ಲಿ ಸರಳವಾಗಿ ಕೇವಲ ಬೆರಳೆಣಿಕೆಯಷ್ಟು ಕುಟುಂಬ ಸದಸ್ಯ ಒಳಗೊಂಡು ಮದುವೆ ಕಾರ್ಯಕ್ರಮ ನಡೆದಿದೆ. ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಕೊಡಗಿನ ಮೂಲದ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಈ ಜೋಡಿ ಹಸೆಮಣೆಯೇರಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದ್ದು, ಕುಟುಂಬದವರು ಮತ್ತು …

Read More »

ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್‌ – ಕಮಲ್‌ ಪಂಥ್‌ ಎಚ್ಚರಿಕೆ

ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಎಚ್ಚರಿಕೆ ನೀಡಿದ್ದಾರೆ. ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು.   ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ …

Read More »

ಬೆಳ್ಳಂಬೆಳಗ್ಗೆ ರೈಲು, ವಿಮಾನ ನಿಲ್ದಾಣಕ್ಕೆ ಕರವೇ ಮುತ್ತಿಗೆ – ಕಾರ್ಯಕರ್ತರ ಬಂಧನ

ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಆಕ್ರೋಶ ಶುರು ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ. ಪರಿಣಾಮ 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಮಹಿಳಾ ಕಾರ್ಯಕರ್ತೆಯರು ಏರ್‌ಪೋರ್ಟಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಪ್ರತಿಭಟನಕಾರರನ್ನ ಬಂಧಿಸಿದ್ದಾರೆ. …

Read More »

ಮುಂದಿನ ಎರಡು ದಿನಗಳಲ್ಲಿ ನೈರುತ್ಯ ಮುಂಗಾರು

ಹೊಸದಿಲ್ಲಿ : ಮುಂದಿನ ಎರಡು ದಿನಗಳಲ್ಲಿ ನೈರುತ್ಯ ಮುಂಗಾರು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕ್ಷೀಣವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ತಿಳಿಸಿದೆ. ಒಟ್ಟಾರೆ ಸೆಪ್ಟೆಂಬರ್ 26ರ ವರೆಗೆ ವಾಡಿಕೆಗಿಂತ ಶೇ 9ರಷ್ಟು ಹೆಚ್ಚು ಮಳೆಯಾಗಿದೆ. ಸೆಪ್ಟೆಂಬರ್ 28ರಿಂದ ಪಶ್ಚಿಮ ರಾಜಸ್ಥಾನ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಮುಂಗಾರು ಇಳಿಮುಖವಾಗುವ ಅನುಕೂಲಕರ ವಾತಾವರಣ ವಾತಾವರಣ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಖಾಸಗಿ ಮುನ್ಸೂಚನೆ ಕಾರ ಸ್ಕೈಮೆಟ್ …

Read More »

ಕರ್ನಾಟಕ ಬಂದ್ : ನಾಳೆ ರಾಜ್ಯದ್ಯಂತ ಸಾರಿಗೆ ಸಂಚಾರ ಆರಂಭ

ಬೆಂಗಳೂರು: ಕೆಲವು ಸಂಘಟನೆಗಳು ನಾಳೆ ಬಂದ್ ಗೆ ಕರೆ ಕೊಟ್ಟಿರುವುದ ರಿಂದ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಲಕ್ಷ್ಮಣ …

Read More »

ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5,75,566ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 79 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,582ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 4,217 ಹೊಸ ಪ್ರಕರಣಗಳು ವರದಿಯಾಗಿದ್ದು, …

Read More »

ಸುಶಾಂತ್ ಸಿಂಗ್ ರಜಪೂತ್ ಅವರ ಜೊತೆ ಡೇಟಿಂಗ್ ಒಪ್ಪಿಕೊಂಡ ಸಾರಾ ಅಲಿ ಖಾನ್

ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ನಟಿ ಸಾರಾ ಅಲಿ ಖಾನ್ ಅವರು ವಿಚಾರಣೆ ನಡೆಸಿದಾಗ ತಾವು ಅಲ್ಪಕಾಲ ಸುಶಾಂತ್ ರನ್ನು ಡೇಟಿಂಗ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸಾರಾ 2018 ರ ಚಿತ್ರ ‘ಕೇದಾರನಾಥ್’ ಚಿತ್ರದೊಂದಿಗೆ ಸುಶಾಂತ್ ಎದುರು ಪಾದಾರ್ಪಣೆ ಮಾಡಿದರು. ಅವರ ವದಂತಿಯ ಪ್ರಣಯದ ವರದಿಗಳು ಆಗ ಹೆಚ್ಚು ಕಾಣಸಿಕೊಂಡಿದ್ದವು ಆದರೆ ಬಹಿರಂಗವಾಗಿ ಇಬ್ಬರು ಇದನ್ನು ಒಪ್ಪಿರಲಿಲ್ಲ.ಜೂನ್ 14 …

Read More »

ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ, ಯಾವುದೇ ರ್ಯಾಲಿ ನಡೆಸಲೂ ಅವಕಾಶವಿಲ್ಲ

ಬೆಂಗಳೂರು: ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯಿದೆ ತಿದ್ದುಪಡಿ ಖಂಡಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಸಂಬಂಧಿಸಿದಂತೆ ಯಾವುದೇ ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ, ಯಾವುದೇ ರ್ಯಾಲಿ ನಡೆಸಲೂ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಕೊವಿಡ್ ನಿಯಮಗಳು ಜಾರಿಯಲ್ಲಿರುವುದರಿಂದ ಯಾವುದೇ ರೀತಿಯ ಪ್ರತಿಭಟನೆ, ರ್ಯಾಲಿ ಮಾಡುವಂತಿಲ್ಲ. ಮಾಡಿದರೆ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ಎನ್ ಡಿಎಂಎ ಆಕ್ಟ್ ನಡಿ ಕ್ರಮ …

Read More »

ಕೊರೋನಾ ಸೃಷ್ಟಿಗೆ ಚೀನಾ ಸರ್ಕಾರವೇ ಕಾರಣ, ದಾಖಲೆ ಸಮೇತ ಮಾಹಿತಿ ಬಹಿರಂಗ!

ಬೀಜಿಂಗ್: ಕೊರೋನಾ ವೈರಸ್ ದಿಢೀರ್ ಸೃಷ್ಟಿಯಾಗಿದ್ದಲ್ಲ, ಇದರ ಹಿಂದೆ ಚೀನಾದ ಕುತಂತ್ರ ಅಡಗಿದೆ ಅನ್ನೋ ಮಾತು ಗೌಪ್ಯವಾಗಿ ಉಳಿದಿಲ್ಲ. ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಕೊರೋನಾ ವೈರಸ್ ಸೃಷ್ಟಿ ಚೀನಾ ಕೈವಾಡವಿದೆ ಅನ್ನೋದನ್ನು ಬಹಿರಂಗವಾಗಿ ಹೇಳಿತ್ತು. ಇದರ ಬೆನ್ನಲ್ಲೇ ಚೀನಾದ ವೈರೋಲಜಿಸ್ಟ್ ಚೀನಾದ ಅಸಲಿಯತ್ತನ್ನು ಬಹಿರಂಗ ಪಡಿಸಿದ್ದರು. ಇದೀಗ ಎರಡನೇ ಬಾರಿ ಚೀನಾ ವೈರೋಲಜಿಸ್ಟ್ ಚೀನಾ ಸೃಷ್ಟಿಸಿದ ಕೊರೋನಾ ವೈರಸ್ ಕುರಿತು ಮಾತನಾಡಿದ್ದಾರೆ. ಕೊರೋನಾ ಸೃಷ್ಟಿಗೆ ಚೀನಾ ಸರ್ಕಾರವೇ ಕಾರಣ, …

Read More »

ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ

ಬೆಂಗಳೂರು: ಗ್ರಾಮೀಣಾಭಿವೃದ್ದಿ ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ ನಡೆಯಿತು. ಎಸ್ ಟಿ ಹೋರಾಟ ಕುರಿತು ರೂಪರೇಷೆ ಸಿದ್ದಪಡಿಸುವ ಸಲುವಾಗು ಪೂರ್ವಭಾವಿ ಸಭೆ ಇಂದು ನಡೆಯಿತು. ಸಮಾಜದ ನಾಲ್ಕು ಮಠಾಧೀಶರು ಭಾಗಿಯಾಗಿದ್ದರು. ಸಭೆಯಲ್ಲಿ ಸಚಿವ ಈಶ್ವರಪ್ಪ, ಹೆಚ್ ವಿಶ್ವನಾಥ್, ರಘುನಾಥ್ ಮಲ್ಕಾಪುರೆ, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ಮಾಜಿ ಮೇಯರ್ ರಾಮಚಂದ್ರಪ್ಪ ಮುಕುಟಪ್ಪ ಸೇರಿದಂತೆ 100 ಕ್ಕೂ ಹೆಚ್ಚು ನಾಯಕರು ಭಾಗಿಯಾದರು.

Read More »