ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ …
Read More »Yearly Archives: 2020
ನೆಲಕಚ್ಚಿದ ವಾಹನ ಉದ್ಯಮ ಲಾಕ್‌ಡೌನ್ ತೆರವಾದ ಬಳಿಕ ಭಾರೀ ಪ್ರಮಾಣದಲ್ಲಿ ಚೇತರಿಕೆ
ನವದೆಹಲಿ: ಕೋವಿಡ್ 19 ವೇಳೆ ನೆಲಕಚ್ಚಿದ ವಾಹನ ಉದ್ಯಮ ಲಾಕ್‌ಡೌನ್ ತೆರವಾದ ಬಳಿಕ ಭಾರೀ ಪ್ರಮಾಣದಲ್ಲಿ ಚೇತರಿಕೆ ಕಂಡಿದೆ. 2019 ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಶೇ.14.16ರಷ್ಟು ಚೇತರಿಕೆ ಕಂಡಿದೆ ಎಂದು ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ (ಎಸ್ಐಎಎಂ) ಹೇಳಿದೆ. ಈ ವರ್ಷದ ಆಗಸ್ಟ್‌ನಲ್ಲಿ ಒಟ್ಟು 2,15,916 ಪ್ರಯಾಣಿಕ ವಾಹನಗಳ ಮಾರಾಟ ಆಗಿದ್ದರೆ ಹಿಂದಿನ ವರ್ಷದ ಆಗಸ್ಟ್‌ನಲ್ಲಿ ಒಟ್ಟು 1,89,129 ಮಾರಾಟ ಆಗಿತ್ತು. ಈ ಬಾರಿಯ ಆಗಸ್ಟ್‌ಗೂ ಮೊದಲಿನ ಒಂಬತ್ತು …
Read More »Bengaluru City ಕೇಂದ್ರ ಸಚಿವ ಸುರೇಶ್ ಅಂಗಡಿ, ಶಾಸಕ ಎಸ್.ಆರ್.ವಿಶ್ವನಾಥ್‍ಗೆ ಕೊರೊನಾ ಸೋಂಕು
ಬೆಂಗಳೂರು: ಕೇಂದ್ರ ಸಚಿವ ಸುರೇಶ್ ಅಂಗಡಿ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಇಬ್ಬರೂ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಸುರೇಶ್ ಅಂಗಡಿಯವರು ಟ್ವೀಟ್ ಮಾಡಿ, ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ …
Read More »‘ಕ್ಷೇತ್ರದಲ್ಲಿ ಹಿಂದೆ ಅನುದಾನದ ಸದುಪಯೋಗವೇ ಆಗಿಲ್ಲ’
ಬೆಳಗಾವಿ: ‘ಕ್ಷೇತ್ರದಲ್ಲಿ ಈ ಹಿಂದೆ ಅನುದಾನ ಸದುಪಯೋಗವೇ ಆಗಿಲ್ಲ’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ದೂರಿದರು. ಕ್ಷೇತ್ರದ ಹೌಸಿಂಗ್ ಬೋರ್ಡ್ ಕಾಲೊನಿಯಲ್ಲಿ ₹ 1.40 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಕ್ಷೇತ್ರವನ್ನು ಸುತ್ತು ಹಾಕಿ ಗಮನಿಸಿದರೆ ಈವರೆಗೂ ಏಕೆ ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸಲಿಲ್ಲ ಎನ್ನುವುದೇ ಅರ್ಥವಾಗುತ್ತಿಲ್ಲ. ಸರ್ಕಾರದ ಅನುದಾನವಿರುವಾಗ ಅದನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನವೇ ಆಗಲಿಲ್ಲ. …
Read More »ಕರುನಾಡಲ್ಲಿ ಮತ್ತೆ ವರುಣ ಮತ್ತಷ್ಟು ಭೀತಿ ಹುಟ್ಟಿಸಿದ್ದಾನೆ.
ಬೆಂಗಳೂರು: ಕರುನಾಡಲ್ಲಿ ಮತ್ತೆ ವರುಣ ಮತ್ತಷ್ಟು ಭೀತಿ ಹುಟ್ಟಿಸಿದ್ದಾನೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ.ರಾಜಧಾನಿ ಬೆಂಗಳೂರಲ್ಲಿ 2 ದಿನಗಳ ಹಿಂದೆ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಕೊಂಚು ಬಿಡುವು ಕೊಟ್ಟಿದ್ದಾನೆ. ಆದರೆ ಮೋಡ ಕವಿದ ವಾತಾವರಣವಿದೆ. ಇನ್ನುಳಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಗಾವಿಯ ಬೈಲಹೊಂಗಲ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಇಂಗಳಗಿ ಗ್ರಾಮದ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ …
Read More »ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದ 105 ವರ್ಷದ ಅಜ್ಜಿ
ಕೊಪ್ಪಳ: ಕೊರೊನಾ ಹಾಟ್‍ಸ್ಪಾಟ್ ಎಂದೇ ಖ್ಯಾತಿಯಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್‍ಗೆ ನಿತ್ಯವೂ ಸಾಲು ಸಾಲು ಸಾವುಗಳು ಸಾಮಾನ್ಯ ಎನ್ನುವಂತಾಗಿದೆ. ಇದರ ಮಧ್ಯೆ 105 ವರ್ಷದ ಅಜ್ಜಿ ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದಿದ್ದಾರೆ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ 105 ವರ್ಷ ಭರ್ತಿಯಾಗಿರುವ ಕಮಲಮ್ಮ ಲಿಂಗನಗೌಡ ಹಿರೇಗೌಡ್ರ ಕೊರೊನಾದಿಂದ ಗುಣಮುಖವಾಗಿದ್ದಾರೆ. ಕಳೆದ ವಾರವಷ್ಟೇ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಅವರ ಪುತ್ರ ಶಂಕರಗೌಡ ಅವರ ನಿವಾಸದಲ್ಲಿ ಹೋಮ್ …
Read More »ನಟಿ ಸಂಜನಾ ಸೇರಿ ಉಳಿದ ಆರೋಪಿಗಳೂ 3 ದಿನ ಸಿಸಿಬಿ ಕಸ್ಟಡಿಗೆ
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ, ರಾಗಿಣಿ, ರವಿಶಂಕರ್, ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ. ಸೋಮವಾರದವರೆಗೂ ನಟಿ ರಾಗಿಣಿ, ಸಂಜನಾ ಸೇರಿದಂತೆ 6 ಮಂದಿ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಉಳಿಯಲ್ಲಿದ್ದಾರೆ. ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ …
Read More »ಎಇಇ .ಕೆ.ಡಿ ಕರಮಳ್ಳಿ , ಲಂಚ ಸ್ವೀಕರಿಸುತ್ತಿರುವ ಸಮಯದಲ್ಲಿ ಎಸಿಬಿ ಅಧಿಕಾರಿಗಳ ಬಲೆಗೆ
ಬದಾಮಿ: ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಎಇಇ .ಕೆ.ಡಿ ಕರಮಳ್ಳಿ , ಲಂಚ ಸ್ವೀಕರಿಸುತ್ತಿರುವ ಸಮಯದಲ್ಲಿ ಎಸಿಬಿ ಅಧಿಕಾರಿಗಳ ದಾಳಿ ಬಲೆಗೆ ಬಿದ್ದಿದ್ದಾರೆ. 2018-19 ನೇ ಸಾಲಿನಲ್ಲಿ ಬಾದಾಮಿ ತಾಲೂಕಿನ ಕಾತರಕಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಕೊಳ್ಳಲಾದ ಕಾಮಗಾರಿಗಳಿಗೆ ಸರಬರಾಜು ಮಾಡಿದ ಕಚ್ಚಾವಸ್ತುಗಳು ಸಂಭಂಧಿಸಿದ ವೋಚರ್ ಮತ್ತು ಅಳತೆ ಪುಸ್ತಕಗಳನ್ನು ನೀಡಲು ಗುತ್ತಿಗೆದಾರರಿಗೆ 60 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು. …
Read More »ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.
ನವದೆಹಲಿ – ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನಿನ್ನೆಯಷ್ಟೆ ಬೆಳಗಾವಿಯಿಂದ ದೆಹಲಿಗೆ ತೆರಳಿರುವ ಅವರು ಅಲ್ಲಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ರೋಗ ಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡುವಂತೆ ಅವರು ವಿನಂತಿಸಿದ್ದಾರೆ. ಸುರೇಶ ಅಂಗಡಿ ಬೆಳಗಾವಿಯಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದರು. ಅಲ್ಲದೆ ಅವರು …
Read More »6 ಕೋಟಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ
ಕಲಬುರಗಿ: ಬೆಂಗಳೂರಿನ ಪೊಲೀಸರು ಕಾರ್ಯಚರಣೆ ನಡೆಸಿ ಕಲಬುರಗಿಯಲ್ಲಿ 1,300 ಕೆಜಿ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿ ಚಂದ್ರಕಾಂತ್ ಚೌವ್ಹಾಣ್ ಬಿಜೆಪಿ ಕಾರ್ಯಕರ್ತ ಎಂಬುದು ದೃಢಪಟ್ಟಿದೆ. ಆತ ಬಿಜೆಪಿಯ ಇತರೆ ಕಾರ್ಯಕರ್ತರ ಜೊತೆ ತೆಗೆದುಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನು ಉಪಯೋಗಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಸಜ್ಜಾಗಿದ್ದಾರೆ. ಈ ಕುರಿತು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ …
Read More »