ಬೆಳಗಾವಿ :ಅತ್ತ ಕೊರೊನಾ ಬಿಟ್ಟು ಬಿಡದೇ ಕಾಡುತ್ತಿದೆ. ಇತ್ತ ಚೇತರಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಜನ ಇದ್ದಾರೆ. ಇದರ ನಡುವೆ ಒಂದೊಂದೆ ಬೆಲೆ ಏರಿಕೆಗಳು ಜನರ ಕೈ ಸುಡುತ್ತಿವೆ. ಇದರ ಮಧ್ಯೆ ತರಕಾರಿ ಬೆಲೆಗಳು ಗಗನಕ್ಕೇರುತ್ತಿವೆ. ಮೊದಲೇ ದುಡಿಮೆ ಇಲ್ಲದೆ ಆರ್ಥಿಕ ಬಿಕ್ಕಟ್ಟು ಉಂಟಾಗುತ್ತಿರುವ ಬೆನ್ನಲ್ಲೇ ಇದೀಗ ತರಕಾರಿಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನ ತತ್ತರಿಸಿ ಹೋಗಿದ್ದಾರೆ. ಹೌದು, ಉತ್ತರ ಕರ್ನಾಟಕದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ನಾಶವಾಗುತ್ತಿವೆ. ಹೀಗಾಗಿ ತರಕಾರಿಗಳ ಬೆಲೆ ಏರಿಕೆ …
Read More »Yearly Archives: 2020
ಬಿ.ವೈ. ವಿಜಯೇಂದ್ರ ಮೇಲಿನ ಆರೋಪಕ್ಕೆ ದೆಹಲಿಯಿಂದ ಪ್ರತಿಕ್ರಿಯೆ ಬಂತು
ನವದೆಹಲಿ: ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮಾಡಿರುವ ಆರೋಪಕ್ಕೆ ಸಚಿವ ಸೋಮಣ್ಣ ಅವರು ತಿರುಗೇಟು ನೀಡಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಮುಖ್ಯಮಂತ್ರಿಗಳ ಮಕ್ಕಳ ಮೇಲೆ ಆರೋಪ ಮಾಡೋದು ದೇವರಾಜು ಅರಸು ಕಾಲದಿಂದ ಬಂದಿದೆ. ಎಲ್ಲಾ ಮುಖ್ಯಮಂತ್ರಿಗಳ ಮಕ್ಕಳ ಮೇಲೂ ಆರೋಪಗಳು ಬಂದಿವೆ. ಇದೇನು ಹೊಸದಲ್ಲ. ಆರೋಪಗಳು ನಿರಾಧಾರ ಎಂದು ಹೇಳಿದರು. ವಿಜಯೇಂದ್ರ ಬಿಎಸ್ ವೈಗೆ ಅರ್ಜಿ …
Read More »ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ.
ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ. ಅಥಣಿ: ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ತಳವಾರ ಸಮುದಾಯದ ಕೆಲವು ಬಾಂಧವರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪಟ್ಟನದ ಮಿನಿ ವಿಧಾನಸೌಧದಲ್ಲಿ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಪರಿವಾರ-ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿದವರು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಮುಂದಾಗಲಿ ಎಂದು ಒತ್ತಾಯಿಸಿ ತಳವಾರ ಸಮಾಜದ ಮುಖಂಡ ರಾಜು ಜಮಖಂಡಿಕರ ಮುಂದಾಳತ್ವದಲ್ಲಿ ಪ್ರತಿಭಟನೆ ಕೈಗೊಂಡು, ವಿಧಾನಸಭಾ ಕಲಾಪ ಮುಗಿಯುವವರೆಗೆ …
Read More »ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಗೋಕಾಕ ನಗರಸಭೆವತಿಯಿಂದ ಇಂದು ಗೋಕಾಕ ನಗರದಲ್ಲಿ ದಿನಾಚರಣೆ ಆಚರಣೆ ಮಾಡಿದರು.
ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಗೋಕಾಕ ನಗರಸಭೆವತಿಯಿಂದ ಇಂದು ಗೋಕಾಕ ನಗರದಲ್ಲಿ ದಿನಾಚರಣೆ ಆಚರಣೆ ಮಾಡಿದರು. ಭಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ. ಕೋವಿದ19 ನಲ್ಲಿ ಪೌರಕಾರ್ಮಿಕರು ಮಾಡಿದ ಸೇವೆ ಯಾವ ಸೇವೆಗಿಂತ ಕಮ್ಮಿಯಿಲ್ಲ.ನಾವು ಮಾಡಿದ ಸೇವೆಯನ್ನು ನೋಡಿ ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಡಿದ್ದರು. ನಾವು ಪ್ರತಿ ವರ್ಷದಂತೆ ಈ ವರ್ಷಕೂಡ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಸಂತಕಾರ ಮಾಡಲಾಯಿತು. ಮತ್ತು covied19 ನಲ್ಲಿ ನಮ್ಮ ಜೀವವನ್ನು …
Read More »NHM ಸಿಬ್ಬಂದಿಗಳಿಂದ ನಾಳೆಯಿಂದ ಮುಷ್ಕ್ ರ
ಗೋಕಾಕ :ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ವೈದ್ಯಕೀಯ , ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳು ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, HR Policy ಮತ್ತು ಇತರೇ ಬೇಡಿಕೆಗಳ ಈಡೇರಿಕೆಗೆ ಇಂದು ತಹಸೀಲ್ದಾರ್ ಗೋಕಾಕ ಮತ್ತು ತಾಲೂಕಾ ಆರೋಗ್ಯ ಅಧಿಕಾರಗಳು ಇವರಿಗೂ ಸಹ ಮನವಿ ಪತ್ರ ನೀಡಿದರು ಇನ್ನೂ ಮುಂದುವರೆದು, ಇಲಾಖೆ ಖಾಯಂ ನೌಕರರನ್ನು ಅವಲಂಬಿಸಿದೆ ಮತ್ತು ಎಲ್ಲಾ ಜಿಲ್ಲೆಯಲ್ಲಿ …
Read More »ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳು ಅರೆಸ್ಟ್
ಬೆಂಗಳೂರು: ನಗರದ ಬಾಣಸವಾಡಿ ಹಾಗೂ ಮಲ್ಲೇಶ್ವರಂನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಐಪಿಎಲ್ ಪಂದ್ಯಾವಳಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಟ್ಟಿಂಗ್ನಲ್ಲಿ ತೊಡಗಿಸಿದ್ದ ₹6 ಲಕ್ಷ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬಾಣಸವಾಡಿ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
Read More »ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ
ಬೆಂಗಳೂರು : ‘ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ. ನಂತರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಅಧಿಕಾರಿಗಳಿಗೆ ಅಂತಹ ಅಧಿಕಾರ ಕೊಟ್ಟವರಾರಯರು? ಸರ್ಕಾರ ಅಷ್ಟುಬಲಹೀನವಾಯಿತಾ?’ ಎಂದು ಜೆಡಿಎಸ್ ಸದಸ್ಯ ಎ.ಟಿ. ರಾಮಸ್ವಾಮಿ ಅವರು ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಘಟನೆ ವಿಧಾನಸಭೆಯಲ್ಲಿ ಮಂಗಳವಾರ ನಡೆಯಿತು. ಕೋವಿಡ್ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರೆ ಕಾನೂನು (ತಿದ್ದುಪಡಿ) …
Read More »ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿರಲ್ಲ?
ಬೆಂಗಳೂರು: ವಿದ್ಯುತ್, ಭೂಸುಧಾರಣಾ ಕಾಯ್ದೆ ಸುಗ್ರೀವಾಜ್ಞೆ ವಿರೋಧಿಸಿ ಶುಕ್ರವಾರ ರೈತ ಸಂಘಟನೆಗಳು, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು ಸೇರಿದಂತೆ 32 ಕ್ಕೂ ಹೆಚ್ಚು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ ಎನ್ನಲಾಗಿದೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ರೈತರು ಬಂದ್ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೆ ಕರ್ನಾಟಕ …
Read More »ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್
ಬೆಂಗಳೂರು : ಸರಕಾರದ ಮೂಲಕ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ನಿಯಮ 69ರ ಅಡಿ ಪ್ರಸ್ತಾಪಿಸಿದ ವಿಷಯಗಳಿಗೆ ಮಂಗಳವಾರ ಅವರು ಉತ್ತರ ನೀಡಿದರು. ಚರ್ಚೆ ವೇಳೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು, ಕೊರೋನ ಚಿಕಿತ್ಸೆ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು …
Read More »ಕೆಪಿಸಿಸಿ ವಕ್ತಾರರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ :ಡಿ ಕೆ ಶಿವಕುಮಾರ್ ಆದೇಶ
ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ. ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ಡಿಕೆಶಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಮಾಧ್ಯಮಗಳಲ್ಲಿ ನಮ್ಮ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ …
Read More »