ಬೆಂಗಳೂರು : ರಾಜ್ಯ ಸರ್ಕಾರವು ಶುಶ್ರೂಷಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ಆರೋಗ್ಯ ಮಾದರಿಯ ಕೇಂದ್ರಗಳಲ್ಲಿ ವೈಯಕ್ತಿಕ ಸುರಕ್ಷಾ ಸಾಧನೆ ಕಿಟ್ ಧರಿಸಿ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರಿಗೆ ಮಾಸಿಕ 5 ಸಾವಿರ ರೂ. ಕೋವಿಡ್ ರಿಸ್ಕ್ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಶುಶ್ರೂಷಕರಿಗೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಪ್ರೋತ್ಸಾಹಧನ ನೀಡಬೇಕಿದೆ. ಪ್ರೋತ್ಸಹ ಧನವು …
Read More »Yearly Archives: 2020
ಕರ್ನಾಟಕ ಬಂದ್: ಕೇಂದ್ರದ ಮಸೂದೆ ವಿರುದ್ಧ ನಾಳೆ ರೈತ ಸಂಘಟನೆಗಳ ಕಹಳೆ!
ಬೆಂಗಳೂರು: ರಾಜ್ಯದಲ್ಲಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ತುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶದ ಕಟ್ಟೆ ಒಡೆದಿದ್ದು, ಸೋಮವಾರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಬೃಹತ್ ಪ್ರತಿಭಟನೆಗೆ ರೈತ ಮುಖಂಡರು ಮುಂದಾಗಿದ್ದಾರೆ. ರೈತ ಸಂಘಟನೆಗಳಲ್ಲಿನ ಗೊಂದಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಹೆಸರಿನಲ್ಲಿ ನಡೆದ ಸುದ್ದಿಗೋಷ್ಠಿ ಎಲ್ಲಾ ಗೊಂದಲಕ್ಕೆ ಫುಲ್ ಸ್ಟಾಪ್ ಇಟ್ಟಿದೆ. ರೈತ ಸಂಘಟನೆಗಳು ಸೋಮವಾರ ಕರ್ನಾಟಕ …
Read More »ರಾಷ್ಟ್ರೀಯ ಅಧಿಕಾರಿಗಳ ಹೊಸ ಪಟ್ಟಿಯನ್ನು ಬಿಜೆಪಿ ಇದೀಗ ಬಿಡುಗಡೆ
ನವದೆಹಲಿ: ಬಿಹಾರ ಚುನಾವಣೆ ಸಮೀಪಿಸುತ್ತಿದ್ದು, ಅದಕ್ಕೂ ಮೊದಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ ರಾಷ್ಟ್ರಮಟ್ಟದ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ರಾಷ್ಟ್ರೀಯ ಅಧಿಕಾರಿಗಳ ಹೊಸ ಪಟ್ಟಿಯನ್ನು ಬಿಜೆಪಿ ಇದೀಗ ಬಿಡುಗಡೆ ಮಾಡಿದ್ದು, ರಾಜ್ಯದ ಮೂವರು ರಾಜಕಾರಣಿಗಳಿಗೂ ಸ್ಥಾನ ಸಿಕ್ಕಿದೆ. ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿ.ಟಿ.ರವಿ ಮತ್ತು ರಾಷ್ಟ್ರೀಯ ವಕ್ತಾರರಾಗಿ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ನೇಮಕಗೊಂಡಿದ್ದಾರೆ. …
Read More »ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.
ಸಂಗೀತ ಲೋಕದ ದಂತಕಥೆ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ. ಎಸ್ ಪಿ ಬಿ ಅವರ ಹಾಡುಗಳು ನನ್ನ ಬಾಲ್ಯದ ನೆನಪುಗಳ ಒಂದು ದೊಡ್ಡ ಭಾಗವಾಗಿವೆ ಎಂದು ನಟಿ ಪ್ರಿಯಾಂಕಾ ಚೋಪ್ರಾ ಟ್ವಿಟ್ ಮಾಡಿದ್ದಾರೆ. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ತಮ್ಮ ಬಾಲ್ಯದ ಅವಿಭಾಜ್ಯ ಅಂಗ ಎಂದು ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.ನಟಿ ಪ್ರಿಯಾಂಕಾ ಚೋಪ್ರಾ ಅವರು ಸಂತಾಪ ಸಂದೇಶವನ್ನು ಸೋಷಿಯಲ್ ಮೀಡಿಯಾದಲ್ಲಿ …
Read More »ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ
ಬೆಂಗಳೂರು : ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಸಿ. ಟಿ.ರವಿ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡ ನೇಮಕ ಮಾಡಿ ಆದೇಶ ಜಾರಿ ಮಾಡಿದ್ದಾರೆ. ಈ ಮೂಲಕ ಸಚಿವ ಸಿಟಿ ರವಿಯವರು ರಾಜ್ಯವಲ್ಲದೇ ರಾಷ್ಟ್ರೀಯ ರಾಜಕೀಯಕ್ಕೂ ಪಾದಾರ್ಪಣೆ ಮಾಡಿದಂತೆ ಆಗಿದೆ. ಇದರ ಬೆನ್ನಲ್ಲೇ ಬಿಜೆಪಿ ಪಕ್ಷದ ಸೂತ್ರದಂತೆ ಒಬ್ಬರಿಗೆ ಒಂದೇ ಸ್ಥಾನ ಎಂಬ ನಿಲುವಿನಂತೆ ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ ನೀಡುವುದು ಕೂಡ ಅನಿವಾರ್ಯವಾಗಿದೆ. ಹೀಗಾಗಿ …
Read More »ಕಸ್ತೂರಿ ಮಹಲ್‍ನಿಂದ ಡಿಂಪಲ್ ಕ್ವೀನ್ ಔಟ್, ಶಾನ್ವಿ ಇನ್
ಬೆಂಗಳೂರು: ಚಿತ್ರದ ಟೈಟಲ್ ಕುರಿತು ಸದ್ದು ಮಾಡಿದ್ದ ಸಿನಿಮಾದಿಂದ ಡಿಂಪಲ್ ಕ್ವೀನ್ ರಚಿತಾ ರಾಮ್ ಹೊರ ನಡೆದಿದ್ದು, ಅವರ ಜಾಗಕ್ಕೆ ಶಾನ್ವಿಯವರನ್ನು ನಿರ್ದೇಶಕ ದಿನೇಶ್ ಬಾಬು ಆಯ್ಕೆ ಮಾಡಿದ್ದಾರೆ. ಆರಂಭದಲ್ಲಿ ದಿನೇಶ್ ಬಾಬು ಅವರು ಈ ಚಿತ್ರದ ಹೆಸರನ್ನು ಕಸ್ತೂರಿ ನಿವಾಸ ಎಂದು ಘೋಷಿಸಿದ್ದರು. ಆದರೆ ಡಾ.ರಾಜ್‍ಕುಮಾರ್ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಕಸ್ತೂರಿ ಮಹಲ್ ಎಂದು ಬದಲಾಯಿಸಿದ್ದಾರೆ. ಅಲ್ಲದೆ ಚಿತ್ರಕ್ಕೆ ರಚಿತಾ ರಾಮ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ …
Read More »ನಟ ಶರಣ್ ಅವರಲ್ಲಿ ಅನಾರೋಗ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಯಾಂಡಲ್‍ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ ಶರಣ್ ಅವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ ಎಂಟಿ ಗ್ರೌಂಡ್ ನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಶರಣ್ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ನಿರ್ದೇಶಕ ಸಿಂಪಲ್ ಸುನಿ ಮತ್ತು ನಿರ್ಮಾಪಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಚಿತ್ರದಲ್ಲಿ …
Read More »ಮಾರುವೇಷದಲ್ಲಿ ಪೊಲೀಸರ ಕಾರ್ಯಾಚರಣೆ- ಗಾಂಜಾ ಮಾರುತ್ತಿದ್ದ ನಾಲ್ವರ ಬಂಧನ
ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಂಜಾ, ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ವಿರುದ್ಧ ಪೊಲೀಸರ ದಿಟ್ಟ ಕ್ರಮ ಮುಂದುವರಿದಿದ್ದು, ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿ ಹುಬ್ಬಳಿಯ ಬೆಂಡಿಕೇರಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದಕ ದ್ರವ್ಯ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ದಂಧೆಕೋರರು ಮತ್ತಷ್ಟು ಎಚ್ಚರಿಕೆಯಿಂದ ತಮ್ಮ ಕೃತ್ಯವನ್ನು ಮುಂದುವರಿಸಿದ್ದು, ಪರಿಣಾಮ ಪೊಲೀಸರು ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ. ಹಲವು ದಿನಗಳಿಂದ ಪೊಲೀಸ ಕಣ್ಣು …
Read More »ಬಾಗಲಕೋಟೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಬಾಗಲಕೋಟೆ : ರಾಜ್ಯಾದ್ಯಂತ ಮಲೆನಾಡು, ಕರಾವಳಿ ಭಾಗಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಇನ್ನೂ ನಿಂತಿಲ್ಲ. ಬಾಗಲಕೋಟೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬಾಗಲಕೋಟೆಯ ಬೇಕಮಲದಿನ್ನಿ – ಕರಡಿ, ಹುನಗುಂದ ಸಂಪರ್ಕ ಕಡಿತವಾಗಿದೆ. ಬೇಕಮಲದಿನ್ನಿ ಗ್ರಾಮದಲ್ಲಿ ಹಳ್ಳದ ನೀರು ಸಂಪರ್ಕ ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದ ಸಂಚಾರ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ಬಾಗಲಕೋಟೆ ಜಿಲ್ಲೆ …
Read More »ಆರೋಗ್ಯ, ವೈದ್ಯಕೀಯ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದಿಂದ ನಡೆಸಲಾಗುತ್ತಿರುವ ಅಸಹಕಾರ ಚಳುವಳಿ ಮೂರನೇ ದಿನ ಪೂರೈಸಿದೆ.
ಬೆಂಗಳೂರು : ಹಲವಾರು ವರ್ಷಗಳಿಂದ ನ್ಯಾಯಯುತವಾದ ಬೇಡಿಕೆಗಳು ಈಡೇರಿಸುವಂತೆ ಎಲ್ಲ ಹಂತಗಳಲ್ಲಿ ಹೋರಾಟ ನಡೆಸಿದರೂ ಸಹ ಸ್ಪಂದಿಸದೇ, ಸರ್ಕಾರದ ನೌಕರರ ವಿರೋಧಿ ಧೋರಣೆ ಹಾಗೂ ಒಡೆದು ಆಳುವ ಪ್ರವೃತ್ತಿ ಮತ್ತು ಕ್ರಮಕ್ಕೆ ಗುರಿ ಮಾಡುತ್ತಿರುವುದು ವಿಷಾದನೀಯ. ಕೊರೋನಾ ವೈರಸ್ ಹಾವಳಿ ಸಂದರ್ಭದಲ್ಲಿಯೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದರೂ ಅಂತಹ ಬಡ ನೌಕರರ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದುದನ್ನು ಖಂಡಿಸಿದ ಆರೋಗ್ಯ, ವೈದ್ಯಕೀಯ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ, ಹೊರಗುತ್ತಿಗೆ …
Read More »